ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ್ 26, 2026 ರಂದು ‘ಸಂವಿಧಾನ ದಿನಾಚರಣೆ’ಯನ್ನು(Constitution Day) ಅಚರಿಸಲಾಗುತ್ತಿದೆ.
ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ನೆರವೇರಿಸಲಾಗುತ್ತದೆ.
ಈ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಸಂಪುಟದ ಸಚಿವರು, ಮಾನ್ಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

