ಕರ್ನಾಟಕದ ಉನ್ನತ ಶಿಕ್ಷಣ ಸಾಧನೆಗಳಿಗೆ ಬಸವರಾಜ ರಾಯರೆಡ್ಡಿ ಮೆಚ್ಚುಗೆ

ದಯಾನಂದ ಸಾಗರ್ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ 3,024 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಗುಣಮಟ್ಟದ ಶಿಕ್ಷಣ, ಸಂಶೋಧನೆ ಮತ್ತು ಆವಿಷ್ಕಾರಗಳಿಗೆ ಉತ್ತೇಜನ ನೀಡುವಲ್ಲಿ ದಯಾನಂದ ಸಾಗರ್ ವಿಶ್ವವಿದ್ಯಾಲಯದ (Dayanand Sagar University) ಪ್ರಯತ್ನಗಳನ್ನು ಶ್ಲಾಘಿಸಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, (Basavaraj Rayareddy) ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಖಾಲಿ ಬೋಧಕ ಹುದ್ದೆಗಳನ್ನು ಮುಂದಿನ ಎರಡು–ಮೂರು ತಿಂಗಳಲ್ಲಿ ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ದಯಾನಂದ ಸಾಗರ್ ವಿಶ್ವವಿದ್ಯಾಲಯದ ಹರೋಹಳ್ಳಿ ಕ್ಯಾಂಪಸ್‌(HaroHalli) ನಲ್ಲಿ ನಡೆದ 10ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಅತಿಥಿಯಾಗಿ ಮಾತನಾಡಿದ ಅವರು, ಘಟಿಕೋತ್ಸವವು ಕೇವಲ ಪದವಿ ಪ್ರದಾನ ಮಾಡುವ ಸಮಾರಂಭವಲ್ಲ. ಶಿಕ್ಷಣದ ಪರಿವರ್ತನಾತ್ಮಕ ಶಕ್ತಿ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಅದರ ಪಾತ್ರವನ್ನು ಗುರುತಿಸುವ ಸಂದರ್ಭವಾಗಿದೆ ಎಂದರು.

ಪ್ರತಿಭೆಯನ್ನು ಬೆಳೆಸುವಲ್ಲಿ, ಸಂಶೋಧನೆಗೆ ಉತ್ತೇಜನ ನೀಡುವಲ್ಲಿ ಮತ್ತು ಸಮಾಜದ ಬದಲಾದ ಅಗತ್ಯಗಳಿಗೆ ಸ್ಪಂದಿಸಬಲ್ಲ ಪದವೀಧರರನ್ನು ರೂಪಿಸುವಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ರಾಜ್ಯದ ವಿಶ್ವವಿದ್ಯಾಲಯಗಳನ್ನು ಸ್ವಾವಲಂಬಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ. ಉನ್ನತ ಶಿಕ್ಷಣ ಕ್ಷೇತ್ರಕ್ಕೆ ರಾಜ್ಯ ಬಜೆಟ್‌ನ ಶೇ. 6ರಷ್ಟು ಹಣವನ್ನು ಮೀಸಲಿಡಲಾಗುತ್ತಿದೆ ಎಂದು ತಿಳಿಸಿದರು.

ಘಟಿಕೋತ್ಸವದ ಮುಖ್ಯ ಅತಿಥಿ, ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ರೋಪರ್‌ನ ನಿರ್ದೇಶಕ ಪ್ರೊ. ರಾಜೀವ್ ಅಹುಜಾ ಮಾತನಾಡಿ, ಸಂಶೋಧನೆಯು ಶೈಕ್ಷಣಿಕ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೆ ದೇಶದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತಿರಬೇಕು ಎಂದರು.

ಭಾರತದ ಗ್ರಾಮೀಣ ಜನಸಂಖ್ಯೆಯ ದೃಷ್ಟಿಯಿಂದ ಕೃಷಿ ಕ್ಷೇತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆರೋಗ್ಯ ಕ್ಷೇತ್ರದಲ್ಲಿಯೂ ಸಂಶೋಧನೆ ಆಧಾರಿತ ಆವಿಷ್ಕಾರಗಳು ಮಹತ್ವದ ಬದಲಾವಣೆ ತರಬಲ್ಲವು ಎಂದು ಹೇಳಿದರು. ಸ್ವದೇಶಿ ತಂತ್ರಜ್ಞಾನಗಳ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ಭಾರತವನ್ನು ಆವಿಷ್ಕಾರ ಆಧಾರಿತ ರಾಷ್ಟ್ರವನ್ನಾಗಿ ರೂಪಿಸಬೇಕು. ಯುವ ಪದವೀಧರರು ಸಂಶೋಧನೆಯ ಫಲಿತಾಂಶಗಳನ್ನು ಪ್ರಾಯೋಗಿಕ ಪರಿಹಾರಗಳಾಗಿ ಪರಿವರ್ತಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕದ ಬ್ರಿಟಿಷ್ ಉಪ ಹೈಕಮಿಷನರ್ ಹಾಗೂ ದಕ್ಷಿಣ ಏಷ್ಯಾದ ಹೂಡಿಕೆಗಾಗಿ ಯುನೈಟೆಡ್ ಕಿಂಗ್‌ಡಮ್‌ನ ಉಪ ವ್ಯಾಪಾರ ಆಯುಕ್ತ ಹರ್ಷಬೀರ್ ಸಂಘಾ ಮಾತನಾಡಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಬದಲಾವಣೆಗಳು ಹಿಂದೆಂದಿಗಿಂತಲೂ ವೇಗವಾಗಿ ನಡೆಯುತ್ತಿವೆ ಎಂದರು.

ಕಳೆದ 25 ವರ್ಷಗಳಲ್ಲಿ ಕಂಡ ಬದಲಾವಣೆಗಳಿಗಿಂತ ಮುಂದಿನ ಐದು ವರ್ಷಗಳಲ್ಲಿ ಸಂಭವಿಸುವ ತಾಂತ್ರಿಕ ಬೆಳವಣಿಗೆಗಳು ಹೆಚ್ಚು ಮಹತ್ವದ್ದಾಗಿರಬಹುದು. ಹೀಗಾಗಿ ಪದವೀಧರರು ಬದಲಾವಣೆಗಳಿಗೆ ಹೊಂದಿಕೊಳ್ಳುವ ಕೌಶಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೃತಕ ಬುದ್ಧಿಮತ್ತೆ (ಎಐ) ಮೂಲಸೌಕರ್ಯದಲ್ಲಿ ದಯಾನಂದ ಸಾಗರ್ ವಿಶ್ವವಿದ್ಯಾಲಯ ಮಾಡಿರುವ ಹೂಡಿಕೆ ವಿದ್ಯಾರ್ಥಿಗಳಿಗೆ ಹೊಸ ತಂತ್ರಜ್ಞಾನ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಬಳಸಿಕೊಳ್ಳಲು ನೆರವಾಗಲಿದೆ ಎಂದರು.

ಘಟಿಕೋತ್ಸವದಲ್ಲಿ ಒಟ್ಟು 3,024 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 39 ಸಂಶೋಧಕರಿಗೆ ಪಿಎಚ್‌ಡಿ ಪದವಿ ನೀಡಲಾಗಿದ್ದು, ಶೈಕ್ಷಣಿಕ ಸಾಧನೆಗಾಗಿ 49 ಚಿನ್ನದ ಪದಕಗಳನ್ನು ವಿತರಿಸಲಾಯಿತು.

ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಡಿ. ಹೇಮಚಂದ್ರ ಸಾಗರ್, ಸಹ-ಕುಲಾಧಿಪತಿ ಡಾ. ಡಿ. ಪ್ರೇಮಚಂದ್ರ ಸಾಗರ್, ಕುಲಪತಿ ಪ್ರೊ. ಬಿ. ಎಸ್. ಸತ್ಯನಾರಾಯಣ, ಮುಖ್ಯ ಮಾರ್ಗದರ್ಶಕ ಪ್ರೊ. ಟಿ. ಜಿ. ಸೀತಾರಾಮ್, ಸಹ ಕುಲಪತಿಗಳಾದ ಪ್ರೊ. ಆರ್. ಜನಾರ್ಧನ್ ಮತ್ತು ಡಾ. ಪ್ರಕಾಶ್ ಶೀಲವಂತಮಠ್, ಕುಲಸಚಿವ ಡಾ. ಸಿ. ಪುಟ್ಟಮದ್ದಪ್ಪ, ಪರೀಕ್ಷಾ ನಿಯಂತ್ರಕ ಡಾ. ಎಸ್. ಎನ್. ಪ್ರಸಾದ್ ಸೇರಿದಂತೆ ಡೀನ್‌ಗಳು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.

 

ಅಜ್ಞಾನದಿಂದ ಜ್ಞಾನದೆಡೆಗೆ ಕೊಂಡೊಯ್ಯುವುದೇ ವಿಜ್ಞಾನ; ವಿದ್ಯಾರ್ಥಿಗಳು ಆವಿಷ್ಕಾರ ಮನೋಭಾವ ಬೆಳೆಸಿಕೊಳ್ಳಲಿ

Hot this week

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

Topics

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

Related Articles