ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾಗಿ: ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ 

ಬೆಂಗಳೂರು: ನಾಡಿನ ಎಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಅಥವಾ ಅವುಗಳ ಮೂಲಸೌಕರ್ಯ(Infrastructure) ಹಾಗೂ ಶಿಕ್ಷಣದ ಅಭಿವೃದ್ಧಿಗೆ(Development of Education) ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM.D.K.Shivakumar) ಅವರು ಕರೆ ನೀಡಿದರು.
ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ನಡೆದ ‘ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕಾ’ (CSR) ಪ್ರತಿನಿಧಿಗಳ ಸಭೆಯಲ್ಲಿ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಮುಖ್ಯಮಂತ್ರಿಗಳು, ಆರಂಭಿಕ ಹಂತದಲ್ಲಿ ರಾಜ್ಯದ 1,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ 2,000 ಸರ್ಕಾರಿ ಶಾಲೆಗಳನ್ನು ಜೋಡಿಸುವ ಚಿಂತನೆಯಿದ್ದು, ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಬದುಕನ್ನು ಉತ್ತಮಪಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ‌ ಎಂದು ತಿಳಿಸಿದರು.
ಖಾಸಗಿ ಶಾಲೆಗಳು ತಮಗೆ ಅನುಕೂಲಕರವಾದ ಸರ್ಕಾರಿ ಶಾಲೆಗಳನ್ನು ತಾವೇ ಆಯ್ಕೆ ಮಾಡಿಕೊಳ್ಳಬಹುದು. ದೊಡ್ಡ ಕಟ್ಟಡಗಳನ್ನು ನಿರ್ಮಿಸಲು ಸಾಧ್ಯವಾಗದಿದ್ದರೆ, ತಮ್ಮ ನೈಪುಣ್ಯವಿರುವ ಶಿಕ್ಷಕರನ್ನು ಅಂದರೆ ಸುಮಾರು 10 ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಿಕೊಡಬಹುದು. ಜೊತೆಗೆ, ಶಾಲಾ ಬಸ್, ಕಂಪ್ಯೂಟರ್ ಹಾಗೂ ಲ್ಯಾಬ್ ಉಪಕರಣಗಳನ್ನು ನೀಡಿ ‘ಜ್ಞಾನ ವಿನಿಮಯ’ಕ್ಕೆ ಸಹಕರಿಸಬಹುದು ಎಂದು ತಿಳಿಸಿದರು.
ರಾಜ್ಯದಲ್ಲಿ ವಾರ್ಷಿಕ ಒಟ್ಟು ರೂ. 8,800 ಕೋಟಿ ಸಿಎಸ್‌ಆರ್ ನಿಧಿಯಿದ್ದು, ಅದನ್ನು ಗ್ರಾಮೀಣ ಭಾಗದ ಪ್ರಾಥಮಿಕ ಶಾಲೆಗಳ ಅಭಿವೃದ್ಧಿಗೆ ಬಳಸುವುದು ಮೊದಲ ಆದ್ಯತೆಯಾಗಬೇಕು. ಸಿಎಸ್‌ಆರ್ ಹಣದ ದುರುಪಯೋಗಕ್ಕೆ ಕಡಿವಾಣ ಹಾಕಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ಖಾಸಗಿ ಸಂಸ್ಥೆಗಳು ಅಥವಾ ಶಾಲೆಗಳು ತಮ್ಮ ಹೆಸರನ್ನು ಆ ಸರ್ಕಾರಿ ಶಾಲೆಯ ಹೆಸರಿನೊಂದಿಗೆ ಸೇರಿಸಿಕೊಳ್ಳಬಹುದು. ಉದಾಹರಣೆಗೆ, ತಮಿಳುನಾಡು ಗಡಿಯ ಬಳಿಯ ‘ಹೆಗ್ಗನೂರು ಸರ್ಕಾರಿ ಶಾಲೆ’ಗೆ ‘ಹೆಗ್ಗನೂರು ಸರ್ಕಾರಿ ಟೊಯೊಟೋ ಶಾಲೆ’ ಎಂದು ಹೆಸರಿಡಲು ಅವಕಾಶ ಕಲ್ಪಿಸಲಾಗಿದೆ.ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಮೂಲಸೌಕರ್ಯ ಅಭಿವೃದ್ಧಿಗೆ ವಿಶ್ವಬ್ಯಾಂಕ್‌ನಿಂದ ರೂ. 2,000 ಕೋಟಿ ಸಾಲ ಪಡೆಯಲಾಗಿದೆ. ಸರ್ಕಾರಿ ಶಿಕ್ಷಕರಿಗೆ ಉತ್ತಮ ವೇತನ ನೀಡಲಾಗುತ್ತಿದ್ದು, ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಸುಧಾರಿಸಲಾಗುವುದು. ಒಂದು ಖಾಸಗಿ ಶಾಲೆಯು ಗರಿಷ್ಠ 3 ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಬಹುದು.

ಬೆಂಗಳೂರಿನಲ್ಲಿ ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ತೀವ್ರ ಸಂಚಾರ ದಟ್ಟಣೆ ಹಾಗೂ ಒತ್ತಡವಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಅವರ ಊರುಗಳಲ್ಲೇ ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟದ ಶಿಕ್ಷಣ ಸಿಕ್ಕರೆ, ನಗರಗಳ ಮೇಲಿನ ಜನಸಂಖ್ಯಾ ಒತ್ತಡ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕೃಷಿಕ, ಕಾರ್ಮಿಕ, ಸೈನಿಕ ಮತ್ತು ಶಿಕ್ಷಕ ಸಮಾಜದ ನಾಲ್ಕು ಮುಖ್ಯ ಸ್ತಂಭಗಳು. ದೇಶದಲ್ಲಿರುವ 140 ಅಂತಾರಾಷ್ಟ್ರೀಯ ಗುಣಮಟ್ಟದ ಶಾಲೆಗಳಲ್ಲಿ 38 ಶಾಲೆಗಳು ಕರ್ನಾಟಕದಲ್ಲಿವೆ. ಸರ್ಕಾರಿ ಶಾಲಾ ಮಕ್ಕಳಲ್ಲಿ ಅಪಾರ ಬುದ್ಧಿಮತ್ತೆ ಹಾಗೂ ಸಾಮರ್ಥ್ಯವಿದ್ದು, ಅದನ್ನು ಸರಿಯಾಗಿ ಬಳಸಿಕೊಂಡು ರಾಜ್ಯದ ಅಭಿವೃದ್ಧಿಗೆ ಖಾಸಗಿ ಆಡಳಿತ ಮಂಡಳಿಗಳು ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪಸಭಾಪತಿಗಳಾದ ಮಂಕಾಳ್ ವೈದ್ಯ, ಸಚಿವ ಮಧುಬಂಗಾರಪ್ಪ, ರಾಜ್ಯಸಭಾ ಸದಸ್ಯರಾದ ಮನ್ಸೂರ್ ಅಲಿ ಖಾನ್, ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರರಾದ ಜಿ ಸಿ ಚಂದ್ರಶೇಖರ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.‌ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಶಾಲಾ‌ ಶಿಕ್ಷಣ ಇಲಾಖೆಯ  ಅಪರ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ಶಾಲಾ‌ ಶಿಕ್ಷಣ ಆಯುಕ್ತೆ ಕೆ. ವಿದ್ಯಾಕುಮಾರಿ, ಮತ್ತಿತರರು ಉಪಸ್ಥಿತರಿದ್ದರು.
ಉಪಸಭಾಪತಿಗಳಾದ ಮಂಕಾಳ್ ವೈದ್ಯ, ಸಚಿವ ಮಧುಬಂಗಾರಪ್ಪ, ರಾಜ್ಯಸಭಾ ಸದಸ್ಯರಾದ ಮನ್ಸೂರ್ ಅಲಿ ಖಾನ್, ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರರಾದ ಜಿ ಸಿ ಚಂದ್ರಶೇಖರ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.‌ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಶಾಲಾ‌ ಶಿಕ್ಷಣ ಇಲಾಖೆಯ  ಅಪರ ಮುಖ್ಯ ಕಾರ್ಯದರ್ಶಿ ರಶ್ಮೀ ಮಹೇಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ಶಾಲಾ‌ ಶಿಕ್ಷಣ ಆಯುಕ್ತೆ ಕೆ. ವಿದ್ಯಾಕುಮಾರಿ, ಮತ್ತಿತರರು ಉಪಸ್ಥಿತರಿದ್ದರು.

Hot this week

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

Topics

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

Related Articles