ಮನೆ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ; 10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕೆಂಗೇರಿ ಪೊಲೀಸ್ ಠಾಣಾ ಸರಹದ್ದಿನ, ವಿದ್ಯಾಪೀಠ ರಸ್ತೆಯಲ್ಲಿ ವಾಸವಿರುವ ಪರ‍್ಯಾದುದಾರರು ದಿನಾಂಕ:08/08/2025 ರಂದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ, ಪರ‍್ಯಾದುದಾರರು ವರಮಹಾಲಕ್ಷಿ ಹಬ್ಬದ ಪ್ರಯುಕ್ತ ಪೂಜಾ ಸಾಮಾಗ್ರಿಗಳನ್ನು ಖರೀದಿಸಲು, ಮನೆಯ ಮುಂಭಾಗಿಲಿಗೆ ಬೀಗವನ್ನು ಹಾಕಿಕೊಂಡು ಅಂಗಡಿಗೆ ಹೋಗಿರುತ್ತಾರೆ. ಅಂಗಡಿಯಿAದ ವಾಪಸ್ ಮನೆಗೆ ಬಂದು ನೋಡಲಾಗಿ, ಯಾರೋ ಅಪರಿಚಿತ ವ್ಯಕ್ತಿಗಳು ಮನೆಯ ಡೋರ್ ಲಾಕ್ ಮುರಿದು, ಒಳ ಪ್ರವೇಶಿಸಿ ಕೊಠಡಿಯಲ್ಲಿದ್ದ ಬೀರುವಿನ ಲಾಕ್ ಮುರಿದು ಬೀರುವಿನಲ್ಲಿಟ್ಟಿದ್ದ 55 ಗ್ರಾಂ ಚಿನ್ನಾಭರಣಗಳನ್ನು ಹಾಗೂ ₹ 6,000/- ನಗದನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು, ಬಾತ್ಮೀಧಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:18/08/2025 ರಂದು ತಮಿಳುನಾಡಿದ ಉಕ್ಕಡಂನಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ.

ದಿನಾಂಕ:19/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 9 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣವಲ್ಲದೆ ಬಂಡೆಪಾಳ್ಯ ಮತ್ತು ರಾಜಾಜಿನಗರದ ಮತ್ತೆರಡು ಮನೆಗಳಲ್ಲಿ ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಹಾಗೂ ಕಳವು ಮಾಡಿದ ಚಿನ್ನಾಭರಣಗಳನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಜ್ಯೂವೆಲರಿ ಅಂಗಡಿಯಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ದಿನಾಂಕ:23/08/2025 ರಂದು 100 ಗ್ರಾಂ ಚಿನ್ನಾಭರಣವನ್ನು ಜ್ಯೂವೆಲರಿ ಅಂಗಡಿಯಿAದ ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ ₹ 10,00,000/-(ಹತ್ತು ಲಕ್ಷ ರೂಪಾಯಿ).

ಈ ಆರೋಪಿಯ ಬಂಧನದಿ0ದ, 1) ಕೆಂಗೇರಿ ಪೊಲೀಸ್ ಠಾಣೆಯ-02 ಮನೆ ಕನ್ನ ಕಳವು ಪ್ರಕರಣಗಳು, 2) ರಾಜಾಜಿನಗರ ಪೊಲೀಸ್ ಠಾಣೆಯ-01 ಮನೆ ಕನ್ನ ಕಳವು ಪ್ರಕರಣ, 3) ಬಂಡೇಪಾಳ್ಯ ಪೊಲೀಸ್ ಠಾಣೆಯ-01 ಮನೆ ಕನ್ನ ಕಳವು ಪ್ರಕರಣ ಸೇರಿದಂತೆ ಒಟ್ಟು 4 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:25/08/2025 ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ. ಈ ಪ್ರಕರಣವನ್ನು ಬೆಂಗಳೂರು ನಗರ, ನೈಋತ್ಯ ವಿಭಾಗದ ಉಪ-ಪೊಲೀಸ್ ಕಮೀಷನರ್ ಶ್ರೀಮತಿ ಅನಿತಾ ಬಿ ಹದ್ದಣವರ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಹಾಗೂ ಕೆಂಗೇರಿ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ ಬಸವರಾಜ ಎ ತೇಲಿ ರವರ ನೇತೃತ್ವದಲ್ಲಿ, ಕೆಂಗೇರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಜಗದೀಶ್ ಎನ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

Hot this week

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

Topics

ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.06.2026 ಮಂಗಳವಾರ TUESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

Related Articles