ಖಾಸಗಿ ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಕರಿಗೆ ಸುವರ್ಣಾವಕಾಶ

ಬೆಂಗಳೂರು: ರಾಜ್ಯದ ರೇಷ್ಮೆ ಕೃಷಿ ಕ್ಷೇತ್ರಕ್ಕೆ(Sericulture Sector) ಉತ್ತೇಜನ ನೀಡುವ ಉದ್ದೇಶದಿಂದ, ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆಯು ‘ಕೇಂದ್ರ ವಲಯ ಸಿಲ್ಕ್ ಸಮಗ್ರ-2′(Central Zone Integrated Silk-2) ಯೋಜನೆಯಡಿ ನೋಂದಾಯಿತ ಖಾಸಗಿ ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಕರಿಗೆ ಬಿತ್ತನೆ ಕೋಠಿ ಕಟ್ಟಡ ನಿರ್ಮಾಣ ಹಾಗೂ ಸಲಕರಣೆಗಳನ್ನು ಪಡೆದುಕೊಳ್ಳಲು ಧನಸಹಾಯ(Financial Assistance) (ಸಹಾಯಧನ) ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಬಯಸುವ ಅರ್ಹ ನೋಂದಾಯಿತ ಖಾಸಗಿ ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಕರು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ರೇಷ್ಮೆ ವಿಸ್ತರಣಾಧಿಕಾರಿಗಳ ಮೂಲಕ ಅರ್ಜಿಯನ್ನು 2026 ನೇ ಅಕ್ಟೋಬರ್ 23 ರ ಒಳಗಾಗಿ ಸಲ್ಲಿಸಬೇಕು.
ಅಗತ್ಯ ವಿವರಗಳು, ನಿಯಮಗಳು ಮತ್ತು ಅರ್ಜಿ ನಮೂನೆಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://sericulture.karnataka.gov.in ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಜಿಲ್ಲೆಯ ರೇಷ್ಮೆ ಜಂಟಿ ನಿರ್ದೇಶಕರು ಅಥವಾ ರೇಷ್ಮೆ ಉಪ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.
ಅರ್ಹ ಖಾಸಗಿ ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಕರು ಈ ಅವಕಾಶವನ್ನು ಬಳಸಿಕೊಂಡು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ಹಾಗೂ ರೇಷ್ಮೆ ನಿರ್ದೇಶಕರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles