ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ತರಬೇತಿ ಕಾರ್ಯಕ್ರಮ:

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ (Art Cultural Educational Enlight Foundation) ರವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ, ಯೋಗ ತರಬೇತಿ (Yoga) ಕಾರ್ಯಕ್ರಮವನ್ನು ಯೋಗ ದಿನಾಚರಣೆಯ (Yoga Day) ಪೂರ್ವಭಾವಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಮಹಿಳೆಯರು ಭಾಗವಹಿಸಿ, ಲಾಫಿಂಗ್ ಥೆರಪಿ, ಯೋಗಾಸನ, ಪ್ರಾಣಾಯಾಮ, ಧ್ಯಾನ ಸೇರಿದಂತೆ ವಿವಿಧ ಯೋಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು.
ಬಹು ವಿಶ್ವದಾಖಲೆ ಸಾಧಕಿ ಹಾಗೂ ಯೋಗ ಶಿಕ್ಷಕಿ ಶ್ರೀಮತಿ ಅಂಬಿಕಾ ಸಿ. ಅವರು ಯೋಗಾಭ್ಯಾಸಗಳಿಗೆ ಮಾರ್ಗದರ್ಶನ ನೀಡಿ, ಯೋಗದ ಮಹತ್ವ ಹಾಗೂ ಆರೋಗ್ಯದ ಮೇಲಿನ ಅದರ ಸಕಾರಾತ್ಮಕ ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀಮತಿ ಜಿ. ಪದ್ಮಾವತಿ, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು ಹಾಗೂ ಮಾಜಿ ಮೇಯರ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶ್ರೀಮತಿ ಅಕ್ಕಮಹಾದೇವಿ, ಪ್ರಧಾನ ವ್ಯವಸ್ಥಾಪಕರು (ಆಡಳಿತ), ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಯೋಗವು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ವೃದ್ಧಿಸುವ ಪರಿಣಾಮಕಾರಿ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು.

Hot this week

ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಹಾತ್ಮ ಗಾಂಧೀಜಿಯವರು(Mahatma Gandhiji) ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87...

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು...

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

Topics

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗಾಂಧಿ ಜಯಂತಿ ಆಚರಣೆ

ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು...

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Related Articles