ಬೆಂಗಳೂರು: ಮದ್ಯಪಾನ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ  ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು 2026-27ನೇ ಸಾಲಿನಲ್ಲಿ ಯಶೋಧರಾ ದಾಸಪ್ಪ ಪ್ರಶಸ್ತಿಗಾಗಿ (Applications invited from Women and Women Associations for Smt. Yashodhara Dasappa Award) ಮಹಿಳೆಯರು ಮತ್ತು ಮಹಿಳಾ  ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸಲು  ಅರ್ಜಿ ಆಹ್ವಾನಿಸಲಾಗಿದೆ.
 ಮಾನ್ಯಮುಖ್ಯಮಂತ್ರಿಗಳಾಗಿದ್ದ ಶ್ರೀ ನಿಜಲಿಂಗಪ್ಪನವರ ಸಚಿವ ಸಂಪುಟದಲ್ಲಿ ಹಿರಿಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ. ಶ್ರೀಮತಿ ಯಶೋಧರಾ ದಾಸಪ್ಪ ಅವರು ಕರ್ನಾಟಕ ರಾಜ್ಯದಲ್ಲಿ ಮದ್ಯಪಾನ ನಿಷೇಧವನ್ನು ಸರ್ಕಾರ ಹಿಂಪಡೆದಿದ್ದನ್ನು ವಿರೋಧಿಸಿ ಗಾಂಧೀ ತತ್ವಗಳಿಗೆ ಬದ್ಧರಾಗಿ  ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತಮ್ಮ ಬದ್ಧತೆಯನ್ನು ತೋರಿದರು. ಅವರ ಈ ತತ್ವ ನಿಷ್ಠೆ ನಿಲುವು ಮತ್ತು ಸಮಾಜಮುಖಿ ಸೇವೆಯನ್ನು ಸ್ಮರಿಸಿ, ಮದ್ಯಪಾನ ಮತ್ತು ಮಾದಕ ದ್ರವ್ಯ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಮಹಿಳೆಯರು ಹಾಗೂ ಮಹಿಳಾ ಸ್ಥಾಪಿತ ಸಂಘ-ಸಂಸ್ಥೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವುದು ಈ ಪ್ರಶಸ್ತಿಯ ಉದ್ದೇಶವಾಗಿದೆ. ‘ಯಶೋಧರಾ ದಾಸಪ್ಪ’ ಅವರ ಹೆಸರಿನಲ್ಲಿ ರೂ.1.00 ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯಿಂದ ನೀಡಲಾಗುವುದು.
ಕರ್ನಾಟಕದಲ್ಲಿ ವಾಸಿಸುತ್ತಿರುವ,  ಆಸಕ್ತ ಮಹಿಳೆಯರು ಮತ್ತು ಮಹಿಳೆಯರಿಂದ ಸ್ಥಾಪಿತವಾದ ಸಂಘಟನೆಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 5 ಕೊನೆಯ ದಿನವಾಗಿದ್ದು, ಅರ್ಜಿಯನ್ನು  ಅಧ್ಯಕ್ಷರು/ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6 ನೇ ಮಹಡಿ, ಡಾಃ ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-1ಇಲ್ಲಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.
ಸಮಾಜದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿರುವ ಹಾಗೂ ಮೂಡಿಸುತ್ತಿರುವ ಮಹಿಳೆಯರು ಮತ್ತು ಸಂಘ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬೇಕೆಂದು ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಜಿಕೆವಿಕೆಯಲ್ಲಿ ನವೆಂಬರ್ 28ರಂದು “ರೈತ ಸಂತೆ”: ತಾಜಾ ಕೃಷಿ ಉತ್ಪನ್ನಗಳು, ಸಿರಿಧಾನ್ಯ ಹಾಗೂ ಸಾವಯವ ವಸ್ತುಗಳ ಮಾರಾಟ

ಬೆಂಗಳೂರು: ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ (GKVK) ಆವರಣದಲ್ಲಿನ ಗಣಪತಿ ದೇವಸ್ಥಾನದ ಹತ್ತಿರ...

ಹೊಸದಾಗಿ ಕಾಣಿಸಿಕೊಳ್ಳುತ್ತಿರುವ ಬೆಳೆ ರೋಗಗಳ ಆರಂಭಿಕ ಪತ್ತೆ ಮತ್ತು ನಿಯಂತ್ರಣಕ್ಕೆ ಆಧುನಿಕ...

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದಿಂದ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು...

ಎಂ.ಎಸ್. ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

  ಬೆಂಗಳೂರು: ಬೆಂಗಳೂರಿನ ಎಂ.ಎಸ್. ಎಂಜಿನಿಯರಿಂಗ್(M.S.Engineering) ಕಾಲೇಜಿನಲ್ಲಿ ಇಂದು ಸಂವಿಧಾನ ದಿನವನ್ನು ಅತ್ಯಂತ...

ನ. 28ರಂದು ಬೆಳಗಾವಿಯಲ್ಲಿ ‘ವಿಶ್ವಕರ್ಮ ವೈಭವ ಉತ್ಸವ’

‘ಸದ್ವಿಚಾರ ದರ್ಶನ’ ಪುಸ್ತಕ ಲೋಕಾರ್ಪಣೆ, ಸಾಧಕರಿಗೆ ‘ಕರುನಾಡ ಶಿರೋಮಣಿ ರತ್ನ’ ಪ್ರಶಸ್ತಿ...

Topics

ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಪತ್ರಕರ್ತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪರಿಸರ ಸ್ನೇಹಿ...

Related Articles