ಬೆಂಗಳೂರು: ರಾಜ್ಯದಲ್ಲಿ ಸರಿಯಾಗಿ ಮಳೆ ಇಲ್ಲದೆ ಬರ ಎದುರಾಗಿರುವ ಹಿನ್ನಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ(Drinking Water) ಸಮಸ್ಯೆಯಾಗದಂತೆ ಸಕಲ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ(Eshwar Khandre) ತಿಳಿಸಿದರು.
ಅವರು ಇಂದು ವಿಧಾನಪರಿಷತ್‍ನ ವಿಶೇಷ ಅಧಿವೇಶನದಲ್ಲಿ ಸದಸ್ಯರಾದ ಕೆ.ಎಸ್ ನವೀನ್ ಅವರು, ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದು, ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ರೈತರ ನೆರವಿಗೆ ಸರ್ಕಾರ ದಾವಿಸಬೇಕು ಎಂದು ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಿಸಿದÀ ಸಚಿವರು ಬರಗಾಲದ ಹಿನ್ನಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಒಟ್ಟು 117ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಕ್ರಿಯಾ ಯೋಜನೆ ರೂಪಿಸಿ ಸಮಸ್ಯೆ ಇರುವ ಕಡೆ ಅನುದಾನವನ್ನು ಉಪಯೋಗಿಸುವಂತೆ ಜಿಲ್ಲಾ ಪಂಚಾಯಿತಿಯ ಸಿಇಓಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆ ಮಾಡುವುದು, ಪೈಪ್ ಲೈನ್ ದುರಸ್ತಿಪಡಿಸುವುದು ಸೇರಿದಂತೆ, ಹೊಸ ಬೋರೆವೆಲ್ ಕೊರೆಸಿ ನೀರಿಗೆ ಸಮಸ್ಯೆಯಾಗದಂತೆ ಎಚ್ಚರವಹಿಸಲು ಸೂಚಿಸಿದೆ ಎಂದರು.
ವಿಧಾನಸಭೆಯಲ್ಲಿ ಹಿರಿಯ ನಟ ಅನಂತ್ ನಾಗ್ ಅವರಿಗೆ ಅಭಿನಂದನೆ- ಸಭಾಧ್ಯಕ್ಷ ಜಿ.ಎಸ್.ಪಾಟೀಲ್

