ಕಂಟೋನ್ಮೆಂಟ್ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಚಿವರಾದ ಪುಟ್ಟರಂಗಶೆಟ್ಟಿ ಭೇಟಿ, ಪರಿಶೀಲನೆ

ಬೆಂಗಳೂರು: ಬೆಂಗಳೂರಿನ(Bangalore) ಕಂಟೋನ್ಮೆಂಟ್‌ನಲ್ಲಿರುವ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ  ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಸಿ.ಪುಟ್ಟರಂಗಶೆಟ್ಟಿ(C.Puttaranga Shetty) ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ(Verification) ನಡೆಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಸ್ಕ್ಯಾನಿಂಗ್ ಕೊಠಡಿ, ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ಔಷಧ ವಿತರಣಾ ಕೊಠಡಿಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳು ಮತ್ತು ಕಾರ್ಯನಿರ್ವಹಣೆಯ ಬಗ್ಗೆ ಪರಿಶೀಲನೆ ನಡೆಸಿದರು.

ಆಸ್ಪತ್ರೆಗೆ ಆಗಮಿಸುವ ಸಾರ್ವಜನಿಕರಿಗೆ ಶೌಚಾಲಯದ ವ್ಯವಸ್ಥೆ ಇಲ್ಲದಿರುವ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು, ಸಾರ್ವಜನಿಕರ ಅನುಕೂಲಕ್ಕಾಗಿ ಆಸ್ಪತ್ರೆ ಆವರಣದಲ್ಲಿ ಶೌಚಾಲಯ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗದ ಡಾ. ಚಂದ್ರಶೇಖರ್ ಟಿ., ಉಪನಿರ್ದೇಶಕರ ಗೈರುಹಾಜರಿಯನ್ನು ಸಚಿವರು ಗಂಭೀರವಾಗಿ ಪರಿಗಣಿಸಿದರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗೆ ನೋಟಿಸ್ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಯುಕ್ತರಾದ ಲಿಂಗರಾಜು, ಸಚಿವರ ಆಪ್ತ ಕಾರ್ಯದರ್ಶಿ ಡಾ. ರಾಜೀವ್ ಎನ್. ಕೂಲೇರ ಹಾಗೂ ಪಶುವೈದ್ಯರು ಉಪಸ್ಥಿತರಿದ್ದರು.

Hot this week

ನವದೆಹಲಿ: ಡಿಜಿಟಲ್ ಅರೆಸ್ಟ್(Digital Arrest) ಹೆಸರಿನಲ್ಲಿ ಸೈಬರ್ ವಂಚಕರು ನಡೆಸುತ್ತಿರುವ ಜಾಲಕ್ಕೆ...

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ...

ಹೈದರಾಬಾದ್: ಗಿಗ್ ಕಾರ್ಮಿಕರ (Gig Workers) ಸಾಮಾಜಿಕ ಭದ್ರತೆ ಮತ್ತು ಕಲ್ಯಾಣಕ್ಕಾಗಿ...

ಕಾನ್ಪುರ: ನಕಲಿ ಇ-ಮೇಲ್ ಖಾತೆಗಳನ್ನು(Duplicate email a/c) ಸೃಷ್ಟಿಸಿ ವಿದೇಶಗಳಿಗೆ ಮಾರಾಟ...

Topics

ಸಾವರ್ಕರ್‌ ಸಾಹಿತ್ಯ ಸಂಘದ ನೂತನ ಅಧ್ಯಕ್ಷರಾಗಿ ಡಾ. ಎಸ್‌.ಆರ್‌. ಲೀಲಾ ಆಯ್ಕೆ

ಬೆಂಗಳೂರು: ಸಾವರ್ಕರ್‌ ಸಾಹಿತ್ಯ ಸಂಘದ ನೂತನ ಅಧ್ಯಕ್ಷರಾಗಿ ಸಂಸ್ಕೃತ ವಿದ್ವಾಂಸರು, ಚಲನಚಿತ್ರ...

ಮಹಿಳೆಯರ ಪಾತ್ರವು ದೇಶದ ಅಭಿವೃದ್ಧಿ‌ ಮತ್ತು ಪ್ರಗತಿಗೆ ಭದ್ರ ಬುನಾದಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕ ವಾರ್ತೆ: ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ(In all fields) ಶಕ್ತಿಶಾಲಿಗಳಾಗಿ ಬೆಳೆದಾಗ...

Related Articles