ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ ಸುವರ್ಣಾವಕಾಶ

ಬೆಂಗಳೂರು: ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ಅಭ್ಯರ್ಥಿಗಳಿಗೆ  “ಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ” (Chief Minister’s Student Assistance Scheme) ಅಡಿಯಲ್ಲಿ ಕೆಪಿಎಸ್‍ಸಿ, ಕೆಇಎ(KEA) ಹಾಗೂ ಇತರ ವಿವಿಧ ಆಯ್ಕೆ ಪ್ರಾಧಿಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‍ಲೈನ್ ತರಬೇತಿಯನ್ನು ಆಯೋಜಿಸಲಾಗಿದೆ.

ಸರ್ಕಾರದ 100 ದಿನಗಳ ಯೋಜನೆಯ ಭಾಗವಾಗಿ ಈ ಕಾರ್ಯಕ್ರಮ ರೂಪಿಸಲಾಗಿದ್ದು, ಖ್ಯಾತ “ಇಂಡಿಯಾ ಫಾರ್ ಐಎಎಸ್” (India for IAS Coaching Centre, Bangalore) ಸಂಸ್ಥೆಯ ಮೂಲಕ ಆನ್‍ಲೈನ್ ಮೂಲಕ ತರಬೇತಿ ನೀಡಲಾಗುತ್ತದೆ.

ಈ ಯೋಜನೆಯಡಿ ಗೆಜೆಟೆಡ್ ಪ್ರೊಬೇಷನರ್ಸ್ (Gazetted Probationers) ಸಹಾಯಕ ಪ್ರಾಧ್ಯಾಪಕರು (Assistant Professors) ಎಫ್‍ಡಿಎ (FDA), ಎಸ್‍ಡಿಎ (SDA), ಪಿಡಿಒ (PDO) ಪಿಎಸ್‍ಐ (PSI), ಪೊಲೀಸ್ ಕಾನ್ಸ್‍ಟೇಬಲ್ (PC) ವಿಎಒ (VAO), ಗ್ರೂಪ್-ಸಿ (Group C) ಮತ್ತು ಇತರ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ಲಭ್ಯವಿರಲಿದೆ.

ಆಸಕ್ತ ಅಭ್ಯರ್ಥಿಗಳು ತಮಗೆ ಇಷ್ಟವಾದ ಯಾವುದೇ 3 ಪರೀಕ್ಷೆಗಳನ್ನು ಆಯ್ಕೆ ಮಾಡಿಕೊಂಡು ಉಚಿತ ತರಬೇತಿಯನ್ನು ಪಡೆದುಕೊಳ್ಳಬಹುದು.

ಈ ಮೊದಲು ಲಭ್ಯವಿದ್ದ ಸೇವಾ ಸಿಂಧು ಪೋರ್ಟಲ್ ಅನ್ನು ಇದೀಗ ಸೇವಾ ಒನ್ ಪೋರ್ಟಲ್‍ಗೆ ಬದಲಾಯಿಸಲಾಗಿದೆ.

ಆಸಕ್ತರು ಆನ್‍ಲೈನ್ ವೆಬ್‍ಸೈಟ್:https://sevaone.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಯಾವುದೇ ಸಂಶಯ ಅಥವಾ ತಾಂತ್ರಿಕ ತೊಂದರೆಗಳಿದ್ದಲ್ಲಿ ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ: 080-24410574 ಗೆ ಸೋಮವಾರದಿಂದ ಶನಿವಾರದವರೆಗೆ, ಬೆಳಿಗ್ಗೆ 10:00 ರಿಂದ ಸಂಜೆ 6:00 ರವರೆಗೆ (ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ) ಸಂಪರ್ಕಿಸಬಹುದು.

ರಾಜ್ಯದ ಅರ್ಹ ಮತ್ತು ಆಸಕ್ತ ಯುವಜನರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿ ಎಂ. ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles