ಬೆಂಗಳೂರು: ಡಾ.ಮನಮೋಹನ್ ಸಿಂಗ್(Dr.Manamohan Singh) ಬೆಂಗಳೂರು ನಗರ ವಿಶ್ವವಿದ್ಯಾಲಯವು ಎಂ.ಬಿ.ಎ.(MBA) ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆಗಳು ಮುಕ್ತಾಯಗೊಂಡ ಕೇವಲ ನಾಲ್ಕು ದಿನಗಳಲ್ಲೇ ಫಲಿತಾಂಶವನ್ನು ಪ್ರಕಟಿಸಿ ಗಮನಾರ್ಹ ಸಾಧನೆ ಮಾಡಿದೆ.
ಒಟ್ಟು 3,950 ವಿದ್ಯಾರ್ಥಿಗಳಿಗೆ ಸೇರಿದ 27,546 ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ವಿಶ್ವವಿದ್ಯಾಲಯವು ಕೇವಲ ನಾಲ್ಕು ದಿನಗಳಲ್ಲಿ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಿದೆ.
ವಿದ್ಯಾರ್ಥಿಗಳು ಉದ್ಯೋಗಾವಕಾಶಗಳಿಗೆ ಅರ್ಜಿ ಸಲ್ಲಿಸಲು, ದೇಶದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ ಮುಂದಿನ ಹಂತದ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅಗತ್ಯವಿರುವ ಶೈಕ್ಷಣಿಕ ಪ್ರಕ್ರಿಯೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಅನುಕೂಲವಾಗುವಂತೆ ಫಲಿತಾಂಶವನ್ನು ತ್ವರಿತವಾಗಿ ಪ್ರಕಟಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ರಮೇಶ್ ಬಿ. ಅವರು ತಿಳಿಸಿದ್ದಾರೆ.
ಅತಿ ಕಡಿಮೆ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಲು ಸಹಕರಿಸಿದ ಎಲ್ಲಾ ಎಂ.ಬಿ.ಎ. ಅಧ್ಯಾಪಕರುಗಳಿಗೆ, ಮೌಲ್ಯಮಾಪನ ಘಟಕದ ಸಂಯೋಜಕರಿಗೆ ಮತ್ತು ವಿಶ್ವವಿದ್ಯಾಲಯದ ತಾಂತ್ರಿಕ ಸಿಬ್ಬಂದಿ ವರ್ಗದವರಿಗೆ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರೊ. ರಮೇಶ ಬಿ. ಕುಡೇನಟ್ಟಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

