ಇಎಸ್‍ಐಸಿ ಉಪ ಪ್ರಾದೇಶಿಕ ಕಚೇರಿಯಲ್ಲಿ ‘ಅಗ್ನಿ ಸುರಕ್ಷತಾ ಅಣಕು ಪ್ರದರ್ಶನ’

ಕೆಲಸದ ಸ್ಥಳದಲ್ಲಿ ಸುರಕ್ಷತೆಯನ್ನು ಖಾತ್ರಿಪಡಿಸುವ ಮತ್ತು ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸನ್ನದ್ಧರಾಗುವ ನಿಟ್ಟಿನಲ್ಲಿ, ಕಾರ್ಮಿಕ ರಾಜ್ಯ ವಿಮಾ ನಿಗಮದ ಬೊಮ್ಮಸಂದ್ರದ (Bommasandra) ಉಪ ಪ್ರಾದೇಶಿಕ ಕಚೇರಿಯಲ್ಲಿಂದು ಯಶಸ್ವಿಯಾಗಿ ಅಗ್ನಿ ಸುರಕ್ಷತಾ ಅಣಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಕಚೇರಿಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಇಎಸ್‍ಐಸಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಭದ್ರತಾ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು, ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಪ್ರಕ್ರಿಯೆ ಮತ್ತು ಅಗ್ನಿಶಾಮಕ ಉಪಕರಣಗಳ ಸಮರ್ಪಕ ಬಳಕೆಯ ಬಗ್ಗೆ ಸಿಬ್ಬಂದಿಗೆ ವಿವರವಾದ ಜಾಗೃತಿ ಮೂಡಿಸಲಾಯಿತು.

ಈ ಅಣಕು ಪ್ರದರ್ಶನದಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ಅಲಾರಾಂ ಮೊಳಗಿಸುವುದು ಮತ್ತು ಕಟ್ಟಡದಿಂದ ಸುರಕ್ಷಿತವಾಗಿ ಹೊರಬರುವ ಪ್ರಮಾಣಿತ ಕಾರ್ಯಾಚರಣಾ ವಿಧಾನ ಹಾಗೂ ಬೆಂಕಿ ನಂದಿಸುವ ಉಪಕರಣಗಳನ್ನು ಬಳಸುವುದು ಹೇಗೆ ಎಂಬುದನ್ನು ಪ್ರಾಯೋಗಿಕವಾಗಿ ಪ್ರದರ್ಶಿಸುವ ಜೊತೆಗೆ ಸಿಬ್ಬಂದಿಗೆ ತರಬೇತಿಯನ್ನು ನೀಡಲಾಯಿತು.

ನಿಯೋಜಿತ ಸುರಕ್ಷತಾ ಅಧಿಕಾರಿಗಳ ಮೇಲ್ವಿಚಾರಣೆ ಹಾಗೂ ತುರ್ತು ಸೇವಾ ವಿಭಾಗಗಳ ಸಮನ್ವಯದೊಂದಿಗೆ ಇಂತಹ ನಿಯಮಿತ ತರಬೇತಿಗಳ ಮೂಲಕ ಕಚೇರಿಯಲ್ಲಿ ಸುರಕ್ಷಿತ ವಾತಾವರಣವನ್ನು ಕಾಯ್ದುಕೊಳ್ಳಲು ಬೊಮ್ಮಸಂದ್ರದ ಇಎಸ್‍ಐಸಿ ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಬೊಮ್ಮಸಂದ್ರ ಇಎಸ್‍ಐಸಿ ಉಪ ಪ್ರಾದೇಶಿಕ ಕಚೇರಿಯ ಪ್ರಕಟಣೆ ತಿಳಿಸಿದೆ.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles