AKBMS congratulates DK Shivakumar: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ಗೆ ಅಭಿನಂದನೆ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಗೌರವಾನ್ವಿತ ಶ್ರೀ ಡಿ. ಕೆ. ಶಿವಕುಮಾರ್ ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶ್ರೀ ಎಸ್. ರಘುನಾಥ್ ಅವರು ಖುದ್ದಾಗಿ ಭೇಟಿ ಮಾಡಿ ಅಭಿನಂದನೆ ಹಾಗೂ ಶುಭಾಶಯಗಳನ್ನು ಸಲ್ಲಿಸಿದರು (AKBMS congratulate DK Shivakumar).

ಬುಧವಾರ ಸಂಜೆ ನಡೆದ ಈ ಭೇಟಿಯಲ್ಲಿ ಮಹಾಸಭಾದ ಎಲ್ಲಾ ಪದಾಧಿಕಾರಿಗಳ ಪರವಾಗಿ ಮುಖ್ಯಮಂತ್ರಿ ಅವರಿಗೆ ಶುಭಾಶಯಗಳನ್ನು ತಿಳಿಸಲಾಯಿತು. ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕಾಗಿ ತಮ್ಮ ದೀರ್ಘ ರಾಜಕೀಯ ಅನುಭವ ಹಾಗೂ ನಾಯಕತ್ವದ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸುವ ಮೂಲಕ ಜನರ ನಿರೀಕ್ಷೆಗಳನ್ನು ಈಡೇರಿಸುವ ವಿಶ್ವಾಸವನ್ನು ಮಹಾಸಭಾ ವ್ಯಕ್ತಪಡಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರಾದ ಶ್ರೀ ಎಸ್. ರಘುನಾಥ್ ಅವರು, ಸುಮಾರು ನಾಲ್ಕು ದಶಕಗಳ ರಾಜಕೀಯ ಪರಿಶ್ರಮ ಮತ್ತು ಅನುಭವದ ಫಲವಾಗಿ ರಾಜ್ಯದ ಆಡಳಿತದ ಜವಾಬ್ದಾರಿ ಶ್ರೀ ಡಿ. ಕೆ. ಶಿವಕುಮಾರ್ ಅವರಿಗೆ ಲಭಿಸಿದೆ ಎಂದು ತಿಳಿಸಿದರು. ಪ್ರೀತಿ, ಕರುಣೆ, ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ಆಡಳಿತದ ಮೂಲಕ ರಾಜ್ಯದ ಜನರ ಹಿತಾಸಕ್ತಿಯನ್ನು ಕಾಪಾಡುತ್ತಾ ಯಶಸ್ವಿ ಮುಖ್ಯಮಂತ್ರಿಗಳಾಗಿ ಹೊರಹೊಮ್ಮುವಂತೆ ಹಾರೈಸಿದರು.

ಇದೇ ವೇಳೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪರವಾಗಿ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರವನ್ನೂ ಸಲ್ಲಿಸಲಾಯಿತು. ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆಯಲಿದೆ ಎಂಬ ನಿರೀಕ್ಷೆಯನ್ನು ಮಹಾಸಭಾ ವ್ಯಕ್ತಪಡಿಸಿತು.

ಈ ಕುರಿತು ಮಾಹಿತಿ ನೀಡಿದ ಎ. ದಿಲೀಪ್ ಕುಮಾರ್, ಉಪಾಧ್ಯಕ್ಷರು – ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ರಾಜ್ಯಾಧ್ಯಕ್ಷರು – ವಿಶ್ವ ಬ್ರಾಹ್ಮಣ ಸಂಘ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಅವರ ನಾಯಕತ್ವ ಮಹತ್ವದ ಪಾತ್ರ ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಜನತೆ ಮತ್ತು ವಿವಿಧ ಸಮುದಾಯಗಳ ಆಶೋತ್ತರಗಳಿಗೆ ಸ್ಪಂದಿಸುವ ಜನಪರ ಆಡಳಿತವನ್ನು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ನೀಡುವರೆಂಬ ನಿರೀಕ್ಷೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವ್ಯಕ್ತಪಡಿಸಿದೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles