ಬೆಂಗಳೂರು: ಕಳೆದ ಕೆಲವು ತಿಂಗಳಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ಜುಲೈ ಮೊದಲ ವಾರದಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕಮಲ ಪಾಳಯದಲ್ಲಿ ಭಾರೀ ಕುತೂಹಲ ಮೂಡಿದೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹಲವು ಪ್ರಮುಖ ನಾಯಕರ ಹೆಸರುಗಳು ಚರ್ಚೆಯಲ್ಲಿದ್ದು, ಅವುಗಳಲ್ಲಿ ಕರ್ನಾಟಕದ ಒಬ್ಬ ಹಿರಿಯ ರಾಜಕಾರಣಿಯ ಹೆಸರು ಕೇಳಿಬರುತ್ತಿದೆ.ಕರ್ನಾಟಕದಿಂದ ಒಬ್ಬ ಕನ್ನಡಿಗನಿಗೆ ಈ ಉನ್ನತ ಸ್ಥಾನ ಒಲಿಯುವ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕದ ನಾಯಕನಿಗೆ ಈ ಪಟ್ಟವನ್ನು ನೀಡಲು ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಕನ್ನಡಿಗ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ರಾಜ್ಯ ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಕೆಲವರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗನೊಬ್ಬನನ್ನು ಆಯ್ಕೆ ಮಾಡುವ ಕುರಿತು ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಸವಾಲಿನ ಕಗ್ಗಂಟಾಗಿದೆ. ಕಳೆದ ನಾಲ್ಕೈದು ತಿಂಗಳಿಂದ ಈ ಸ್ಥಾನಕ್ಕೆ ಸೂಕ್ತ ವ್ಯಕ್ತಿಯ ಆಯ್ಕೆಗೆ ತೀವ್ರ ಕಸರತ್ತು ನಡೆಯುತ್ತಿದೆ. ಈ ರೇಸ್‌ನಲ್ಲಿ ಹಲವು ಪ್ರಭಾವಿ ನಾಯಕರ ಹೆಸರುಗಳು ಕೇಳಿಬಂದಿವೆ. ಇದರ ಜೊತೆಗೆ, ಆರ್‌ಎಸ್‌ಎಸ್‌ನ ಪಾತ್ರವೂ ಈ ಆಯ್ಕೆಯಲ್ಲಿ ನಿರ್ಣಾಯಕವಾಗಿದೆ. ಬಿಜೆಪಿಯ ಈ ಪ್ರಮುಖ ಆಯ್ಕೆಗೆ ಆರ್‌ಎಸ್‌ಎಸ್‌ನ ಸಲಹೆ ಮತ್ತು ಸಮ್ಮತಿಯನ್ನು ಪಡೆಯಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆಈಗಾಗಲೇ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ 11 ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಜೋಶಿ ಅವರು ಆರ್‌ಎಸ್‌ಎಸ್‌ನ ಹಿನ್ನೆಲೆಯಿಂದ ಬಂದವರಾಗಿದ್ದು, ಸಂಘ ಪರಿವಾರದಲ್ಲಿ ತಮ್ಮನ್ನು ತಾವು ಗಾಢವಾಗಿ ತೊಡಗಿಸಿಕೊಂಡಿದ್ದಾರೆ. ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿದ್ದು, ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಆರ್‌ಎಸ್‌ಎಸ್‌ನೊಂದಿಗೆ ಅವರ ಹತ್ತಿರದ ಸಂಬಂಧವು ಈ ಸ್ಥಾನಕ್ಕೆ ಅವರನ್ನು ಪ್ರಬಲ ಆಕಾಂಕ್ಷಿಯಾಗಿಸಿದೆ. ಜುಲೈ 7ರಂದು ನೂತನ ರಾಷ್ಟ್ರೀಯ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ.
Hot this week
ಧಾರ್ಮಿಕ
ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.
ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.
ಸಂವತ್ಸರ: ಪರಾಭವ.
SAMVATSARA : PARABHAVA.
ಆಯಣ: ದಕ್ಷಿಣಾಯಣ.
AYANA:...
ಓದುಗರ ಪತ್ರ
ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ
ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ
ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...
ಓದುಗರ ಪತ್ರ
ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...
ಗ್ರೇಟರ್ ಬೆಂಗಳೂರು
ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ
ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...
ಗ್ರೇಟರ್ ಬೆಂಗಳೂರು
ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ
ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...
Topics
ಧಾರ್ಮಿಕ
ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.
ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.
ಸಂವತ್ಸರ: ಪರಾಭವ.
SAMVATSARA : PARABHAVA.
ಆಯಣ: ದಕ್ಷಿಣಾಯಣ.
AYANA:...
ಓದುಗರ ಪತ್ರ
ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ
ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ
ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...
ಓದುಗರ ಪತ್ರ
ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...
ಗ್ರೇಟರ್ ಬೆಂಗಳೂರು
ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ
ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...
ಗ್ರೇಟರ್ ಬೆಂಗಳೂರು
ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ
ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...
ಉದ್ಯೋಗ
ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್
ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...
ಕರ್ನಾಟಕ
ಕರ್ನಾಟಕ ಯಕ್ಷಗಾನ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಘೋಷಣೆ: ಎಂ.ಕೆ. ರಮೇಶ ಆಚಾರ್ಯ ಅವರಿಗೆ ಗೌರವದ ‘ಪಾರ್ತಿಸುಬ್ಬ ಪ್ರಶಸ್ತಿ’
ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿಯು(Karnataka Yakshagana Academy) 2026ನೇ ಸಾಲಿನ ಪ್ರತಿಷ್ಠಿತ...
ಕರ್ನಾಟಕ
ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ: ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು(The Karnataka Public Commission) 2026-27ನೇ ಸಾಲಿನ...
