ಬೆಂಗಳೂರಿನಲ್ಲಿ ಡಿಸೆಂಬರ್ 4 ರಿಂದ 13 ರವರೆಗೆ ಹತ್ತು ದಿನಗಳ ಕಾಲ “ಬೆಂಗಳೂರು ಜಾತ್ರೆ” ಸಂಭ್ರಮಾಚರಣೆ-ಕೃಷ್ಣಭೈರೇಗೌಡ

ಬೆಂಗಳೂರು:”ಬೆಂಗಳೂರಿನ ಜನರಿಂದ, ಬೆಂಗಳೂರಿನ ಜನರಿಗಾಗಿ” ಎಂಬ ಕಲ್ಪನೆಯೊಂದಿಗೆ ಬೆಂಗಳೂರಿನ ಐದು ಬಿಬಿಎಂಪಿ ನಗರ ಪಾಲಿಕಾ ವಲಯಗಳಲ್ಲಿ ಡಿಸೆಂಬರ್ 4 ರಿಂದ 13 ರವರೆಗೆ ಹತ್ತು ದಿನಗಳ ಕಾಲ “ಬೆಂಗಳೂರು ಜಾತ್ರೆ” ಯನ್ನು(Bangalore Fair) ಆಚರಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣಭೈರೇಗೌಡ(Krishnabaire Gowda) ಅವರು ತಿಳಿಸಿದರು.

ಬೆಂಗಳೂರು ನಗರ ನಾಗರೀಕರ ಸಾಂಸ್ಕøತಿಕ ಅನಾವರಣ ಹಾಗೂ ಸಕ್ರೀಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ದೃಷ್ಠಿಯಿಂದ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲು ಉದ್ಧೇಶಿಸಲಾಗಿರುವ ‘ಬೆಂಗಳೂರು ಜಾತ್ರೆʼಯ ಪೂರ್ವಭಾವಿ ಸಿದ್ಧತೆ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಭಾಗವಹಿಸಿದ ನಂತರ ಏರ್ಪಡಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಅವರು ಈ ಮಾಹಿತಿಯನ್ನು ನೀಡಿದರು.

ನಮ್ಮ ರಾಜ್ಯವು ಆರ್ಥಿಕತೆಯಲ್ಲಿ, ತಾಂತ್ರಜ್ಞಾನದಲ್ಲಿ ದೇಶ ವಿದೇಶಗಳಿಗೆ ಮಾದರಿಯಾಗಿರುವಂತೆ, ಕಲೆ, ಸಂಸ್ಕøತಿ, ಸಾಹಿತ್ಯ, ಸಂಗೀತ, ಮುಂತಾದ ಸಾಂಸ್ಕøತಿಕ ಜೀವನ ಶೈಲಿಯಲ್ಲಿಯೂ ಅತ್ಯುತ್ತಮ ನಗರವಾಗಬೇಕು. ಹಿಂದೆ ನಮ್ಮ ರಾಜ್ಯವನ್ನು ಆಳಿದ ಹೊಯ್ಸಳರು, ಕದಂಬ ರಾಜ ಮಹರಾಜರು ಕಲೆ-ಸಾಹಿತ್ಯ-ಸಂಸ್ಕøತಿಯನ್ನು ಪೋಷಿಸುತ್ತಾ ಬಂದರು. ಅದೇ ರೀತಿಯಲ್ಲಿ ನಮ್ಮ ಸರ್ಕಾರವೂ ನಾಗರಿಕರಿಗೆ ಮೂಲಭೂತ ಸೌಕರ್ಯವನ್ನು ನೀಡುವ ಜೊತೆಗೆ ಕಲೆ-ಸಾಹಿತ್ಯ-ಸಂಸ್ಕøತಿಯನ್ನು ಬೆಳೆಸಿ, ಪೋಷಿಸುವ ಸಲುವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ನಗರದಲ್ಲಿ ಕಲೆ, ಸಾಹಿತ್ಯ ಹಾಗೂ ಸಾಮಾಜಿಕ ಮೂಲಸೌಕರ್ಯಗಳನ್ನು ಉತ್ತೇಜಿಸುವುದರಿಂದ ಬೆಂಗಳೂರಿನ ಪ್ರವಾಸೋದ್ಯಮ ಮತ್ತು ಆರ್ಥಿಕ ಪ್ರಗತಿಗೆ ಹೊಸ ಚೈತನ್ಯ ಸಿಗಲಿದೆ. ಈ ಹಬ್ಬವು ಕೇವಲ ಸರ್ಕಾರಿ ಆಯೋಜನೆಯಾಗದೆ, ಬೆಂಗಳೂರಿನ ಸಂಸ್ಕøತಿ, ಕಲೆ, ಸಾಹಿತ್ಯ ಹಾಗೂ ಆಹಾರ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಉದ್ದೇಶದಿಂದ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಸಹಭಾಗಿತ್ವದೊಂದಿಗೆ ನಡೆಸುವ ಹಬ್ಬವಾಗಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಇತರೆ ರಾಜ್ಯದವರಿಗೆ ನಮ್ಮ ಬೆಂಗಳೂರು ಎನ್ನುವಂತಹ ಭಾವನೆ ಮೂಡಿಸುವುದು ಕೂಡ ಈ ಜಾತ್ರೆಯ ಉದ್ಧೇಶವಾಗಿದೆ ಎಂದರು.

ಈ ಜಾತ್ರೆಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳμÉ್ಟೀ ಅಲ್ಲದೆ, ಕರ್ನಾಟಕದ ವಿಶಿಷ್ಟ ಆಹಾರ ಶೈಲಿ ಮತ್ತು ಸಂಸ್ಕøತಿಯನ್ನು ಪರಿಚಯಿಸಲು ಫುಡ್ ಫೆಸ್ಟಿವಲ್ ಗಳನ್ನು ಆಯೋಜಿಸುವಂತೆ ರೆಸ್ಟೋರೆಂಟ್ ಅಸೋಸಿಯೇಷನ್ ಗಳಿಗೆ ಮನವಿ ಮಾಡಲಾಗಿದೆ. ಬೆಂಗಳೂರು ನಗರ ಸಮೀಪದಲ್ಲಿ ಇತಿಹಾಸ ಹೊಂದಿರುವ ಹಳೆಯ ಊರುಗಳ ಪ್ರಮುಖರು ಈ ಉತ್ಸವದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಆಹ್ವಾನಿಸಲಾಗಿದೆ. ಕನ್ನಡ ಚಿತ್ರರಂಗದ ಕಲಾವಿದರು, ಐಟಿ ಕಂಪನಿಗಳು, ನಾಸ್ಕಾಂ, ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಸಹ ಕೈಜೋಡಿಸಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮನವಿ ಮಾಡಲಾಗುತ್ತಿದೆ ಎಂದರು.

ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದವರೂ ತಮ್ಮ ಏರಿಯಾದ ಉದ್ಯಾನವನ, ಬಯಲು ಪ್ರದೇಶ, ಕೆರೆಯ ಅಂಚು, ಇವೇ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲು ಬಯಸಿದರೆ ಅವರಿಗೆ ಕೂಡ ಸರ್ಕಾರದ ವತಿಯಿಂದ ಕಲಾವಿದರನ್ನು ಕಳುಹಿಸಿ, ಕಾರ್ಯಕ್ರಮಗಳನ್ನು ನೀಡಲಾಗುವುದು.

ಶಾಲೆ, ಕಾಲೇಜು, ಐಟಿ ಕಂಪನಿಗಳು, ಸಾರ್ವಜನಿಕ ವಲಯ ಹಾಗೂ ಆರ್ಟ್ ಗ್ಯಾಲರಿಗಳು ಸೇರಿ ನಗರದೆಲ್ಲೆಡೆ ಸಣ್ಣ ಹಾಗೂ ದೊಡ್ಡ ಪ್ರಮಾಣದ ಕಾರ್ಯಕ್ರಮಗಳು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಕಾರ್ಯಕ್ರಮಗಳು ಜರುಗಲಿದ್ದು, ನಗರದ ಮಧ್ಯ ಭಾಗದ ಎರಡು ಕಡೆಗಳಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ದೇಶದ ಇತರೆ ವಿವಿಧ ರಾಜ್ಯಗಳ ಸಾಂಸ್ಕøತಿಕ ಕಲಾತಂಡಗಳಿಗೂ ಈ ಜಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು.

ಜಾತ್ರೆ ಆಚರಣೆಯಲ್ಲಿ ಧಾರ್ಮಿಕ ಆಚರಣೆಗೂ ಅವಕಾಶ ನೀಡಲಾಗುವುದೇ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ಎಲ್ಲಾ ಧರ್ಮ, ಸಂಸ್ಕೃತಿ ಹಾಗೂ ಕಲಾ ಪ್ರಕಾರಗಳ ನೆಲೆವೀಡಾಗಿದೆ. ಈ ಇತಿಹಾಸವನ್ನು ಗೌರವಿಸುವ ನಿಟ್ಟಿನಲ್ಲಿ ಮುಕ್ತ ಮನಸ್ಸಿನಿಂದ ಎಲ್ಲಾ ಧಾರ್ಮಿಕ ಮತ್ತು ಸಾಂಸ್ಕøತಿಕ ಅಂಶಗಳನ್ನು ಒಳಗೊಂಡಂತೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದೆಂದರು.

ಸರ್ಕಾರದ ವತಿಯಿಂದ ಆಯೋಜಿಸುವ ಎಲ್ಲಾ ಕಾರ್ಯಕ್ರಮಗಳಿಗೂ ಸಾರ್ವಜನಿಕರಿಗೆ ಉಚಿತ ಪ್ರವೇಶವಿರಲಿದೆ. ಭದ್ರತಾ ದೃಷ್ಟಿಯಿಂದ ಬೃಹತ್ ಕಾರ್ಯಕ್ರಮಗಳಿಗೆ ಮಾತ್ರ 10-15 ದಿನಗಳ ಮುಂಚಿತವಾಗಿ ಆನ್ಲೈನ್ ನೋಂದಣಿ ಲಭ್ಯವಿರಲಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಇವುಗಳ ದಿನಾಂಕ, ಸಮಯ, ಸ್ಥಳ ಹಾಗೂ ನೋಂದಣಿ (Registration) ವಿವರಗಳನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಕಲಾವಿದರ ಸಂಭಾವನೆ, ವೇದಿಕೆ, ದೀಪಾಲಂಕಾರ ಹಾಗೂ ಭದ್ರತಾ ವ್ಯವಸ್ಥೆ ಒಳಗೊಂಡಂತೆ ಅಂದಾಜು 15 ರಿಂದ 20 ಕೋಟಿ ರೂ ವೆಚ್ಚ ನಿರೀಕ್ಷಿಸಲಾಗಿದ್ದು, ಈ ಕಾರ್ಯಕ್ರಮದ ಆಯೋಜನೆಗಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಆಯವ್ಯಯದಲ್ಲಿ 5 ಕೋಟಿ ಅನುದಾನವಿದ್ದು, ನಗರಪಾಲಿಕೆಗಳು, ಬಿಎಂಆರ್ಸಿಎಲ್, ಬೆಸ್ಕಾಂ, ಬಿಡಬ್ಲ್ಯೂಎಸ್‍ಎಸ್ ಬಿ, ಬಿಡಿಎ ಹಾಗೂ ಇತರೆ ಇಲಾಖೆಗಳ ಆರ್ಥಿಕ ಸಹಕಾರದೊಂದಿಗೆ ನಿರ್ವಹಿಸಲು ಉದ್ದೇಶಿಸಲಾಗಿದೆ ಎಂದರು.

ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್, ಬಿಎಂಆರ್ ಸಿಎಲ್ ನ ವ್ಯವಸ್ಥಾಪಕರಾದ ಪಿ.ಸಿ.ಜಾಫರ್ ಅವರು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Hot this week

ಡೈವ್‌ಆಗರ್ ಕಡಲತೀರದಲ್ಲಿ 8 ವಿದ್ಯಾರ್ಥಿಗಳು ಮುಳುಗಿ ಸಾವು; ಪುಣೆಯ ಕೋಚಿಂಗ್ ಅಕಾಡೆಮಿ ಸೀಲ್

ಪುಣೆ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಡೈವ್‌ಆಗರ್ ಕಡಲತೀರದಲ್ಲಿ(Daivagar Beach) ಪ್ರವಾಸಕ್ಕೆ ತೆರಳಿದ್ದ...

ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಅಬ್ಬರ: ₹95 ಕೋಟಿ ಗಡಿ ದಾಟಿದ ಅಜಯ್ ದೇವಗನ್ ಚಿತ್ರ

ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್(Actor Ajay Devagan) ಅಭಿನಯದ ಬಹುನಿರೀಕ್ಷಿತ...

ದೆಹಲಿ ಹೋಟೆಲ್‌ನಲ್ಲಿ ನೆಸ್ಲೆ ಇಂಡಿಯಾದ ಡೈರಿ ವೈಟನರ್ ಮಾರಾಟಕ್ಕೆ FSSAI ನಿಷೇಧ

ನವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ,...

ಖಾರಿಫ್ ಬರ ಪರಿಸ್ಥಿತಿ ಅಧ್ಯಯನ: ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಖಾರಿಫ್(Kaarif) ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು...

ಶಾಸಕರ ಭವನದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ತಪೋವನ ಅಭಿವೃದ್ಧಿಗೆ ನಿರ್ಧಾರ

ಬೆಂಗಳೂರು: ವಿಧಾನಸೌಧದ(Vidhanasoudha) ಬಳಿ ಶಾಸಕರ ಭವನದ ಮುಂಭಾಗದಲ್ಲಿ ವಾಲ್ಮೀಕಿ ಪ್ರತಿಮೆ(Valmeeki Statue) ಇರುವ...

Topics

ಡೈವ್‌ಆಗರ್ ಕಡಲತೀರದಲ್ಲಿ 8 ವಿದ್ಯಾರ್ಥಿಗಳು ಮುಳುಗಿ ಸಾವು; ಪುಣೆಯ ಕೋಚಿಂಗ್ ಅಕಾಡೆಮಿ ಸೀಲ್

ಪುಣೆ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಡೈವ್‌ಆಗರ್ ಕಡಲತೀರದಲ್ಲಿ(Daivagar Beach) ಪ್ರವಾಸಕ್ಕೆ ತೆರಳಿದ್ದ...

ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಅಬ್ಬರ: ₹95 ಕೋಟಿ ಗಡಿ ದಾಟಿದ ಅಜಯ್ ದೇವಗನ್ ಚಿತ್ರ

ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್(Actor Ajay Devagan) ಅಭಿನಯದ ಬಹುನಿರೀಕ್ಷಿತ...

ದೆಹಲಿ ಹೋಟೆಲ್‌ನಲ್ಲಿ ನೆಸ್ಲೆ ಇಂಡಿಯಾದ ಡೈರಿ ವೈಟನರ್ ಮಾರಾಟಕ್ಕೆ FSSAI ನಿಷೇಧ

ನವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ,...

ಖಾರಿಫ್ ಬರ ಪರಿಸ್ಥಿತಿ ಅಧ್ಯಯನ: ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಖಾರಿಫ್(Kaarif) ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು...

ಶಾಸಕರ ಭವನದ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ತಪೋವನ ಅಭಿವೃದ್ಧಿಗೆ ನಿರ್ಧಾರ

ಬೆಂಗಳೂರು: ವಿಧಾನಸೌಧದ(Vidhanasoudha) ಬಳಿ ಶಾಸಕರ ಭವನದ ಮುಂಭಾಗದಲ್ಲಿ ವಾಲ್ಮೀಕಿ ಪ್ರತಿಮೆ(Valmeeki Statue) ಇರುವ...

ನಯಾರಾ ಎನರ್ಜಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಸ್ಥಳೀಯ ಆರ್ಥಿಕತೆಗೆ ಆತಂಕ

ನಯಾರಾ ಎನರ್ಜಿ(Nayara Energy) ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ ₹5 ಹಾಗೂ...

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು:  ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ (KCCDC) ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ...

Related Articles