Home Blog Page 70

ಸರ್ಕಾರದಲ್ಲಿ ದುಡ್ಡಿಲ್ಲ: ಪರಮೇಶ್ವರ್‌

ಬಾಗಲಕೋಟೆ: ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್   ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಡಾ. ಜಿ ಪರಮೇಶ್ವರ್‌  ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ  ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ.

ಬಾದಾಮಿಯಲ್ಲಿ ಸೋಮವಾರ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಜಾರಿ ಮಾಡಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ಪದೇ ಪದೇ ಸ್ವಪಕ್ಷದ ಶಾಸಕರು ಸಚಿವರ ಅಸಮಾಧಾನದ ಹೇಳಿಕೆಗಳ ಮೂಲಕ ತೀವ್ರ ಮುಜುಗರ ಎದುರಿಸುತ್ತಿದೆ. ವಿರೋಧ ಪಕ್ಷಗಳಿಗಿಂತ ಸ್ವಪಕ್ಷದವರೇ ಕಾಂಗ್ರೆಸ್‌ಗೆ ಮುಳುವಾಗಿದ್ದು ಹೊಸದಾಗಿ ಈಗ ಪರಮೇಶ್ವರ್‌ ಸೇರ್ಪಡೆಯಾಗಿದ್ದಾರೆ.

ಪಾಸ್ ಪೋರ್ಟ್ ಪಡೆಯುವುದು ಈಗ ಇನ್ನಷ್ಟು ಸುಲಭ!

ನವದೆಹಲಿ: 13 ನೇ ಪಾಸ್ ಪೋರ್ಟ್ ಸೇವಾ ದಿವಸ್ ಸಂದರ್ಭದಲ್ಲಿ ಭಾರತ ಇ ಪಾಸ್ಪೋರ್ಟ್ ಅಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಇದರ ಬೆನ್ನಲ್ಲೇ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಿಎಸ್‍ಪಿವಿ 2.0 ಘೋಷಣೆ ಮಾಡಿದ್ದು, ಈ ಮೂಲಕ ಪಾಸ್ ಪೋರ್ಟ್ ಅನ್ನು ಇನ್ನಷ್ಟು ಸುಲಭವಾಗಿ ಪಡೆಯಬಹುದಾಗಿದೆ,
ಕಳೆದ ದಶಕದಲ್ಲಿ ಪಾಸ್ ಪೋರ್ಟ್ ವಿತರಣೆಯಲ್ಲಿ ಗಮನಾರ್ಹ ಏರಿಕೆ ಕಂಡಿದ್ದು, ಪಾಸ್ ಪೋರ್ಟ್ ವಿತರಣೆಯ 2014 ರಲ್ಲಿ 91 ಲಕ್ಷದಿಂದ 2024 ರಲ್ಲಿ 91 ಲಕ್ಷದಿಂದ 2024 ರಲ್ಲಿ 1.14 ಕೋಟಿಗೆ ಏರಿಕೆಯಾಗಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದರು,
ಪಾಸ್ ಪೋರ್ಟ್ ಸೇವಾ ಕಾರ್ಯಕ್ರಮದ ಆವೃತ್ತಿ 2.0 ಅನ್ನು ಈಗಾಗಲೇ ದೇಶಾದ್ಯಂತ ಜಾರಿಗೆ ತರಲಾಗಿದ್ದು, ದಕ್ಷತೆ ಮತ್ತು ಪಾರದರ್ಶಕತೆಯನ್ನು ಸುಧಾರಿಸಲು, ಉನ್ನತ ಮಟ್ಟದ ಉದಯೋನ್ಮಖ ತಂತ್ರಜ್ಞಾನಗಳನ್ನು ತರಲಾಗುತ್ತಿದೆ,
ಅಲ್ಲದೇ ಭಾರತ ಸರ್ಕಾರದ ಮುಂದಿನ ಹಂತದ ನಾಗರಿಕ ಕೇಂದ್ರಿತ ಸೇವೆಯನ್ನು ನೀಡುವ ಬದ್ಧತೆಗೆ ಅನುಗುಣವಾಗಿ, ನಾವು ದೇಶಾದ್ಯಂತ ಪಿಎಸ್‍ಪಿವಿ 2.0 ಅನ್ನು ಜಾರಿಗೆ ತಂದಿದ್ದೇವೆ, ಇದು ಪಾಸ್ ಪೋರ್ಟ್ ವಿತರಣೆಯಲ್ಲಿ ಬಹಳ ದೊಡ್ಡ ಸುಧಾರಣೆ ತರಲಿದೆ, ಜೊತೆಗೆ ಜನರು ಇನ್ನಷ್ಟು ಸುಲಭವಾಗಿ ಪಾಸ್ ಪೋರ್ಟ್ ಮಾಡಿಕೊಳ್ಳಬಹುದು ಎಂದು ಜೈ ಶಂಕರ್ ತಿಳಿಸಿದರು,

ಕ್ರಿಕೆಟಿಗ ದಿಲೀಪ್ ಜೋಷಿ ಹೃದಯಾಘಾತದಿಂದ ನಿಧನ!

ಬೆಂಗಳೂರು: ಭಾರತದ ಖ್ಯಾತ ಕ್ರಿಕೆಟಿಗ ಮಾಜಿ ಎಡಗೈ ಸ್ಪಿನ್ನರ್ ದಿಲೀಪ್ ಜೋಷಿ(77) ಹೃದಯಾಘಾತದಿಂದ ನಿಧನರಾಗಿದ್ದಾರೆ,
1979 ರಿಂದ 1983 ರವರೆಗೆ 33 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಅವರು ಆಡಿದ್ದರು, ಇವರ ನಿಧನಕ್ಕೆ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸಂತಾಪ ಸೂಚಿಸಿದೆ,
ದಿಲೀಪ್ 32 ನೇ ವಯಸ್ಸಿನಲ್ಲಿ ಟೆಸ್ಟ್ ಗೆ ಪಾದಾರ್ಪಣೇ ಮಾಡಿ 4 ವರ್ಷಗಳಲ್ಲಿ 100 ವಿಕೆಟ್ ಗಳನ್ನು ಪೂರೈಸಿದ ಸಾಧನೆಗೈದಿದ್ದರು, ಅದಾದ ನಂತರ ಕ್ರಿಕೆಟ್ ನಿಂದ ದೂರು ಸರಿದಿದ್ದರು, ತಮ್ಮ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಆತ್ಮಚರಿತ್ರೆಯನ್ನು ಸಹ ಅವರು ಬರೆದಿದ್ದಾರೆ, ಅವರ ಆತ್ಮಚರಿತ್ರೆಯನ್ನು ಸ್ಪಿನ್ ಪಂಚ್ ಎಂದು ಕರೆಯಲಾಗುತ್ತದೆ,

ಮನಸ್ತಾಪ ಯಾಕೆ ಗೊತ್ತಾ – ಕ್ರೇಜಿಸ್ಟಾರ್ ಮನದಾಳ

ನಾದಬ್ರಹ್ಮ ಹಂಸಲೇಖ (Hamsalekha) ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾದ ಘೋಷಣೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಹಂಸಲೇಖ ಅವರ ಆಪ್ತ ಗೆಳೆಯರು, ನಿರ್ದೇಶಕರು ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಆಗಮಿಸಿ ಶುಭಾಶಯ ಕೋರಿದ್ದಾರೆ. ಜೊತೆಗೆ ಹಂಸಲೇಖ ಹಾಗೂ ಕ್ರೇಜಿಸ್ಟಾರ್ ನಡುವಿನ ಸ್ನೇಹ ಹಾಗೂ ಮನಸ್ತಾಪದ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ ನಟ ರವಿಚಂದ್ರನ್. ಹಂಸಲೇಖ ಹುಟ್ಟುಹಬ್ಬದ ವೇದಿಕೆ ಮೇಲೆ ಕ್ರೇಜಿಸ್ಟಾರ್ ಮಾತಾಡಿದ ಮಾತುಗಳು ಕನ್ನಡ ಸಿನಿಮಾ ಅಭಿಮಾನಿಗಳ ಹುಬ್ಬೇರಿಸುವಂತೆ ಮಾಡಿದೆ, ನಮ್ಮಿಬ್ಬರ ಸ್ನೇಹ ದೂರಾಗಿದ್ದಕ್ಕೆ ಕಾರಣವಿಲ್ಲ. ಯಾವತ್ತೂ ಜಗಳ ಮಾಡಿ ದೂರಾಗಲಿಲ್ಲ. ಹೇಗೆ ಸೇರಿದ್ದೇವೋ ಹಾಗೆ ದೂರಾದೆವು. ನಾನು ಪೆನ್ನು ಪೇಪರ್ ಹಿಡಿಬೇಕು ಅಂತಾ ಇತ್ತೋ ಏನೋ ಹೀಗಾಗಿ ನಾವು ದೂರವಾಗಿದ್ದಿರಬಹುದು. ಈಗ ನನ್ನ ಜಾಗಕ್ಕೆ ರಾಜು (ಹಂಸಲೇಖ) ಬಂದಿದ್ದಾರೆ. ನಾನು ಹೃದಯ ಆದ್ರೆ ನೀವು ನಮ್ಮ ಹಾರ್ಟ್ ಬೀಟ್” ಎಂದು ಹಂಸಲೇಖ ಬರ್ತ್ ಡೇ ದಿನ ಕ್ರೇಜಿಸ್ಟಾರ್ ಮನಬಿಚ್ಚಿ ಮಾತಾಡಿದ್ದಾರೆ. ಅದೆಷ್ಟೋ ವರ್ಷಗಳಿಂದ ತಮ್ಮ ಮನಸ್ಸಲ್ಲಿದ್ದ, ಮುಕ್ತವಾಗಿ ಹೇಳಬೇಕೆಂದುಕೊಂಡಿದ್ದ ಮನದಾಳದ ಇಂಗಿತವನ್ನ ತೋಡಿಕೊಂಡಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್ ಸ್ನೇಹ ಹಾಗೂ ಅವರು ಸಪೋರ್ಟ್ ಮಾಡಿದ ಬಗೆಯನ್ನ ಹಂಸಲೇಖ ಎಳೆಎಳೆಯಾಗಿ ವಿವರಿಸಿದರು. ಈಗಲೂ ಕ್ರೇಜಿಸ್ಟಾರ್ 10 ಕೆಜಿ ತೂಕ ಕಡಿಮೆ ಮಾಡಿ ನಿಂತರೆ, ಸ್ಪುರದೃಪಿ ನಟರು. ಅತೀ ಹೆಚ್ಚು ಲೇಡಿ ಅಭಿಮಾನಿಗಳು ಇರುವ ಇರುವ ಏಕೈಕ ನಟ ಅದು ಕ್ರೇಜಿಸ್ಟಾರ್ ಎಂದು ಗುಣಗಾನ ಮಾಡಿದರು. ಅಲ್ಲದೇ ಎಂಜಿ ರೋಡ್ ಕಡೆ ತಿರುಗಿಕೊಂಡಿದ್ದ ಪ್ರೇಕ್ಷಕರನ್ನು ಗಾಂಧಿನಗರಕ್ಕೆ ಕರೆದಕೊಂಡು ಬಂದವರು ರವಿಚಂದ್ರನ್. ನನ್ನ ಜೀವನದ ಫಸ್ಟ್ ಪಾಸಿಟಿವ್ ಪರ್ಸಾನಾಲಿಟಿ ರವಿಚಂದ್ರನ್ ಎಂದು ಕೊಂಡಾಡಿದರು.

ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರ ಬೃಹತ್ ಪ್ರತಿಭಟನೆ

*ಜುಲೈ 7ರಂದು ವಿವಿಧ ಬೇಡಿಕೆಗಳ ಅಗ್ರಹಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಅಧಿಕಾರಿ, ನೌಕರರು ಸಾಮೂಹಿಕ ರಜೆ ಹಾಕಿ, ಬೃಹತ್ ಪ್ರತಿಭಟನೆ*ಬೆಂಗಳೂರು:ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ/ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ಹಲವಾರು ಬಾರಿ ಮನವಿ ಪತ್ರಗಳನ್ನು ನಗರಾಭಿವೃದ್ಧಿ ಸಚಿವರು/ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆ ರವರಿಗೆ ನೀಡಿದರು ಸಹ ಯಾವುದೇ ಸಕರಾತ್ಮಕವಾಗಿ ಸ್ವಂಧಿಸದೆ ಇರುವುದರಿಂದ *ದಿನಾಂಕ : 07-07-2025 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಎಲ್ಲಾ ಮಹಾನಗರ ಪಾಲಿಕೆಯ ಅಧಿಕಾರಿ ನೌಕರರು ಸಾಮೂಹಿಕ ರಜೆ ಹಾಕಿ ಕೆಲಸ ಕಾರ್ಯಗಳನ್ನು ಸ್ಥಗಿತ ಮಾಡಿ ಬೃಹತ್ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ* ಇದರ ಕುರಿತು *ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು* ಮಾಧ್ಯಮಗಳಿಗೆ ಮಾಹಿತಿ ನೀಡಿದರು.

*ರಾಜ್ಯಾಧ್ಯಕ್ಷರಾದ ಎ.ಅಮೃತ್ ರಾಜ್ ರವರು* ಮಾತನಾಡಿ 7ನೇ ವೇತನ ಆಯೋಗದ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರಿಗೆ ವಿಸ್ತರಿಸಿರುವಂತೆ ಮಹಾನಗರ ಪಾಲಿಕೆ ಅಧಿಕಾರಿ ನೌಕರರಿಗೆ ಯಥಾವತ್ತಾಗಿ ಸರ್ಕಾರ ಆರ್ಥಿಕ ಇಲಾಖೆಯಿಂದಲೇ ಅನುಧಾನವನ್ನು ಬಿಡುಗಡೆ ಮಾಡಿ

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆಯನ್ನು ಪ್ರಕಟಿಸಬೇಕು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆ.ಜಿ.ಐ.ಡಿ ಮತ್ತು ಜಿ.ಪಿ.ಎಫ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಲು ಮನವಿ.

ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಆರೋಗ್ಯ ಸೌಲಭ್ಯದ ಜ್ಯೋತಿ/ ಆರೋಗ್ಯ ಸಂಜೀವಿನಿಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು.

ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ಆಯೋಜಿಸುವ ಕ್ರೀಡೆಯನ್ನು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಆಯೋಜಿಸಬೇಕು.

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿ/ನೌಕರರು ಸುಮಾರು ವರ್ಷಗಳಿಂದ ವಿವಿಧ ವೃಂದದ ಹುದ್ದೆಗಳನ್ನು ಮುಂಬಡ್ತಿ ಪಡೆಯಲು ವಂಚಿತರಾಗಿರುವುದರಿಂದ ಕೂಡಲೇ ವೃಂದವಾರು ಮುಂಬಡ್ತಿ ನೀಡಬೇಕು ಎಂದು ಬೃಹತ್ ಪ್ರತಿಭಟನೆಯನ್ನು ಜುಲೈ 7ರಂದು ಸ್ವಾತಂತ್ರ್ಯ ಉದ್ಯಾನವನ(ಫೀಡಂ ಪಾರ್ಕ್)ನಲ್ಲಿ ರಾಜ್ಯದ 10ಮಹಾನಗರ ಪಾಲಿಕೆ ಸಾವಿರಾರು ಅಧಿಕಾರಿ, ನೌಕರರು ಭಾಗವಹಿಸಲಿದ್ದಾರೆ.

ಗೌರವಾಧ್ಯಕ್ಷರಾದ ಎಸ್.ಹೆಚ್.ಗುರುಮೂರ್ತಿ, ರಾಜ್ಯ ಉಪಾಧ್ಯಕ್ಷರುಗಳಾದ ಜಿ.ವೆಂಕಟ್ ರಾಮ್, ವೇಣುಗೋಪಾಲ್ ಬಿ.ಎನ್. ಮತ್ತು ಪ್ರಧಾನ ಕಾರ್ಯದರ್ಶಿ ಟಿ.ಸಿ.ಬಸವರಾಜಯ್ಯ, ಖಜಾಂಚಿ ರುದ್ರೇಶ್ ಬಿ ಹಾಗೂ ರಾಜ್ಯ ಕಾರ್ಯದರ್ಶಿ ಪ್ರಹ್ಲಾದ್ ಕುಲಕರ್ಣಿ, ರಾಜ್ಯ ನಿರ್ದೇಶಕರುಗಳಾದ ಸಾಯಿಶಂಕರ್, ಜಗದೀಶ್ ಎಸ್, ಎ.ಜಿ.ಬಾಬು, ಶ್ರೀನಿವಾಸ್ ಕಟ್ಟಿ, ಬಾಬು ಪಿ, ನರಸಿಂಹ ಕೆ, ಶಾಂತಪ್ಪ ಮುಖೇಶಪ್ಪ ಪತ್ತಾರ, ರವೀಂದ್ರ ಶಿರಶ್ಯಾದ ಮತ್ತು 10ಮಹಾನಗರ ಪಾಲಿಕೆ ಅಧ್ಯಕ್ಷರು, ಪದಾಧಿಕಾರಿಗಳು , ಸದಸ್ಯರುಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

*ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

*ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ದ ಅಲೆ ಇದೆ: ಬಸವರಾಜ ಬೊಮ್ಮಾಯಿ*

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವವನ್ನು ಸಂಪೂರ್ಣ ನಾಶ ಮಾಡಿದೆ. ರೈತರು, ಜನರು, ಪ್ರತಿಪಕ್ಷಗಳು ಪ್ರತಿಭಟನೆ ಮಾಡಿದರೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಇಂದು ಹಾವೇರಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾದ ವಿರೂಪಾಕ್ಷಪ್ಪ ಬಳ್ಳಾರಿಯವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ತೋರಿಸಿರುವ ಉತ್ಸಾಹದಿಂದ ಹೊಸ ಹುಮ್ಮಸ್ಸು ಬಂದಿದೆ. ನಾವೆಲ್ಲರೂ ಅಧಿಕಾರದಲ್ಲಿದ್ದಾಗಲೂ ಪಕ್ಷ ಸಂಘಟನೆ ಮಾಡಿದ್ದೇವೆ‌. ಅಧಿಕಾರ ಇಲ್ಲದಿರುವಾಗಲೂ ಹೋರಾಟ ಮಾಡಿದ್ದೇವೆ. ಈ ಭಾಗದ ಜೀವನದಿಗಳಿಗಾಗಿ ಹೋರಾಟ ಮಾಡಿದ್ದೇವೆ. ಅಧಿಕಾರಕ್ಕೆ ಬಂದಾಗ ಅವೆಲ್ಲ ಕಾರ್ಯ ಮಾಡಿದ್ದೇವೆ. ನಮ್ಮ ನಾಯಕ ಯಡಿಯೂರಪ್ಪ ಅವರು ಹೊರಾಟ ಮಾಡುವುದನ್ನು ಹೇಳಿದ್ದಾರೆ. ನಾವು ಬಡವರ ಪರ, ಜನಪರ ಸರ್ಕಾರವನ್ನು ಇಡೀ ದೇಶವೇ ಮೆಚ್ಚುಮತೆ ಮಾಡಿದ್ದೇವೆ. ನಮ್ಮ ಶಾಕಸರು ಮುಖಂಡರಿಗೆ ಕವಿ ಮಾತು ಹೇಳುತ್ತೇನೆ. ಮುಂದಿನ ಎರಡೂವರೆ ವರ್ಷದಲ್ಲಿ ಪಕ್ಷದ ಗೆಲುವಿಗೆ ಹೇಗೆ ಶ್ರಮಿಸಬೇಕು ಎಂದು ಚಿಂತನೆ ಮಾಡಬೇಕಿದೆ. ಪ್ರತಿದಿನ ಸತ್ಯಾಗ್ರಹ ಮಾಡುವಷ್ಟು ವಿಷಯ ಕಾಂಗ್ರೆಸ್ ವಿಷಯ ಕೊಡುತ್ತಿದೆ. ಐದು ವರ್ಷದ ಕೊನೆಯಲ್ಲಿ ಬರುವ ಪರಿಸ್ಥಿತಿ ಎರಡೇ ವರ್ಷದಲ್ಲಿ ರಾಜ್ಯದಲ್ಲಿ ಬಂದಿದೆ ರಾಜ್ಯದಲ್ಲಿ ಅತ್ಯಂತ ಕೆಟ್ಟ ದುಷ್ಟ ಸರ್ಕಾರ ಇದೆ. ಒಂದೂ ಕೂಡ ಜನಪರ ನಿರ್ಣಯ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ನಮ್ಮ ಕಾಲದಲ್ಲಿ ರೈತರ‌ ಮಕ್ಕಳಿಗೆ ಸಬ್ಸಿಡಿ ಕೊಡುತ್ತಿದ್ದೇವು ಅದನ್ನು ನಿಲ್ಲಿಸಿದ್ದಾರೆ. ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವು ಅದನ್ನು ನಿಲ್ಲಿಸಿದ್ದಾರೆ. ಬಡಮಕ್ಕಳಿಗೆ ವಿಶೇಷವಾಗಿ ಹೆಚ್ಚಿನ ಹಾಸ್ಟೆಲ್ ವ್ಯವಸ್ಥೆ ಮಾಡಿದ್ದೇವು ಅದನ್ನು ಕಡಿತಗೊಳಿಸಿದರು. ಪ್ರಜಾಪ್ರಭುತ್ವವನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸಂಪೂರ್ಣ ನಾಶ ಮಾಡಿದೆ. ರೈತರು, ಜನರು, ಪ್ರತಿಪಕ್ಷಗಳು ಪ್ರತಿಭಟನೆ ಮಾಡಿದರೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ‌. ಐವತ್ತು ವರ್ಷಗಳ ಹಿಂದೆ ಇಂದಿರಾಗಾಂಧಿಯವರು ತುರ್ತು ಪರಿಸ್ಥಿತಿ ಹೇರಿ ಎಲ್ಲರ ಹಕ್ಕುಗಳನ್ನು ಮೊಟಕುಗೊಳಿಸಿದ್ದರು. ಈಗ ಅಘೋಷಿತವಾಗಿ ತುರ್ತುಪರಿಸ್ಥಿತಿ ಇದೆ. ಪೊಲಿಸ್ ಸ್ಟೇಷನ್ ಗಳು ವಸೂಲಿ ಕೇಂದ್ರಗಳಾಗಿವೆ. ಶಾಲಾ ಕಾಲೇಜುಗಳ ಪಕ್ಕದಲ್ಲಿ ಡ್ರಗ್ಸ್ ಗಾಂಜಾ ಮಾರಾಟ ಮಾಡಲಾಗುತ್ತಿದೆ. ನಮ್ಮ ಮಕ್ಕಳ ಭವಿಷ್ಯದ ಹಾಳಾಗುತ್ತಿದೆ. ರಾಜಕೀಯ ಪ್ರೇರಿತ ಪ್ರಕರಣ ದಾಖಲಾಗುತ್ತಿವೆ. ಹಾನಗಲ್ ತಾಲೂಕಿನಲ್ಲಿ ಒಬ್ಬ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು ಅವರನ್ನು ಬೇಲ್ ಮೇಲೆ ಬಿಡುಗಡೆ ಮಾಡಲು ಹುನ್ನಾರ ನಡೆದಿದೆ. ಅದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಒಸಿ ಬರೆಯುವವರನ್ನು, ರೇಪ್ ಮಾಡುವವರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

*ಕಾಂಗ್ರೆಸ್ ‌ಕೊಡುಗೆ ಏನು?*
ಹಾವೇರಿ ಜಿಲ್ಲೆಯಲ್ಲಿ ನಾವು 8 ನೀರಾವರಿ ಯೋಜನೆಗಳನ್ನು ಮಾಡಿದ್ದೇವೆ. ಸಿಎಂ ಇಲ್ಲಿ ಬಂದು ಯಡಿಯೂರಪ್ಪ, ಬೊಮ್ಮಾಯಿ ಕೊಡುಗೆ ಏನು ಎಂದು ಕೇಳುತ್ತಾರೆ. ನಾವು ಮಾಡಿರುವ ಯೋಜನೆಗಳನ್ನು ಉದ್ಘಾಟನೆ ಮಾಡುತ್ತಿದ್ಸಾರೆ. ಹಾವೇರಿ ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು ? ಮೆಡಿಕಲ್ ಕಾಲೇಜ್, ಎಂಜನೀಯರಿಂಗ್ ಕಾಲೇಜ್ , ಕೆಎಂಎಫ್ ಮೆಗಾ ಡೈರಿ, ಎಂಟು ನೀರಾವರಿ ಯೋಜನೆಗಳು ಬಿಜೆಪಿ ಅವಧಿಯಲ್ಲಿ ಆಗಿವೆ. ಯಡಿಯೂರಪ್ಪ ನಮ್ಮ ಅವಧಿಯಲ್ಲಿ ಒಂದೂವರೆ ಲಕ್ಷ ಎಕರೆ ನೀರಾವರಿಯಾಗಿದೆ ಎಂದರು.

*ಕಾಂಗ್ರೆಸ್ ವಿರುದ್ದ ಅಲೆ*
ರಾಜ್ಯದಲ್ಲಿ ಈಗ ಕಾಂಗ್ರೆಸ್ ವಿರುದ್ದ ಅಲೆ ಎದ್ದಿದೆ. ಕಾಂಗ್ರೆಸ್ ಶಾಸಕರೇ ಆರೋಪ ಮಾಡುತ್ತಿದ್ದಾರೆ. ಅವರೇ ರಾಜಿನಾಮೆ ಕೊಡುವ ಮಾತನಾಡುತ್ತಿದ್ದಾರೆ. ಸಚಿವ ಎಚ್. ಕೆ ಪಾಟೀಲರು ಸಂಪುಟದಲ್ಲಿದ್ದರೂ ಬಹಿರಂಗವಾಗಿ ಹೇಳಿದ್ದಾರೆ. ಈಗ ಸಿಎಂ ಏನು ಮಾಡುತ್ತಾರೆ ಹೇಳಬೇಕು. ಭ್ರಷ್ಟಾಚಾರದ ವಿರುದ್ದ ಪಾದಯಾತ್ರೆ ಮಾಡಿದ್ದರು. ಈಗ ಏನು ಮಾಡುತ್ತಾರೆ ಹೇಳಬೇಕು. ಕೇಂದ್ರ ಸರ್ಕಾರ ಗಣಿ ಗುತ್ತಿಗೆ ನೀಡಲು ಪಾರದರ್ಶಕತೆ ತರಲು ಕಾನೂನು ರೂಪಿಸಿದೆ. ಅದು ಜಾರಿಯಾಗುವ ಹಿಂದಿನ ದಿನ ಸಿದ್ದರಾಮಯ್ಯ ಲೈಸೆನ್ಸ್ ನವೀಕರಣ ಮಾಡಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಸಾವಿರಾರು ಕೋಟಿ ನಷ್ಟವಾಗಿದೆ. ಎಚ್.ಕೆ‌. ಪಾಟಿಲರಿಗೆ ಕಳಕಳಿ ಇದ್ದರೆ ಅದನ್ನೂ ತನಿಖೆಗೆ ಕೊಡಿ ಎಂದು ಆಗ್ರಹಿಸಿದರು.
ಬಡವರ ಬಾಳು ದುಸ್ತರವಾಗಿದೆ. ಸಾರಾಯಿ ಬೆಲೆ ಹೆಚ್ಚಳವಾಗಿದೆ. ದುಡಿಯುವ ವರ್ಗ ಕುಡಿಯುವ ಸಾರಾಯಿ ದರ ಹೆಚ್ಚಳ ಮಾಡಿದ್ದಾರೆ. ಶೇ 90 ರಷ್ಟು ಸಾರಾಯಿ ಬಡವರು ಕುಡಿಯುತ್ತಾರೆ. ಅದರ ದರವನ್ನೇ ಹೆಚ್ಚಳ ಮಾಡಿದ್ದಾರೆ. ಬಡವರ ಹೊಟ್ಟೆಗೆ ಹೊಡೆದು ಗ್ಯಾರೆಂಟಿ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ. ಭ್ರಷ್ಟಾಚಾರದ ಮೊತ್ತವನ್ನು ಜನರಿಂದಲೇ ಸಂಗ್ರಹಿಸಿ ಭ್ರಷ್ಟಾಚಾರ ಮಾಡುವ ವ್ಯವಸ್ಥೆ ಕಾಂಗ್ರೆಸ್ ಆರಂಭಿಸಿದೆ. ಉದಾಹರಣೆಗೆ ಎಲೆಕ್ಟ್ರಿಕ್ ಮೀಟರ್ 500ರಿಂದ 900 ರೂಪಾಯಿ ಬೀಳುತ್ತದೆ. ಆದರೆ ಇವರು ಏಳರಿಂದ ಎಂಟುಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ. ಅದರಲ್ಲಿ ಐದಾರು ಸಾವಿರ ರೂ. ದುಡ್ಡು ಹೊಡೆಯುತ್ತಿದ್ದಾರೆ. ಅದನ್ನು ಜನರಿಂದ ಸಂಗ್ರಹಿಸಿ ಮೀಟರ್ ಕಂಪನಿಯವರಿಗೆ ಕೊಟ್ಟು ದುಡ್ಡು ಹೊಡೆಯುತ್ತಿದ್ದಾರೆ. ಹಾಲಿನ ಪ್ರೋತ್ಸಾಹ ಧನ 750 ಕೋಟಿ ರೂ. ಬಾಕಿ ಕೊಡಬೇಕಿದೆ. ಸರ್ಕಾರದ ಬಳಿ ಹಣ ಇಲ್ಲ ಎಂದು ಹಾಲಿನ ದರ ಏರಿಸಿ ಜನರಿಂದ ವಸೂಲಿ ಮಾಡಿದ್ದಾರೆ. ಸ್ಟಾಂಪ್ ಪೇಪರ್ ನೋಂದಣಿ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಬಿಜೆಪಿ ಪ್ರತಿಪಕ್ಷವಾಗಿ ರಾಜ್ಯ ದಿವಾಳಿಯಾಗುವುದನ್ನು ತಪ್ಪಿಸಲು ಹೋರಾಟ ಮಾಡಬೇಕು ಎಂದರು.

*ಪಕ್ಷ ಸಂಘಟನೆ*
ವಿರೂಪಾಕ್ಷಪ್ಪ ಬಳ್ಳಾರಿಯವರು ಅನುಭವಿ ಇದ್ದಾರೆ. ಅರುಣ್ ಕುಮಾರ್ ಪೂಜಾರಿ ಪಕ್ಷವನ್ನು ಸಂಘಟಿಸಿದ್ದಾರೆ ಅದನ್ನು ಮುಂದುವರೆಸಿಕೊಂಡು ಎಲ್ಲರೂ ಸೇರಿ ಪಕ್ಷವನ್ನು ಸಂಘಟಿಸೋಣ. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ನಮ್ಮ ಜೊತೆಗೆ ಬಂದು ಬೆಂಬಲ ಕೊಟ್ಟಿರುವುದಕ್ಕೆ ಧನ್ಯವಾದಗಳು. ಆಶೋಕ ಅವರು ವಿಧಾನಸೌಧದಲ್ಲಿ ಸರ್ಕಾರದ ವಿರುದ್ದ ಧ್ವನಿ ಎತ್ತಲಿ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಜಿಲ್ಲಾ ತಾಲೂಕು ಪಂಚಾಯತಿ ಚುನಾವಣೆಗಳು ನಮಗೆ ವಿಧಾನಸಭೆ ಚುನಾವಣೆಗೆ ಮೆಟ್ಟಿಲು, ಬರುವ ದಿನಗಳಲ್ಲಿ ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಬರುವ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಎಲ್ಲರೂ ಶ್ರಮಿಸೋಣ ಎಂದು ಹೇಳಿದರು.
ಈ ಸಂಧರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ, ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಬಿ.ಸಿ ಪಾಟೀಲ್, ಮಾಜಿ ಶಾಸಕರಾದ ರಾಜುಗೌಡ ನಾಯಕ ಸುರಪುರ, ಶಿವರಾಜ ಸಜ್ಜನ, ಡಿ.ಎಂ ಸಾಲಿ, ಮಾಜಿ ಶಾಸಕರು ಹಾಗೂ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಪೂಜಾರ, ನೂತನ ಜಿಲ್ಲಾ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ವೀರುಪಾಕ್ಷಪ್ಪ ಬಳ್ಳಾರಿ, ಯುವ ಮುಖಂಡರಾದ ಭರತ ಬೊಮ್ಮಾಯಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಶೋಭಾ ನಿಸ್ಸಿಮಗೌಡ್ರ, ನಗರ ಸಭೆಯ ಅಧ್ಯಕ್ಷರಾದ ಶಶಿಕಲಾ ಮಾಳಗಿ, ಮುಖಂಡರುಗಳಾದ ಗವಿಸಿದ್ದಪ್ಪ ದ್ಯಾಮಣ್ಣವರ, ಡಾ. ಬಸವರಾಜ ಕೇಲಗಾರ, ಭೋಜರಾಜ ಕರೂದಿ, ಸಿದ್ದರಾಜ ಕಲಕೋಟಿ, ಮಂಜುನಾಥ ಓಲೇಕಾರ, ಸಂತೋಷಕುಮಾರ ಪಾಟೀಲ್, ಸೇರಿದಂತೆ ಹಲವಾರು ಕಾರ್ಯಕರ್ತರು, ಮುಖಂಡರು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 24.06.2025 ಮಂಗಳವಾರ TUESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 24.06.2025 ಮಂಗಳವಾರ TUESDAY.
ಸಂವತ್ಸರ ವಿಶ್ವಾವಸು
SAMVATSARA : VISHWAVASU.
ಆಯಣ: ಉತ್ತರಾಯಣ
AYANA: UTTARAYANA.
ಋತು: ಗ್ರೀಷ್ಮ
RUTHU: GREESHMA.
ಮಾಸ: ಜೇಷ್ಠ
MAASA: JYESHTHA.
ಪಕ್ಷ: ಕೃಷ್ಣ
PAKSHA: KRISHNA.
ತಿಥಿ: ಚತುರ್ದಶಿ
TITHI: CHATURDASHI
ಶ್ರದ್ದಾತಿಥಿ: ಚತುರ್ದಶಿ
SHRADDHA TITHI: CHATURDASHI.
ವಾಸರ: ಭೌಮವಾಸರ
VAASARA: BHOUMAVAASARA.
ನಕ್ಷತ್ರ: ರೋಹಿಣಿ
NAKSHATRA: ROHINI.
ಯೋಗ: ಶೂಲ
YOGA: SHOOLA.
ಕರಣ: ಭದ್ರ
KARANA: BHADRA.
ಸೂರ್ಯೋದಯ(Sunrise): 05:56
ಸೂರ್ಯಸ್ತ(Sunset): 07:04
ರಾಹುಕಾಲ(RAHU KAALA) : 03:00PM To 04:30PM.
ದಿನವಿಶೇಷ(SPECIAL EVENT’S)
24.06.2025
ಕೃಷ್ಣoಗಾರಕ ಚತುರ್ದಶಿ (ಪಾಪ ಪರಿಹಾರ ಸುವರ್ಣ ನದಿಸ್ನಾನ ದಿಂದ), ಯಮತರ್ಪಣ, ಕತ್ಯಾಯಾನಂಣಂ ಪಿಂಡಪಿತ್ರಯಜ್ಞ.

ಸೋನಲ್- ಪೂರ್ವಿಕಾ ರಂಗಾಭಿವಂದನೆ  

ಬೆಂಗಳೂರಿನ ಮಲ್ಲೇಶ್ವರಂನ ಸೇವಾ ಸದನದಲ್ಲಿ ದಿನಾಂಕ ೨೮-೬-೨೦೨೫ ರಂದು ಸಂಜೆ ೫: ೩೦ಕ್ಕೆ ಕುಮಾರಿ. ಸೋನಲ್ ಮತ್ತು ಕುಮಾರಿ. ಪೂರ್ವಿಕಾ ರಂಗಾಭಿವಂದನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ನೃತ್ಯೋಮ ಅಕಾಡೆಮಿಯ ನಿರ್ದೇಶಕರಾದ ಗುರು ಶ್ರೀಮತಿ ರಾಧಿಕ ಎಂ.ಕೆಸ್ವಾಮಿ ಅವರ ವಿದ್ಯಾರ್ಥಿಗಳು  ನೃತ್ಯ ಪ್ರದರ್ಶನ ನೀಡುತ್ತಿದ್ದಾರೆ, ಎಲ್ಲರಿಗೂ ಸ್ವಾಗತ.

ಈ ಶುಭ ಸಮಾರಂಭವು ಈ ಕೆಳಗಿನ ಗಣ್ಯರ ಉಪಸ್ಥಿತಿಯಿಂದ ಅಲಂಕರಿಸಲ್ಪಡುತ್ತದೆ:

01) ಶ್ರೀ ಎಸ್.ಎ.ಚಿನ್ನೇ ಗೌಡರು. (ಚಲನ ಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರು)
02) ಶ್ರೀ ಎಸ್. ಎ. ಗೋವಿಂದ್ ರಾಜ್. (ಸಿನಿಮಾ ನಿರ್ಮಾಪಕರು)
03) ಶ್ರೀಮತಿ ಲಕ್ಷ್ಮೀ ಗೋವಿಂದ್ ರಾಜ್ (ಡಾ. ರಾಜಕುಮರ್ ರವರ ಮಗಳು)

04)  ಶ್ರೀಮತಿ ಶುಭಾ ಧನಂಜಯ (ಕರ್ನಾಟಕ ನೃತ್ಯ ಸಂಗೀತ ಅಕಾಡೆಮಿಯ ಅಧ್ಯಕ್ಷರು)

05) ಶ್ರೀಮತಿ ಲಲಿತಾ ದ್ವಜನ್ (ಲಲಿತ ಕಲಾ ಸಂಘದ ನಿರ್ದೇಶಕರು)
06) ಶ್ರೀ ಷಣ್ಮುಖ ಗೋವಿಂದ್ ರಾಜ್. ನಾಯಕ ನಟ ಡಾ. ರಾಜ್ ಕುಮಾರ್ ರವರ ಮೊಮ್ಮಗ

ALL ARE WELCOME

ರಾಧಿಕಾ ಎಂ ಕೆ ಸ್ವಾಮಿ 

ನೃತ್ಯೋಮ ಅಕಾಡೆಮಿ ನಿರ್ದೇಶಕಿ.

ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ‌ ರಸ್ತೆ ರಾಜಕಾಲುವೆ ದುರಸ್ತಿ, ಸೂಕ್ತ ನಿರ್ವಹಣೆಗಾಗಿ ಒತ್ತಾಯಿಸಿ ಪ್ರತಿಭಟನೆ

ಬ್ಯಾಟರಾಯನಪುರ : ಕ್ಷೇತ್ರದ ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ‌ ರಸ್ತೆ ರಾಜಕಾಲುವೆ ದುರಸ್ತಿ ಮತ್ತು ಸೂಕ್ತ ನಿರ್ವಹಣೆಗಾಗಿ ಒತ್ತಾಯಿಸಿ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ ನೇತೃತ್ವದಲ್ಲಿ ಸೋಮವಾರ ವಿದ್ಯಾ ನಗರ ಕ್ರಾಸ್ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಎಚ್.ಸಿ.ತಮ್ಮೇಶ್ ಗೌಡ ಮಾತನಾಡಿ ‘ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ ರಸ್ತೆಯಲ್ಲಿನ ರಾಜಕಾಲುವೆ ತೀರಾ ಹದಗೆಟ್ಟ ಸ್ಥಿತಿಯಲ್ಲಿದ್ದು, ಮಳೆ ನೀರು ಸಮರ್ಪಕ ರೀತಿಯಲ್ಲಿ ರಾಜಕಾಲುವೆಯಲ್ಲಿ ಹರಿಯುತ್ತಿಲ್ಲ, ರಾಜಕಾಲುವೆಯಲ್ಲಿ ಕಸ ಕಟ್ಟಿಕೊಂಡು ನೀರಿನ ಹರಿವಿಗೆ ಅಡ್ಡಿಯಾಗುತ್ತಿರುವುದರಿಂದ ಕಾಲುವೆಯಲ್ಲಿ ಹರಿಯಬೇಕಿರುವ ನೀರು ಜನವಸತಿ ಪ್ರದೇಶಗಳಲ್ಲಿ ಹರಿಯುತ್ತಿದೆ. ಮಳೆ ಬಂತೆಂದರೆ ಸಾಕು ದೊಡ್ಡ ಆವಾಂತರ ಸೃಷ್ಟಿಯಾಗಿ, ಜನಸಾಮಾನ್ಯರ ಬದುಕಿನ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಕುರಿತು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆಯ ತೀವ್ರತೆಯನ್ನು ಅರಿತು ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇಂದು ವಿದ್ಯಾ ನಗರ ಕ್ರಾಸ್ ವೃತ್ತದಲ್ಲಿಂದು ಪಕ್ಷದ ಕಾರ್ಯಕರ್ತರೊಟ್ಟಿಗೆ ಪ್ರತಿಭಟನೆ ನಡೆಸುವ ಮೂಲಕ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತರಲಾಗುತ್ತಿದೆ. ಸ್ಥಳೀಯ ಶಾಸಕರು ಸಮಸ್ಯೆಗಳ ವಿರುದ್ಧ ಪ್ರತಿಭಟನೆ ಮಾಡುವವರ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದ್ದು, ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವವರ ವಿರುದ್ಧ ಪೋಲೀಸರನ್ನು ಬಿಟ್ಟು ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸದರಿ ರಾಜಕಾಲುವೆ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯದಿದ್ದರೆ ಮುಂದಿನ ಹೋರಾಟದ ದಿಕ್ಕು ತೀವ್ರವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹುಣಸಮಾರನಹಳ್ಳಿ ಪುರಸಭೆ ಸಿಇಓ ಕಾಂತರಾಜು, ಪ್ರತಿಭಟನಾಕಾರರಿಂದ ಮನವಿಪತ್ರ ಸ್ವೀಕರಿಸಿದ ನಂತರ ಮಾತನಾಡಿ ‘ವಿದ್ಯಾನಗರ ಕ್ರಾಸ್-ಉತ್ತನಹಳ್ಳಿ ರಸ್ತೆ ರಾಜಕಾಲುವೆ ದುರಸ್ತಿಗಾಗಿ ಅಗತ್ಯ ಕ್ರಮ ಕೈಗೊಂಡು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಕಾಂತರಾಜು ಅವರ ಭರವಸೆಯ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರತಿಭಟನೆಯಲ್ಲಿ ಬ್ಯಾಟರಾಯನಪುರ ಗ್ರಾ. ಮಂಡಲ ಬಿಜೆಪಿ ಅಧ್ಯಕ್ಷ ದೊಡ್ಡಜಾಲ ಹನುಮಂತುಗೌಡ, ಪ್ರಧಾನ ಕಾರ್ಯದರ್ಶಿ ಬೇಗೂರು ಮಹೇಶ್, ಶ್ರೀಕಂಠಮೂರ್ತಿ, ತಾ.ಪಂ. ಮಾಜಿ ಸದಸ್ಯ ಬಿ.ನಾಗರಾಜ್ ಬಾಬು, ಬೆಟ್ಟಹಲಸೂರು ಗ್ರಾ.ಪಂ‌.ಮಾಜಿ‌ ಅಧ್ಯಕ್ಷ ಬಿ.ಎಸ್.ಅನಿಲ್ ಕುಮಾರ್, ಗ್ರಾ.ಮಂಡಲ ಯುವ ಮೋರ್ಚಾ ಅಧ್ಯಕ್ಷ ತಿಮ್ಮೇಗೌಡ, ಬ್ಯಾಟರಾಯನಪುರ ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಲೋಹಿತ್ ಗೌಡ, ಬಿಜೆಪಿ ಮುಖಂಡರಾದ ರವಿ, ಶಾಂಭವಿ ರವಿಕುಮಾರ್, ನರೇಂದ್ರ ಬಾಬು, ಮದನ್, ಪ್ರತಾಪ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರಿದ್ದರು.

ಬಯೋ ಸಿಎನ್‍ಜಿ ಪ್ಲಾಂಟ್‍ಗೆ ಕಾರ್ಬನ್ ಕ್ರೆಡಿಟ್ಸ್ ಬಳಕೆ: ಕೃಷಿ ಮಾರುಕಟ್ಟೆ ಸಚಿವರೊಂದಿಗೆ ಕೊಸ್ಯಾಂಬೊ ಅಧಿಕಾರಿ ಚರ್ಚೆ

ತರಕಾರಿ ಮತ್ತು ಇತರ ತ್ಯಾಜ್ಯ ಬಳಕೆ ಮಾಡಿ ಬಯೋ ಸಿಎನ್‍ಜಿ ಪ್ಲಾಂಟ್‍ಗಳ ಸ್ಥಾಪನೆಗೆ ಕೇಂದ್ರ ಸರ್ಕಾರದ ಕಾರ್ಬನ್ ಕ್ರೆಡಿಟ್ಸ್ ಅನುದಾನ ಬಳಕೆ ಬಗ್ಗೆ ದೆಹಲಿಯ ಕೊಸ್ಯಾಂಬೋ ( ಕೌನ್ಸಿಲ್ ಆಫ್ ಸ್ಟೇಟ್ ಅಗ್ರಿಕಲ್ಚರ್ ಮಾರ್ಕೆಟಿಂಗ್ ಡಿಪಾರ್ಟ್‍ಮೆಂಟ್) ವ್ಯವಸ್ಥಾಪಕ ನಿರ್ದೇಶಕ ಡಾ. ಜೆ.ಎಸ್. ಯಾದವ್ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಇಂದು ಭೇಟಿ ಮಾಡಿ ಚರ್ಚಿಸಿದರು.

ರಾಜ್ಯದಲ್ಲಿ ಬೆಂಗಳೂರಿನ ದಾಸನಪುರ, ಮೈಸೂರು ಮತ್ತು ಕೋಲಾರಗಳಲ್ಲಿ ಈಗಾಗಲೇ ಬಯೋ ಸಿಎನ್‍ಜಿ ಪ್ಲಾಂಟ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಡಾ. ಜೆ.ಎಸ್. ಯಾದವ್ ಅವರ ಗಮನಕ್ಕೆ ತಂದರು.

ತರಕಾರಿ ಮತ್ತಿತರ ತ್ಯಾಜ್ಯ ಬಳಸಿ ಬಯೋ ಗ್ಯಾಸ್ ಉತ್ಪಾದನೆ ಮಾಡುವುದರಿಂದ ಪರಿಸರಕ್ಕೆ ವಿಷಕಾರಿ ಅನಿಲ ಸೇರ್ಪಡೆಯಾಗುವುದನ್ನು ತಡೆಗಟ್ಟಬಹುದು. ಘನ ತ್ಯಾಜ್ಯ ನಿರ್ವಹಣೆ ಕಾಯ್ದೆಗೆ ಕೇಂದ್ರ ಸರ್ಕಾರ ಅಕ್ಟೋಬರ್‍ನಲ್ಲಿ ತಿದ್ದುಪಡಿ ತರಲಿದ್ದು, ಈ ಮೂಲಕ ಲಭ್ಯವಾಗುವ ನೆರವನ್ನು ಬಳಕೆ ಮಾಡಿಕೊಂಡು ಎಪಿಎಂಸಿಗಳಲ್ಲಿ ಬಯೋ ಗ್ಯಾಸ್ ಪ್ಲಾಂಟ್‍ಗಳನ್ನು ನಿರ್ಮಾಣ ಮಾಡುವುದು ಸೂಕ್ತ ಎಂದು ಡಾ. ಜೆ.ಎಸ್. ಯಾದವ್ ಸಲಹೆ ಮಾಡಿದರು.

ಪ್ರತಿದಿನ 50 ಟನ್ ಉತ್ಪಾದನೆ ಮಾಡಿದರೆ ಮಾತ್ರ ಈ ಯೋಜನೆ ಲಾಭದಾಯಕವಾಗಲಿದೆ. ಇದು ಲಾಭದಾಯಕ ಎಂದಾಗ ಮಾತ್ರ ಖಾಸಗಿಯವರೂ ಬಯೋ ಗ್ಯಾಸ್ ಪ್ಲಾಂಟ್ ನಿರ್ಮಿಸಲು ಮುಂದೆ ಬರುತ್ತಾರೆ. ರಾಜ್ಯದ ಯಾವ ಯಾವ ಎಪಿಎಂಸಿಗಳಲ್ಲಿ ಪ್ರತಿದಿನ ಎಷ್ಟು ತ್ಯಾಜ್ಯ ಉತ್ಪಾದನೆಯಾಗುತ್ತದೆ. ಎಲ್ಲೆಲ್ಲಿ ಬಯೋಗ್ಯಾಸ್ ಪ್ಲಾಂಟ್ ನಿರ್ಮಿಸಿದರೆ ಲಾಭದಾಯಕ ಎಂಬುದನ್ನು ಗುರುತಿಸಿ ಯೋಜನೆ ರೂಪಿಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಯಿತು.

ಅತಿ ಹೆಚ್ಚು ತ್ಯಾಜ್ಯ ಉತ್ಪಾದನೆಯಾಗುವ ಬೆಂಗಳೂರು, ಮೈಸೂರು ಮತ್ತು ಕೋಲಾರಗಳಲ್ಲಿ ಸ್ಥಾಪನೆ ಮಾಡುವುದು ಸೂಕ್ತ ಎಂಬ ಸಲಹೆ ವ್ಯಕ್ತವಾಯಿತು.

ಹಣ್ಣುಗಳ ಪ್ಯಾಕಿಂಗ್ ಮಾಡಲು ಹಾನಿಕಾರಕ ರಾಸಾಯನಿಕ ಬಳಕೆ, ಸೇಬು ಸೇರಿದಂತೆ ಇತರ ಹಲವು ಹಣ್ಣುಗಳ ಬ್ರಾಂಡ್‍ಗಳನ್ನು ಗುರುತಿಸಲು ಅವುಗಳ ಮೇಲೆ ಸ್ಟಿಕ್ಕರ್‍ಗಳನ್ನು ಹಚ್ಚುವುದು ಅಪಾಯಕಾರಿ. ಇಂತಹ ಹಣ್ಣುಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು, ಈ ಬಗ್ಗೆ ವರ್ತಕರಲ್ಲಿ ಜಾಗೃತಿ ಮೂಡಿಸಬೇಕು ಎಂಬ ಬಗ್ಗೆ ಕೂಡ ಚರ್ಚೆ ನಡೆಯಿತು.

ಆಹಾರ ಸುರಕ್ಷತೆ ಕಾಯ್ದೆಯಲ್ಲಿ ಈ ಎಲ್ಲ ಅಂಶಗಳು ಬರುತ್ತವೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಅಂಶಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ. ಈ ನಿಯಮಗಳನ್ನು ಪಾಲನೆ ಮಾಡಲು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಕಲ್ಲಂಗಡಿ, ಬೆಂಡೆಕಾಯಿ, ಕ್ಯಾರೆಟ್ ಸೇರಿದಂತೆ ಕೆಲವು ಹಣ್ಣು, ತರಕಾರಿಗಳಿಗೆ ಕೃತಕ ಬಣ್ಣ ಬಳಕೆ ಮಾಡಲಾಗುತ್ತಿದೆ. ಗರಿಷ್ಠ ಪ್ರಮಾಣದಲ್ಲಿ ಕೀಟನಾಶಕ ಬಳಸುವುದೂ ಕೂಡ ಅಪಾಯಕಾರಿ. ಆದ್ದರಿಂದ ತರಕಾರಿಗೆ ಕೃತಕ ಬಣ್ಣ ಬಳಕೆ ಮತ್ತು ಸಾಧ್ಯವಾದಷ್ಟು ಕಡಿಮೆ ಪ್ರಮಾಣದಲ್ಲಿ ಕೀಟನಾಶಕ ಬಳಸುವ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಇಲ್ಲವಾದರೆ ಭವಿಷ್ಯದ ದಿನಗಳಲ್ಲಿ ಆರೋಗ್ಯದ ಮೇಲೆ ಗರಿಷ್ಠ ಪ್ರಮಾಣದಲ್ಲಿ ದುಷ್ಪರಿಣಾಮ ಬೀರಲಿದೆ ಎನ್ನುವ ಅಂಶಗಳ ಬಗ್ಗೆ ಕೂಡ ಚರ್ಚೆ ನಡೆಯಿತು.

ತೋಟಗಾರಿಕೆ ಮತ್ತು ಹೈನುಗಾರಿಕೆ ಉದ್ಯಮದಲ್ಲಿ ಕರ್ನಾಟಕ ರಾಜ್ಯ ಮಂಚೂಣಿಯಲ್ಲಿದೆ ಎಂದು ಸಚಿವ ಶಿವಾನಂದ ಪಾಟೀಲ ಅವರು ಜೆ.ಎಸ್.ಯಾದವ್ ಅವರ ಗಮನಕ್ಕೆ ತಂದರು.

ಈ ಸಮಯದಲ್ಲಿ ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕ ಶಿವಾನಂದ ಕಾಪಸೆ, ಅಧೀಕ್ಷಕ ಅಭಿಯಂತರ ರಘುನಂದನ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ರವಿಪ್ರಕಾಶ್, ಕರ್ನಾಟಕ ಕೃಷಿ ಮಾರಾಟ ಮಹಾ ಮಂಡಳದ ಮುಖ್ಯ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ್ ಪಾಟೀಲ ಉಪಸ್ಥಿತರಿದ್ದರು.