ಜ್ಞಾನ, ಸಂಸ್ಕೃತಿ, ಸಂಸ್ಕಾರ ಹಾಗೂ ವ್ಯಕ್ತಿತ್ವ ವಿಕಸನವೇ ಶಿಕ್ಷಣದ ಮೂಲ ಉದ್ದೇಶವಾಗಬೇಕು- ಖ್ಯಾತ ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ

ಬೆಂಗಳೂರು: ಜ್ಞಾನ, ಸಂಸ್ಕೃತಿ, ಸಂಸ್ಕಾರ ಹಾಗೂ ವ್ಯಕ್ತಿತ್ವ ವಿಕಸನವೇ ಶಿಕ್ಷಣದ ಮೂಲ ಉದ್ದೇಶವಾಗಬೇಕು ಎಂದು ಖ್ಯಾತ ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ(Dr.Gururaja Karjagi) ಅಭಿಪ್ರಾಯಪಟ್ಟರು.
ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್‌ನಲ್ಲಿ ‘ಜೀವನದ ಯಶಸ್ಸಿಗೆ ಶಿಕ್ಷಣ ಮತ್ತು ಮೌಲ್ಯಗಳು’(Education and Values ​​for Success in Life) ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಆಯೋಜಿಸಲಾಗಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಅವರು ಮಾತನಾಡಿ, ಶಿಕ್ಷಣವು ಕೇವಲ ಅಂಕಗಳನ್ನು ಗಳಿಸುವುದಕ್ಕೆ ಸೀಮಿತವಾಗಬಾರದು. ಮನುಷ್ಯನಿಗೆ ಜೀವನದ ಬೆಲೆ ಮತ್ತು ಮಾನವೀಯ ಮೌಲ್ಯಗಳನ್ನು ತಿಳಿಸುವ ಸಾಧನವಾಗಬೇಕು ಎಂದು ತಿಳಿಸಿದರು.
ಬುದ್ಧಿವಂತಿಕೆಯ ಜೊತೆಗೆ ಉತ್ತಮ ಸಂಸ್ಕಾರ, ನೈತಿಕತೆ ಮತ್ತು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಎಷ್ಟೇ ಉನ್ನತ ಹುದ್ದೆಯನ್ನು ಅಲಂಕರಿಸಿದರೂ ಮಾನವೀಯ ಮೌಲ್ಯಗಳಿಲ್ಲದಿದ್ದರೆ ಜೀವನಕ್ಕೆ ಅರ್ಥವಿರುವುದಿಲ್ಲ.
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯರಾಮ ಅವರು ಅತಿಥಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮಕ್ಕೆ ಪಿಯುಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥ , ಕಾರ್ಯಕ್ರಮ ಸಂಯೋಜಕರಾದ ಡಾ.ಪೂರ್ಣೀಮ ಹರೀಶ್ ಉಪನ್ಯಾಸಕ ವರ್ಗ ಹಾಜರಿದ್ದರು.

 

ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಿಂದ ಸಮಾಧಾನ; ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Hot this week

ಬೆಂಗಳೂರು: ಗುಜರಾತಿನ ಆನಂದ್‍ನಲ್ಲಿರುವ ‘ಕೃಷಿ ಹವಾಮಾನ ಶಾಸ್ತ್ರಜ್ಞರ ಸಂಘ’ (Association of...

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ ರಾಜ್ಯದ...

ಬೆಂಗಳೂರು: ಡಾ.ಮನಮೋಹನ್ ಸಿಂಗ್(Dr.Manamohan Singh) ಬೆಂಗಳೂರು ನಗರ ವಿಶ್ವವಿದ್ಯಾಲಯವು ಎಂ.ಬಿ.ಎ.(MBA)  ಎರಡನೇ...

Topics

ಬೆಂಗಳೂರು: ಗುಜರಾತಿನ ಆನಂದ್‍ನಲ್ಲಿರುವ ‘ಕೃಷಿ ಹವಾಮಾನ ಶಾಸ್ತ್ರಜ್ಞರ ಸಂಘ’ (Association of...

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ ರಾಜ್ಯದ...

ಬೆಂಗಳೂರು: ಡಾ.ಮನಮೋಹನ್ ಸಿಂಗ್(Dr.Manamohan Singh) ಬೆಂಗಳೂರು ನಗರ ವಿಶ್ವವಿದ್ಯಾಲಯವು ಎಂ.ಬಿ.ಎ.(MBA)  ಎರಡನೇ...

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟುವ ಹಾಗೂ...

ಸಾರ್ವಜನಿಕ ಸೇವೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ

ಸಾರ್ವಜನಿಕ ಸೇವೆಯಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ: ನೂತನ ಐಪಿಎಸ್...

ಸೊಲ್ಲಾಪುರ ನಗರದ 52 ನಗರಗಳಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ನೋಟರಿ

ಸೊಲ್ಲಾಪುರದಲ್ಲಿ ‘ಡಾಕ್ಯುಮೆಂಟ್ ಜಿಹಾದ್’ ಮೂಲಕ 1,500 ಕ್ಕೂ ಹೆಚ್ಚು ನಿವೇಶನಗಳನ್ನು (ಪ್ಲಾಟ್)...

Related Articles