ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅರ್ಜಿ ಆಹ್ವಾನ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್(Free Bus Pass) ನೀಡಲು ಅರ್ಜಿ(Application) ಆಹ್ವಾನಿಸಲಾಗಿದೆ.
ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ / ಸ್ಥಾನಿಕ ಸಂಪಾದಕರ / ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು  ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾ ಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಸಮೀಪದ ಗ್ರಾಮ-1 ಕೇಂದ್ರದಲ್ಲಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.
ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್ ಗಳನ್ನು ನೀಡುತ್ತಿದೆ.
ರಾಜ್ಯದ  ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಗ್ರಾಮ-1 ಕೇಂದ್ತದ ಮೂಲಕ 2026 ರ ಅಕ್ಟೋಬರ್ 31 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್.ಅನುಚೇತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಅಂಕಣಕಾರ್ತಿ, ಲೇಖಕಿ ಮಾಧುರಿ ದೇಶಪಾಂಡೆ ಅವರಿಗೆ ‘ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

ಬೆಂಗಳೂರು: ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ(Sree Krishna Raja)...

ಶಿಕ್ಷಣ ತಜ್ಞೆ ಪದ್ಮಾವತಿ ಕೆ.ವಿ. ಅವರಿಗೆ ‘ಟೀಚರ್ಸ್ ಟ್ರೋವ್–2026’ ಪ್ರಶಸ್ತಿ

ಬೆಂಗಳೂರು: ಕಾಡುಗೋಡಿಯ ಜನನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪದ್ಮಾವತಿ...

ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಕ್ರಿಕೆಟ್ ದಾಖಲೆಗಳೇ ಪುಡಿಪುಡಿ: ಕೇವಲ 28 ಎಸೆತಗಳಲ್ಲಿ ಶತಕ, 53 ಎಸೆತಗಳಲ್ಲಿ 204 ರನ್!

ದೋಹಾ: ಭಾರತೀಯ ಕ್ರಿಕೆಟ್‌ನ ಯುವ ಪ್ರತಿಭೆ ವೈಭವ್ ಸೂರ್ಯವಂಶಿ(Vaibhav Suryavamsi) ಮತ್ತೊಮ್ಮೆ...

ಬೆಂಗಳೂರಿನಲ್ಲಿ ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ

ಬೆಂಗಳೂರು: ಪಂಜಾಬಿ ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್ (Diljit Dosanjh's) ಅವರ...

Topics

ಪಶ್ಚಿಮ ಬಂಗಾಳದ ಹೆಸರು ಬದಲಾವಣೆಗೆ ಸಿದ್ಧತೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದ ಹೆಸರನ್ನು ಬದಲಾಯಿಸುವ ಕುರಿತು ಮಹತ್ವದ ರಾಜಕೀಯ...

Related Articles