ಅಜ್ಞಾನದಿಂದ ಜ್ಞಾನದೆಡೆಗೆ ಕೊಂಡೊಯ್ಯುವುದೇ ವಿಜ್ಞಾನ; ವಿದ್ಯಾರ್ಥಿಗಳು ಆವಿಷ್ಕಾರ ಮನೋಭಾವ ಬೆಳೆಸಿಕೊಳ್ಳಲಿ

ಬೆಂಗಳೂರು: ವಿಜ್ಞಾನವು ನಾಗರಿಕತೆಯ ಅಡಿಪಾಯವಾಗಿದ್ದು, ಅಜ್ಞಾನದಿಂದ ಜ್ಞಾನದೆಡೆಗೆ ಕೊಂಡೊಯ್ಯುವುದೇ ವಿಜ್ಞಾನದ ನಿಜವಾದ ಶಕ್ತಿ(The True power of Science). ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡು ವೈಜ್ಞಾನಿಕ ಆವಿಷ್ಕಾರ ಮತ್ತು ಸಂಶೋಧನೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್(K.N.Ramesh) ಹೇಳಿದರು.

ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ ಇಸ್ರೋ ಮತ್ತು ನೆಹರು ತಾರಾಲಯದ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಸೈನ್ಸ್ ಇನ್ ಆಕ್ಷನ್ 5.0’ ವಿಜ್ಞಾನ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಬಾರಿಯ ಪ್ರದರ್ಶನವನ್ನು ‘ಮಿಷನ್ ಇಂಡಿಯಾ: ಬಿಯಾಂಡ್ ಅರ್ಥ್’ ವಿಷಯದಡಿ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಬಾಹ್ಯಾಕಾಶ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಹಲವು ಕ್ರಿಯಾತ್ಮಕ ಮಾದರಿಗಳು ಹಾಗೂ ನಾವೀನ್ಯತೆಯ ಆವಿಷ್ಕಾರಗಳನ್ನು ಪ್ರದರ್ಶಿಸಿದರು.

“ಜಗತ್ತಿನ ಪ್ರತಿಯೊಂದು ಅಂಶದಲ್ಲೂ ವಿಜ್ಞಾನ ಅಡಗಿದೆ. ಸಾಧನೆಗೆ ಹಣವೇ ಮುಖ್ಯವಲ್ಲ; ಮಹತ್ವಾಕಾಂಕ್ಷೆ ಮತ್ತು ನಿರಂತರ ಪ್ರಯತ್ನ ಇದ್ದರೆ ವಿದ್ಯಾರ್ಥಿಗಳು ಬಹಳ ಎತ್ತರಕ್ಕೆ ಏರಬಹುದು. ಇಂದಿನಿಂದ ಇಪ್ಪತ್ತು ವರ್ಷಗಳ ಬಳಿಕ ಹಿಂತಿರುಗಿ ನೋಡಿದಾಗ ನಮ್ಮ ಸಾಧನೆ ನಮಗೆ ಹೆಮ್ಮೆ ತರುವಂತಿರಬೇಕು,” ಎಂದು ಕೆ.ಎನ್. ರಮೇಶ್ ಹೇಳಿದರು.

ಭಾರತೀಯ ವಿಜ್ಞಾನ ಸಂಸ್ಥೆಯ (IISc) ಏರೋಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಎಸ್. ಗೋಪಾಲಕೃಷ್ಣನ್ ಮಾತನಾಡಿ, ವಿಜ್ಞಾನವು ಕೇವಲ ಪಠ್ಯ ವಿಷಯವಲ್ಲ; ನಾವು ಆಲೋಚಿಸುವ ವಿಧಾನವೇ ವಿಜ್ಞಾನ ಎಂದರು.

“ವಿಜ್ಞಾನವಿಲ್ಲದೆ ತಂತ್ರಜ್ಞಾನವಿಲ್ಲ. ಭಾರತದ ಬಾಹ್ಯಾಕಾಶ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತರಲಿದೆ. ಕೃತಕ ಬುದ್ಧಿಮತ್ತೆಯೂ ಈಗ ಸಂಶೋಧನೆಯ ಪ್ರಮುಖ ಸಾಧನವಾಗಿ ರೂಪುಗೊಳ್ಳುತ್ತಿದೆ,” ಎಂದು ಅವರು ಹೇಳಿದರು.

ಎನ್‌ಇಎಸ್ ಆಫ್ ಕರ್ನಾಟಕದ ಗೌರವ ಕಾರ್ಯದರ್ಶಿ ವಿ. ವೆಂಕಟಶಿವಾ ರೆಡ್ಡಿ ಮಾತನಾಡಿ, ವಿಜ್ಞಾನವು ವಿದ್ಯಾರ್ಥಿಗಳಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಪ್ರಶ್ನಿಸುವ ಮನೋಭಾವ ಬೆಳೆಸುತ್ತದೆ ಎಂದರು.

“ಎನ್‌ಇಎಸ್ ಸಂಸ್ಥೆ ಮಾನವ ಸಂಪನ್ಮೂಲ ಅಭಿವೃದ್ಧಿಗೆ ದೀರ್ಘಕಾಲದಿಂದ ಮಹತ್ವದ ಕೊಡುಗೆ ನೀಡುತ್ತಿದ್ದು, ವಿಜ್ಞಾನದ ವಿವಿಧ ಆಯಾಮಗಳಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸುತ್ತಿದೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್‌ಇಎಸ್ ಆಫ್ ಕರ್ನಾಟಕದ ಅಧ್ಯಕ್ಷ ಡಾ. ಹೆಚ್.ಎನ್. ಸುಬ್ರಹ್ಮಣ್ಯ, ಖಜಾಂಚಿ ತಲ್ಲಂ ಆರ್. ದ್ವಾರಕನಾಥ್, ಉಪಾಧ್ಯ ಕ್ಷ  ವಿ. ಮಂಜುನಾಥ್, ಕಾರ್ಯಸಮಿತಿ ಅಧ್ಯಕ್ಷ ಜಿ.ಎಂ. ರವೀಂದ್ರ, ಬಿ.ವಿ. ಕುಮಾರ್, ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲೆ *ಡಾ. ಸಿ. ವಿಜಯಲಕ್ಷ್ಮಿ, ನ್ಯಾಷನಲ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಜಯದೇವಪ್ಪ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಮಮತಾ, ಬಿ.ವಿ. ಜಗದೀಶ್ ಸೆಂಟರ್ ನಿರ್ದೇಶಕ ಡಾ. ಅಲ್ತಾಫ್, ಆಡಳಿತ ಮಂಡಳಿ ಸದಸ್ಯರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Hot this week

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

Topics

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

Related Articles