‘ಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ’ ಯೋಜನೆಯಡಿ ಅರ್ಜಿ ಆಹ್ವಾನ; ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ಇತರೆ ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿಸುದ್ದಿ ನೀಡಿದೆ. ಉನ್ನತ ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವತಿಯಿಂದ ‘ಮುಖ್ಯಮಂತ್ರಿಗಳ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ’ಯಡಿ(Chief Minister’s Student Assistance Scheme) ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪೂರ್ಣ ಉಚಿತ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ರಾಜ್ಯದ ವಿದ್ಯಾರ್ಥಿಗಳು NEET (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ), JEE Main & JEE Advanced (ಜಂಟಿ ಪ್ರವೇಶ ಪರೀಕ್ಷೆ), KCET (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) ಗಳಂತಹ ಪ್ರಮುಖ ಪ್ರವೇಶ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ಪಡೆಯಬಹುದಾಗಿದೆ.
ಗ್ರಾಮೀಣ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವರದಾನ :
ವಿಶೇಷವಾಗಿ ಗ್ರಾಮೀಣ ಭಾಗದ, ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಖಾಸಗಿ ತರಬೇತಿ ಸಂಸ್ಥೆಗಳ ದುಬಾರಿ ಶುಲ್ಕ ಭರಿಸಲಾಗದೆ ವೃತ್ತಿಪರ ಕೋರ್ಸ್ಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ಮಹತ್ವದ ಹೆಜ್ಜೆ ಇಟ್ಟಿದೆ. ಈ ಉಚಿತ ಆನ್ಲೈನ್ ತರಬೇತಿಯ ಸೌಲಭ್ಯವನ್ನು ಬಳಸಿಕೊಂಡು ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಉತ್ತಮ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದ ಎಲ್ಲಾ ಪದವಿಪೂರ್ವ (ಪಿಯು) ಕಾಲೇಜುಗಳು ಹಾಗೂ ಸಂಬಂಧಿತ ಶಿಕ್ಷಣ ಸಂಸ್ಥೆಗಳ ಸೂಚನಾ ಫಲಕಗಳು, ಅಧಿಕೃತ ವೆಬ್ಸೈಟ್ಗಳು, ವಾಟ್ಸಾಪ್ ಗುಂಪುಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಈ ಯೋಜನೆಯ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವ್ಯಾಪಕ ಅರಿವು ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ಪ್ರೋತ್ಸಾಹಿಸಲು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ‘ಸೇವಾ ಸಿಂಧು’ ಪೋರ್ಟಲ್ https://sevasindhu.karnataka. gov.in/Sevasindhu/English ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ, ಸೇವಾ ಸಿಂಧು ಸಹಾಯವಾಣಿ ಸಂಖ್ಯೆ 080-24410574 ನ್ನು
ಸೋಮವಾರದಿಂದ ಶನಿವಾರದವರೆಗೆ, ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ (ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ).
ಅಥವಾ ಇಲಾಖೆಯ ವೆಬ್ಸೈಟ್ https://dte.karnataka.gov.in ಅಥವಾ ದೂರವಾಣಿ: 080-22200291 ನ್ನು ಸಂಪರ್ಕಿಸಬಹುದು ಎಂದು ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಡಾ. ಹರೀಶ್ ಕುಮಾರ್ ಕೆ. (ಭಾ.ಆ.ಸೇ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರದಿಂದ ಶನಿವಾರದವರೆಗೆ, ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ (ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ).
ಅಥವಾ ಇಲಾಖೆಯ ವೆಬ್ಸೈಟ್ https://dte.karnataka.gov.in ಅಥವಾ ದೂರವಾಣಿ: 080-22200291 ನ್ನು ಸಂಪರ್ಕಿಸಬಹುದು ಎಂದು ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಡಾ. ಹರೀಶ್ ಕುಮಾರ್ ಕೆ. (ಭಾ.ಆ.ಸೇ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

