ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ (Basavaraj S.Horatti) ಅವರು ತಮ್ಮ ಸ್ಥಾನಕ್ಕೆ ಇಂದು ಸ್ವ ಇಚ್ಛೆಯಿಂದ ರಾಜೀನಾಮೆ(Resignation) ಸಲ್ಲಿಸಿದ್ದಾರೆ.

ಅವರು ವಿಧಾನ ಪರಿಷತ್ತಿನ ಉಪ ಸಭಾಪತಿಯವರಿಗೆ ಅಧಿಕೃತ ರಾಜೀನಾಮೆ ಪತ್ರವನ್ನು ರವಾನಿಸಿ ಸ್ವಇಚ್ಛೆಯಿಂದ ಸಭಾಪತಿ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಬಸವರಾಜ ಹೊರಟ್ಟಿ ಅವರು ರಾಜ್ಯ ರಾಜಕಾರಣದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು, ವಿಧಾನ ಪರಿಷತ್ತಿನಲ್ಲಿ ನಿರಂತರವಾಗಿ ಸುದೀರ್ಘ ಸೇವೆ ಸಲ್ಲಿಸಿದ ಅಪರೂಪದ ದಾಖಲೆ ಹೊಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಕ್ರೀಡಾ ಶಿಕ್ಷಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಹೊರಟ್ಟಿ ಅವರು ಶಿಕ್ಷಕರ ಹಕ್ಕುಗಳು ಮತ್ತು ಕುಂದು-ಕೊರತೆಗಳಿಗಾಗಿ ಸಕ್ರಿಯವಾಗಿ ಹೋರಾಡುವ ಮೂಲಕ ಶಿಕ್ಷಕ ಸಮುದಾಯದ ಪ್ರಮುಖ ನಾಯಕರಾಗಿ ಹೊರಹೊಮ್ಮಿದರು.

1980ರಲ್ಲಿ ಪ್ರಥಮ ಬಾರಿಗೆ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಶಾಸಕರಾಗಿ ಆಯ್ಕೆಯಾಗಿ, ನಂತರ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ನಿರಂತರವಾಗಿ 8 ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.

ದೇಶದಲ್ಲೇ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿ ಸತತವಾಗಿ ಇಷ್ಟೊಂದು ದೀರ್ಘಾವಧಿಗೆ (40 ವರ್ಷಗಳು ಹೆಚ್ಚು ಅವಧಿ ಸೇವೆ) ಆಯ್ಕೆಯಾದ ಅಪರೂಪದ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ದೀರ್ಘಕಾಲ ಜಾತ್ಯತೀತ ಜನತಾದಳ ಪಕ್ಷದಲ್ಲಿದ್ದು, ಪಕ್ಷದ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು. ಮೇ 2022ರಲ್ಲಿ ಜೆಡಿಎಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರಿದರು.

2004–2006 ರ ಧರಂ ಸಿಂಗ್ ನೇತೃತ್ವದ ಸರ್ಕಾರದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಹಾಗೂ 2006–2007 ರ ಎಚ್.ಡಿ. ಕುಮಾರಸ್ವಾಮಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾಗಿ ಹಲವು ಬಾರಿ ಕರ್ತವ್ಯ ನಿರ್ವಹಿಸಿದ್ದಾರೆ. ಸರಳತೆ, ಶಿಕ್ಷಕ ಸಮುದಾಯದ ಪರವಾದ ನಿರಂತರ ಹೋರಾಟ ಹಾಗೂ ಮೇಲ್ಮನೆಯ ನಡಾವಳಿಗಳ ಮೇಲಿನ ಅಪಾರ ಅನುಭವಕ್ಕಾಗಿ ಬಸವರಾಜ ಹೊರಟ್ಟಿ ಅವರು ಪಕ್ಷಾತೀತವಾಗಿ ಗೌರವಿಸಲ್ಪಟ್ಟಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles