ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ(Central Election) ಆಯೋಗಕ್ಕೆ ಮನವಿ ಎಸ್‍ಐಆರ್(SIR) ದುರ್ಬಳಕೆಗೆ ರಾಜ್ಯ ಸರ್ಕಾರದ ಕುಮ್ಮಕ್ಕು: B.Y.ವಿಜಯೇಂದ್ರ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅನ್ನು ದುರ್ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಕುಮ್ಮಕ್ಕು(Abetment) ನೀಡುತ್ತಿದೆ. BLO ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಶಾಸಕ ಹಾಗೂ ರಾಜ್ಯ BJP ಅಧ್ಯಕ್ಷ B.Y. ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಆರಂಭವಾಗಿರುವ SIRನಲ್ಲಿ ಆಗುತ್ತಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಕೋರಿ ಕೇಂದ್ರ ಚುನಾವಣಾ ಆಯೋಗಕ್ಕೆ(Election commission of India) ಮನವಿ ಸಲ್ಲಿಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರ್ಬಳಕೆ ಮಾಡುತ್ತಿದೆ. SIRನಲ್ಲಿ ಅಧಿಕಾರಿಗಳು ಮನೆಮನೆಗೆ ಹೋಗಿ ಎನ್ಯೂಮರೇಷನ್ ಫಾರಂಗಳನ್ನು(Enumaration Form) ನೀಡಬೇಕು. ಆದರೆ BLO ಗಳನ್ನು ಕಲ್ಯಾಣ ಮಂಟಪ, ಚೌಲ್ಟ್ರಿ, ಮಸೀದಿಗಳಲ್ಲಿ ಕುಳಿತು ನಮೂನೆಗಳನ್ನು ಹಂಚುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಯೋಗಕ್ಕೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.

BLOಗಳನ್ನು ಕೆಲವು ಶಾಸಕರು ತಮ್ಮ ಕಚೇರಿಯಲ್ಲಿ ಕೂರಿಸಿಕೊಂಡು ಕೆಲಸ ಮಾಡಿಸುತ್ತಿದ್ದಾರೆ. ಅಧಿಕಾರಿಗಳ ಮೇಳೆ ಶಾಸಕರು ಒತ್ತಡ ಹೇರುತ್ತಿದ್ದಾರೆ. ಇದನ್ನೆಲ್ಲ ಆಯುಕ್ತರ ಗಮನಕ್ಕೆ ತಂದಿದ್ದೇವೆ. ಆದ್ದರಿಂದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು. ಎಲ್ಲೆಲ್ಲಿ ಈ ರೀತಿ SIR ಎಡವಟ್ಟು(Mishap) ಆಗಿದೆ ಅಲ್ಲಿ ಹೊಸದಾಗಿ SIR ಆರಂಭಿಸಬೇಕು ಎಂದು ಆಗ್ರಹಿಸಿರುವುದಾಗಿ ತಿಳಿಸಿದರು.
ಈಗಾಗಲೇ ಕೇಂದ್ರ ಚುನಾವಣಾ ಆಯೋಗದ SIR ಜೊತೆಗೆ ಸಮಾನಾಂತರವಾಗಿ GBA ವ್ಯಾಪ್ತಿಯಲ್ಲಿ ರಾಜ್ಯ ಚುನಾವಣಾ ಆಯೋಗದಿಂದ SIR ನಡೆಸಲಾಗುತ್ತಿದೆ. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. SIR ಉದ್ದೇಶವನ್ನೇ ರಾಜ್ಯ ಸರ್ಕಾರ ಹಾಳುಗೆಡವಿದೆ. ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ(Assembly constituency) ಹಂಚುತ್ತಿರುವ ಫಾರಂಗಳಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಫೋಟೋಗಳನ್ನು ಹಾಕಿದ್ದಾರೆ. ಇದನ್ನು ಆಯೋಗದ ಗಮನಕ್ಕೆ ತಂದಿದ್ದೇವೆ ಎಂದರು.
SIR ಅವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿದ ಆಯೋಗ ವಿಡಿಯೊ ಕಾನ್ಫರೆನ್ಸ್(Conference) ಮಾಡಿ ಸರಿಯಾದ ರೀತಿ ಮಾಡಿ ಎಂದು ತಾಕೀತು(Strict Instruction) ಮಾಡಿದ್ದರೂ ಪಾಲಿಸಲಾಗುತ್ತಿಲ್ಲ. ನಮ್ಮ ದೂರಿಗೆ ಸ್ಪಂದಿಸಿರುವ ಆಯೋಗ ಸರಿಪಡಿಸುವ ಭರವಸೆ ನೀಡಿದೆ ಎಂದು ವಿವರಿಸಿದರು.

ರಾಜ್ಯದಲ್ಲಿನ SIR ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ. ಕೇಂದ್ರ ಚುನಾವಣಾ ಆಯೋಗವು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಕತ್ತೆಗಳು ಇಡೀ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟವೆ. ಈ ಕತ್ತೆಗಳೇ SIRಅನ್ನು ಹಾಳುಗೆಡವುತ್ತಿವೆ. ಬಿಎಲ್‍ಎ ಗಳ ಗಮನಕ್ಕೆ ಬರದಂತೆ ಶಾಸಕರ ಕಚೇರಿಯಲ್ಲಿ ಬಿಎಲ್‍ಒಗಳು ಕುಳಿತರೆ ಏನೂ ಮಾಡಲಾಗದು. ಅಧಿಕಾರಿಗಳನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಒತ್ತಾಯಪೂರ್ವಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದರು. ಕೆಲವು ಕಡೆ ಫಾರಂಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಅಧಿಕಾರಿಗಳಿಂದ ಕಸಿದುಕೊಂಡು ಹೋಗಿ ಹಂಚುತ್ತಿದ್ದಾರೆ ಎಂದು ದೂರಿದರು.

ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಅವರು ಮಾತನಾಡಿ, ಜಯನಗರದಲ್ಲೂ SIR ಅವ್ಯವಸ್ಥೆ ಆಗಿದೆ. ಆಯೋಗಕ್ಕೆ ದೂರು ನೀಡಿದ್ದೇವೆ. ಜಿಬಿಎ ಅಧಿಕಾರಿಗಳಿಗೆ ಸಹ ದೂರು ನೀಡಿದ್ದೇವೆ. BLOಗಳು ಬೇಕೆಂದರಲ್ಲಿ ಅರ್ಜಿ ಹಂಚುತ್ತಿದ್ದಾರೆ. ಆದ್ದರಿಂದ ಯಾರೇ ಕರ್ತವ್ಯಲೋಪ ಮಾಡಿದ್ದರೂ ಅಂತಹವರನ್ನು ಅಮಾನತು ಮಾಡಬೇಕು ಎಂದರು. ಇಂತಹ ಅಕ್ರಮ ಎಲ್ಲೆಲ್ಲಿ ಆಗಿದೆ ಅಲ್ಲಿ ಮತ್ತೆ SIR ಮಾಡಬೇಕು ಎಂದು ಆಗ್ರಹಿಸಿದರು.

ಶಾಸಕ ಎಸ್. ಸುರೇಶ್ ಕುಮಾರ್*, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿಕೆ ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಉಪಸ್ಥಿತರಿದ್ದರು.

Hot this week

ಸರ್ಕಾರಿ ಎಸ್‍ಕೆಎಸ್‍ಜೆಟಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜುಲೈ 22 ರಂದು ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು

ಬೆಂಗಳೂರು, ಜುಲೈ 04 : ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಸರ್ಕಾರಿ ಶ್ರೀ ಕೃಷ್ಣರಾಜೇಂದ್ರ...

ಕೆಪಿಎಸ್‍ಸಿ(KPSC) ವಿವಿಧ ಗ್ರೂಪ್ ‘ಸಿ'(Group -c) ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಬೆಂಗಳೂರು, ಜುಲೈ 04 :ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿನ...

ಟಾಟಾ ಪವರ್ ಅರ್ಜಿ ವಾಪಸು-ವಿದ್ಯುತ್ ಖಾಸಗೀಕರಣ ವಿರೋಧಿ ಹೋರಾಟಕ್ಕೆ ಬಲ

ಕರ್ನಾಟಕದ 19 ಕಂದಾಯ ಜಿಲ್ಲೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣೆಯ ಪರವಾನಗಿ ಕೋರಿ...

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ ಮಕ್ಕಳ ಮೇಲಿನ ದೈಹಿಕ ಹಿಂಸೆ ಪ್ರಕರಣ – ಆರೋಪಿಗಳ ಬಂಧನ

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ(Day care Centre) ಮಕ್ಕಳ ಮೇಲಿನ ದೈಹಿಕ ಹಿಂಸೆ...

ಅಕ್ರಮ ಗಣಿಗಾರಿಕೆಗೆ ಕಡಿವಾಣ- ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಫ್ರೀಡಂ ಪಾರ್ಕ್‌ನಲ್ಲಿ...

Topics

ವೆಲ್ಲೂರು ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿ, ವಿಷೇಶ ಪೂಜೆ ಸಲ್ಲಿಸಿದ ರಾಜ್ಯಪಾಲರು

ಶ್ರೀಪುರಂ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ ಗೌರವಾನ್ವಿತ , ರಾಜ್ಯಪಾಲರಾದ ಶ್ರೀ...

Related Articles