ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) ‘ಅಪ್ರೆಂಟಿಸ್ ಕಾಯ್ದೆ 1961’ ರ ಅಡಿಯಲ್ಲಿ 2026-27ನೇ ಸಾಲಿಗೆ ಒಂದು ವರ್ಷದ ಅವಧಿಗೆ ಟೆಕ್ನಿಷಿಯನ್ ಅಪ್ರೆಂಟಿಸ್ – ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಹುದ್ದೆಗಳ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು 04 ಹುದ್ದೆಗಳು ಖಾಲಿಯಿದ್ದು, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ 3 ವರ್ಷಗಳ ಡಿಪ್ಲೋಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,900/- ಸ್ಟೈಫಂಡ್ ನೀಡಲಾಗುವುದು. ಇದರಲ್ಲಿ ರೂ. 5,450 ರಾಜ್ಯ ಸರ್ಕಾರ ಮತ್ತು ಉಳಿದ ರೂ. 5,450 ಹಣವನ್ನು ಅಪ್ರೆಂಟಿಸ್ ಬೋರ್ಡ್ ನೇರವಾಗಿ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಿದೆ.
ಮೇ 2024 ರ ನಂತರ ನಿಗದಿತ ಶೈಕ್ಷಣಿಕ ಅರ್ಹತೆ ಪಡೆದ ಅಭ್ಯರ್ಥಿಗಳು ಮಾತ್ರ ಈ ತರಬೇತಿಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಗಳಿಸಿದ ಅಂಕಗಳ ಮೆರಿಟ್ ಹಾಗೂ ಸರ್ಕಾರದ ಮೀಸಲಾತಿ ನಿಯಮಾವಳಿಗಳ ಪ್ರಕಾರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಅಪ್ರೆಂಟಿಸ್ ತರಬೇತಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಆಸಕ್ತರು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಹಾಗೂ ದೃಢೀಕರಿಸಿದ ಎಸ್‌ಎಸ್‌ಎಲ್‌ಸಿ, ಜಾತಿ ಪ್ರಮಾಣಪತ್ರ ಮತ್ತು ಡಿಪ್ಲೋಮಾ ಅಂಕಪಟ್ಟಿ/ತಾತ್ಕಾಲಿಕ ಪ್ರಮಾಣಪತ್ರಗಳ ಜಿರಾಕ್ಸ್ ಪ್ರತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು 2026 ನೇ ಸೆಪ್ಟೆಂಬರ್ 05 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು, ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ, ಸಚಿವಾಲಯ ಗ್ರಂಥಾಲಯ, ಕೊಠಡಿ ಸಂ. 21,
ನೆಲಮಹಡಿ, ವಿಕಾಸಸೌಧ, ಬೆಂಗಳೂರು – 560 001 ಇಲ್ಲಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22033462 / 080-22034144 ಅಥವಾ ಇ-ಮೇಲ್: ksecretariatlibrary@gmail.com ಅನ್ನು ಸಂಪರ್ಕಿಸಬಹುದು ಎಂದು ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ, ಸಚಿವಾಲಯ ಗ್ರಂಥಾಲಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಕಾಕೋಳಿನಲ್ಲಿ ಆ. 16ರಂದು ತಂಬಿಹಳ್ಳಿ ಮಾಧವತೀರ್ಥ ಮಠದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥರ 85ನೇ ವರ್ಧಂತಿ ಮಹೋತ್ಸವ

ಶ್ರೀಮನ್ಮಧ್ವಾಚಾರ್ಯರ ಸಾಕ್ಷಾತ್ ಶಿಷ್ಯರಾದ ಚತುರ್ವೇದಭಾಷ್ಯಾಚಾರ್ಯ ಕೋಲಾರ ಜಿಲ್ಲೆಯ ತಂಬಿಹಳ್ಳಿಯ ಶ್ರೀಮನ್ಮಾಧವತೀರ್ಥ ಮಠದ...

Related Articles