ಬೆಂಗಳೂರು, ಜುಲೈ 06 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್(Bharat Scouts and Guides), ಕರ್ನಾಟಕ ರಾಜ್ಯ ಕೇಂದ್ರ ಕಾರ್ಯಾಲಯದ ವತಿಯಿಂದ ಕಬ್ಸ್(Cubs), ಬುಲ್ಬುಲ್ಸ್(Bulbuls), ಸ್ಕೌಟ್ಸ್(Scouts), ಗೈಡ್ಸ್(Guides), ರೋವರ್ಸ್(Rovers) ಮತ್ತು ರೇಂಜರ್ಸ್(Rangers) ತಂಡಗಳಿಗೆ ಪ್ರತಿಷ್ಠಿತ ಚತುರ್ಥ ಚರಣ್, ಹೀರಕ್ ಪಂಖ್ ಹಾಗೂ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರಮಾಣ ಪತ್ರ ಪ್ರದಾನ ಸಮಾರಂಭವನ್ನು ಜುಲೈ 10 ರಂದು ಸಂಜೆ 4.00 ಗಂಟೆಗೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ(Glass House) ಹಮ್ಮಿಕೊಳ್ಳಲಾಗಿದೆ.
ಈ ಭವ್ಯ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಪೋಷಕರಾದ ಥಾವರ್ಚಂದ್ ಗೆಹ್ಲೋಟ್(Thawar Chand Gehlot) ಅವರು ಪಾಲ್ಗೊಂಡು ಪ್ರಶಸ್ತಿ ಪತ್ರಗಳನ್ನು ಪ್ರದಾನ ಮಾಡಲಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್(D.K.Shivakumar) ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಅಪರ ರಾಜ್ಯ ಮುಖ್ಯ ಆಯುಕ್ತರಾದ U.T.ಖಾದರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ.ಮಹೇಶ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್, ಭಾರತ್ ಸೌಟ್ಸ್ ಮತ್ತು ಗೈಡ್ಸ್ನ ಉಪಾಧ್ಯಕ್ಷರಾದ ಕೊಂಡಜ್ಜಿ ಬ. ಷಣ್ಮುಖಪ್ಪ, ಭಾರತ್ ಸೌಟ್ಸ್ ಮತ್ತು ಗೈಡ್ಸ್ನ ಉಪಾಧ್ಯಕ್ಷರು ಮತ್ತು ಪರಿಸರ ನಿರ್ವವಣೆ ಮತ್ತು ನೀತಿ ಸಮಶೋಧನಾ ಸಂಸ್ಥೆಯ ಅಧ್ಯಕ್ಷರಾದ ಎ.ಎನ್.ಮಹೇಶ್, ಭಾರತ್ ಸೌಟ್ಸ್ ಮತ್ತು ಗೈಡ್ಸ್ನ ಮುಖ್ಯ ಆಯುಕ್ತರಾದ ಡಾ.ಪಿ.ಜಿ.ಆರ್. ಸಿಂಧ್ಯ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
