South Australia Governor Hon’ble Frances Adamson AC paid a courtesy visit to Karnataka Governor Gehlot
ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ ಶಿಬಿರ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಿರುವ ಕೆ-ಸೆಟ್ ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸುವ ಯುಜಿಸಿ-ನೆಟ್ ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆ.ಆರ್.ಎಫ್) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು 2025 ರ ಜೂನ್ 30 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‍ಸೈಟ್ www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದಾಗಿದೆ ಕರಾಮುವಿ ಕುಲಸಚಿವÀರಾದ ಪ್ರೊ. ನವೀನ್‍ಕುಮಾರ್ ಎಸ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 33ನೇ ಯುವ ಸಂಘಟನೆ ಆಯೋಜನೆ
ಶಿಬಿರದ ಶುಲ್ಕ ರೂ. 2,500/- ಪಾವತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು 2025 ನೇ ಜೂನ್ 28ರ ಸಂಜೆ 4:00 ಗಂಟೆಯೊಳಗಾಗಿ ಸಲ್ಲಿಸುವುದು. ಶಿಬಿರಕ್ಕೆ ಹಾಜರಾಗಲು ಆಯ್ಕೆಯಾದ ಸದಸ್ಯರಿಗೆ ಇ-ಮೇಲ್ ಮೂಲಕ ಸೂಚನೆ ಮತ್ತು ಹೆಚ್ಚಿನ ವಿವರಗಳನ್ನು ಕಳುಹಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೃಗಾಲಯದ ವೆಬ್‍ಸೈಟ್ www.mysuruzoo.info ಅಥವಾ ಇ-ಮೇಲ್ edumysore99@gmail.com ಗೆ ಸಂಪರ್ಕಿಸಬಹುದು ಎಂದು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರ ನೇಮಕಾತಿ ಪ್ರಕಟ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ನಿಯಮಗಳಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಜೂನ್ 18 ರಂದು ಕಾಲೇಜು ಶಿಕ್ಷಣ ಇಲಾಖೆಯ ವೆಬ್‍ಸೈಟ್ https://dce.karnataka.gov.in ನಲ್ಲಿ ಪ್ರಕಟಿಸಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ನಿಯಮಗಳಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿತ್ತು.
ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳು ವಿದ್ಯಾರ್ಹತೆ, ಮೀಸಲಾತಿಗಳಿಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ದಾಖಲೆಗಳನ್ನು ಪ್ರಾಂಶುಪಾಲರ ನೇಮಕಾತಿ ವಿಶೇಷ ನಿಯಮಗಳು, 2020ರ ನಿಯಮ 3(1)ರಲ್ಲಿ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯನ್ವಯ ಪರಿಶೀಲಿಸಿ, ಶೈಕ್ಷಣಿಕವಾಗಿ ಅರ್ಹರಾಗಿರುವ ಹಾಗೂ ಅನರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ವೆಬ್‍ಸೈಟ್ https://dce.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.
ಸಂಬಂಧಪಟ್ಟ ಅಭ್ಯರ್ಥಿಗಳು ಸದರಿ ಪಟ್ಟಿಗಳಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅಂತಹ ಆಕ್ಷೇಪಣೆಗಳನ್ನು ಇ-ಮೇಲ್ ವಿಳಾಸ dceprincipals@gmail.com ಮೂಲಕ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕಾಲೇಜು ಮತ್ತು ತಾಂತ್ರಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆನರಾ ಬ್ಯಾಂಕ್‍ನಿಂದ ಉಚಿತ ಕಂಪ್ಯೂಟರ್ ಶಿಕ್ಷಣ
ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಪಿಯುಸಿ, ಡಿಗ್ರಿ, ಡಿಪೆÇ್ಲಮಾ ಹೊಂದಿದವವರಿಗೆ ಆದ್ಯತೆ ನೀಡಲಾಗುವುದು ಮತ್ತು ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ / ವರ್ಗದವರಿಗೆ ಗರಿಷ್ಟ ವಯಸ್ಸು 35 ನಿಗದಿಪಡಿಸಲಾಗಿದೆ.
ತರಬೇತಿಗೆ ಸೇರ ಬಯಸುವವರು ನೇರ ಸಂದರ್ಶನಕ್ಕೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ಹಾಜರಾಗಬೇಕು. ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನಗಳು ನಡೆಯಲ್ಲಿದ್ದು, ಅರ್ಜಿ ಫಾರಂಗಳನ್ನು ಪರೀಕ್ಷೆಗೆ ಹಾಜರಾಗುವ ಸಂದರ್ಭದಲ್ಲಿ ಪಡೆಯಬಹುದಾಗಿದೆ. ತರಬೇತಿ ಅವಧಿಯು ಮೂರು ತಿಂಗಳಾಗಿದ್ದು, ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ನಡೆಯಲಿದೆ. ತರಬೇತಿ ಅವಧಿಯಲ್ಲಿ ಮಧ್ಯಾಹ್ನದ ಉಪಹಾರ ನೀಡಲಾಗವುದು.
ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಪ್ರವಾಸ
ಬೆಂಗಳೂರು ಜೂನ್ 23, (ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರು ಜೂನ್ 26 ರಂದು ಪ್ರವಾಸ ಕೈಗೊಂಡು ಜೂನ್ 27 ರಂದು ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿರುವ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅಂದೇ ಕೇಂದ್ರಸ್ಥಾನಕ್ಕೆ ವಾಪಸ್ಸಾಗಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಂದಿ ಗಿರಿಧಾಮದ ಮಯೂರ ಸಭಾಂಗಣದ ಸಂಪುಟ ಸಭೆ: ಮಾಧ್ಯಮ ಪ್ರತಿನಿಧಿಗಳು ನೋಂದಾಯಿಸಿಕೊಳ್ಳಲು ಮನವಿ
ಚಿಕ್ಕಬಳ್ಳಾಪುರ ಜಿಲ್ಲೆಯ, ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದ ಮಯೂರ ಸಭಾಂಗಣದಲ್ಲಿ ದಿನಾಂಕ: 02-07- 2025 ರಂದು 14ನೇ ಸಂಪುಟ ಸಭೆಯನ್ನು ಕರೆಯಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದ್ದು, ಈಗಾಗಲೇ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಮಯೂರ ಸಭಾಂಗಣದಲ್ಲಿ ಕರೆಯಲಾಗಿದ್ದ 13ನೇ ಸಚಿವ ಸಂಪುಟ ಸಭೆಯ ಪತ್ರಿಕಾ ಗೋಷ್ಠಿಗೆ ನೋಂದಾಯಿಸಿಕೊಂಡಿರುವ ಮಾಧ್ಯಮ ಪ್ರತಿನಿಧಿಗಳನ್ನೇ 14ನೇ ಪತ್ರಿಕಾ ಗೋಷ್ಠಿಗೆ ಪರಿಗಣಿಸಲಾಗಿದೆ ಹಾಗೂ ಸದರಿ ಮಾಧ್ಯಮ ಪ್ರತಿನಿಧಿಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಡಳಿತ ವತಿಯಿಂದ ಅಗತ್ಯ ಪಾಸುಗಳನ್ನು ನೀಡಲಾಗುವುದು.
ಈಗಾಗಲೇ ನೋಂದಾಯಿಸಿ ಕೊಂಡಿರುವವರನ್ನು ಹೊರತುಪಡಿಸಿ ಬೇರೆ ಯಾರಾದರೂ ಮಾಧ್ಯಮ ಪ್ರತಿನಿಧಿಗಳು ನೋಂದಾಯಿಸಿಕೊಳ್ಳಲು ಬಯಸಿದಲ್ಲಿ ಮಾತ್ರ:
ಬೆಂಗಳೂರು ಜಿಲ್ಲೆಯ ಮಾಧ್ಯಮ ಮಾನ್ಯತೆ ಹೊಂದಿರುವ ರಾಜ್ಯ ಮಟ್ಟದ ಪತ್ರಿಕೆಗಳ (ಇಬ್ಬರು ವರದಿಗಾರ ಹಾಗೂ ಓರ್ವ ಛಾಯಾಗ್ರಾಹಕ ಮಾತ್ರ) ಮತ್ತು ವಿದ್ಯುನ್ಮಾನ ಮಾಧ್ಯಮದ (ಇಬ್ಬರು ವರದಿಗಾರರು ಹಾಗೂ ಇಬ್ಬರು ವಿಡಿಯೋಗ್ರಾಹಕರು ಮಾತ್ರ) ಮಾಧ್ಯಮ ಪ್ರತಿನಿಧಿಗಳ ಹೆಸರು, ಪದನಾಮ, ಮೊಬೈಲ್ ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸದೊಂದಿಗೆ ಇತ್ತೀಚಿನ 2 ಭಾವಚಿತ್ರಗಳನ್ನು ಒಳಗೊಂಡಂತೆ ಕಡ್ಡಾಯವಾಗಿ ತಮ್ಮ ಸಂಸ್ಥೆಯ ಶಿಫಾರಸ್ಸು ಪತ್ರದೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ತಮ್ಮ ಸಂಸ್ಥೆಯ ಮಾಧ್ಯಮ ಪ್ರತಿನಿಧಿಗಳ ಮೂಲಕ, ಶ್ರೀ ಎಂ. ಜುಂಜಣ್ಣ, ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ ಇವರಿಗೆ ದಿನಾಂಕ: 26-06-2025ರ ಮಧ್ಯಾಹ್ನ 3.00 ಗಂಟೆಗೆ ಒಳಗಾಗಿ ತಲುಪಿಸುವುದು.
ಪತ್ರಿಕಾಗೋಷ್ಠಿಯ ಹಾಲ್ ಗೆ ರಾಜ್ಯಮಟ್ಟದ ಪತ್ರಿಕೆಗಳಿಗೆ ಓರ್ವ ವರದಿಗಾರ ಮತ್ತು ಛಾಯಾಗ್ರಾಹಕ, ಸುದ್ದಿವಾಹಿನಿಗಳಿಗೆ ಓರ್ವ ವರದಿಗಾರ ಮತ್ತು ಕ್ಯಾಮೆರಾಮ್ಯಾನ್ ಗೆ ಮಾತ್ರ ಅವಕಾಶವಿರುವುದರಿಂದ ಶಿಫಾರಸ್ಸು ಪತ್ರದಲ್ಲಿ ಯಾರನ್ನು ಪತ್ರಿಕಾಗೋಷ್ಠಿ ವರದಿಗಾರಿಕೆಗೆ ನಿಯೋಜಿಸಲಾಗಿದೆ ಎಂಬುದನ್ನು ನಮೂದಿಸುವುದು.
ಉಳಿದಂತೆ ರಾಷ್ಟ್ರ ಮಟ್ಟದ ಪತ್ರಿಕೆಗಳು ಹಾಗೂ ವಿದ್ಯುನ್ಮಾನ ಮಾಧ್ಯಮ ಪ್ರತಿನಿಧಿಗಳು ಮಾತ್ರ ಹೆಸರು, ಪದನಾಮ, ಮೊಬೈಲ್ ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸದೊಂದಿಗೆ ಇತ್ತೀಚಿನ 2 ಭಾವಚಿತ್ರಗಳನ್ನು ಒಳಗೊಂಡಂತೆ ಕಡ್ಡಾಯವಾಗಿ ತಮ್ಮ ಸಂಸ್ಥೆಯ ಶಿಫಾರಸ್ಸು ಪತ್ರದೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿರುವ ಸುದ್ದಿ ಮತ್ತು ಪತ್ರಿಕಾ ಶಾಖೆಗೆ ದಿನಾಂಕ 26-06-2025 ರ ಮಧ್ಯಾಹ್ನ 3.00 ಗಂಟೆಯ ಒಳಗಾಗಿ ತಲುಪಿಸುವುದು.
ವಿಶೇಷ ಸೂಚನೆ :
1. ಮಾಧ್ಯಮ ಪಟ್ಟಿಯಲ್ಲಿ ಇರುವ ಮಾಧ್ಯಮ ಪ್ರತಿನಿಧಿಗಳು ಅಗತ್ಯ ದಾಖಲೆ ಮತ್ತು ಮಾಹಿತಿಯೊಂದಿಗೆ ನೇರವಾಗಿ ಶ್ರೀ ಎಂ. ಜುಂಜಣ್ಣ, ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ಇವರಿಗೆ ಸಲ್ಲಿಸುವುದು. ಶ್ರೀಯುತರ ಮೊಬೈಲ್ ದೂರವಾಣಿ ಸಂಖ್ಯೆ: 094808 41224
2. ಅಪೂರ್ಣ ಮಾಹಿತಿ, ಶಿಫಾರಸ್ಸು ಪತ್ರ ಸಲ್ಲಿಸದಿದ್ದಲ್ಲಿ ಪರಿಗಣಿಸಲು ಸಾಧ್ಯವಿಲ್ಲ.
3. ನಿಗದಿತ ದಿನಾಂಕ ಹಾಗೂ ಅವಧಿಯ ನಂತರ ಸಲ್ಲಿಸುವ ಮಾಹಿತಿಯನ್ನು ಪರಿಗಣಿಸಲಾಗುವುದಿಲ್ಲ.
4.ಪಾಸುಗಳನ್ನು ಸಹಾಯಕ ನಿರ್ದೇಶಕರು, ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ಕಛೇರಿಯಲ್ಲಿ ನೀಡಲಾಗುವುದು.
ಸಂತಸದಿಂದಿರುವುದು ಕೂಡ ಯೋಗ: ಯೋಗ ಗುರೂಜಿ ಕೆ. ಎ. ಶಂಕರ್
ಎಪಿಎಸ್ ಶಿಕ್ಷಣ ಸಂಸ್ಥೆಗಳಿಂದ ಸೋಮನಹಳ್ಳಿಯ ಅನಂತ ಜ್ಙಾನ ಗ್ನಾನ ಗಂಗೋತ್ರಿ ಕ್ಯಾಂಪಸ್ನಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬರೂ ಜೀವನದಲ್ಲಿ ಯೋಗದ ಮಹತ್ವ ಅರಿತು, ಪ್ರತಿನಿತ್ಯ ಯೋಗಾಸನ ಮಾಡಬೇಕು. ಇದರಿಂದ ಮಾನಸಿಕ, ದೈಹಿಕ ಆರೋಗ್ಯ ಸುಧಾರಿಸಲಿದೆ ಎಂದರು.
ಎಪಿಎಸ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ವಿಶ್ಣು ಭರತ್ ಆಲಂಪಲ್ಲಿ ಮಾತನಾಡಿ, ಶೈಕ್ಷಣಿಕ ಶ್ರೇಷ್ಠತೆಯ ಜೊತೆಗೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಯೋಗದಂತಹ ಸಾಂಪ್ರದಾಯಿಕ ಅಭ್ಯಾಸಗಳಲ್ಲಿ ಭಾಗವಹಿಸಲು ನಮ್ಮ ಸಂಸ್ಥೆಯಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ. ಅಂತರಾಷ್ಟ್ರೀಯ ಯೋಗ ದಿನದ ಆಚರಣೆಯಿಂದ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಪೋಷಿಸಲಿವೆ. ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನ ನಡೆಸಲು ಅಗತ್ಯವಿರುವ ಸಾಧನಗಳನ್ನು ಒದಗಿಸುವ ಗುರಿ ಹೊಂದಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನದಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರೊ. ಎ. ಪ್ರಕಾಶ್, ಟ್ರಸ್ಟಿ ಎ. ರಾಮಪ್ರಸಾದ್ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.
*ಬಂಡಿದೇವರ ಉತ್ಸವದ ಮೂಲಕ ಗತ ಪರಂಪರೆಗೆ ಮತ್ತೇ ಸಾಕ್ಷಿಯಾಗಲಿದೆ ಬೆಂಗಳೂರು*
ಬುಕರ್ ಪ್ರಶಸ್ತಿ ಪುರಸ್ಕೃತ ಬಾನುಮುಷ್ತಾಕ್ ರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ
ಹಾಸನ: ಅಂತಾರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರ ಎದೆಯ ಹಣತೆ ಕಥೆಯನ್ನು ಆಧರಿಸಿದ ನಾಟಕ ಪ್ರದರ್ಶನವನ್ನು ಜುಲೈ 11ರಂದು ಹಾಸನದ ಕಲಾಭವನದಲ್ಲಿ ಹಾಸನದ ರಂಗಸಿರಿ ಕಲಾ ತಂಡ ಆಯೋಜಿಸಿದೆ.
ನೀನಾಸಮ್ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲ ಡಾ.ಎಂ.ಗಣೇಶ್ ಹೆಗ್ಗೋಡು ನಿರ್ದೇಶನ ಮಾಡಿರುವ ಈ ನಾಟಕವನ್ನು ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯದ ನೇತೃತ್ವದಲ್ಲಿ ಜನಮನದಾಟ ರಂಗ ತಂಡ ಅಭಿನಯಿಸಲಿದೆ.
ನೂತನ ಜಿಲ್ಲಾಧಿಕಾರಿ ಲತಾಕುಮಾರಿ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ರಂಗಸಿರಿ ಗೌರವಾಧ್ಯಕ್ಷ ಶಿವಾನಂದ ತಗಡೂರು ಅವರು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರುಗಳಾದ ಕೆ.ಆರ್.ಮಂಜುನಾಥ್, ಬಿ.ಆರ್.ಉದಯ ಕುಮಾರ್, ರವಿ ನಾಕಲಗೂಡು, ಹಿರಿಯ ಪತ್ರಕರ್ತರಾದ ಜಿ.ಪ್ರಕಾಶ್, ವಿಜಯಕುಮಾರ್, ರಂಗಸಿರಿ ಕಾರ್ಯದರ್ಶಿ ಪಿ.ಶಾಡ್ರಾಕ್, ಸುರೇಶ್ ಇದ್ದರು
