ಚಿತ್ರರಂಗದಲ್ಲಿ ಹೊಸ ಅಲೆ ಮೂಡಿಸಿದ ಕಲಾವಿದ ಅನಂತನಾಗ್- ಉಪಮುಖ್ಯಮಂತ್ರಿ ಡಾ: ಜಿ.ಪರಮೇಶ್ವರ್

ಅನಂತ್‍ನಾಗ್ ಅವರು ಚಿತ್ರರಂಗದಲ್ಲಿ ಹೊಸ ಅಲೆ ಮೂಡಿಸಿದ ಕಲಾವಿದ. ವಿಷ್ಣುವರ್ಧನ್, ಡಾ: ರಾಜ್ ಕುಮಾರ್ ರವರು ಇದ್ದಂತಹ ಸಂದರ್ಭದಲ್ಲಿ ಅನಂತನಾಗ್ ಅವರು ಕನ್ನಡ ಚಿತ್ರರಂಗದಲ್ಲಿ ಹೊಸ ಛಾಪು(A new mark) ಮೂಡಿಸಿದ ಕಲಾವಿದ ಎಂದರೆ ತಪ್ಪಾಗಲಾರದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್(Dr.G.Parameshwar) ಅವರು ಅನಂತನಾಗ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಇಂದು ವಿಧಾನಸಭೆಯ ಕಲಾಪದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಅನಂತ್‍ನಾಗ್ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು ಅನಂತ್ ನಾಗ್ ಅವರು ಚಲನಚಿತ್ರಕ್ಕೆ ಸೀಮಿತವಾಗದೆ 1989-1994ರ ಅವಧಿಯಲ್ಲಿ ವಿಧಾನಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ಸೇವೆ ಸಲ್ಲಿಸಿ, ನಂತರ 1994ರಲ್ಲಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಬೆಂಗಳೂರು ನಗರಾಭಿವೃಧ್ಧಿ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ ಎಂದು ಸದನದಲ್ಲಿ ತಿಳಿಸಿದರು.

ಅನಂತ್‍ನಾಗ್ ಅವರು 70ಕ್ಕೂ ಹೆಚ್ಚು ನಾಟಕಗಳಲ್ಲಿ ಹಾಗೂ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. 1973ರಲ್ಲಿ ಬಿಡುಗಡೆಯಾದ “ಸಂಕಲ್ಪ” ಎಂಬ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಐದು ಬಾರಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿರುವ ಅವರು ಪದ್ಮಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. 1995ನೇ ಸಾಲಿನಲ್ಲಿ ಕನ್ನಡದ ಮೇರುನಟ ಡಾ: ರಾಜ್ ಕುಮಾರ್ ಅವರಿಗೆ ಈ ಪ್ರಶಸ್ತಿಯು ದೊರಕಿತ್ತು. 30 ವರ್ಷಗಳ ನಂತರ ಅನಂತನಾಗ್‍ರವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರಕಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿ ಅನಂತ್‍ನಾಗ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ವಿರೋಧಪಕ್ಷದ ನಾಯಕರಿಂದ ಅಭಿನಂದನೆ:
ಕನ್ನಡ ಚಿತ್ರರಂಗದ ಮೇರುನಟ ಡಾ: ರಾಜ್ ಕುಮಾರ್ ಅವರ ನಂತರ 30 ವರ್ಷಗಳ ತರುವಾಯ ಅನಂತ್ ನಾಗ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೊಂದು ಹೆಮ್ಮೆಯ ವಿಷಯವಾಗಿದೆ. ಅನಂತ್ ನಾಗ್ ಅವರು ಚಿತ್ರರಂಗದಲ್ಲಿ ಮಾತ್ರವಲ್ಲದೇ ರಾಜಕೀಯ ವಲಯದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮುಖ್ಯಮಂತ್ರಿ ಜೆ.ಹೆಚ್.ಪಟೇಲ್ ಮಂತ್ರಿಮಂಡಲದಲ್ಲಿ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿ ತದನಂತರ ನಟನಾರಂಗಕ್ಕೆ ಹಿಂದಿರುಗಿದರು. ಕೇಂದ್ರ ಸರ್ಕಾರವು ಅವರ ಕಲಾಸೇವೆಯನ್ನು ಗುರುತಿಸಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವೆಂದು ತಿಳಿಸಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಅನಂತನಾಗ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಉಪ ಸಭಾಧ್ಯಕ್ಷ ಮಂಕಾಳ್ ವೈದ್ಯ, ಸದಸ್ಯರಾದ ಸುರೇಶ್ ಬಾಬು, ಮುನಿರತ್ನ, ಸುರೇಶ್ ಕುಮಾರ್, ಅರಬೈಲ್ ಶಿವರಾಮ್ ಹೆಬ್ಬಾರ್, ಸಿ.ಎನ್.ಮಂಜುನಾಥ್, ಅಶ್ವಥ್ ನಾರಾಯಣ ಅವರುಗಳು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಅನಂತನಾಗ್ ರವರಿಗೆ ಸದನದಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದರು.

ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ನೆರವು ಅಗತ್ಯ: ಡಾ. ಜಿ. ಪರಮೇಶ್ವರ

Hot this week

ಕರ್ನಾಟಕದ ಸರ್ಕಾರಿ ಸೇವೆಗಳಿಗೆ ಬಹುಭಾಷಾ ಮತ್ತು ಧ್ವನಿ ಆಧಾರಿತ ಪ್ರವೇಶದ ಯೋಜನೆ

ಕರ್ನಾಟಕ ಸರ್ಕಾರವು ಸಾರ್ವಜನಿಕ ಸೇವೆಗಳನ್ನು ಜನರಿಗೆ ಅವರ ಆಯ್ಕೆಯ ಭಾಷೆಯಲ್ಲಿ ಸುಲಭವಾಗಿ...

ಕೆನಡಾದ ಲೇಖಕಿ ಆನ್ ಕಾರ್ಸನ್‌ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

ಕೆನಡಾದ ಕವಯಿತ್ರಿ, ಪ್ರಬಂಧಕಾರ್ತಿ ಮತ್ತು ಅನುವಾದಕಿ ಆನ್ ಕಾರ್ಸನ್ ಅವರಿಗೆ ಸಾಹಿತ್ಯ...

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ ಕರ್ನಾಟಕದಲ್ಲಿ ಬರ...

ಆಂಧ್ರಪ್ರದೇಶದಲ್ಲಿ ತೀವ್ರ ಬರ: 21 ಜಿಲ್ಲೆಗಳ 388 ಮಂಡಲಗಳು ಬಾಧಿತ

ಆಂಧ್ರಪ್ರದೇಶ ಸರ್ಕಾರವು 21 ಜಿಲ್ಲೆಗಳ 388 ಮಂಡಲಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ...

ಹಿರಿಯ ನಟ ನಾನಾ ಪಾಟೇಕರ್ ನಿಧನ: ಚಿತ್ರರಂಗದಲ್ಲಿ ಶೋಕ

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ಸಾಂಸ್ಕೃತಿಕ ಐಕಾನ್...

Topics

ಜಿಎಸ್‌ಟಿ ಅಧಿಕಾರಿಗಳ ಬಂಧನಾಧಿಕಾರ ರದ್ದು; ಪ್ರಾಸಿಕ್ಯೂಷನ್ ಮಿತಿ ₹1 ಕೋಟಿಯಿಂದ ₹5 ಕೋಟಿಗೆ ಏರಿಕೆ!

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಿಗೆ...

ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA.. ಆಯಣ: ದಕ್ಷಿಣಾಯನ AYANA:...

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (KSTA) ವತಿಯಿಂದ "ಆಹಾರ ಮತ್ತು...

Related Articles