ಬೆಂಗಳೂರು: ಡಿಸೆಂಬರ್ 2 ರಿಂದ 11, 2026 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ 16ನೇ ವಿಧಾನಸಭೆಯ 11ನೇ ಅಧಿವೇಶನದ ಕಾರ್ಯಕಲಾಪಗಳ(Activities) ನೇರ ಪ್ರಸಾರ ಹಾಗೂ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಸಭೆ ಸಚಿವಾಲಯವು(Legislative Assembly Secretariat) ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

ನೇರ ಪ್ರಸಾರ ಮತ್ತು ದೃಶ್ಯಾವಳಿಗಳ ಲಭ್ಯತೆ:
ಸದನದ ಕಾರ್ಯಕಲಾಪಗಳನ್ನು ಚಿತ್ರೀಕರಿಸಿ ನೇರ ಪ್ರಸಾರ ಮಾಡುವ ಹಾಗೂ ದೃಶ್ಯಗಳನ್ನು (Output) ಒದಗಿಸುವ ಜವಾಬ್ದಾರಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ವಹಿಸಲಾಗಿದೆ. ಖಾಸಗಿ ಸುದ್ದಿವಾಹಿನಿಗಳು ವಾರ್ತಾ ಇಲಾಖೆಯ ಅಧಿಕೃತ ಯೂಟ್ಯೂಬ್ ಚಾನಲ್ https://www.youtube.com/@karnatakainformation3249 ಮೂಲಕ ದೃಶ್ಯಾವಳಿಗಳನ್ನು ಪಡೆಯಬಹುದಾಗಿದೆ. ಅಲ್ಲದೆ, ಮುದ್ರಣ ಮಾಧ್ಯಮದವರು ಅಧಿವೇಶನದ ಭಾವಚಿತ್ರಗಳನ್ನು ವಾರ್ತಾ ಇಲಾಖೆಯಿಂದ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಪತ್ರಕರ್ತರ ಪ್ರವೇಶಕ್ಕೆ ನಿಯಮ:
ಸದನದ ಕಾರ್ಯಕಲಾಪಗಳನ್ನು ವರದಿ ಮಾಡುವ ವರದಿಗಾರರಿಗೆ ಮಾತ್ರ ವಿಧಾನಸಭೆ ಸಭಾಂಗಣದ ಪತ್ರಕರ್ತರ ಗ್ಯಾಲರಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಖಾಸಗಿ ಸುದ್ದಿವಾಹಿನಿಗಳ ಕ್ಯಾಮರಾಮೆನ್ ಹಾಗೂ ಮುದ್ರಣ ಮಾಧ್ಯಮದ ಛಾಯಾಗ್ರಾಹಕರಿಗೆ ವಿಧಾನಸಭೆಯ ಸಭಾಂಗಣದೊಳಗೆ ಅಥವಾ ಪತ್ರಕರ್ತರ ಗ್ಯಾಲರಿಗೆ ಪ್ರವೇಶವಿರುವುದಿಲ್ಲ.

ಎಲೆಕ್ಟ್ರಾನಿಕ್ ಉಪಕರಣಗಳಿಗೆ ನಿಷೇಧ:
ಪತ್ರಕರ್ತರ ಗ್ಯಾಲರಿಗೆ ಪ್ರವೇಶಿಸುವ ವರದಿಗಾರರು ಸದನದ ಒಳಗೆ ಮೊಬೈಲ್ ದೂರವಾಣಿ, ಟ್ಯಾಬ್ ಸೇರಿದಂತೆ ಇತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ಅಧಿವೇಶನದ ಕಾರ್ಯಕಲಾಪಗಳು ಸುಗಮವಾಗಿ ನಡೆಯಲು ಎಲ್ಲಾ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದವರು ಸಹಕರಿಸುವಂತೆ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಅಧಿಕೃತ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Hot this week

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ...

Topics

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ...

ಬೆಂಗಳೂರು: ರಾಜ್ಯದಲ್ಲಿ ವಿಜ್ಞಾನ ಆಧಾರಿತ ಪರಿಸರ ಪುನರುಜ್ಜೀವನ ಮತ್ತು ಪರಿಸರ ಸಾಕ್ಷರತೆಯನ್ನು...

Related Articles