ಗುತ್ತಿಗೆ ಆಧಾರದಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಿಂದ ಅರ್ಜಿ ಆಹ್ವಾನ

ಬೆಂಗಳೂರು:  ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗೆ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕಚೇರಿಯ ವ್ಯವಹಾರಗಳಿಗೆ ಸಂಬಂಧಿಸಿದಂತೆ ವ್ಯವಸ್ಥಾಪಕ ನಿರ್ದೇಶಕರು ಮತ್ತು ಕಾರ್ಯದರ್ಶಿಯಿಂದ ಬರುವ ಯಾವುದೇ ಕಡತಗಳಿಗೆ ಕಾನೂನು ಸಲಹೆ ನೀಡುವುದಕ್ಕಾಗಿ ಕಾನೂನು ಅಧಿಕಾರಿಯನ್ನು ನೇಮಿಸಿಕೊಳ್ಳಲಾಗುತ್ತಿದೆ.

ಈ ಕಾನೂನು ಅಧಿಕಾರಿಯ ಸಂಭಾವನೆಯು ಮಾಹೆಯಾನ ರೂ. 1,15,000 ರೂ. ಗಳಿಗೆ ಹಾಗೂ ವಾಹನ ಭತ್ಯೆಯನ್ನು ಮಾಹೆಯಾನ 35,000 ರೂ.ಗಳಿಗೆ ನಿಗದಿ ಪಡಿಸಲಾಗಿದೆ. ಈ ಹುದ್ದೆಯನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, 1 ವರ್ಷದ ನಂತರ ಅವರ ಕಾರ್ಯ ನಿರ್ವಹಣಿಯನ್ನು ಪರಿಶೀಲಿಸಿದ ನಂತರ ಮುಂದಿನ 1 ವರ್ಷದ ಅವಧಿಯವರೆಗೆ ಮುಂದುವರೆಸಲಾಗುವುದು.

ಸದರಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸು 65 ವರ್ಷ ಮೀರಿರಬಾರದು ಹಾಗೂ ನ್ಯಾಯಾಂಗ ಇಲಾಖೆಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಕನಿಷ್ಠ 5 ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 31 ಕೊನೆಯ ದಿನಾಂಕವಾಗಿರುತ್ತದೆ.

ಆಸಕ್ತರು ಅರ್ಜಿಯೊಂದಿಗೆ ತಮ್ಮ ಹೆಸರು, ವಿಳಶ, ಜನ್ಮ ದಿನಾಂಕ, ವಿದಯಾರ್ಹತೆ, ಸೇವಾ ವಿವರಗಳನ್ನೊಳಗೊಂಡ (ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣೆ ಪುಸ್ತಕದ ನಕಲು ಪ್ರತಿ) ಸಂಪೂರ್ಣ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಜಲಭವನ ನಂ.6, ಮೊದಲನೇ ಹಂತ, ಮೊದಲನೇ ಘಟ್ಟ, ಬಿಟಿಎಂ ಲೇಔಟ್‌, ಬನ್ನೇರುಘಟ್ಟ, ಮುಖ್ಯ ರಸ್ತೆ ಬೆಂಗಳೂರು-560029 ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಲ್ಲಿಸಬೇಕು. ಈ ಬಗ್ಗೆ ಮತ್ತಷ್ಟು ಹೆಚ್ಚಿನ ಮಾಹಿತಿಯನ್ನು ಮಂಡಳಿಯ ವೆಬ್‌ ಸೈಟ್‌ https://kuwsdb.karnataka.gov.in  ನಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Hot this week

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ...

Topics

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ...

ಬೆಂಗಳೂರು: ರಾಜ್ಯದಲ್ಲಿ ವಿಜ್ಞಾನ ಆಧಾರಿತ ಪರಿಸರ ಪುನರುಜ್ಜೀವನ ಮತ್ತು ಪರಿಸರ ಸಾಕ್ಷರತೆಯನ್ನು...

Related Articles