ವಿಧಾನಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ

ಬೆಂಗಳೂರು: ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ(Kittur Raani Chennamma) ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಿರುವ ವಿಜಯ ಜ್ಯೋತಿ ಯಾತ್ರೆಗೆ, ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ವಿಧಾನಸೌಧದ ಪೂರ್ವ ದ್ವಾರದ ಭವ್ಯ ಮೆಟ್ಟಿಲುಗಳ ಮುಂಭಾಗದ ಬಳಿ ಚಾಲನೆ ನೀಡಿದರು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಬೆಳಗಾವಿ ಜಿಲ್ಲಾ ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಅಕ್ಟೋಬರ್ 23ರಿಂದ 25ರವರೆಗೆ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವದ ಅಂಗವಾಗಿ ಈ ವಿಜಯ ಜ್ಯೋತಿ ಯಾತ್ರೆಯನ್ನು ಆಯೋಜಿಸಲಾಗಿದ್ದು, ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಮತ್ತು ಸ್ವಾಭಿಮಾನದ ಪ್ರತೀಕವಾಗಿ ಹೊರಹೊಮ್ಮಿದ ರಾಣಿ ಚೆನ್ನಮ್ಮ ಅವರ ಐತಿಹಾಸಿಕ ಹೋರಾಟವನ್ನು ಸ್ಮರಿಸುವುದು ಹಾಗೂ ಅವರ ಆದರ್ಶಗಳನ್ನು ಜನರಿಗೆ ಪರಿಚಯಿಸುವುದು ಯಾತ್ರೆಯ ಪ್ರಮುಖ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಶಾಸಕ ಬಾಬಾಸಾಹೇಬ್ ಪಾಟೀಲ್, ಕಲಮಠದ ಮಡಿವಾಳ ರಾಜೇಂದ್ರ ಸ್ವಾಮೀಜಿ ಹಾಗೂ ಪಂಚಾಕ್ಷರಿ ಮಹಾಸ್ವಾಮಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಬಿಜ್ಜರಗಿಯ ಸಾಂಸ್ಕೃತಿಕ ಹಾಗೂ ಜಾನಪದ ಕಲಾ ತಂಡಗಳು ತಮ್ಮ ಕಲಾ ಪ್ರದರ್ಶನದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದವು.

Hot this week

ಪ್ರತಿಪಕ್ಷಗಳ ನಿಯೋಗ ಭೇಟಿಗೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನಿರಾಕರಣೆ: ಅಧಿಕಾರಗಳ ಪ್ರತ್ಯೇಕತೆಯ...

ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: ರಾಹುಲ್ ಗಾಂಧಿ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್‌...

ಚೆನ್ನೈನಲ್ಲಿ ₹13,000 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈನಲ್ಲಿ ₹13,000 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ: ಬಂದರು...

ಭಾರತದ ವಿದೇಶಿ ವಿನಿಮಯ ಮೀಸಲು $18.3 ಶತಕೋಟಿ ಕುಸಿತ: ₹757.46 ಶತಕೋಟಿ...

ಕೆಎಸ್‍ಆರ್‍ಟಿಸಿಯಿಂದ ಬೆಂಗಳೂರು-ಮೈಸೂರು ಮಾರ್ಗದ ಪ್ಯಾಕೇಜ್ ಟೂರ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬೆಂಗಳೂರು ಕೇಂದ್ರೀಯ...

Topics

ಬೆಂಗಳೂರಿನಲ್ಲಿ ‘ಫಿಬಾ WBL ಏಷ್ಯಾ 2026’ ಕ್ರೀಡಾ ಸಂಭ್ರಮ

ಬೆಂಗಳೂರಿನಲ್ಲಿ 'ಫಿಬಾ WBL ಏಷ್ಯಾ 2026' ಕ್ರೀಡಾ ಸಂಭ್ರಮ - ಏಷ್ಯಾದ...

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ...

ಬೆಂಗಳೂರು: 2026-27ನೇ ಸಾಲಿನ ಎಸ್‍ಎಸ್‍ಎಲ್‍ಸಿ(SSLC) ಪರೀಕ್ಷೆ-1ಕ್ಕೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು, ಖಾಸಗಿ...

Related Articles