ಮಾನವೀಯ ಮೌಲ್ಯಗಳೊಂದಿಗೆ AI ಅಳವಡಿಸಿಕೊಂಡಾಗ ವಿಕಸಿತ ಭಾರತದ ಕನಸು ನನಸಾಗುತ್ತದೆ: ರಾಜ್ಯಪಾಲ ಗೆಹ್ಲೋಟ್

“ಕೃತಕ ಬುದ್ಧಿಮತ್ತೆ (AI)ಯಲ್ಲಿ (Artificial Intelligence) ಪ್ರಾವೀಣ್ಯತೆ ಗಳಿಸುವುದರ ಜೊತೆಗೆ ಮಾನವೀಯ ಮೌಲ್ಯಗಳು, ನೈತಿಕತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನೂ ಯುವಜನರು ಅಳವಡಿಸಿಕೊಂಡಾಗಲೇ ವಿಕಸಿತ ಭಾರತ-2047 ಗುರಿ ಸಾಕಾರಗೊಳ್ಳುತ್ತದೆ” ಎಂದು ಕರ್ನಾಟಕದ ಗೌರವಾನ್ವಿತ (Gvoernor) ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Gehlot) ಹೇಳಿದರು.

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಆಯೋಜಿಸಲಾದ ಯೂನಿವರ್ಸಿಟಿ ಆಫ್ ಲಿವರ್‌ಪೂಲ್ ಬೆಂಗಳೂರು ಸ್ಥಾಪಕ ಬ್ಯಾಚ್ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು. “ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ ನಡುವಿನ ಶಿಕ್ಷಣ, ಸಂಶೋಧನೆ, ನಾವೀನ್ಯತೆ ಮತ್ತು ಜ್ಞಾನ ಕ್ಷೇತ್ರಗಳ ಸಹಯೋಗಕ್ಕೆ ಈ ಕಾರ್ಯಕ್ರಮವು ಹೊಸ ಅಧ್ಯಾಯದ ಆರಂಭವಾಗಿದೆ ಎಂದರು.

“1881ರಲ್ಲಿ ಸ್ಥಾಪನೆಯಾದ ಯೂನಿವರ್ಸಿಟಿ ಆಫ್ ಲಿವರ್‌ಪೂಲ್ ಒಂದೂವರೆ ಶತಮಾನಕ್ಕೂ ಅಧಿಕ ಶೈಕ್ಷಣಿಕ ಶ್ರೇಷ್ಠತೆಯ ಪರಂಪರೆಯನ್ನು ಹೊಂದಿದ್ದು, ಪ್ರತಿಷ್ಠಿತ ರಸೆಲ್ ಗ್ರೂಪ್ ಸದಸ್ಯತ್ವದ ಮೂಲಕ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಹೆಗ್ಗಳಿಕೆಯನ್ನು ಗಳಿಸಿದೆ. ಬೆಂಗಳೂರಿನಲ್ಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಸ್ಥಾಪನೆಯಾಗಿರುವುದು ಭಾರತ-ಬ್ರಿಟನ್ ಶೈಕ್ಷಣಿಕ ಸಹಯೋಗವನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ತಿಳಿಸಿದರು.

“ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿಯಾಗಿದ್ದು, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಏರೋಸ್ಪೇಸ್, ಫಿನ್‌ಟೆಕ್ ಮತ್ತು ಕೃತಕ ಬುದ್ಧಿಮತ್ತೆ ಸೇರಿದಂತೆ ಅನೇಕ ಉದಯೋನ್ಮುಖ ಕ್ಷೇತ್ರಗಳಲ್ಲಿ ಜಾಗತಿಕ ಗುರುತನ್ನು ಪಡೆದಿದೆ. ಇಂತಹ ನಗರದಲ್ಲಿ ಲಿವರ್‌ಪೂಲ್ ವಿಶ್ವವಿದ್ಯಾನಿಲಯದ ಕ್ಯಾಂಪಸ್ ಸ್ಥಾಪನೆಯಾಗಿರುವುದು ಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ಹೊಸ ವೇಗ ನೀಡಲಿದೆ” ಎಂದು ಅವರು ಅಭಿಪ್ರಾಯಪಟ್ಟರು.

“ಯಾವುದೇ ಸಂಸ್ಥೆಯ ಮೊದಲ ಬ್ಯಾಚ್ ಅದರ ಇತಿಹಾಸದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುತ್ತದೆ. ವಿಶ್ವವಿದ್ಯಾಲಯದ ಸಂಸ್ಕೃತಿ, ಮೌಲ್ಯಗಳು ಮತ್ತು ಭವಿಷ್ಯದ ಬೆಳವಣಿಗೆಯನ್ನು ರೂಪಿಸುವಲ್ಲಿ ನಿಮ್ಮ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಣವು ಕೇವಲ ವೃತ್ತಿ ಆಧಾರಿತವಾಗಿರದೆ, ವ್ಯಕ್ತಿತ್ವ ನಿರ್ಮಾಣ ಹಾಗೂ ರಾಷ್ಟ್ರ ನಿರ್ಮಾಣದ ಸಾಧನವಾಗಬೇಕು” ಎಂದು ರಾಜ್ಯಪಾಲರು ಹೇಳಿದರು.

ಸ್ವಾಮಿ ವಿವೇಕಾನಂದರ ಆತ್ಮವಿಶ್ವಾಸ, ಉತ್ತಮ ಚಾರಿತ್ರ್ಯ ಮತ್ತು ರಾಷ್ಟ್ರಸೇವೆಯ ಸಂದೇಶ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆಯ ಚಿಂತನೆಗಳನ್ನು ಸ್ಮರಿಸಿದ ಅವರು, ಸಮಾಜದ ಸಮಸ್ಯೆಗಳನ್ನು ಅರಿತು ಜ್ಞಾನವನ್ನು ರಾಷ್ಟ್ರದ ಪ್ರಗತಿಗೆ ಬಳಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಬೆಂಗಳೂರು ವಿಶ್ವದರ್ಜೆಯ ತಂತ್ರಜ್ಞಾನ ಸಂಸ್ಥೆಗಳು, ಸ್ಟಾರ್ಟ್‌ಅಪ್‌ಗಳು ಮತ್ತು ಸಂಶೋಧನಾ ಕೇಂದ್ರಗಳ ತಾಣವಾಗಿದ್ದು, ವಿದ್ಯಾರ್ಥಿಗಳು ಪ್ರಯೋಗಾಲಯಗಳಿಂದ ಸಮಾಜದತ್ತ ಹೆಜ್ಜೆ ಹಾಕಿ, ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ರೂಪಿಸಿ, ಉದ್ಯೋಗ ಹುಡುಕುವವರಾಗುವುದಕ್ಕಿಂತ ಉದ್ಯಮಶೀಲತಾ ಅವಕಾಶಗಳನ್ನು ಸೃಷ್ಟಿಸುವವರಾಗಬೇಕು ಎಂದು ಕರೆ ನೀಡಿದರು.

ಜ್ಞಾನ, ಸಂಶೋಧನೆ, ನಾವೀನ್ಯತೆ, ಉದ್ಯಮಶೀಲತೆ ಮತ್ತು ಮಾನವೀಯ ಮೌಲ್ಯಗಳ ಕ್ಷೇತ್ರದಲ್ಲಿ ಈ ವಿಶ್ವವಿದ್ಯಾಲಯವು ಜಾಗತಿಕ ಶ್ರೇಷ್ಠತಾ ಕೇಂದ್ರವಾಗಿ ಹೊರಹೊಮ್ಮಲಿದ್ದು, ರಾಷ್ಟ್ರ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುವ ಜೊತೆಗೆ ಜಾಗತಿಕ ಜ್ಞಾನ ಕೇಂದ್ರವಾಗಿ ಬೆಂಗಳೂರಿನ ಗುರುತನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಯೂನಿವರ್ಸಿಟಿ ಆಫ್ ಲಿವರ್‌ಪೂಲ್ ಬೆಂಗಳೂರಿನ ಪ್ರೊವೋಸ್ಟ್ ಪ್ರೊಫೆಸರ್ ರಿಚರ್ಡ್ ಗ್ರೋಸ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅನಿಲ್ ಎಸ್. ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Hot this week

ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಹಾತ್ಮ ಗಾಂಧೀಜಿಯವರು(Mahatma Gandhiji) ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87...

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು...

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

Topics

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು...

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Related Articles