ಬೆಂಗಳೂರು: ಸದಾ ಒಂದಿಲ್ಲೊಂದು ಹೇಳಿಕೆ ಕೊಟ್ಟು ಸೃಷ್ಟಿಸುವ ಬಿಜೆಪಿ ಎಂಎಲ್‍ಸಿ ರವಿಕುಮಾರ್ ಗೆ ದೊಡ್ಡ ಸಂಕಷ್ಟ ಎದುರಾಗಿದ್ದು ಬೆಂಗಳೂರಲ್ಲಿ ಪ್ರಕರಣ ದಾಖಲಾಗಿದೆ,
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್ ರವಿಕುಮಾರ್ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಶೀಘ್ರದಲ್ಲಿ ಕಾನೂನು ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ,
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿ ರವಿಕುಮಾರ್ ನಾಲಗೆ ಹರಿಬಿಟ್ಟಿದ್ದರು,
ಕಳೆದ ಕೆಲ ದಿನಗಳ ಹಿಂದೆಷ್ಟೇ ಕಲಬುರಗಿ ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲ ಎಂದು ಹೇಳಿ ವಿವಾದ ಮಾಡಿಕೊಂಡಿದ್ದರು,ಇದೀಗ ಮತ್ತೆ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಓರ್ವ ಎಂಎಲ್‍ಸಿ ಹೀಗಾ ಮಾತಾಡೋದು?: ರವಿಕುಮಾರ್ ವಿರುದ್ಧ ದೂರು
ವಾಲ್ಮೀಕಿ ನಿಗಮದ ಹಗರಣ: ಬಳ್ಳಾರಿ ಸಂಸದ, 4 ಶಾಸಕರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ
ಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಎಸ್‍ಐಟಿಗೆ ಕಪಾಳಮೋಕ್ಷ ಮಾಡುವ ಕೆಲಸವನ್ನು ಹೈಕೋರ್ಟ್ ಮಾಡಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ರಾಜ್ಯ ಹೈಕೋರ್ಟ್ ಸಿಬಿಐಗೆ ನೀಡಿದೆ ಎಂದು ತಿಳಿಸಿದರು. ಎಸ್‍ಐಟಿ ರಚನೆ ಮೂಲಕ ಕ್ಲೀನ್ ಚಿಟ್ ಕೊಡಲಾಗಿತ್ತು. ಹಗರಣವನ್ನು ಅಧಿಕಾರಿಗಳ ಮೇಲೆ ಹೊತ್ತು ಹಾಕುವ ಪ್ರಯತ್ನ ಆಗಿತ್ತು ಎಂದು ಆರೋಪಿಸಿದರು.
ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ, ಸರಕಾರದ ಹಣವನ್ನು ನುಂಗಿ ಚುನಾವಣೆಗೆ ಬಳಸಿದ್ದರು. ಈ ಹಗರಣಕ್ಕೆ ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೂ ಜವಾಬ್ದಾರರು ಎಂದ ಅವರು, ಬಳ್ಳಾರಿ ಸಂಸದರು ರಾಜೀನಾಮೆ ನೀಡಲಿ; ನಾಗೇಂದ್ರ, ಗಣೇಶ್, ಡಾ.ಶ್ರೀನಿವಾಸ್, ಭರತ್ ರೆಡ್ಡಿ ಎಲ್ಲರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ರಾಜಕಾರಣದಲ್ಲಿ ಗೆಲುವು ಶಾಶ್ವತವೇ ಎಂದು ಸಿದ್ದರಾಮಯ್ಯನವರಿಗೆ ಪ್ರಶ್ನೆ ಮಾಡಿದ ಅವರು, ಒಬ್ಬ ಮನುಷ್ಯ ಗೆಲ್ಲಲು ಇನ್ನೊಬ್ಬ ಸೋಲಲೇಬೇಕು. ಪ್ರಧಾನಿ, ಮುಖ್ಯಮಂತ್ರಿ ಸ್ಥಾನದಲ್ಲಿ ಇದ್ದವರೂ ಸೋತಿದ್ದಾರೆ. 2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿ- ಚಾಮುಂಡಿಯಲ್ಲಿ ಸ್ಪರ್ಧಿಸಿದ್ದರು. ಬಾದಾಮಿಯಲ್ಲಿ ಕೇವಲ 1700 ಮತದಿಂದ ಗೆದ್ದಿದ್ದಾರೆ. ನಾನು ಎರಡು ಕಡೆ ಸ್ಪರ್ಧೆ ಮಾಡಿದ್ದೆ. ನನ್ನ ವಿರುದ್ಧ ಗೆದ್ದವರು 1700 ಮತ ಹೆಚ್ಚು ಪಡೆದರು. ಅದರಲ್ಲಿ ಸಾವಿರ ಮತ ನನಗೆ ಬರುತ್ತಿದ್ದರೆ, ನೀವು ಮುಖ್ಯಮಂತ್ರಿ ಆಗಲು ಸಾಧ್ಯವಿತ್ತೇ ಎಂದು ಕೇಳಿದರು.
ಚಾಮುಂಡಿ ಕ್ಷೇತ್ರದಲ್ಲಿ ಸುಮಾರು 40 ಸಾವಿರ ಮತದಿಂದ ನೀವು ಸೋಲಲಿಲ್ಲವೇ ಎಂದು ಪ್ರಶ್ನೆ ಮಾಡಿದರು. ಸಿದ್ದರಾಮಯ್ಯನವರ ಜನಪ್ರಿಯತೆ ದಿನೇದಿನೇ ಕಡಿಮೆ ಆಗುತ್ತಿದೆ. ರಾಜಕಾರಣದಲ್ಲಿ ಯಾವುದು ಕೂಡ ಶಾಶ್ವತ ಅಲ್ಲ ಎಂದು ಪ್ರತ್ಯುತ್ತರ ನೀಡಿದರು. ಗೆದ್ದಾಗ ಸಂತಸ; ಸೋತಾಗ ದುಃಖ ಪಡುವುದಲ್ಲ ಎಂದು ತಿಳಿಸಿದರು.
ವಾಲ್ಮೀಕಿ ನಿಗಮದ 187 ಕೋಟಿಯನ್ನು ಬಳಸಿಕೊಂಡು ಗೆದ್ದಿದ್ದೀರಿ. ಇದು ನನಗೆ ಮೋಸ ಮಾಡಿ ಗೆದ್ದಂತೆ ಅಲ್ಲವೇ ಎಂದು ಪ್ರಶ್ನಿಸಿದರು. ಸೋತವರನ್ನು ಗೇಲಿ ಮಾಡದಿರಿ ಎಂದು ಮನವಿ ಮಾಡಿದರು. ವಿಪಕ್ಷದಲ್ಲಿ ಇದ್ದವರು ಆಡಳಿತ ಪಕ್ಷದವರನ್ನು ತಪ್ಪು ಆದಾಗ, ಕೆಲವೊಂದು ವಿಷಯದಲ್ಲಿ ಟೀಕಿಸುತ್ತಾರೆ. ಆಡಳಿತ ಪಕ್ಷಕ್ಕೂ ತಾಳ್ಮೆ ಬೇಕು ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
ವಾಲ್ಮೀಕಿ ನಿಗಮದ ಹಗರಣದ ಸಂದರ್ಭದಲ್ಲಿ ಸಾಕಷ್ಟು ರೈತರ ಖಾತೆಗೆ ಹಣ ಜಮಾ ಮಾಡಿದ್ದಾರೆ. ಅವರ ಖಾತೆ ಸ್ಥಗಿತವಾಗಿದ್ದು, ಅದರಲ್ಲಿ ವ್ಯವಹಾರ ಮಾಡಲಾಗದೆ ರೈತರು ಈಗ ಕಣ್ಣೀರು ಹಾಕುತ್ತಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
VK NEWS DIGITAL –
ಸಿದ್ದರಾಮಯ್ಯರ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ: ಬಿ.ವೈ.ವಿಜಯೇಂದ್ರ
ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ವಿಶ್ಲೇಷಿಸಿದರು.
ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಅವರು ಡಿಕೆಶಿಯವರಿಗೆ 100 ಜನ ಶಾಸಕರ ಬೆಂಬಲ ಇದೆ; ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆಯವರು ಸೇರಿ ಬೇರೆ ಬೇರೆ ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ಪಕ್ಷದ ಶಾಸಕರ ವಿಶ್ವಾಸವನ್ನೂ ಕಳಕೊಂಡಿದ್ದಾರೆ ಎಂದರು. ಕುದುರೆ ವ್ಯಾಪಾರದ ಬಗ್ಗೆ ಮಾನ್ಯ ರಾಜ್ಯಪಾಲರೂ ಗಮನಿಸಬೇಕು ಎಂದು ವಿನಂತಿಸಿದರು.
ಹಾಸನ ಜಿಲ್ಲೆಗೆ ಮಾತ್ರ ಕೋವಿಡ್ ಲಸಿಕೆ ಕೊಡಲಾಗಿದೆಯೇ?
ಹೃದಯಾಘಾತದಿಂದ ಹಾಸನ ಜಿಲ್ಲೆಯಲ್ಲಿ 35- 40 ಜನರು ಸತ್ತಿದ್ದು, ಕೋವಿಡ್ ಲಸಿಕೆ ಕಾರಣ ಎಂಬ ಮುಖ್ಯಮಂತ್ರಿಗಳ ಆರೋಪಕ್ಕೆ ಉತ್ತರಿಸಿದ ಅವರು, ಹಾಸನ ಜಿಲ್ಲೆಗೆ ಮಾತ್ರ ಕೋವಿಡ್ ಲಸಿಕೆ ಕೊಡಲಾಗಿದೆಯೇ? ದೇಶದ ಕೋಟ್ಯಂತರ ಜನರಿಗೆ, ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಿಗೂ ಕೋವಿಡ್ ಲಸಿಕೆ ರಫ್ತು ಮಾಡಿದ್ದಾರೆ. ಹಾಸನದ ಸಾವುಗಳ ಸಂಬಂಧ ರಾಜ್ಯ ಸರಕಾರ ಎಚ್ಚತ್ತುಕೊಂಡು ಸಮರ್ಪಕ ತನಿಖೆ ನಡೆಸಬೇಕಿದೆ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು.
ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದು ಖಂಡಿಸಿದರು. ಮುಖ್ಯಮಂತ್ರಿಗಳು ತುರ್ತಾಗಿ ಸಭೆ ಕರೆದು ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸಮರ್ಪಕ ಔಷಧಿ ಸಿದ್ಧವಾಗಿ ಇಟ್ಟುಕೊಳ್ಳುವ ಕಡೆ ಗಮನಿಸಬೇಕೆಂದು ಒತ್ತಾಯಿಸಿದರು. ಅಪಪ್ರಚಾರ ಸಲ್ಲದು ಎಂದು ತಿಳಿಸಿದರು.
ಕೇಂದ್ರದಲ್ಲಿ ಅಧಿಕಾರ, ಆರೆಸ್ಸೆಸ್ ನಿಷೇಧ- ತಿರುಕನ ಕನಸು
ಆರೆಸ್ಸೆಸ್ ನಿಷೇಧ ಕುರಿತ ಪ್ರಿಯಾಂಕ್ ಖರ್ಗೆಯವರ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಇದು ತಿರುಕನ ಕನಸು ಎಂದು ವ್ಯಂಗ್ಯವಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು ಸ್ವತಃ ನಿಮ್ಮ ತಂದೆ- ಮಲ್ಲಿಕಾರ್ಜುನ ಖರ್ಗೆಯವರೇ ನಂಬಲು ಸಾಧ್ಯವಿಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರೇ ನಂಬಲಸಾಧ್ಯ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಕನಸು ಪ್ರಿಯಾಂಕ್ ಖರ್ಗೆಯವರಿಗೆ ಯಾಕೆ ಬಿತ್ತು ಎಂದು ಪ್ರಶ್ನಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘ ಒಂದು ರಾಷ್ಟ್ರಭಕ್ತ ಸಂಘಟನೆ. ಭಾರತ- ಚೀನಾದ ಜೊತೆ ಯುದ್ಧದ ವೇಳೆ ಆರೆಸ್ಸೆಸ್ ಪಾತ್ರವನ್ನು ಪ್ರಧಾನಿ ಜವಾಹರಲಾಲ್ ನೆಹರೂ ಅವರು ಸ್ವಾಗತಿಸಿದ್ದರು. ಅದರ ಬಳಿಕ ರಿಪಬ್ಲಿಕ್ ಪರೇಡ್‍ನಲ್ಲಿ ಅವಕಾಶ ಕೊಡಲಾಗಿತ್ತು ಎಂದು ವಿವರಿಸಿದರು.
ನೆಹರೂ, ಇಂದಿರಾ ಗಾಂಧಿಯವರು ಆರೆಸ್ಸೆಸ್ ನಿಷೇಧಿಸಿದ್ದರು. ಕಾಡಿ ಬೇಡಿದ್ದು ನಿಷೇಧ ರದ್ದಾಯಿತೆಂಬ ಅಪ್ರಬುದ್ಧ ಹೇಳಿಕೆ ನೀಡಿದ್ದು, ಮಾಹಿತಿ ಕೊರತೆಯಿಂದ ಕೂಡಿದೆ ಎಂದು ಆಕ್ಷೇಪಿಸಿದರು.
ಬಿಜೆಪಿ ಹೋರಾಟಕ್ಕೆ ಸಂದ ಜಯ
ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ರಾಜ್ಯ ಹೈಕೋರ್ಟ್ ಸಿಬಿಐಗೆ ವಹಿಸಿದ್ದು ಬಿಜೆಪಿ ಹೋರಾಟಕ್ಕೆ ಸಂದ ಜಯ ಎಂದ ಅವರು, ರಾಜ್ಯ ಹೈಕೋರ್ಟ್ ನಿನ್ನೆ ಮಹತ್ವದ ತೀರ್ಪು ನೀಡಿದೆ. ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದು ಬಿಜೆಪಿ ಹೋರಾಟಕ್ಕೆ ಸಂದ ಜಯ; ಇದರಲ್ಲಿ ಇನ್ನೂ ಕೂಡ ದೊಡ್ಡ ತಲೆಗಳು ಉರುಳಲಿವೆ. ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ತಿಳಿಸಿದರು.
ರಾಜ್ಯದ ಪರಿಶಿಷ್ಟ ಸಮುದಾಯದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ನ್ಯಾಯಕ್ಕೆ ಬಳಕೆಗೆ ಮೀಸಲಿಟ್ಟ 187 ಕೋಟಿ ಹಣವನ್ನು ಪಕ್ಕದ ತೆಲಂಗಾಣದಲ್ಲಿ ಬಳಸಿಕೊಂಡ ವಾಲ್ಮೀಕಿ ನಿಗಮದ ಹಗರಣ ನಡೆದಿತ್ತು. ಸಾವಿರಾರು ಬ್ಯಾಂಕ್ ಖಾತೆಗಳನ್ನು ತೆರೆದು ಬಾರ್, ಜ್ಯುವೆಲ್ಲರಿ ಶಾಪ್, ಲೋಕಸಭಾ ಚುನಾವಣೆಗೆ ಈ ಹಣ ದುರ್ಬಳಕೆ ಆಗಿತ್ತು. ಚಂದ್ರಶೇಖರ್ ಎಂಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟಿನಲ್ಲಿ ಎಲ್ಲವನ್ನೂ ಉಲ್ಲೇಖಿಸಿದ್ದರು ಎಂದು ಗಮನ ಸೆಳೆದರು.
ಬಿಜೆಪಿ ತೀವ್ರ ಹೋರಾಟದ ಪರಿಣಾಮವಾಗಿ ಮುಖ್ಯಮಂತ್ರಿಗಳು ಅನಿವಾರ್ಯವಾಗಿ ಸಚಿವ ನಾಗೇಂದ್ರರನ್ನು ಸಂಪುಟದಿಂದ ಕೈಬಿಡಬೇಕಾಗಿ ಬಂತು. ಈಗ ಹೇಗಾದರೂ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಲು ಮುಖ್ಯಮಂತ್ರಿಗಳು ಪರದಾಡುತ್ತಿದ್ದರು. ಈ ಹಗರಣದಲ್ಲಿ ಸ್ವತಃ ಮುಖ್ಯಮಂತ್ರಿಗಳು ಭಾಗಿಯಾದುದು ಮಾಧ್ಯಮದವರಿಗೂ ತಿಳಿದಿದೆ ಎಂದು ವಿವರಿಸಿದರು. ಹಣಕಾಸಿನ ಇಲಾಖೆ ಅನುಮತಿ ಇಲ್ಲದೆ ಹಣ ಹೊರರಾಜ್ಯಕ್ಕೆ ಹೋಗಲು ಸಾಧ್ಯವಿರಲಿಲ್ಲ ಎಂದು ನುಡಿದರು.
ರಾಜ್ಯದಲ್ಲಿ ಪರಿಸ್ಥಿತಿ ದಿನೇದಿನೇ ಕೈಮೀರಿ ಹೋಗುತ್ತಿದೆ. ಆಡಳಿತ ಯಂತ್ರವು ಸಂಪೂರ್ಣವಾಗಿ ಕುಸಿದುಬಿದ್ದಿದೆ. ಆಡಳಿತ ಪಕ್ಷದಲ್ಲಿ ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ದಿನೇದಿನೇ ಹೆಚ್ಚಾಗಿದೆ ಎಂದು ವಿಶ್ಲೇಷಿಸಿದರು. ಇದರ ಪರಿಣಾಮವಾಗಿ ಅಭಿವೃದ್ಧಿ ಕೆಲಸಕಾರ್ಯಗಳು ಏನೂ ನಡೆಯುತ್ತಿಲ್ಲ. ರಾಜ್ಯ ಸರಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು.
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರಕಾರವು ದಿನಬಳಕೆ ವಸ್ತುಗಳ ಮೇಲೆ ಸತತ ಬೆಲೆ ಏರಿಸಿದ್ದರಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿದ್ದು, ಅಧಿಕಾರಿಗಳು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿದರು.
ರೈತರ ಆತ್ಮಹತ್ಯೆಗಳು, ಅಧಿಕಾರಿಗಳ ಆತ್ಮಹತ್ಯೆಗಳು, ಜೊತೆಗೇ ಗುತ್ತಿಗೆದಾರರೂÀ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ರಾಜ್ಯದಲ್ಲಿ ನಿರಂತರವಾಗಿ ನಡೆದಿದೆ. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಒಪ್ಪಿಕೊಂಡಿದ್ದಾರೆ ಎಂದರು.
ಹಿಂದೂಗಳ ಮೇಲೆ ದೌರ್ಜನ್ಯ..
ಸಿಂಧನೂರಿನಲ್ಲಿ ಹಿಂದೂ ಕಾರ್ಯಕರ್ತರನ್ನು ಬೆದರಿಸಿದ್ದಾರೆ. ಸಂಕೇಶ್ವರದಲ್ಲೂ ಶ್ರೀರಾಮಸೇನೆ ಕಾರ್ಯಕರ್ತರನ್ನು ಥಳಿಸಿದ್ದಾರೆ. ಪದೇ ಪದೇ ರಾಜ್ಯದಲ್ಲಿ ಗೋವುಗಳ ಕೆಚ್ಚಲನ್ನು ಕತ್ತರಿಸಲಾಗುತ್ತಿದೆ. ಇದರ ಬಗ್ಗೆ ರಾಜ್ಯ ಸರಕಾರ ಚಕಾರ ಎತ್ತುತ್ತಿಲ್ಲ ಎಂದು ಟೀಕಿಸಿದರು. ಸರಕಾರದ ಪಾಪದ ಕೊಡ ತುಂಬಿದೆ; ಜನರು ನಿಮಗೆ ಶಾಪ ಹಾಕುತ್ತಿದ್ದಾರೆ. ಹಸುವಿನ ಕೆಚ್ಚಲು ಕೊಯ್ಯುವ ಘಟನಾವಳಿ ಪದೇಪದೇ ನಡೆದಿದೆ. ಭಗವಂತನೂ ಸಿದ್ದರಾಮ್ಯನವರ ಸರಕಾರಕ್ಕೆ ಒಳ್ಳೆಯದು ಮಾಡಲು ಸಾಧ್ಯವಿಲ್ಲ ಎಂದು ನುಡಿದರು. ಗೃಹ ಸಚಿವರು ಕಠಿಣ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಇದರ ಕಡೆ ಗಮನಿಸಿ ಎಂದು ಒತ್ತಾಯಿಸಿದರು.
ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ, ಶಾಸಕರಾದ ಮಾನಪ್ಪ ಡಿ ವಜ್ಜಲ್, ಡಾ. ಶಿವರಾಜ್ ಪಾಟೀಲ್ ಮತ್ತು ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ಉಪಸ್ಥಿತರಿದ್ದರು.
VK NEWS DIGITAL
ಅನ್ನಪೂರ್ಣೇಶ್ವರಿ ಕಲಾಸಂಘದ ವಾರ್ಷಿಕೋತ್ಸವ: ಪೌರಾಣಿಕ ನಾಟಕೋತ್ಸವ
ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ 10ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜುಲೈ 4 ರಿಂದ 9 ವರೆಗೆ 6 ದಿನ ಪೌರಾಣಿಕ ನಾಟಕೋತ್ಸವವನ್ನು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.
ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ತಿಳಿಸಿದ್ದಾರೆ. 4ನೇ ತಾ. ಶುಕ್ರವಾರ ಪಿ.ಎಂ. ಮಲ್ಲೇಶ್‌ಗೌಡ್ರು, ರಂಗಸ್ವಾಮಿ ಇವರ ಶ್ರೀ ಚಾಮುಂಡೇಶ್ವರಿ ಕಲಾಸಂಘ, ಹಾಸನ ತಂಡದಿ0ದ ಸಂಪೂರ್ಣ ರಾಮಾಯಣ, 5ನೇ ತಾ. ಶನಿವಾರ ಚಂದ್ರಶೇಖರ್ ಸಿಗರನಹಳ್ಳಿ ಮಂಜು ತಟ್ಟೇಕೆರೆ ಇವರ ಶ್ರೀ ಲಕ್ಷಿರಂಗನಾಥ ಸಾಂಸ್ಕೃತಿಕ ಕಲಾಸಂಘ, ಸಿಗರನಹಳ್ಳಿ ತಂಡದಿAದ ಕುರುಕ್ಷೇತ್ರ, 6ನೇ ತಾ. ಭಾನುವಾರ ಸತೀಶ್ ಕಬ್ಬತ್ತಿ, ವೈಭವ್ ವೆಂಕಟೇಶ್ ಇವರ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘ ಹಾಸನ ತಂಡದಿAದ ಚಂಡಾಸುರನ ವಧೆ ನಾಟಕ, 7ನೇ ತಾ. ಸೋಮವಾರ ಬಾರೇಹೊಸರು ಜವರೇಗೌಡ್ರು, ಹನುಮೇಗೌಡ್ರು ಇವರ ಶ್ರೀ ಬಸವೇಶ್ವರ ಕಲಾಸಂಘ, ಹಾಸನ ತಂಡದಿ0ದ ಛಲದೊಳ್ ದುರ್ಯೋಧನ, 8ನೇ ತಾ. ಮಂಗಳವಾರ ರಮೇಶ್ ಗೌಡಪ್ಪ, ಹೆಚ್.ಎಂ.ಪ್ರಭಾಕರ್ ಇವರ ಹಾಸನಾಂಬ ಕಲಾ ಟ್ರಸ್ಟ್, ಹಾಸನ ತಂಡದಿ0ದ ಧರ್ಮರಾಜ್ಯ ಸ್ಥಾಪನೆ ಮತ್ತು 9ನೇ ತಾ. ಬುಧವಾರ ಸಿ.ಎ.ರಾಮಚಂದ್ರರಾವ್ ಇವರ ಶ್ರೀ ಮಾರುತಿ ಕಲಾ ಬಳಗ, ಬೆಂಗಳೂರು ತಂಡದಿAದ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.
NEWS HEADLINES : VK NEWS DIGITAL
ಜುಲೈ ೧೦ ಗುರುಪೂರ್ಣಿಮೆ – ವಿಶೇಷ ಲೇಖನ !
ICMR-AIIMS ವರದಿಯಿಂದ ಸತ್ಯ ಬಯಲು!
ದೇಶದಾದ್ಯಂತ ಯುವಕರಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಹಠಾತ್ ಸಾವುಗಳಿಗೆ ಕೊರೊನಾ ಲಸಿಕೆಯೇ ಕಾರಣ ಎಂಬ ಚರ್ಚೆಗಳು ಮತ್ತು ವದಂತಿಗಳು ಭಾರೀ ಆತಂಕವನ್ನು ಸೃಷ್ಟಿಸಿದ್ದವು. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 20ಕ್ಕೂ ಹೆಚ್ಚು ಯುವಕರ ಸಾವಿಗೆ ಕೊರೊನಾ ಲಸಿಕೆಯ ತ್ವರಿತ ಅನುಮೋದನೆ ಮತ್ತು ವಿತರಣೆಯೇ ಕಾರಣವಿರಬಹುದು ಎಂದು ಹೇಳಿಕೆ ನೀಡಿದ್ದರು.
ಆದರೆ, ಈ ಆರೋಪವನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ತಮ್ಮ ವಿವರವಾದ ಅಧ್ಯಯನದ ಮೂಲಕ ಸ್ಪಷ್ಟವಾಗಿ ತಳ್ಳಿಹಾಕಿವೆ. ಕೊರೊನಾ ಲಸಿಕೆ ಮತ್ತು ಹೃದಯಾಘಾತದಿಂದ ಸಂಭವಿಸುವ ಹಠಾತ್ ಸಾವುಗಳ ನಡುವೆ ಯಾವುದೇ ನೇರ ಸಂಬಂಧವಿಲ್ಲ ಎಂದು ಈ ವರದಿಗಳು ದೃಢಪಡಿಸಿವೆ.
ICMR ತನ್ನ ರಾಷ್ಟ್ರೀಯ ರೋಗವಿಜ್ಞಾನ ಸಂಸ್ಥೆ (NIE) ಜೊತೆಗೆ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 47 ಆಸ್ಪತ್ರೆಗಳಲ್ಲಿ 2021ರ ಅಕ್ಟೋಬರ್‌ನಿಂದ 2023ರ ಮಾರ್ಚ್‌ವರೆಗೆ 18-45 ವಯಸ್ಸಿನ ಯುವಕರಲ್ಲಿ ಸಂಭವಿಸಿದ ಹಠಾತ್ ಸಾವುಗಳನ್ನು ಅಧ್ಯಯನ ಮಾಡಿತು. ಈ ಅಧ್ಯಯನದಲ್ಲಿ ಕೊರೊನಾ ಲಸಿಕೆಯು ಹೃದಯಾಘಾತದಿಂದ ಸಾವಿಗೆ ಕಾರಣವಾಗಿಲ್ಲ ಎಂದು ಸ್ಪಷ್ಟವಾಗಿದೆ. ಬದಲಿಗೆ, ಹೃದಯಾಘಾತದ ಸಾವುಗಳಿಗೆ ಜನಕೀಯ ಕಾರಣಗಳು, ಜೀವನಶೈಲಿ, ಪೂರ್ವ-ಅಸ್ತಿತ್ವದಲ್ಲಿರುವ ಆರೋಗ್ಯ ಸಮಸ್ಯೆಗಳು, ಮತ್ತು ಕೊರೊನಾ ಸೋಂಕಿನ ನಂತರದ ತೊಡಕುಗಳು ಕಾರಣವಾಗಿರಬಹುದು ಎಂದು ವರದಿ ತಿಳಿಸಿದೆ.
AIIMSನಿಂದ ನಡೆಯುತ್ತಿರುವ ಎರಡನೇ ಅಧ್ಯಯನವು 18-45 ವಯಸ್ಸಿನ ಯುವಕರಲ್ಲಿ ಸಂಭವಿಸುವ ಹಠಾತ್ ಸಾವುಗಳ ಕಾರಣಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ. ಈ ಅಧ್ಯಯನದ ಆರಂಭಿಕ ಫಲಿತಾಂಶಗಳು ಹೃದಯಾಘಾತ (ಮಯೋಕಾರ್ಡಿಯಲ್ ಇನ್‌ಫಾರ್ಕ್ಷನ್) ಈ ವಯಸ್ಸಿನ ಗುಂಪಿನಲ್ಲಿ ಹಠಾತ್ ಸಾವಿಗೆ ಪ್ರಮುಖ ಕಾರಣವಾಗಿದೆ ಎಂದು ತೋರಿಸಿವೆ. ಆದರೆ, ಈ ಸಾವುಗಳಿಗೆ ಕೊರೊನಾ ಲಸಿಕೆಯ ಯಾವುದೇ ಸಂಬಂಧವಿಲ್ಲ ಎಂದು ದೃಢಪಡಿಸಲಾಗಿದೆ.
ನಾನೇ ಕಲ್ಲು ಬಂಡೆಯಂತೆ ಅಧಿಕಾರ ನಡೆಸುತ್ತೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಹಾಗೂ ಸಿಎಂ ಬದಲಾವಣೆಯ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದವರಿಗೆ ಸಿಎಂ ತಿರುಗೇಟು ನೀಡಿದ್ದಾರೆ, ರಾಜ್ಯದಲ್ಲಿ ಕಲ್ಲು ಬಂಡೆಯ ರೀತಿ ನಾನೇ ಅಧಿಕಾರ ನಡೆಸುತ್ತೇನೆ, ಐದು ವರ್ಷ ಪೂರೈಸುತ್ತೇವೆ ಎಂದು ಹೇಳಿದರು,
ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು ಬಿಜೆಪಿಯವರಿಗೆ ಸತ್ಯ ಅಂದರೆ ಏನು ಅಂತಲೇ ಗೊತ್ತಿಲ್ಲ, ಸುಳ್ಳು ಹೇಳುವುದರಲ್ಲಿ ಅವರಿಗೆ ಸಾಟಿಯಿಲ್ಲ, ಬಿಜೆಪಿಯವರು ನಂಬುತ್ತಾರೋ, ಇಲ್ಲವೋ ಗೊತ್ತಿಲ್ಲ, ಒಂದಂತು ಸತ್ಯ ಕಾಂಗ್ರೆಸ್ ಐದು ವರ್ಷ ಅಧಿಕಾರ ಪೂರೈಸುತ್ತದೆ ಎಂದು ಹೇಳಿದರು,
ಬಿಜೆಪಿಯವರು ಹಗಲುನಗಸು ಕಾಣುತ್ತಿದ್ದಾರೆ, ಕಾಂಗ್ರೆಸ್ ನಲ್ಲಿ ಯಾವುದೇ ಆಂತರಿಕ ಕಲಹವಿಲ್ಲ, ನಾವೆಲ್ಲರೂ ಕೂಡ ಒಂದಾಗಿದ್ದೇವೆ, ರಾಜ್ಯದಲ್ಲಿ ಐದು ವರ್ಷ ಅಧಿಕಾರಿವನ್ನು ಪೂರೈಸುತ್ತೇವೆ, ಅಲ್ಲದೇ ಕಲ್ಲು ಬಂಡೆಯಂತೆ ನಾನೇ ಸಿಎಂ ಆಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು,
ಕುಮಾರಸ್ವಾಮಿ ಕೂಡ ಅಧಿಕಾರ ನಡೆಸಿದರೂ ರಾಜ್ಯಕ್ಕೆ ಏನು ಮಾಡಿದ್ದಾರೆ, ಯಾವ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿದೆ, ಅವರ ಅಧಿಕಾರದಲ್ಲಿದ್ದಾಗ ಕೇವಲ ಜನರ ದಿಕ್ಕು ತಪ್ಪಿಸಿದ್ದು, ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ಸಿಎಂ ಕಿಡಿಕಾರಿದರು,
ರಾಜ್ಯ ಬಿಜೆಪಿ ಕಚೇರಿ ‘ಜಗನ್ನಾಥ ಭವನ’ ಸ್ಫೋಟ ಪ್ರಕರಣ: ಶಂಕಿತ ಉಗ್ರನ ಬಂಧನ!
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನ ಮುಂಭಾಗ 2013 ರಲ್ಲಿ ನಡೆದ ಬಾಂ*ಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬ0ಧಿಸಿದ0ತೆ ಶಂಕಿತ ಉಗ್ರ ನಗೂರ್ ಅಬೂಬಕರ್ ಸಿದ್ದಿಕ್‌ನನ್ನು ತಮಿಳುನಾಡು ಪೊಲೀಸರು ಬಂಧಿಸಿರುವುದಾಗಿ ವರದಿಗಳು ತಿಳಿಸಿವೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ ಎನಲಾಗಿದ್ದು, ಈ ಬಂಧನವು 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಗ್ರನ ವಿರುದ್ಧದ ತನಿಖೆಯಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದಿಕ್‌ನ ಜೊತೆಗೆ ಆತನ ಸಹಾಯಕ ತಿರುನಲ್ವೇಲಿ ಮೊಹಮ್ಮದ್ ಅಲಿ ಸಹಾ ಬಂಧನಕ್ಕೊಳಗಾಗಿದ್ದಾನೆ ಎನ್ನಲಾಗಿದೆ.
ಆಗ 2013 ರ ಏಪ್ರಿಲ್ 17 ರಂದು ಬೆಂಗಳೂರಿನ ಮಲ್ಲೇಶ್ವರ ಬಿಜೆಪಿ ಕಚೇರಿ ಮುಂಭಾಗ ನಡೆದ ಸ್ಫೋಟದಲ್ಲಿ 16 ಜನರು ಗಾಯಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಪ್ರಕರಣದಲ್ಲಿ ನಗೂರ್ ಅಬೂಬಕರ್ ಸಿದ್ದಿಕ್ ಪ್ರಮುಖ ಶಂಕಿತನಾಗಿದ್ದ.
2011 ರಲ್ಲಿ ಮದುರೈನಲ್ಲಿ ಬಿಜೆಪಿ ಮುತ್ಸದ್ದಿ ಎಲ್.ಕೆ.ಆಡ್ವಾಣಿಯವರ ರಥಯಾತ್ರೆಯ ಮಾರ್ಗದಲ್ಲಿ ಪೈಪ್ ಬಾಂಬ್ ಇರಿಸಿದ ಯತ್ನ, 1995 ರಲ್ಲಿ ಚೆನ್ನೆನ ಚಿಂತಾದ್ರಿಪೇಟ್‌ನ ಹಿಂದೂ ಮುನ್ನಾನಿ ಕಚೇರಿಯಲ್ಲಿ ನಡೆದ ಬಾಂಬ್ ಸ್ಫೋಟ, ಮತ್ತು ನಾಗೋರ್‌ನಲ್ಲಿ ಪಾರ್ಸೆಲ್ ಬಾಂಬ್ ದಾಳಿಯಲ್ಲಿ ಹಿಂದೂ ಕಾರ್ಯಕರ್ತ ಮುತ್ತುಕೃಷ್ಣನ್‌ನ ಕೊಲೆಯೂ ಸೇರಿದಂತೆ ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿದ್ದಿಕ್ ಭಾಗಿಯಾಗಿದ್ದ ಎನ್ನಲಾಗಿದೆ.
1999 ರಲ್ಲಿ ಚೆನ್ನೆನ ಪೊಲೀಸ್ ಕಮಿಷನರ್ ಕಚೇರಿ ಸೇರಿದಂತೆ ಚೆನ್ನೆ, ತಿರುಚಿ, ಕೊಯಮತ್ತೂರು, ಮತ್ತು ಕೇರಳದ ಏಳು ಕಡೆಗಳಲ್ಲಿ ಬಾಂಬ್ ಇರಿಸಿದ ಪ್ರಕರಣದಲ್ಲಿಯೂ ಆತ ಪ್ರಮುಖ ಪಾತ್ರ ವಹಿಸಿದ್ದ. 2012 ರಲ್ಲಿ ವೆಲ್ಲೂರಿನಲ್ಲಿ ಡಾ. ಅರವಿಂದ್ ರೆಡ್ಡಿಯ ಕೊಲೆ ಪ್ರಕರಣದಲ್ಲೂ ಸಿದ್ದಿಕ್ ಶಂಕಿತನಾಗಿದ್ದ.
ತ.ನಾಡು ಪೊಲೀಸರ ವಿಶೇಷ ತಂಡವು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಈ ಬಂಧನ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ.. ಸಿದ್ದಿಕ್ ಮತ್ತು ಆತನ ಸಹಾಯಕ ಮೊಹಮ್ಮದ್ ಅಲಿ 30 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ದಕ್ಷಿಣ ಭಾರತದ ವಿವಿಧ ಭಯೋತ್ಪಾದಕ ಘಟನೆಗಳ ತನಿಖೆಗೆ ಹೊಸ ಆಯಾಮ ನೀಡಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತ.ನಾಡು ಪೊಲೀಸರ ಹೇಳಿಕೆಯಂತೆ, `ನಗೂರ್ ಅಬೂಬಕರ್ ಸಿದ್ದಿಕ್ ಮತ್ತು ತಿರುನೆಲ್ವೇಲಿ ಮೊಹಮ್ಮದ್ ಅಲಿ 1995 ರಿಂದ ತಮಿಳುನಾಡಿನಲ್ಲಿ ವಿವಿಧ ಬಾಂಬ್ ಸ್ಫೋಟಗಳು, ಧಾರ್ಮಿಕ ಘರ್ಷಣೆ, ಕೊಲೆಗಳು, ಹಿಂದೂ ನಾಯಕರುಗಳ ಕೊಲೆ ಸಂಚಿನ ಯತ್ನಗಳು ಮತ್ತು ಭಯೋತ್ಪಾದನಾ ಚಟುವಟಿಕೆಗಳಿಗೆ ಜವಾಬ್ದಾರರು. ಈ ಬಂಧನವು ಭಯೋತ್ಪಾದಕ ಜಾಲದ ಒಡೆಯುವಿಕೆಗೆ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
ನಮ್ಮ ಮೆಟ್ರೋಗೆ ಶಾಕ್, ಬಿಎಂಟಿಸಿ ರಾಕ್!
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ಏರಿಕೆ ಮಾಡಿದ ಪರಿಣಾಮ ಬಿಎಂಟಿಸಿಗೆ ಭರ್ಜರಿ ಉಪಯೋಗ ಆಗುತ್ತಿದೆ, ಆದಾಯ ಬರೋಬ್ಬರಿ 7.25 ಕೋಟಿ ರೂ ಗೆ ಏರಿಕೆಯಾಗಿದೆ,
ಕಳೆದ ನಾಲ್ಕೈದು ತಿಂಗಳ ಹಿಂದೆ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿತ್ತು, ಇದ್ರಿಂದಾಗಿ ಪ್ರಯಾಣಿಕರು ಬಿಎಂಟಿಸಿ ಮೊರೆ ಹೋಗಿದ್ದಾರೆ, ಪರಿಣಾಮ ಬಿಎಂಟಿಸಿಗೆ ಭಾರಿ ಲಾಭ ಬಂದಿದೆ,
ಬಿಎಂಟಿಸಿಯಲ್ಲಿ ನಿತ್ಯ ಸರಾಸರಿ 40 ಲಕ್ಷ ಪ್ರಯಾಣಿಕರ ಓಡಾಟ ಇತ್ತು, ಆದಾಯ 6.90 ಕೋಟಿ ರೂ ಇತ್ತು, ಆದರೆ ಮೆಟ್ರೋ ದರ ಏರಿಕೆ ಬಳಿಕ ನಿತ್ಯ ಸರಾಸರಿ 42 ಲಕ್ಷ ಪ್ರಯಾಣಿಕರು ಓಡಾಡ್ತಿದ್ದು, ಆದಾಯ 7.25 ಕೋಟಿ ರೂ,ಗೆ ಏರಿಕೆ ಆಗಿದೆ,
ಅಷ್ಟೇ ಅಲ್ಲ ಈ ಹಿಂದೆ ನಿತ್ಯ ನಗರದಲ್ಲಿ 6,900 ಬಸ್‍ಗಳಿಂದ 54 ಸಾವಿರ ಟ್ರಿಪ್ ಮಾಡಲಾಗುತ್ತಿತ್ತು, ಸದ್ಯ ಹೆಚ್ಚುವರಿ 2 ಸಾವಿರ ಡಿಪೋದಲ್ಲಿದ್ದ ಬಸ್‍ಗಳನ್ನು ಕೂಡ ರಸ್ತೆಗಳಿಸುವ ಮೂಲಕ 8 ಸಾವಿರ ಟ್ರಪ್ ಹೆಚ್ಚಳ ಮಾಡಿ, 62 ಸಾವಿರಕ್ಕೆ ಏರಿಕೆ ಮಾಡಲಾಗಿದೆ,
ಓಲಾ, ಊಬರ್ ಬಳಕೆದಾರರಿಗೆ ಶಾಕ್ – ಪೀಕ್ ಅವರ್‌ನಲ್ಲಿ ದುಪ್ಪಟ್ಟು ದರ ವಿಧಿಸಲು ಕೇಂದ್ರ ಒಪ್ಪಿಗೆ
ನವದೆಹಲಿ: ಬೆಂಗಳೂರು ಮುಂಬೈನಂತಹ ಮಹಾ ನಗರಗಳಲ್ಲಿ ತುರ್ತು ಕಾರ್ಯಗಳಿಗೆ ಓಡಾಡಬೇಕು ಅಂದ್ರೆ ಆಟೋ, ಓಲಾ. ಊಬರ್‌ನಲ್ಲಿ ಓಡಾಡಬೇಕು. ಆದ್ರೆ ಕೆಲವೊಮ್ಮೆ ನಿಗದಿಕ್ಕಿಂತ ಹೆಚ್ಚು ದುಡ್ಡು ಕೇಳಿದಾಗ ಅನುಕೂಲ ಇದ್ದವರು ಕೊಟ್ಟು ಹೋಗ್ತಾರೆ, ಇಲ್ಲದವರು ಏನ್ ಮಾಡ್ತಾರೆ ಹೇಳಿ? ಅದರಲ್ಲೂ, ಮಳೆಗಾಲ, ಟ್ರಾಫಿಕ್ ಜಾಮ್‌ನಂತಹ ಸಂದರ್ಭದಲ್ಲಿ ದುಪ್ಪಟ್ಟು ಹಣ ನೀಡಿ ಪ್ರಯಾಣಿಸಬೇಕಾದ ಅನಿವಾರ್ಯತೆಯನ್ನು ಖಾಸಗಿ ಕ್ಯಾಬ್ ಸೇವಾ ಕಂಪನಿಗಳು ಸೃಷ್ಟಿಸುತ್ತಿವೆ.
ಇದರ ವಿರುದ್ಧ ಗ್ರಾಹಕರು ಆಕ್ರೋಶ ಹೊರಹಾಕುತ್ತಲೇ ಬಂದಿದ್ದಾರೆ. ಆದರೀಗ ಕೇಂದ್ರ ಸರ್ಕಾರವೇ ಪೀಕ್ ಅವರ್‌ಗಳಲ್ಲಿ ದುಪ್ಪಟ್ಟು ದರ ವಿಧಿಸಲು ಅವಕಾಶ ಮಾಡಿಕೊಟ್ಟಿದೆ…
ಹೌದು. ಓಲಾ, ಊಬರ್ ನಂತರ ಅಗ್ರಿಗೇಟರ್ ಕಂಪನಿಗಳು ಪೀಕ್ ಅವರಗಳಲ್ಲಿ ಮೂಲ ಬೆಲೆಗಿಂತ ದುಪ್ಪಟ್ಟು ದರ ಅಂದರೆ ಸರ್ಜ್ ಚಾರ್ಜ್ ವಿಧಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಜುಲೈ 1ರಂದು ಆದೇಶ ಹೊರಡಿಸಿದೆ.
