ಒಂದು ಪೋಟೋ ಸಾವಿರ ಪದಗಳಿಗೆ ಸಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ – ಮುಖ್ಯಮಂತ್ರಿಗಳ ಪ್ರಶ್ನೆ
ಮೈಸೂರು / ಬೆಂಗಳೂರು, ಅಕ್ಟೋಬರ್ 18, (ಕರ್ನಾಟಕ ವಾರ್ತೆ): ಸೆನ್ಸೇಷನ್ ಸುದ್ದಿ (Sensation News) ಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ವರದಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  (Siddaramaiah) ಅವರು ಪ್ರಶ್ನಿಸಿದರು.  ಮೈಸೂರು ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ (Photo Journalists Association) ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್ ಗಳಿಗೆ “ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ” ವಿತರಿಸಿ ಮಾತನಾಡುತ್ತಾ, ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ ಎಂದರು.

ಪತ್ರಕರ್ತರು ಸತ್ಯ ಹೇಳ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಗೌರವ ತರುವುದಿಲ್ಲ ಎಂದರು.

ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ ನೀವು. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ ಎಂದರು.

ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12 ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಡ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಅನುಕೂಲ ಎನ್ನುವುದನ್ನು ಯೋಚಿಸಿ ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಶಾಸಕರಾದ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಶಿವಕುಮಾರ್, ಅಸೋಸಿಯೇಷನ್ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles