ಜಿಲ್ಲಾ ಮಾನವ  ಹಾಗೂ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ವರದಿ ತಯಾರಿಸಲು ಉಪ ಸಮಿತಿ ರಚನೆ

 ಬೆಂಗಳೂರು ನಗರ ಜಿಲ್ಲೆ, ಜೂನ್ 21 (ಕರ್ನಾಟಕ ವಾರ್ತೆ) : ಜಿಲ್ಲೆಯ ವಿವಿಧ ವಲಯಗಳಲ್ಲಿ ಉಂಟಾದ ಬದಲಾವಣೆಗಳು, ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ಬಳಕೆ, ಜಿಲ್ಲೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ನಿವಾರಣೆ ಕ್ರಮಗಳ ಬಗ್ಗೆ ಹಾಗೂ ಯಶೋಗಾಥೆಗಳನ್ನು ಒಳಗೊಂಡಂತೆ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025“ಯನ್ನು ಹಾಗೂ ಜಿಲ್ಲಾ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-2031”  ವರದಿಯನ್ನು ಜಿಲ್ಲಾ ಯೋಜನಾ ಸಮಿತಿ ಮೂಲಕ ತಯಾರಿಸಬೇಕಾಗಿರುವುದರಿಂದ ಜಿಲ್ಲಾ ಮಟ್ಟದ ಕೃಷಿ ಮತ್ತು ಪೂರಕ ಚಟುವಟಿಕೆಗಳು, ನೀರಾವರಿ ಕ್ಷೇತ್ರ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಆರೋಗ್ಯ, ಪೌಷ್ಠಿಕತೆ, ಕುಡಿಯುವ ನೀರು ಹಾಗೂ ನೈರ್ಮಲ್ಯ, ಸಮಾಜಿಕ ಅಭಿವೃದ‍್ಧಿ, ಮೂಲಸೌಕರ್ಯ, ಸಂಸ್ಕೃತಿ ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ನಗರಾಭಿವೃದ್ಧಿ, ಅಧಿಕಾರ ವಿಕೇಂದ್ರಿಕರಣ ಮತ್ತು ಸಾಂಸ್ಥಿಕ ಬಲವರ್ಧನೆ ಹಾಗೂ ಸಾರ್ವಜನಿಕ ಸೇವೆಗಳ  ವಲಯವಾರು ಉಪಸಮಿತಿಗಳನ್ನು ರಚಿಸಲಾಗಿದೆ. ಎಲ್ಲಾ ಸದಸ್ಯ ಇಲಾಖೆಗಳು ನಿಕರವಾದ ಮಾಹಿತಿಯ ವರದಿಯನ್ನು ತಯಾರಿಸಬೇಕೆಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಲಯವಾರು ಉಪಸಮಿತಿಗಳ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.                

ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

 ಬೆಂಗಳೂರು ನಗರ ಜಿಲ್ಲೆ, ಜೂನ್ 21, (ಕರ್ನಾಟಕ ವಾರ್ತೆ) : ಕೇಂದ್ರ ಸರ್ಕಾರದ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ವತಿಯಿಂದ   2025ನೇ ಸಾಲಿನ  ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ  ಆನ್‍ ಲೈನ್‍  ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತ ಮಕ್ಕಳು 2025ರ ಜುಲೈ 31ಕ್ಕೆ 05 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರಬೇಕು. ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಬೆಂಗಳೂರು ನಗರ ಜಿಲ್ಲೆಯ ಮಕ್ಕಳು ವೆಬ್‍ ಸೈಟ್‍ https://awards.gov.in  ನಲ್ಲಿ ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ನಗರ ಕೇಂದ್ರ, ಮಕ್ಕಳ ಪಾಲನಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್.ಮರೀಗೌಡ ರಸ್ತೆ, ಕಿದ್ವಾಯಿ ಆಸ್ಪತ್ರೆ ಹಿಂಭಾಗ, ಬೆಂಗಳೂರು-560 029 ಅಥವಾ ದೂರವಾಣಿ ಸಂಖ್ಯೆ : 080-29919017 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧರ್ತಿ   ಆಬಾ ಅಭಿಯಾನ ಶಿಬಿರ

ಬೆಂಗಳೂರು ನಗರ ಜಿಲ್ಲೆ, ಜೂನ್ 21, (ಕರ್ನಾಟಕ ವಾರ್ತೆ) : ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ಬೆಂಗಳೂರು ನಗರ ಜಿಲ್ಲೆಯ ಮೀನುಕುಂಟೆ ಗ್ರಾಮ ಪಂಚಾಯಿತಿಯ  ಚನ್ನಹಳ್ಳಿ ಗ್ರಾಮ, ಸರ್ಕಾರಿ ಪ್ರಾಥಮಿಕ ಶಾಲೆ, ಚನ್ನಹಳ್ಳಿ ಇಲ್ಲಿ “Dharti Aaba Abhiyan-Awareness and Benefit Saturation Camps” ರಡಿಯಲ್ಲಿ ಜಾಗೃತಿ  ಮತ್ತು ಪ್ರಯೋಜನೆಗಳ ಕುರಿತು ಜುಲೈ 15ರವರೆಗೆ ಶಿಬಿರಗಳನ್ನು  ಆಯೋಜಿಸಲಾಗಿದೆ. ಬುಡಕಟ್ಟು ಸಮುದಾಯದವರು  ಈ ಶಿಬಿರದ ಸೌಲಭ್ಯಗಳನ್ನು ಸದುಪಯೋಗ  ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ  ಸಹಾಯಕ ನಿರ್ದೇಶಕರು (ಗ್ರೇಡ್‍-1), ಸಮಾಜ ಕಲ್ಯಾಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ  ಬೆಂಗಳೂರು ಉತ್ತರ ತಾಲ್ಲೂಕು-560 065 ಅಥವಾ ದೂರವಾಣಿ ಸಂಖ್ಯೆ 080-28461351 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ  ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ  ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಜೂನ್ 21, (ಕರ್ನಾಟಕ ವಾರ್ತೆ) : ಸಮಾಜ ಕಲ್ಯಾಣ ಇಲಾಖೆ ವತಿಯಿಂದ   ಪರಿಶಿಷ್ಟ ಜಾತಿ ಜಾಗೂ ಪರಿಶಿಷ್ಟ  ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ   ಪ್ರವಾಸೋದ್ಯಮ ಇಲಾಖೆಯಿಂದ  ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ  ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

 ತರಬೇತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ  ಕ್ಷೇತ್ರದ ಐ.ಎಚ್. ಎಂ ಮತ್ತು ಎಫ್‍.ಸಿ.ಐ  ಸಂಸ್ಥೆಗಳ ಮೂಲಕ ಬೆಂಗಳೂರು  ಹಾಗೂ ಮೈಸೂರು ಜಿಲ್ಲೆಗಳಲ್ಲಿ  ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕನಿಷ್ಠ 20 ರಿಂದ 45 ವರ್ಷದೊಳಗಿರುವ ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಪ್ರೋತ್ಸಾಹಧನದೊಂದಿಗೆ ಉಚಿತ ತರಬೇತಿ  ನೀಡಲಾಗುವುದು.

 ಆಸಕ್ತರು ತರಬೇತಿ ಪಡೆಯಲು ಅರ್ಜಿಗಳನ್ನು ಆಯಾ ಜಿಲ್ಲೆಯ ಉಪ / ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಖೆಯ ಕಛೇರಿಗಳಲ್ಲಿ ಅಥವಾ ಇಲಾಖೆಯ ವೆಬ್‍ ಸೈಟ್‍ www.karnatakatourism.org ಸೇವಾ ಸಿಂಧು ಪ್ರೋರ್ಟಲ್‍ sevasindhu.karnataka.gov.in ಹಾಗೂ ಬಾಪೂಜಿ ಸೇವಾ ಕೇಂದ್ರ bsk.karnataka.gov.in ನಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ  ಸಹಾಯಕ ನಿರ್ದೇಶಕರ ಕಛೇರಿ (ಗ್ರೇಡ್‍-1) ಸಮಾಜ ಕಲ್ಯಾಣ ಇಲಾಖೆ, ಟಿ.ಎ.ಪಿ.ಸಿ.ಎಂ.ಎಸ್‍ ಬಿಲ್ಡಿಂಗ್‍, ಬಸ್ಟಾಂಡ್‍  ಹಿಂಭಾಗ, ಆನೇಕಲ್‍, ಬೆಂಗಳೂರು-562106 ಅಥವಾ ದೂರವಾಣಿ ಸಂಖ್ಯೆ : ಐ.ಎಚ್.ಎಂ : 080-22262690, ಎಫ್‍.ಸಿ.ಐ: 0821-2445388 ಗೆ ಸಂಪರ್ಕಿಸಬಹುದು ಎಂದು ಆನೇಕಲ್‍  ತಾಲ್ಲೂಕು,  ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಧರ್ತಿ  ಆಬಾ ಅಭಿಯಾನ ಶಿಬಿರ

ಬೆಂಗಳೂರು ನಗರ ಜಿಲ್ಲೆ, ಜೂನ್ 21, (ಕರ್ನಾಟಕ ವಾರ್ತೆ) : ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ಬೆಂಗಳೂರು ನಗರ ಜಿಲ್ಲೆಯ ನೆಲಗುಳಿ ಗ್ರಾಮ ಪಂಚಾಯಿತಿಯ ನಾಗನಾಯಕನಹಳ್ಳಿ ಗ್ರಾಮದಲ್ಲಿ ಜೂನ್ 19 ರಿಂದ ಜುಲೈ 10 ರವರೆಗೆ “Dharti Aaba Abhiyan-Awareness and Benefit Saturation Camps” ರಡಿಯಲ್ಲಿ   ಜಾಗೃತಿ ಮತ್ತು ಪ್ರಯೋಜನೆಗಳ ಕುರಿತು ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಬುಡಕಟ್ಟು ಸಮುದಾಯದವರು ಈ ಶಿಬಿರದ ಸೌಲಭ್ಯವನ್ನು ಸದುಪಯೋಗ  ಪಡೆದುಕೊಳ್ಳಬಹುದು.

 ಹೆಚ್ಚಿನ ಮಾಹಿತಿಗಾಗಿ  ಸಹಾಯಕ ನಿರ್ದೇಶಕರು (ಗ್ರೇಡ್ -1) ಸಮಾಜ ಕಲ್ಯಾಣ  ಇಲಾಖೆ, ಎಸ್.ಕರಿಯಪ್ಪ ಮೈನ್ ರೋಡ್, ಬೆಂಗಳೂರು ದಕ್ಷಿಣ  ತಾಲ್ಲೂಕು, ಬನಶಂಕರಿ, ಬೆಂಗಳೂರು-560070 ಅಥವಾ ದೂರವಾಣಿ ಸಂಖ್ಯೆ : 080-26711096 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ  ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅವಧಿ ವಿಸ್ತರಣೆ 

ಬೆಂಗಳೂರು ನಗರ ಜಿಲ್ಲೆ, ಜೂನ್ 21, (ಕರ್ನಾಟಕ ವಾರ್ತೆ) : ಮೈಸೂರಿನ ಜೆ.ಎಸ್.ಎಸ್‍ ವಿಶೇಷಚೇತನರ ಪಾಲಿಟೆಕ್ನಿಕ್‍  ವತಿಯಿಂದ  2025-26ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್‍ 23 ರವರಗೆ  ವಿಸ್ತರಿಸಲಾಗಿದೆ.

ಅನುದಾನಿತ ಕೋರ್ಸುಗಳಾದ  ಆರ್ಕಿಟೆಕ್ಚರ್ ಅಸಿಸ್ಟೆಂಟ್‌ಷಿಪ್,  ಕಮರ್ಷಿಯಲ್ ಪ್ರಾಕ್ಟಿಸ್,  ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಮತ್ತು ಅನುದಾನ ರಹಿತ ಕೋರ್ಸುಗಳಾದ  ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್,  ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪೇರ್ಡ್‍), ಅಪಾರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ & ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದು.

ಅರ್ಜಿಗಳನ್ನು  ಜೆ.ಎಸ್‍.ಎಸ್‍ ವಿಶೇಷಚೇತನರ ಪಾಲಿಟೆಕ್ನಿಕ್‍, ಜೆ.ಎಸ್‍.ಎಸ್‍ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು -570 006 ಇಲ್ಲಿಗೆ  (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100/- ಹಾಗೂ SC/ST/C-I ವರ್ಗದವರಿಗೆ ರೂ. 50/-) ನಗದು ಅಥವಾ ಡಿಡಿ ಮೂಲಕ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್ ಸೈಟ್ www.jsspda.org ಮೂಲಕ download ಮಾಡಿಕೊಳ್ಳಬಹುದು.

 ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್: www.jsspda.org ಅಥವಾ ಮೊಬೈಲ್‍ ಸಂಖ್ಯೆ : 98446 44937 ಗೆ ಸಂಪರ್ಕಿಸಬಹುದು ಎಂದು  ಮೈಸೂರಿನ ಜೆ.ಎಸ್‍.ಎಸ್‍ ವಿಶೇಷಚೇತನರ ಪಾಲಿಟೆಕ್ನಿಕ್‍ ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್  ಕೋರ್ಸಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 21, (ಕರ್ನಾಟಕ ವಾರ್ತೆ) : ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ 2025-26ನೇ ಸಾಲಿನ “ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್”  ಕೋರ್ಸಿಗೆ DME / DTDM / BE (Mech /Indl.Engg. & Manufacturing / Indl.& Production, Automobile Engg.) ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು ಮೊ.ಸಂ: 9141629584/ 9880217473/ 8310987353 ವೆಬ್‍ಸೈಟ್ :https://gttc.karnataka.gov.in ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಎಂ-ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 21,   (ಕರ್ನಾಟಕ ವಾರ್ತೆ) : ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಐಸಿಟಿಇ ಯಿಂದ ಅನುಮೋದನೆಗೊಂಡು ವಿಟಿಯು ಗೆ ಸಂಯೋಜಿತಗೊಂಡಿರುವ “ಎಂ-ಟೆಕ್ ಇನ್ ಟೂಲ್ ಇಂಜಿನಿಯರಿಂಗ್” ಕೋರ್ಸಿಗೆ BE in Mechanical Engg./ Auto Mobile Engg. Automation & Robotics Engg./ Indl&Production Engg/Tool  Engineering/Mechatronics Engg. ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು ಮೊ.ಸಂ: 9141629584 / 9880217473/ 8310987353 ಹಾಗೂ ವೆಬ್‍ಸೈಟ್: https://gttc.karnataka.gov.in ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles