ದಸರಾ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಭೂಮಿಕಾ ಎಸ್ ತಗಡೂರು ಮತ್ತು ದೇವಿಕಾ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ 2026-27ನೇ ಸಾಲಿನ ದಸರಾ ಕ್ರೀಡಾಕೂಟದಲ್ಲಿ ಡಬಲ್ಸ್ ಲಾನ್ ಟೆನ್ನಿಸ್(Doubles Lans Tennies) ಮಹಿಳಾ ವಿಭಾಗದಲ್ಲಿ ಭೂಮಿಕಾ ಎಸ್. ತಗಡೂರು(Bhomika S.Tagaduru and Tagaduru) ಮತ್ತು ದೇವಿಕಾ ಅವರ ಜೋಡಿ ಕಂಚಿನ ಪದಕ ಗೆದ್ದಿದೆ. ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಭೂಮಿಕಾ ತಗಡೂರು ಅವರು, ಈ ಹಿಂದೆ ನೆಟ್‌ಬಾಲ್ ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ರಾಜ್ಯಮಟ್ಟದ ನೆಟ್‌ಬಾಲ್ ಕ್ರೀಡಾಕೂಟದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಅವರು, ಎರಡು ಬಾರಿ ‘ಬೆಸ್ಟ್ ಆಲ್‌ರೌಂಡರ್’ ಪ್ರಶಸ್ತಿಗೂ ಭಾಜನರಾಗಿದ್ದಾರೆ. ರಾಷ್ಟ್ರಮಟ್ಟದ ನೆಟ್‌ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವ ಭೂಮಿಕಾ ಅವರು ಎರಡು ಬಾರಿ ಕಂಚಿನ ಪದಕ ಗೆದ್ದಿದ್ದಾರೆ. ಈ ಸಾಧನೆಗಾಗಿ ಕರ್ನಾಟಕ ಸರ್ಕಾರದ ವತಿಯಿಂದ ಅಂದಿನ ಮುಖ್ಯಮಂತ್ರಿ ಅವರಿಂದ ಸನ್ಮಾನಕ್ಕೂ ಪಾತ್ರರಾಗಿದ್ದರು. ನೆಟ್‌ಬಾಲ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ ಬಳಿಕ ಲಾನ್ ಟೆನ್ನಿಸ್‌ನಲ್ಲಿಯೂ ಪದಕ ಗೆಲ್ಲುವ ಮೂಲಕ ಭೂಮಿಕಾ ಅವರು ತಮ್ಮ ಕ್ರೀಡಾ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಲಾನ್ ಟೆನ್ನೀಸ್ ನಲ್ಲಿ ಭೂಮಿಕಾಳಿಗೆ ಜೈದೇವ್ ಪಂಜಾಬಿ ಅವರು ತರಬೇತಿ ನೀಡುತ್ತಿದ್ದಾರೆ.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles