ತನ್ನ ಮೇಲೆ ಕೆ–ರೇರಾ ನಿಯಂತ್ರಣ ಸಲ್ಲದು ಎಂದ ಬಿಡಿಎ: ತರಾಟೆಗೆ ತೆಗೆದುಕೊಂಡ ಶಾಸಕ ಸುರೇಶ್ ಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಭಿವೃದ್ಧಿಯನ್ನು ಗುತ್ತಿಗೆಗೆ ತೆಗೆದುಕೊಂಡಂತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (Bangalore Development Authority, BDA) ತನ್ನನ್ನು ಕರ್ನಾಟಕ ರಿಯಲ್ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ’ದ (ಕೆ–ರೇರಾ) (Karnataka Real Estate Regulatory Authority, K-RERA) ವ್ಯಾಪ್ತಿಯಿಂದ ದೂರವಿಡಬೇಕು ಎಂಬ ಅಸಮಂಜಸ ಮತ್ತು ವಿಚಿತ್ರ ಕೂಗು ಎಬ್ಬಿಸಿದೆ. ರಾಜ್ಯದಲ್ಲಿ ಯಾವುದೇ ರಿಯಲ್ ಎಸ್ಟೇಟ್‌ ವ್ಯವಹಾರವನ್ನು ಸುಸೂತ್ರವಾಗಿ ನಡೆಸಿಕೊಡುವ ಜವಾಬ್ದಾರಿ ಕರ್ನಾಟಕ ರಿಯಲ್ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರದ ಹೆಗಲ ಮೇಲಿದೆ. ಇದು ಸರ್ಕಾರವೇ ವಿಧಿಸಿರುವ ಶಾಸನ. ಹೀಗಿರುವಾಗ ಸರ್ಕಾರದ ಮತ್ತೊಂದು ಸಂಸ್ಥೆಯು ತಾನು ಅದರ ಅಧಿನಕ್ಕೆ ಬರುವುದಿಲ್ಲ ಎಂದು ತಗಾದೆ ತೆಗೆಯುವುದು ಸಮಂಜಸವಲ್ಲ ಎಂಬುದು ನಾಗರಿಕರ ಅಭಿಪ್ರಾಯ. ಇದಕ್ಕೆ ಜನಪ್ರತಿನಿಧಿಗಳೂ ದನಿಗೂಡಿಸಿದ್ದಾರೆ. ಬಿಡಿಎ ಹೀಗೆ ವರಾತ ತೆಗೆದಿರುವುದನ್ನು ಧಿಕ್ಕರಿಸಿ ಮಾತನಾಡಿದ್ದಾರೆ. ಇದಕ್ಕೆ ರಾಜಾಜಿನಗರ ವಿಧಾನಸಭಾ ಕ್ಷೇತ್ರದ (Rajajinagar Assembly Constituency) ಹಾಲಿ ಶಾಸಕ ಎಸ್. ಸುರೇಶ್ ಕುಮಾರ್ (BJP MLA S Suresh Kumar) ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಿಯಲ್ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರದ (ಕೆ–ರೇರಾ) ವ್ಯಾಪ್ತಿಯಿಂದ ತನ್ನನ್ನು ಹೊರಗಿಡಬೇಕು ಎನ್ನುವ ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ’ದ (ಬಿಡಿಎ) ಬೇಡಿಕೆ ನ್ಯಾಯಸಮ್ಮತವಾದುದಲ್ಲ. ಬಿಡಿಎ ಸಲ್ಲಿಸಿರುವ ಬೇಡಿಕೆ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಅಪಾಯಕರ ಕೂಡ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಶಾಸನಬದ್ಧ ಸಂಸ್ಥೆಯಾಗಿರುವ ಹಾಗೂ ರಿಯಲ್ ಎಸ್ಟೇಟ್ ಪ್ರವರ್ತಕ ಸಂಸ್ಥೆ ಆಗದಿರುವ ಕಾರಣದಿಂದಾಗಿ ‘ಕೆ–ರೇರಾ’ ವ್ಯಾಪ್ತಿಯಿಂದ ತನ್ನನ್ನು ಹೊರಗಿಡಬೇಕು ಎನ್ನುವುದು ಬಿಡಿಎ ವಾದ. ಖಾಸಗಿ ಸಂಸ್ಥೆಗಳಂತೆ ಲಾಭಕ್ಕಾಗಿ ಕಾರ್ಯನಿರ್ವಹಿಸದೆ, ಬಡ ಹಾಗೂ ಮಧ್ಯಮವರ್ಗಕ್ಕೆ ತಾನು ಸೇವೆ ಸಲ್ಲಿಸುತ್ತಿರುವುದಾಗಿಯೂ ಬಿಡಿಎ ಹೇಳಿಕೊಂಡಿದೆ. ವಿರೋಧಾಭಾಸದ ಸಂಗತಿಯೆಂದರೆ, ಬಿಡಿಎ ಯಾವೆಲ್ಲ ಕಾರಣಗಳಿಂದಾಗಿ ‘ಕೆ–ರೇರಾ’ ವ್ಯಾಪ್ತಿಯಿಂದ ತನ್ನನ್ನು ಹೊರಗಿಡಬೇಕು ಎಂದು ವಾದಿಸುತ್ತಿದೆಯೋ, ಅದೇ ಕಾರಣಗಳಿಗಾಗಿ ಅದನ್ನು ನಿಯಂತ್ರಣ ಪ್ರಾಧಿಕಾರದ ವ್ಯಾಪ್ತಿಗೆ ತರಬೇಕಾಗಿದೆ ಎಂಬುದು ಶಾಸಕ ಸುರೇಶ್ ಕುಮಾರ್ ಅವರ ಸ್ಪಷ್ಟ ನಿಲುವು.

ಸರ್ಕಾರಿ ಸಂಸ್ಥೆಯಲ್ಲಿ ನಂಬಿಕೆಯಿಟ್ಟು ತಮ್ಮ ಜೀವಮಾನದ ಉಳಿತಾಯವನ್ನು ತೊಡಗಿಸುವವರಿಗೆ ದುರ್ಬಲ ರಕ್ಷಣೆಯ ಬದಲಾಗಿ ಹೆಚ್ಚಿನ ಸುರಕ್ಷತೆಯನ್ನು ಒದಗಿಸುವುದಕ್ಕಾಗಿ ಈ ನಿಯಂತ್ರಣ ಅಗತ್ಯವಾಗಿದೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles