Home Blog Page 78

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಕಾರ್ಯಾಚರಣೆ

ಬೆಂಗಳೂರು : ಇದೇ ದಿನಾಂಕ 16ರಂದು ಸಿ.ಸಿ.ಬಿ ಯ ಅಧಿಕಾರಿ ಮತ್ತು ಸಿಬ್ಬಂದಿಯವರು ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಂಡು, ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ, ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ತಂಗುವ ಬ್ಯಾರಕ್‌ಗಳಲ್ಲಿ ಶೋಧನಾ ಕಾರ್ಯವನ್ನು ಕೈಗೊಳ್ಳಲಾಯಿತು.

ಈ ಶೋಧನಾ ಕಾಲದಲ್ಲಿ ಬ್ಯಾರಕ್‌ಗಳಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ವಸ್ತುಗಳಾದ, ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳಾದ ಚೈನಿ, ಸ್ವಾಗತ್ ಗೋಲ್ಡ್, ಗಾಂಜಾ ಸೇದಲು ಉಪಯೋಗಿಸುವ ಕೊಳವೆಗಳು, ಹರಿತವಾದ ಚಾಕು ರೀತ್ಯಾ ಅಯುಧಗಳು ಅಲ್ಲದೆ ಇಬ್ಬರು ಕೈದಿಗಳ ವಶದಲ್ಲಿದ್ದ ಒಟ್ಟು ರೂ. 16,180 ನಗದನ್ನು ವಶಪಡಿಸಿಕೊಳ್ಳಲಾಯಿತು.
ಈ ಸಂಬAಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಡ್ರಗ್ಸ್ ಸರಬರಾಜು : ಓರ್ವ ವಿದೇಶಿ ಡ್ರಗ್ ಪೆಡ್ಲರ್ 1.2 ಕೋಟಿ. ಮೌಲ್ಯದ ಎಂ.ಡಿ.ಎಂ.ಎ ಕ್ರಿಸ್ಟಲ್ ವಶ

 

ದಿನಾಂಕ:12ರ0ದು ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಬಾತ್ಮೀಧಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಬೆಂಗಳೂರು ನಗರದ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೆ.ದೊಮ್ಮಸಂದ್ರ ಗ್ರಾಮದ ಮನೆಯೊಂದರಲ್ಲಿ ವಾಸವಿರುವ ವಿದೇಶಿ ಪ್ರಜೆಯೊರ್ವನು ನಿಷೇದಿತ ಮಾಧಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ.
ಈ ಮಾಹಿತಿ ಆಧಾರದ ಮೇರೆಗೆ ಸಿಸಿಬಿ ಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರು ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ, ನಂತರ ಸಿಸಿಬಿ ಯ ಅಧಿಕಾರಿಗಳು ಮತ್ತು ಅವಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಜಂಟಿಯಾಗಿ ಬಾತ್ಮೀಧಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ನಡೆಸಿ, ಓರ್ವ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆಯಲಾಯಿತು. ಆತನ ವಶದಲ್ಲಿದ್ದ 600 ಗ್ರಾಂ ನಿಷೇದಿತ ಮಾಧಕ ವಸ್ತುವಾದ ಬಿಳಿ ಬಣ್ಣದ ಎಂ.ಡಿ.ಎಂ.ಎ ಕ್ರಿಸ್ಟಲ್‌ಗಳನ್ನು ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಒಟ್ಟು ಮೌಲ್ಯ 1,20,00,000/-(ಒಂದು ಕೋಟಿ ಇಪ್ಪತ್ತು ಲಕ್ಷ ರೂಪಾಯಿ) ಎನ್ನಲಾಗಿದೆ.
ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 3 ದಿನಗಳ ಕಾಲ ಪೊಲೀಸ್ ಆಭಿರಕ್ಷೆಗೆ ಪಡೆಯಲಾಯಿತು. ಆರೋಪಿಯನ್ನು ಪ್ರಶ್ನಿಸಲಾಗಿ, ಆತನು ಪರಿಚಯವಿಲ್ಲದವರಿಂದ ಕಡಿಮೆ ಬೆಲೆಗೆ ನಿಷೇದಿತ ಮಾಧಕ ವಸ್ತುವಾದ ಬಿಳಿ ಬಣ್ಣದ ಎಂ.ಡಿ.ಎಂ.ಎ ಕ್ರಿಸ್ಟಲ್‌ಗಳನ್ನು ಖರೀದಿಸಿದ್ದು, ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಕ್ರಮವಾಗಿ ಲಾಭವನ್ನು ಗಳಿಸುತ್ತಿದ್ದುದ್ದಾಗಿ ತಿಳಿಸಿರುತ್ತಾನೆ.
ದಿನಾಂಕ 16ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ, ಸಿಬ್ಬಂದಿಗಳು ಹಾಗೂ ಅವಲಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

ಇಬ್ಬರು ವಿದೇಶಿ ವ್ಯಕ್ತಿಗಳು ವಶಕ್ಕೆ, ಮಾದಕ ದ್ರವ್ಯ ನಿಗ್ರಹ ದಳ ಕಾರ್ಯಾಚರಣೆ

ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ & ಸಿಬ್ಬಂದಿಗಳು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ವಿದೇಶಿ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ಇಬ್ಬರ ವಿದೇಶಿ ಪ್ರಜೆಗಳ ಪೈಕಿ ಓರ್ವ ಆರೋಪಿಯ ವಿರುದ್ಧ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಒಂದು ಪ್ರಕರಣ ಸೇರಿದಂತೆ, ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಮತ್ತೊರ್ವ ಆರೋಪಿತೆಯ ವಿರುದ್ಧ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ. ಅಲ್ಲದೆ ತಲೆಮರೆಸಿಕೊಂಡಿದ್ದ ಇತರೆ ಮೂವರು ವಿದೇಶಿ ಪ್ರಜೆಗಳನ್ನು ಸಹ ಪತ್ತೆ ಮಾಡಿ, ಸಂಬAಧಪಟ್ಟ ಠಾಣೆಗಳಿಗೆ ಮುಂದಿನ ಕಾನೂನು ಕ್ರಮಕ್ಕಾಗಿ ಒಪ್ಪಿಸಲಾಗಿದೆ.

ಕಾರ್ಯಾಚರಣೆಯನ್ನು ಮುಂದುವರೆಸಿ, ನಾಲ್ವರು ವಿದೇಶಿ ಪ್ರಜೆಗಳು ಯಾವುದೇ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ, ಭಾರತದಲ್ಲೆ ಅಕ್ರಮವಾಗಿ ವಾಸವಾಗಿರುವರೆಂದು, ಅವರುಗಳನ್ನು ವಿದೇಶಿ ಬಂಧನದ ಕೇಂದ್ರಕ್ಕೆ (Detention Centre) ಕಳುಹಿಸಲಾಗಿದೆ.

ಇಬ್ಬರು ವಿದೇಶಿ ಪ್ರಜೆಗಳು ವೀಸಾ ಅವಧಿ ಮುಗಿದಿದ್ದರು, ಅಕ್ರಮವಾಗಿ ಬೆಂಗಳೂರು ನಗರದಲ್ಲಿ ನೆಲಸಿದ್ದರಿಂದ, ಅವರುಗಳನ್ನು ದೇಶದಿಂದ ಗಡೀಪಾರು (Deportation) ಮಾಡಲು ಎಫ್.ಆರ್.ಆರ್.ಓ ರವರ ಮುಂದೆ ಮುಂದಿನ ಕಾನೂನು ಕ್ರಮಕ್ಕಾಗಿ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

ಮದ್ಯ ಸೇವಿಸಿ, ಶಾಲಾ ವಾಹನ ಚಾಲನೆ: ಚಾಲಕರುಗಳ ವಿರುದ್ಧ ವಿಶೇಷ ಕಾರ್ಯಾಚರಣೆ.

 

ಬೆಂಗಳೂರು ನಗರದ ಸಂಚಾರ ಪೊಲೀಸರು ನಗರದ ವಿವಿಧ ಶಾಲಾ ಮಕ್ಕಳುಗಳನ್ನು ಶಾಲೆಗೆ ಕರೆತರುವ ವಾಹನಗಳ ಚಾಲಕರುಗಳ ವಿರುದ್ಧ ದಿನಾಂಕ:16/06/2025 ರಂದು ಬೆಳಿಗ್ಗೆ 7.00 ರಿಂದ ಬೆಳಿಗ್ಗೆ 10.00 ಗಂಟೆಯ ನಡುವೆ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ.

ಈ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 4,559 ಶಾಲಾ ವಾಹನ ಚಾಲಕರುಗಳನ್ನು ತಪಾಸಣೆ ಕೈಗೊಂಡಾಗ, ಈ ಪೈಕಿ ಒಟ್ಟು 58 ಚಾಲಕರುಗಳು ಮಧ್ಯಪಾನ ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿದ್ದು, ಈ 58 ಚಾಲಕರುಗಳ ವಿರುದ್ಧ ಐ.ಎಂ.ವಿ ಕಾಯ್ದೆಯಡಿ ಪ್ರಕರಣಗಳನ್ನು ದಾಖಲು ಮಾಡಲಾಗಿದ್ದು, ಅವರುಗಳ ಚಾಲನಾ ಪರವಾನಗಿಯನ್ನು ಅಮಾನತ್ತು ಪಡಿಸಲು ಸಂಬAಧಪಟ್ಟ ಆರ್.ಟಿ.ಓ ಕಛೇರಿಗೆ ಸಲ್ಲಿಸಲಾಗಿದೆ.

Report on the Inaugural Ceremony of the Regional Principals Conference 2025–26

The Inaugural Ceremony of the Regional Principals’ Conference 2025 at PM Shri Kendriya Vidyalaya MEG & Centre, Bengaluru, unfolded with solemnity and enthusiasm. The Chief Guest, Shri Dharmendra Patle, Deputy Commissioner, KVS RO Bengaluru, was ceremoniously welcomed with a Guard of Honour by NCC cadets and the traditional Purna Kumbha ritual, extending reverence and auspiciousness to all dignitaries.

The ceremonial lamp lighting and invocation marked a symbolic beginning, illuminating the path of unity and knowledge. In his welcome address, Principal Shri Lokesh Bihari Sharma extended warm greetings to the esteemed gathering.

Kendriya Vidyalayas from the Bengaluru Region were felicitated for academic excellence in 2024-25, with several schools achieving 100% results in the CBSE Class X and XII Examinations. The awards were presented in an inspiring atmosphere, celebrating dedication, perseverance, and educational leadership.

The keynote address by Chairperson Shri Dharmendra Patle underscored the imperatives of academic excellence and collaborative leadership, establishing a purposeful vision for the deliberations to follow. In these 3 days, the Regional Principals’ Conference will focus on reviewing academic results of class X and XII for 2024-25, formulating strategies and action plan for 2025, enhancing effective classroom transactions, initiatives taken by KVS for implementation of NEP 2020, promotion of science & technology, and mathematics, strengthening teacher training, and promoting inclusive, tech-enabled, and experiential learning. Besides, it will also focus on implementation of Rupantar programme by Sri Aurobindo Societyand activities for holistic development of children in all KVs. It also addresses key administrative and financial protocols to ensure operational efficiency across Kendriya Vidyalayas.

The inaugural ceremony concluded with avote of thanks proposed by Mrs. V Subbalakshmi, I/C Principal, KV Channapatna,

ನ್ಯಾಯಮೂರ್ತಿ ದಿ. ಎಸ್. ಆರ್.ನಾಯಕ್ ಅವರಿಗೆ ನುಡಿನಮನ

ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ನ್ಯಾಯಾಂಗದ ಘನತೆಯನ್ನು ಎತ್ತಿಹಿಡಿದ ಪ್ರಮುಖರಲ್ಲಿ ದಿ. ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಆರ್. ನಾಯಕ್ ಸಹ ಒಬ್ಬರು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ತಿಳಿಸಿದರು.

ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ಕೋರ್ಟ್ ಹಾಲ್ 1 ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಿ. ನ್ಯಾಯಮೂರ್ತಿಗಳಾದ ಎಸ್.ಆರ್.ನಾಯಕ್ ಅವರು ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ, ಛತ್ತೀಸ್‍ಘÀಡ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಎಲ್ಲಾ ವರ್ಗದ ಜನರಿಗೆ ನ್ಯಾಯ ಕೊಡುವಲ್ಲಿ ಶ್ರಮಿಸಿದರು. ಅವರ ನ್ಯಾಯದಾನ ಆದರ್ಶಗಳನ್ನು ನಾವು ನಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಗೌರವಾನ್ವಿತ ನ್ಯಾಯಮೂರ್ತಿಗಳಾದ ದಿವಂಗತ ಎಸ್.ಆರ್.ನಾಯಕ್ ಅವರು ಉತ್ತರ ಕನ್ನಡ ಜಿಲ್ಲೆಯ ನಾಡುಮಕ್ಕೇರಿ ಗ್ರಾಮದಲ್ಲಿ ಕೃಷಿಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಕುಟುಂಬದಲ್ಲಿ 1945 ರ ಜನವರಿ 1 ರಲ್ಲಿ ಜನಿಸಿದರು. ಇವರ ತಾಯಿ ನಾಗಮ್ಮ ರಾಮ ನಾಯಕ್ ಮತ್ತು ತಂದೆ ರಾಮ ರಂಗ ನಾಯಕ್. ಇವರು ಭಾರತದ ಸ್ವಾತಂತ್ರ್ಯ ಹೋರಾಟದ ಭಾಗವಾದ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ ಬ್ರಿಟಿμï ಸರ್ಕಾರವು ಜೈಲಿಗೆ ಹಾಕಿದ್ದರು.

ಇವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣವನ್ನು ದಾಂಡೇಲಿಯ ಜನತಾ ವಿದ್ಯಾಲಯದಲ್ಲಿ ಪೂರ್ಣಗೊಳಿಸಿದರು. ಮೈಸೂರಿನ ಯುವರಾಜ ಕಾಲೇಜಿನಿಂದ ಬಿ.ಎಸ್ಸಿ. ಪದವಿಯನ್ನು ಮತ್ತು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಲ್.ಎಲ್.ಬಿ. ಹಾಗೂ ಎಲ್.ಎಲ್.ಎಂ. ಪದವಿಗಳನ್ನು ಪಡೆದಿದ್ದರು. ಎಲ್.ಎಲ್.ಬಿ. ಪದವಿಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಶ್ರೇಣಿ ಗಳಿಸಿದ್ದರು.

ಇವರು 1974 ರ ಮಾರ್ಚ್ 1 ರಂದು ರಾಜ್ಯ ವಕೀಲರ ಪರಿಷತ್ತಿನಲ್ಲಿ ವಕೀಲರಾಗಿ ನೊಂದಾಯಿಸಿದರು. ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷರಾದ ದಿವಂಗತ ಗೋಪಾಲಕೃಷ್ಣ ಶೆಟ್ಟಿಯವರ ಕಚೇರಿಯಲ್ಲಿ ತಮ್ಮ ವಕೀಲ ವೃತ್ತಿ ಆರಂಭಿಸಿದ ಇವರು ನಂತರ ಹಿರಿಯ ವಕೀಲರಾದ ಎಲ್. ಜಿ. ಹಾವನೂರ್ ಅವರ ಮಾರ್ಗದರ್ಶನದಲ್ಲಿ ತಮ್ಮ ವಕೀಲ ವೃತ್ತಿಯನ್ನು ಮುಂದುವರೆಸಿ ತದನಂತರ ಸ್ವತಂತ್ರವಾಗಿ ವಕೀಲ ವೃತ್ತಿಯನ್ನು ಕೈಗೊಂಡರು.

ಶ್ರೀಯುತರು ವೃತ್ತಿಯಲ್ಲಿನ ಶ್ರದ್ಧೆ ಹಾಗೂ ಕಾನೂನಿನ ವಿಷಯಗಳಲ್ಲಿ ನಿಪುಣರಾಗಿದ್ದ ಕಾರಣ ಇವರನ್ನು 1979 ನೇ ಇಸವಿಯಿಂದ 1984 ನೇ ಇಸವಿಯವರಿಗೂ ಇವರನ್ನು ಭೂ ಸುಧಾರಣಾ ಪ್ರಕರಣಗಳ ಉಸ್ತುವಾರಿ ಸರ್ಕಾರಿ ವಕೀಲರಾಗಿ ನೇಮಿಸಲಾಯಿತು. 1992 ರ ಡಿಸೆಂಬರ್ 9 ರಂದು ಖಾಯಂ ಸರ್ಕಾರಿ ವಕೀಲರಾಗಿ ಸೇರಿ, ನಿμÁ್ಠವಂತ ಸೇವೆಗಳನ್ನು ಯಶಸ್ವಿಯಾಗಿ ಸಲ್ಲಿಸಿದ ಕೀರ್ತಿಗೆ ಪಾತ್ರರಾಗಿದ್ದರು.

ಶ್ರೀಯುತರು ಅರೆಕಾಲಿಕ ಕಾನೂನು ಪ್ರಾಧ್ಯಾಪಕರಾಗಿ ಬಿ.ಎಂ.ಎಸ್. ಹಾಗೂ ಎಸ್.ಆರ್. ಎಸ್. ಹಾವನೂರ್ ಕಾಲೇಜುಗಳಲ್ಲಿ ತಮ್ಮ ಕಾರ್ಯ ನಿರ್ವಹಿಸಿದ್ದರು. ಇವರು ಎಲ್ಲಾ ಕಾನೂನಿನ ವಿಷಯಗಳನ್ನು ಬೋಧಿಸುವ ಕಲೆಯನ್ನು ರೂಢಿಸಿಕೊಂಡು ಕಾನೂನಿನ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಪ್ರಾಧ್ಯಾಪಕರಾಗಿದ್ದರು. ಕಠಿಣ ಪರಿಶ್ರಮ, ವೃತ್ತಿಯಲ್ಲಿನ ಪ್ರಾಮಾಣಿಕತೆ ಹಾಗೂ ಶ್ರದ್ಧೆಯನ್ನು ಪರಿಗಣಿಸಿ ಅವರನ್ನು 1994 ನೇ ಫೆಬ್ರವರಿ 24 ರಂದು ಗೌರವಾನ್ವಿತ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಯಿತು. ಅಲ್ಪ ಅವಧಿಯಲ್ಲಿಯೇ  1994 ನೇ ಮಾರ್ಚ್ 21 ರಂದು ಇವರನ್ನು ಆಂಧ್ರಪ್ರದೇಶದ ಉಚ್ಚ ನ್ಯಾಯಾಲಯಕ್ಕೆ  ವರ್ಗಾಯಿಸಲಾಯಿತು.

ಗೌರವಾನ್ವಿತ ದಿವಂಗತ ನ್ಯಾಯಮೂರ್ತಿಗಳು 1997 ರಲ್ಲಿ ಅಂಧ್ರ ಪ್ರದೇಶ ನ್ಯಾಯಾಂಗ ಅಕಾಡೆಮಿಯ ಗವರ್ನರ್ ಮತ್ತು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನ್ಯಾಯಾಧಿಕಾರಿಗಳ ತರಬೇತಿ ಮತ್ತು ನಿರಂತರ ಶಿಕ್ಷಣಕ್ಕಾಗಿ ಈ ಸಂಸ್ಥೆಯನ್ನು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯ ಸಂಸ್ಥೆಯಾಗಿ ರೂಪಿಸುವಲ್ಲಿ ಅವರ ಕೊಡುಗೆ ಗಣನೀಯ.

2003 ರ ಜನವರಿ 2 ರಂದು ಪುನ: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ವರ್ಗಾವಣೆಗೊಂಡರು. 2004 ರ ಅಕ್ಟೋಬರ್ 20 ರಿಂದ ನವೆಂಬರ್ 18 ರವರೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿಭಾಯಿಸಿದ್ದಲ್ಲದೆ, ಡಿ.ಎಲ್. ಜಗದೀಶ್ ರವರು ವಕೀಲರ ಸಂಘದ ಅಧ್ಯಕ್ಷರಾಗಿದ್ದಾಗ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಅವಧಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ವಕೀಲರ ವಾಹನಗಳ ನಿಲುಗಡೆಗಾಗಿ ಕಟ್ಟಡದ ನವೀಕರಣ ಮತ್ತು ನ್ಯಾಯಾಲಯದ ರಸ್ತೆಯ ವ್ಯವಸ್ಥೆಯನ್ನು ಮಾಡಿದಂತಹ ಕೀರ್ತಿ ಇವರದ್ದಾಗಿರುತ್ತದೆ.

ಇವರು 2005 ರ ನವೆಂಬರ್ 14 ರಂದು ಛತ್ತಿಸ್‍ಗಡ್ ಜಿಲ್ಲೆಯ ಮುಖ್ಯ ನ್ಯಾಯಾಮೂರ್ತಿಗಳಾಗಿ ನೇಮಕಗೊಂಡು, 2007 ಜನವರಿ 1 ರಂದು ನಿವೃತ್ತಿ ಹೊಂದಿದರು.

ಗೌರವಾನ್ವಿತ ದಿವಂಗತ ನ್ಯಾಯಮೂರ್ತಿಗಳು ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾದ ನಂತರ, ವಿಶ್ರಮಿಸದೇ ಸಕ್ರಿಯರಾಗಿ ಹೊಸದಾಗಿ ರೂಪುಗೊಂಡ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಮೊದಲ ಅಧ್ಯಕ್ಷರಾಗಿ 2007ನೇ ಇಸವಿಯಿಂದ 2012ನೇ ಇಸವಿಯವರೆಗೆ ಪರಿಣಾಮಾಕಾರಿಯಾಗಿ ಸಲ್ಲಿಸಿದ ಸೇವೆ ಶ್ಲಾಘನೀಯ. ಇದಲ್ಲದೇ. ಜೂನ್, 2014 ನೇ ಇಸವಿಯಿಂದ ಜೂನ್ 2019ನೇ ಇಸವಿಯವರೆಗೆ ಕರ್ನಾಟಕದ ಕಾನೂನು ಆಯೋಗದ ಅಧ್ಯಕ್ಷರಾಗಿ ಸಹ ತಮ್ಮ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿದ್ದಾರೆ.

ಗೌರವಾನ್ವಿತ ದಿವಂಗತ ನ್ಯಾಯಮೂರ್ತಿಗಳು ಅಧ್ಯಕ್ಷರಾಗಿ, ಧಾರವಾಡ ಮತ್ತು ಕಲಬುರ್ಗಿ ಉಚ್ಚ ನ್ಯಾಯಾಲಯಗಳ ಸಂಚಾರಿ ಪೀಠಗಳನ್ನು ಸ್ಥಾಪನೆ ಮಾಡಲು ಸ್ಥಳ ಪರಿಶೀಲನೆ ಸಲ್ಲಿಸಿದ ವರದಿಯ ಆಧಾರದ ಮೇರೆಗೆ ಉತ್ತರ ಕರ್ನಾಟಕದ ಜನರ ಬಹುಕಾಲದ ಕನಸನ್ನು ನನಸಾಗಿಸಿದ ಹಾಗೂ ಈ ಕೊಡುಗೆ ಅತ್ಯಂತ ಪ್ರಶಂಸನೀಯ ಮತ್ತು ಚಿರಸ್ಮರಣೀಯ ಎಂದು ತಿಳಿಸಿದರು.

ಗೌರವಾನ್ವಿತ ದಿವಂಗತ ನ್ಯಾಯಮೂರ್ತಿಗಳಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಜನವರಿ 2008 ರಲ್ಲಿ “ನಾಡೋಜ” ಪ್ರಶಸ್ತಿಯನ್ನು ನೀಡಿತ್ತು ಮತ್ತು ಬೆಂಗಳೂರು ವಿಶ್ವವಿದ್ಯಾಲಯವು ಮೇ 2009 ರಲ್ಲಿ ಅವರಿಗೆ ‘ಗೌರವ ಡಾಕ್ಟರೇಟ್’ (ಕಾನೂನುಗಳು) ನೀಡಿ ಗೌರವಿಸಲಾಗಿತ್ತು.

ಇವರ ನ್ಯಾಯಾಂಗ ಸೇವೆ ಹಾಗೂ ಸಾರ್ವಜನಿಕ ಸೇವೆ ಮುಂಬರುವ ಯುವ ವಕೀಲರಿಗೆ ದಾರಿದೀಪವಾಗಿದೆ. ಇವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಅಧ್ಯಯನಕ್ಕಾಗಿ ಮಲೇಶಿಯಾಕ್ಕೆ ತೆರಳಿರುವ ಯು.ಟಿ.ಖಾದರ್

ಮಲೇಶಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿರುವ, ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರು ಮತ್ತು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಇಂದು ಜನ ಪ್ರತಿನಿಧಿಗಳ ಸಭೆ (ದಿವಾನ್ ರಖ್ಯತ್)ನ ಸಭಾಧ್ಯಕ್ಷರು ಮತ್ತು ಕಾಮನ್‍ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಮಲೇಶಿಯಾದ ಜಂಟಿ ಅಧ್ಯಕ್ಷರಾದ ಡಾ.ಜೋಹರಿ ಬಿನ್ ಅಬ್ದುಲ್ ಅವರನ್ನು ಕೌಲಾಲಾಂಪುರದಲ್ಲಿರುವ ಸಂಸತ್ ಭವನದಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಸಂಸದೀಯ ವ್ಯವಹಾರಗಳು ಹಾಗೂ ಪ್ರಜಾಪ್ರಭುತ್ವ ತತ್ವಗಳ ಬಗ್ಗೆ ಪರಸ್ಪರ ವಿಚಾರ ವಿನಿಮಯ ಮಾಡಿದರು. ಅಲ್ಲದೆ ಭವಿಷ್ಯದಲ್ಲಿ ಕರ್ನಾಟಕ ಹಾಗೂ ಮಲೇಶಿಯಾದ ರಾಜಕೀಯ, ಸಂಸದೀಯ ವ್ಯವಹಾರಗಳು ಮತ್ತು ಸಾಂಸ್ಕøತಿಕ ಸಂಬಂಧಗಳನ್ನು ಕಾಯ್ದುಕೊಳ್ಳುವ ಬಗ್ಗೆ ಸಹ ಚರ್ಚಿಸಿದರು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಇತರೆ ಅಧಿಕಾರಿಗಳು ಹಾಜರಿದ್ದರು.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪರಿಸರ, ಹವಾಮಾನ ಕ್ಲಬ್ ಸ್ಥಾಪನೆಗೆ ಆದೇಶ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

“ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ, ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್ ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ನೀಡಲಾಗಿದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಹಮ್ಮಿಕೊಂಡಿದ್ದ ಮ್ಯಾರಥಾನ್‍ಗೆ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿಗಳು, “ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಈ ಜಾಗೃತಿ ಕ್ಲಬ್ ಗಳನ್ನು ರಚನೆ ಮಾಡಬೇಕು. ಪ್ರಕೃತಿ ಉಳಿಸುವ ದೊಡ್ಡ ಹೋರಾಟದ ಹಾಗೂ ಜಾಗೃತಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಬೇಕು ಎಂದು ಈ ಆದೇಶ ಮಾಡಲಾಗಿದೆ. ಒಂದೊಂದು ಶಾಲೆ ಮರ ಬೆಳೆಸಲು ಆಯಾಯ ಪ್ರದೇಶಗಳನ್ನು ದತ್ತು ಪಡೆಯಬೇಕು” ಎಂದು ತಿಳಿಸಿದರು.
“ಹಸಿರು ಮತ್ತು ಸ್ವಚ್ಚತೆ ಇದೇ ನಮ್ಮ ಸರ್ಕಾರದ ಧ್ಯೇಯ. ಇದರ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಮೂಡಿಸುವುದು ಸರ್ಕಾರದ ಕರ್ತವ್ಯ. ಕರ್ನಾಟಕದ ದೊಡ್ಡ ಆಸ್ತಿಯೇ ನಮ್ಮ ಪ್ರಕೃತಿ. ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ, ಜವಾಬ್ದಾರಿಯಾಗಬೇಕು” ಎಂದರು.
“ಪ್ರತಿಯೊಬ್ಬ ವಿದ್ಯಾರ್ಥಿ ಒಂದೊಂದು ಸಸಿಯನ್ನು ದತ್ತು ಪಡೆಯಬೇಕು. ಈಗಾಗಲೇ 50 ಸಾವಿರಕ್ಕೂ ಹೆಚ್ಚು ಮಕ್ಕಳು ಈ ಪ್ರಕ್ರಿಯೆಯಲ್ಲಿ ಇದ್ದಾರೆ. ಎರಡು ದಿನದ ಹಿಂದೆ ದೆಹಲಿ, ಅಹಮದಾಬಾದ್ ನಲ್ಲಿ ಇದ್ದೆ ಅಲ್ಲಿನ Temperature  49 ಡಿಗ್ರಿಯಿತ್ತು. ಪರಿಸರದಿಂದಾಗಿ ಬೆಂಗಳೂರಿನಲ್ಲಿ 22- 23 ಇದೆ. ಈ ವಾತಾವರಣ ನಮ್ಮ ಕರ್ನಾಟಕದ, ಬೆಂಗಳೂರಿನ ಆಸ್ತಿ” ಎಂದು ತಿಳಿಸಿದರು.
“ಮನುಷ್ಯ ಹಾಗೂ ಅವನ ಜೀವನ ಪದ್ಧತಿ ಪ್ರಕೃತಿಯ ಜೊತೆ ಬೆಸೆದುಕೊಂಡಿದೆ. ನಾವೆಲ್ಲರೂ ಪರಿಸರದ ಒಂದು ಭಾಗ ಶುದ್ದ ಗಾಳಿ, ನೀರು, ಪರಿಸರ ನಿರ್ಮಾಣ ನಮ್ಮೆಲ್ಲರ ಅತಿದೊಡ್ಡ ಜವಾಬ್ದಾರಿ. ಪರಿಸರ ಉಳಿಸುವ ಅರಿವು ಯುವ ಜನಾಂಗಕ್ಕೆ ಬರಬೇಕು. ಪರಿಸರ ನಮ್ಮ ಮನೆ ಅದನ್ನು ನಾಶ ಮಾಡದೇ ಇರುವಂತೆ ನಾವೆಲ್ಲರೂ ಹೆಜ್ಜೆ ಹಾಕಬೇಕಿದೆ” ಎಂದರು.
“ಸುಮಾರು 5 ಸಾವಿರಕ್ಕೂ ಹೆಚ್ಚು ಸ್ಕೌಟ್ ಮತ್ತು ಗೈಡ್ಸ್ ಮಕ್ಕಳು ವಿಧಾನಸೌಧದ ಸುತ್ತಲೂ ನಡಿಗೆ ಮಾಡಿ ಜನರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ನಾನು ಸಹ ಶಾಲಾ ದಿನಗಳಲ್ಲಿ ಇದರ ಭಾಗವಾಗಿದ್ದವನು. ಈ ಸಂಘಟನೆ ಬೆಳೆಸುವುದು ನಮ್ಮ ಬದ್ಧತೆ. ಪರಿಸರ ದಿನಾಚರಣೆ ಮಾಡುವುದು ನಮಗಾಗಿ ಅಲ್ಲ ಮುಂದಿನ ಪೀಳಿಗೆಗಾಗಿ” ಎಂದರು.

“ವಿದ್ಯಾರ್ಥಿಗಳು ಹಾಗೂ ಯುವ ಸಮುದಾಯಕ್ಕೆ ಪರಿಸರ ಪ್ರಜ್ಞೆ ಬೆಳೆಯಲಿ ಎಂದು ಸರ್ಕಾರ ಹಲವಾರು ಜಾಗೃತಿ ಕಾರ್ಯಕ್ರಮವನ್ನು ಸಚಿವರಾದ ಈಶ್ವರ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನರೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದೆ” ಎಂದು ತಿಳಿಸಿದರು.
“ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಶಿಸ್ತಿಗೆ ಹೆಸರಾದವರು. ನೀವುಗಳು ರಜೆ ಸಮಯದಲ್ಲಿ ವಿಧಾನಸೌಧವನ್ನು ವೀಕ್ಷಣೆ ಮಾಡಬೇಕು. ಇಡೀ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲದ ಕೌತುಕ ಇಲ್ಲಿದೆ. ನ್ಯಾಯಾಂಗ, ಕಾಯಾರ್ಂಗ, ಶಾಸಕಾಂಗ ಒಂದೇ ಕಡೆ ಸಮಾಗಮವಾಗಿವೆ. ದೇಶದ ಭವಿಷ್ಯವನ್ನು ಚರ್ಚೆ ಮಾಡುವ ಸ್ಥಳ ಇದಾಗಿದೆ” ಎಂದರು.
ಹಸಿರು ಉಳಿಸಿ, ಮರ ಬೆಳೆಸಿ. ಕಸ ತ್ಯಜಿಸಿ ಮರ ಬೆಳೆಸಿ” ಎಂದು ವಿದ್ಯಾರ್ಥಿಗಳೊಟ್ಟಿಗೆ ಉಪ ಮುಖ್ಯಮಂತ್ರಿ ಘೋಷಣೆ ಕೂಗಿದರು.

ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುವುದು ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.

ಇಂದು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅರಣ್ಯ ಜೀವಿ ಪರಿಸ್ಥಿತಿ ಮಾತು ಮತ್ತು ಪರಿಸರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2025 ನ್ನು ಉದ್ಘಾಟಿಸಿ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಪರಿಸರ ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ. ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ “ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ” ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕು. ಪರಿಸರ ಶುದ್ಧವಾಗಿದ್ದರೆ ಜನರ ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ. ಆದರೆ ದುರಾಸೆಗಳನ್ನಲ್ಲ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು ಎಂದು ತಿಳಿಸಿದರು.

ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ:

ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ಕರ್ನಾಟಕದಲ್ಲಿ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಇಂದು ಬೋಧಿಸಲಾಗಿರುವ ಪ್ರತಿಜ್ಞಾ ವಿಧಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನವನ್ನು ಎಲ್ಲರೂ ಮಾಡಬೇಕು ಎಂದು ತಿಳಿಸಿದರು.

ಇಂದು ನಾವು ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ. ಬೆಂಗಳೂರು ಒಂದರಲ್ಲೇ ದಿನವೊಂದಕ್ಕೆ 900 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. 1.50 ಜನಸಂಖ್ಯೆಯನ್ನು ಬೆಂಗಳೂರು ಹೊಂದಿದೆ. ಜನಸಂಖ್ಯೆ ಬೆಳೆದಷ್ಟು ಪರಿಸರದ ಮೇಲೆ ಹಾನಿ ಉಂಟಾಗುತ್ತಿದೆ. ದೇಶ ಜನಸಂಖ್ಯೆಯಲ್ಲಿ ನಂಬರ್ ಒನ್ ಆಗಿದೆ. ಜನಸಂಖ್ಯೆಯ ನಿಯಂತ್ರಣದ ಜೊತೆಗೆ ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ ಎಂದರು.

ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು:

ಭೂಮಿಯಲ್ಲಿ ರಾಸಾಯನಿಕ ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಕಡಿಮೆಯಾಗಿದೆ. ಇದನ್ನು ಹೀಗೇ ಬಿಟ್ಟರೆ ಕರ್ನಾಟಕ ಮುಂದೆ ಮರುಭೂಮಿಯಾಗಲಿದೆ. ಅದಕ್ಕಾಗಿ ನಾವು ಈಗಲೇ ಎಚ್ಚರಿಕೆ ವಹಿಸಲೇಬೇಕು. ಒಂದು ಬಾರಿ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ಕರೆ ನೀಡಿದರು.

ಪ್ಲಾಸ್ಟಿಕ್ ಗೆ ಪರ್ಯಾಯ:

ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮರುಬಳಕೆ ಘಟಕದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಗೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕು ಎಂದರು.

ಗಿಡ ಮರಗಳನ್ನು ನೆಟ್ಟು ಬೆಳೆಸೋಣ :

ಪುನರ್ಬಳಕೆ ಮತ್ತು ಮರುಬಳಕೆ ಪೆÇ್ರೀತ್ಸಾಹಿಸಿ, ಏಕ ಬಳಕೆ ಪ್ಲಾಸ್ಟಿಕ್ ನಿಲ್ಲಿಸೋಣ, ಸಾರ್ವಜನಿಕ ಸಾರಿಗೆ ಉಪಯೋಗಿಸೋಣ, ಹತ್ತಿರದ ಸ್ಥಳಗಳಿಗೆ ನಡೆದು ಹೋಗುವ ಅಥವಾ ಸೈಕಲ್ ಬಳಕೆ ಮಾಡೋಣ, ಹನಿ ಹನಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳೋಣ , ನೀರನ್ನು ಪೆÇೀಲು ಮಾಡದೇ ಜವಾಬ್ದಾರಿಯುತವಾಗಿ ಬಳಸೋಣ. ಸಾಧ್ಯವಾದ ಮಟ್ಟಿಗೆ ಪ್ರತಿಯೊಬ್ಬರೂ ಇದನ್ನು ಕರ್ತವ್ಯ ಎಂದು ಅರಿತು ‘ನನ್ನ ಜೀವ ನನ್ನ ಮರ’ ಎಂದು ಗಿಡ ಮರಗಳನ್ನು ನೆಟ್ಟು ಬೆಳೆಸೋಣ. ನಾನು ಪರಿಸರ ನ್ಯಾಯ, ಸುಸ್ಥಿರ ಬದ್ಧತೆಗೆ ಸಂಪೂರ್ಣ ಒಪ್ಪಿಗೆ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬೆಂಗಳೂರಿನಲ್ಲಿ ಅರಣ್ಯ ಇಲಾಖೆಗೆ ಸೇರಿದ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಪಡಿಸಲು ಧನಸಹಾಯ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಬೆಂಗಳೂರಿನಲ್ಲಿ ಅರಣ್ಯ ಇಲಾಖೆಗೆ ಸೇರಿರುವ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ಧಿ ಮಾಡಲು ಅರಣ್ಯ ಇಲಾಖೆ ಮುಂದಾದರೆ ಪಾಲಿಕೆಯಿಂದ ಅಗತ್ಯ ಧನಸಹಾಯ ನೀಡಲಾಗುವುದು ಎಂದರು.

ಕಬ್ಬನ್ ಪಾರ್ಕ್, ಲಾಲ್ ಬಾಗ್ ರೀತಿ ಉದ್ಯಾನಗಳನ್ನು ಅಭಿವೃದ್ಧಿಪಡಿಸಿದರೆ ಬೆಂಗಳೂರು ನಗರದಾದ್ಯಂತ ಇರುವ ಅರಣ್ಯ ಇಲಾಖೆ ಜಾಗಗಳು ಉಳಿದಂತಾಗುತ್ತದೆ. ಸಾರ್ವಜನಿಕರಿಗೂ ಅನುಕೂಲವಾಗುತ್ತದೆ ಎಂದು ಹೇಳಿದರು.

ಭೂಮಿ ನಮಗೆ ಸೇರಿದ್ದಲ್ಲ, ನಾವು ಭೂಮಿಗೆ ಸೇರಿದವರು ಎನ್ನುವುದನ್ನು ಯಾರೊಬ್ಬರು ಮರೆಯಬಾರದು. ಪ್ರಕೃತಿ ಉಚಿತವಾಗಿ ಊಟ ಕೊಡುತ್ತಿದೆ ಎಂದು ಅದನ್ನು ಕಂಠಪೂರ್ತಿ ತಿನ್ನಬಾರದು. ಭವಿಷ್ಯಕ್ಕೂ ಉಳಿಸಬೇಕು ಎಂದು ತಿಳಿಸಿದರು.

ಸುತ್ತಲಿನ ಪ್ರಕೃತಿ, ಮಣ್ಣು, ನೀರನ್ನು ಉಳಿಸುವ ಸಂಕಲ್ಪವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಹಸಿರು ಮತ್ತು ಉಸಿರನ್ನು ರಕ್ಷಿಸುವ ಗ್ಯಾರಂಟಿಯನ್ನು ನಮ್ಮ ಸರ್ಕಾರ ನೀಡಲಿದೆ. ಪ್ರಕೃತಿಯಿಂದ ನಾವು ತೆಗೆದುಕೊಳ್ಳುವುದಕ್ಕಿಂತ ಹೆಚ್ಚಿಗೆ ಅದಕ್ಕೆ ವಾಪಸ್ ಕೊಡಬೇಕು. ಈ ಭೂಮಿ ಉಳಿದರೆ ಮಾತ್ರ ನಾವು ಉಳಿಯುತ್ತೇವೆ ಎಂದರು.

ನಾವುಗಳು ನಮ್ಮ ಜೀವಿತಾವಧಿಯಲ್ಲಿ ಒಂದೊಂದು ಮರವನ್ನು ಬೆಳೆಸುವಂತಹ ಸಂಕಲ್ಪವನ್ನು ತೆಗೆದುಕೊಳ್ಳಬೇಕು. ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ತಕ್ಷಣ ನಗರದ ಶಾಲೆಗಳ ವಿದ್ಯಾರ್ಥಿಗಳು ಒಂದೊಂದು ಸಸಿಯನ್ನು ದತ್ತು ಪಡೆಯಬೇಕು ಎಂದು ಯೋಜನೆ ರೂಪಿಸಿದೆವು. ಕಳೆದ ವರ್ಷ ಸುಮಾರು 50 ಸಾವಿರ ಸಸಿಗಳನ್ನು ನೆಡಲಾಗಿದೆ. ಇವುಗಳನ್ನು ವಿದ್ಯಾರ್ಥಿಗಳೇ ಪೆÇೀಷಿಸುತ್ತಿದ್ದಾರೆ ಎಂದು ಹೇಳಿದರು.

ಪ್ರತಿ ಶಾಲೆಯಲ್ಲಿ 25 ವಿದ್ಯಾರ್ಥಿಗಳನ್ನು ಒಳಗೊಂಡ ‘ಕ್ಲೈಮೆಟ್ ಆಕ್ಷನ್ ಕ್ಲಬ್ʼ ರಚನೆ ಮಾಡಬೇಕು ಎಂದು ಸೂಚನೆ ನೀಡಿದ್ದೇವೆ. ಬೆಂಗಳೂರಲ್ಲಿ 1.20 ಕೋಟಿಗೆ ವಾಹನಗಳ ಸಂಖ್ಯೆ ಏರಿಕೆಯಾಗಿದೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗಿದೆ. ಇದನ್ನು ನಿಯಂತ್ರಣ ಮಾಡಲು ನಾವು ಆಲೋಚನೆ ಮಾಡಬೇಕಿದೆ” ಎಂದು ಹೇಳಿದರು.

ನನ್ನ ಹುಟ್ಟುಹಬ್ಬದ ದಿನ ಕಬಿನಿ ಹಿನ್ನೀರಿನ ಅರಣ್ಯಕ್ಕೆ ಭೇಟಿ ನೀಡಿದ್ದೆ. ಅತ್ಯಂತ ಸಂಪತ್ ಭರಿತವಾದ ಪ್ರಾಣಿ ಸಂಕುಲವನ್ನು ನಾನು ನೋಡಿದೆ. ಆಗ ವಿದೇಶದಲ್ಲಿರುವಂತೆ ನನಗೆ ಭಾಸವಾಯಿತು ಎಂದು ಹೇಳಿದರು.

ಏಕ ಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಜನರ ಇಚ್ಛಾಶಕ್ತಿಯಿಂದ ಸಾಧ್ಯ: ಈಶ್ವರ ಖಂಡ್ರೆ

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಾತನಾಡಿ, ಪ್ಲಾಸ್ಟಿಕ್ ತ್ಯಾಜ್ಯ ಜನ-ಜಾನುವಾರುಗಳ ಆರೋಗ್ಯಕ್ಕೆ ಕಂಟಕವಾಗಿದ್ದು, ಪರಿಸರಕ್ಕೂ ಮಾರಕವಾಗಿದೆ. ಏಕಬಳಕೆ ಪ್ಲಾಸ್ಟಿಕ್  ನಿರ್ಮೂಲನೆ ಕಾನೂನಿನಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಜನರ ಇಚ್ಛಾಶಕ್ತಿ ಅಗತ್ಯ ಎಂದು ಅಭಿಪ್ರಾಯಪಟ್ಟರು.

ಈ ಬಾರಿಯ ವಿಶ್ವ ಪರಿಸರ ದಿನದ ಧ್ಯೇಯ ವಾಕ್ಯ ಪ್ಲಾಸ್ಟಿಕ್ ತ್ಯಾಜ್ಯ ಕೊನೆಗಾಣಿಸೋಣ ಎಂಬುದಾಗಿದ್ದು. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದರು.

ಬೆಂಗಳೂರು ನಗರದ ಹಸಿರು ಹೊದಿಕೆ ವೃದ್ಧಿಗೆ ಕ್ರಮ:

ನಿವೃತ್ತರ ಸ್ವರ್ಗ, ಉದ್ಯಾನ ನಗರಿ ಎಂದು ಖ್ಯಾತವಾಗಿದ್ದ ಬೆಂಗಳೂರು ಇಂದು ಕಾಂಕ್ರೀಟ್ ಕಾಡಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಶ್ವಾಸ ತಾಣ ಉಳಿಸಲು ಹೆಸರುಘಟ್ಟ ಹುಲ್ಲುಗಾವಲಿನ 5678 ಎಕರೆ ಪ್ರದೇಶವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲಾಗಿದೆ ಎಂದರು.
ಬೆಂಗಳೂರು ಉತ್ತರದ ಯಲಹಂಕ ಬಳಿ 153 ಎಕರೆ ಭೂಮಿಯಲ್ಲಿ ಬೃಹತ್ ಜೈವಿಕ ಉದ್ಯಾನ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಇನ್ನು 2 ತಿಂಗಳೊಳಗೆ ವಿಸ್ತøತ ಯೋಜನಾ ವರದಿ ಸಿದ್ಧಪಡಿಸಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ಮಾಡಿಸಲಾಗುವುದು ಎಂದರು.

ಮರುಬಳಕೆ, ಪುನರ್ ಬಳಕೆ ಇಂದಿನ ಅಗತ್ಯ:
ಹಿಂದೆ ನಮ್ಮ ಪೂರ್ವಿಕರು ನೈಸರ್ಗಿಕ ಸಂಪನ್ಮೂಲವನ್ನು ಹಿತಮಿತವಾಗಿ ಬಳಕೆ ಮಾಡುತ್ತಿದ್ದರು. ಪುನರ್ ಬಳಕೆ ಮಾಡುತ್ತಿದ್ದರು, ಸುಸ್ಥಿರ ಅಭಿವೃದ್ಧಿಗೆ ಪುನರ್ ಬಳಕೆ, ಮರು ಬಳಕೆ ಅನಿವಾರ್ಯ ಎಂದು ತಿಳಿಸಿದರು.
ಮಹಾತ್ಮಾ ಗಾಂಧೀಜಿ ಅವರು “ಪ್ರಕೃತಿ, ಪರಿಸರ ಇರುವುದು ಮನುಷ್ಯನ ಅವಶ್ಯಕತೆ ಪೂರೈಸುವುದಕ್ಕೇ ಹೊರತು, ದುರಾಸೆ ಪೂರೈಸುವುದಕ್ಕಲ್ಲ’’ ಎಂದು ಹೇಳಿದ್ದಾರೆ, ನಾವೆಲ್ಲರೂ ಮಹಾತ್ಮಾ ಗಾಂಧೀ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದರು.

ವಿಶ್ವ ಪರಿಸರ ದಿನಕ್ಕೆ ಎರಡು ಮಹತ್ವದ ಆದೇಶ:

ವಿದ್ಯಾವಂತ ಜನರೇ ತಾವು ಖರೀದಿಸುವ ಖನಿಜಯುಕ್ತ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ರಸ್ತೆಯಲ್ಲಿ ಎಸೆಯುತ್ತಾರೆ. ಇದನ್ನು ತಡೆಯಲು ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ರಚಿಸಲು ಆದೇಶ ಮಾಡಲಾಗಿದೆ, ತಯಾರಕರ ವಿಸ್ತರಿತ ಜವಾಬ್ದಾರಿಯಂತೆ ಖಾಲಿ ನೀರಿನ ಬಾಟಲಿ ಮರು ಖರೀದಿಸುವುದನ್ನು ಕಡ್ಡಾಯ ಮಾಡಲು ಚಿಂತಿಸಲಾಗಿದೆ ಎಂದು ತಿಳಿಸಿದರು.
ಅದೇ ರೀತಿ ರಸ್ತೆಯ ಬದಿಯಲ್ಲಿ ಸರ್ಕಾರ ನೆಡುವ ಗಿಡ, ಮರದ ಸುತ್ತ, ಎನ್.ಜಿ.ಟಿ. ಆದೇಶದಂತೆ ಒಂದು ಮೀಟರ್ ಸುತ್ತಳತೆ ಮಣ್ಣಿರಬೇಕು, ಹೀಗಾಗಿ ಅಲ್ಲಿ ಹಾಕಿರುವ ಕಾಂಕ್ರೀಟ್ ತೆಗೆಯುವಂತೆ ಆದೇಶ ಮಾಡಲಾಗಿದ್ದು, ಇದನ್ನು ಇಂದು ಮಾನ್ಯ ಮುಖ್ಯಮಂತ್ರಿಗಳೇ ವಿಶ್ವ ಪರಿಸರ ದಿನದ ಕೊಡುಗೆಯಾಗಿ ಬಿಡುಗಡೆ ಮಾಡುತ್ತಿದ್ದಾರೆ ಎಂದರು.

ವೃಕ್ಷೋ ರಕ್ಷತಿ ರಕ್ಷಿತಃ
ಯಾರು ಮರಗಳನ್ನು ಉಳಿಸುತ್ತಾರೋ ಅವರನ್ನು ಪರಿಸರ ಮತ್ತು ಪ್ರಕೃತಿಯೂ ಸಂರಕ್ಷಿಸುತ್ತದೆ. ಇದನ್ನು ಅರಿತು ಪ್ರತಿಯೊಬ್ಬರೂ ಪರಿಸರ ಪ್ರಜ್ಞೆ ಬೆಳೆಸಿಕೊಂಡು ನಿರ್ಮಲ ಪರಿಸರಕ್ಕಾಗಿ ಶ್ರಮಿಸಬೇಕು. ಮನೆಯ ಮುಂದೆ ಗಿಡ ನೆಟ್ಟು ಪೆÇೀಷಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಪರಿಸರ ಪ್ರಶಸ್ತಿ ಪ್ರದಾನ ಮಾಡಲಾಯಿತು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ 2 ವರ್ಷಗಳ ಸಾಧನೆ ಸಾರುವ “ತುಂಬಿತು 2 ವರುಷ, ಹಸಿರು ಸಂರಕ್ಷಣೆಯ ಹರುಷ” ಎಂಬ ಕಿರುಹೊತ್ತಗೆಯನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಬೈರತಿ ಸುರೇಶ್, ಡಾ. ಕೆ.ಸುಧಾಕರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೆÇನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಪ್ರಸ್ತಾವಿಕವಾಗಿ ಮಾತನಾಡಿ ಇಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗಾಣಿಸೋಣ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. 1972ನೇ ಇಸವಿಯಲ್ಲಿ ನಡೆದ ವಿಶ್ವ ಪರಿಸರ ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯದಂತೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ದೃಷ್ಟಿಯಿಂದ ಪ್ರತಿ ವರ್ಷ ವಿಶ್ವ ಪರಿಸರ ದಿನಾರಣೆಯನ್ನು ಆಚರಿಸಲಾಗುತ್ತದೆ.

ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳು ಜೊತೆಗೂಡಿ ನಿμÉೀಧಿತ ಪ್ಲಾಸ್ಟಿಕ್ಗಳನ್ನು ತಯಾರಿಸುತ್ತಿರುವ, ಮಾರಾಟ ಮಾಡುತ್ತಿರುವ, ಉಪಯೋಗಿಸುತ್ತಿರುವ ಸ್ಥಳಗಳಿಗೆ ದಾಳಿ ನಡೆಸಿ ನಿμÉೀಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ ಸುಮಾರು 1,65,000 ತಪಾಸಣೆ ನಡೆಸಿದ್ದು, ದಾಳಿಯ ಸಂದರ್ಭದಲ್ಲಿ ಸುಮಾರು 1012 ಟನ್ಗಳಷ್ಟು ನಿμÉೀಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ತಪ್ಪಿತಸ್ಥರಿಂದ ಸುಮಾರು ರೂ.5.6 ಕೋಟಿಯಷ್ಟು ದಂಡ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪರಿಸರ ಸಂರಕ್ಷಣೆಯ ಹಿತ ದೃಷ್ಟಿಯಿಂದ ಪ್ರಧಾನಮಂತ್ರಿ ದಿ. ಶ್ರೀಮತಿ ಇಂದಿರಾಗಾಂಧಿಯವರು 1974 ರಲ್ಲಿ ಜಲಮಾಲಿನ್ಯ ನಿಯಂತ್ರಣ ಕಾಯಿದೆ, 1980ರಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ, 1981ರಲ್ಲಿ ವಾಯುಮಾಲಿನ್ಯ ನಿಯಂತ್ರಣ ಕಾಯಿದೆಯನ್ನು, ಪ್ರಧಾನಮಂತ್ರಿ ದಿ. ರಾಜೀವ್ ಗಾಂಧಿ 1986ರಲ್ಲಿ ಪರಿಸರ ಸಂರಕ್ಷಣೆ ಕಾಯಿದೆ ಪ್ರಧಾನಮಂತ್ರಿ ದಿ. ಮನಮೋಹನ್ ಸಿಂಗ್ ಅವರು ನ್ಯಾಷನಲ್ ಗ್ರೀನ್ ಟ್ರಿಬುನಲ್ ಆಕ್ಟ್ 2010 ಜಾರಿಗೊಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವಿವಿಧ ಪರಿಸರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಪರಿಸರದ ಕುರಿತು ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಮಂಡಳಿಯಲ್ಲಿ ವಾಹನಗಳ ಕೊರತೆ ಇತ್ತು. ಮುಖ್ಯಮಂತ್ರಿಗಳು ವಾಹನ ಖರೀದಿಗೆ ಅನುವು ಮಾಡಿಕೊಟ್ಟಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳ ಪಠ್ಯಪುಸ್ತಕದಲ್ಲಿ ಪರಿಸರದ ಜ್ಞಾನದ ಕುರಿತ ಪಾಠವನ್ನು ಜಾರಿಗೊಳಿಸುವುದು ಅವಶ್ಯಕ ಎಂದು ತಿಳಿಸಿದರು.
ತ್ಯಾಜ್ಯ ನಿಯಂತ್ರಿಸುವುದು, ಈ ವೇಸ್ಟ್ ಸಮಸ್ಯೆಯ ನಿವಾರಣೆಗೆ ಮಂಡಳಿಯು ಕಾರ್ಯ ಸನ್ನದ್ಧವಾಗಿದೆ. ಕೈಗಾರಿಕೋದ್ಯಮದ ಜೊತೆಗೆ ಮಾಲಿನ್ಯ ನಿಯಂತ್ರಣದಲ್ಲಿ ಕ್ರಮವಹಿಸೋಣ ಎಂದು ತಿಳಿಸಿದರು.
ಪ್ಲಾಸ್ಟಿಕ್ ಬಳಕೆಯು ಮನುಷ್ಯರಿಗೂ ಹಾಗೂ ಜೀವಸಂಕುಲಕ್ಕೆ ಹಾನಿ ಈ ದಿಸೆಯಲ್ಲಿ ಮುಖ್ಯಮಂತ್ರಿಗಳು 2015ರಲ್ಲಿ ಪ್ಲಾಸ್ಟಿಕ್ ನಿμÉೀಧ ಕುರಿತು ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪರಿಸರ ಪ್ರತಿಜ್ಞಾವಿಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೋಧಿಸಿದರು. ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ 2024 ಮತ್ತು 2025 ಪ್ರದಾನ ಮಾಡಿದರು. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪಬಂಧ ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ 2 ವರ್ಷಗಳ ಸಾಧನೆ ಸಾರುವ “ತುಂಬಿತು ಎರಡು ವರುಷ, ಹಸಿರು ಸಂರಕ್ಷಣೆಯ ಹರುಷ” ಎಂಬ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ವಿಶ್ವ ಪರಿಸರ ದಿನದ ಅಂಗವಾಗಿ 2 ಮಹತ್ವದ ಸರ್ಕಾರಿ ಆದೇಶವನ್ನು ಅಧಿಕೃತವಾಗಿ ಅನಾವರಣ ಮಾಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ ಬಿ. ಎಸ್., ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಮ್ ಅಹಮದ್, ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಪ್ರಧಾನ ಕಾರ್ಯದರ್ಶಿ (ಜೀವಿಪರಿಸ್ಥಿತಿ ಮತ್ತು ಪರಿಸರ) ವಿಜಯ ಮೋಹನ್ ರಾಜ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಲಿಂಗರಾಜ ಎಸ್.ಎಸ್., ಸದಸ್ಯರುಗಳಾದ ಮರಿಸ್ವಾಮಿಗೌಡ ಕೆ, ಡಾ.ಪ್ರದೀಪ್ ಸಿ, ಶರಣ್ ಕುಮಾರ್ ಎಂ.ಮೋದಿ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ವಾಗ್ದೇವಿ ಭಜನಾ ಮಂಡಳಿಯ 35ನೇ ವಾರ್ಷಿಕೋತ್ಸವ ಹರಿದಾಸನಮನ 

 ಬೆಂಗಳೂರಿನ  ಬಸವನಗುಡಿ ಉತ್ತರಾದಿ ಮಠದಲ್ಲಿ ವಾಗ್ದೇವಿ ಭಜನಾ ಮಂಡಳಿಯ 35ನೇ ವಾರ್ಷಿಕೋತ್ಸವ ಹರಿದಾಸನಮನ  ಕಾರ್ಯಕ್ರಮ ಕ್ಕೆ ಪೂಜ್ಯ ಸುವಿದ್ಯೆನ್ಡ್ರ ತೀರ್ಥ ಶ್ರೀಪಾದರು ದೀಪ ಬೆಳಗಿ ಚಾಲನೆ ನೀಡಿ ಮಾತನಾಡಿ ಕಳೆದ 35 ವರ್ಷಗಳಿಂದ ಮಾತೆಯರಿಗೆ ನಮ್ಮ ಸನಾತನ ಪರಂಪರೆಯ ಸಾರರೂಪವಾದ ಹರಿದಾಸ ಸಾಹಿತ್ಯ ಅನೇಕ ಪ್ರಕಾರ ಗಳನ್ನು ಹೇಳಿಕೊಟ್ಟು ಸಂಸ್ಕೃತಿ ಪ್ರವರ್ಧನೆ ಯಲ್ಲಿ ಅನನ್ಯ ಕೊಡುಗೆ ನೀಡಿತ್ತಿರುವ ಡಾ ಎ ಕುಮುದ ರವರ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಡಾ. ಎ ಕುಮುದ ರವರು ಸಂಕಲನ ಮತ್ತು ಸಂಪಾದನೆ ಮಾಡಿರುವ ಶ್ರೀ ಲಕ್ಷ್ಮಿ ನರಸಿಂಹ ಭಜನಾವಳಿ ಕೃತಿಯನ್ನು ಖ್ಯಾತ ಹರಿದಾಸಸಾಹಿತ್ಯ ವಿದ್ವಾಂಸ ಡಾ ಅರಳುಮಲ್ಲಿಗೆ ಪಾರ್ಥಸಾರಥಿ ಲೋಕಾರ್ಪಣೆ ಗೊಳಿಸಿದರು.
 ಡಾ ಎ ಕುಮುದರವರು’ಹರಿದಾಸ ಸಾಹಿತ್ಯದಲ್ಲಿ ಮಹಾಲಕ್ಷ್ಮಿಯ ಪರಿಕಲ್ಪನೆ’ಎಂಬ ಸಂಶೋಧನಾತ್ಮಕ ಪ್ರಬಂಧ ಸಲ್ಲಿಸಿ ಶ್ರೀಪಾದರಾಜಮಠದ ಅಂಗಸಂಸ್ಥೆಯಾದ r ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯಿಂದ ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ .
ಜಯತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಡಾ ಸತ್ಯಧ್ಯಾನಾಚಾರ್ಯ ಕಟ್ಟಿ, ಹರಿದಾಸ ಸಾಹಿತ್ಯ ಚಿಂತಕಿ ಡಾ ರಾಜಲಕ್ಷ್ಮಿ ಪಾರ್ಥಸಾರಥಿ, ಶ್ರೀನಿವಾಸ ಉತ್ಸವ ಬಳಗ ಸಂಸ್ಥಾಪಕ ಡಾ ವಾದಿರಾಜ ತಾಯಲೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯಾರ್ಯಾರಿಗೆ ಸಿಗೋಲ್ಲ ರೇಷನ್ ಕಾರ್ಡ್?

 

ಬೆಂಗಳೂರು: ಅಕ್ರಮವಾಗಿ ಪಡಿತರ ಕಾರ್ಡ್ ಹೊಂದಿರೋ ಜನರಿಗೆ ಸರ್ಕಾರ ಶಾಕ್ ಕೊಟ್ಟಿದ್ದು ರಾಷ್ಟ್ರೀಯ ಆಹಾರ ಕಾಯ್ದೆ ಉಲ್ಲಂಘಿಸಿರುವ ಮತ್ತು ಅನರ್ಹ ಪಡಿತರ ಚೀಟಿ ಪತ್ತೆ ಸಲುವಾಗಿ ಖಾಸಗಿ ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ,
ರಾಜ್ಯದಲ್ಲಿ ಹೆಚ್ಚುಕ್ಕಮ್ಮಿ 44 ಲಕ್ಷ ಅನರ್ಹ ಪಡಿತರ ಫಲಾನುಭವಿಗಳು ಇದ್ದಾರೆ ಎಂಬ ಅಂಶ ಗೊತ್ತಾಗಿದ್ದು, ಇವುಗಳನ್ನು ರದ್ದುಪಡಿಸಲು ರಾಜ್ಯ ಸರ್ಕಾರ ಥರ್ಡ್ ಪಾರ್ಟಿ ಸರ್ವೇಗೆ ನಿರ್ಧರಿಸಿದೆ,
2011 ಜನಸಂಖ್ಯೆ ದತ್ತಾಂಶದ ಪ್ರಕಾರ 4,01,93,130 ಸ್ವೀಕೃತದಾರರ ಮಿತಿ ನಿಗದಿ ಮಾಡಲಾಗಿದೆ, ಆದರೆ 44 ಲಕ್ಷ ಹೆಚ್ಚುವರಿ ಕಾರ್ಡ್ ಇರುವುದಾಗಿ ಹೇಳುತ್ತಿದೆ, ಹೀಗಾಗಿ ಕಠಿಣ ಕ್ರಮ ಜರುಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ, ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಬಿದ್ದಿದೆ, ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ 2ನೇ ಸ್ಧಾನದಲ್ಲಿದ್ರೂ, ವೆಚ್ಚವನ್ನು ಸರಿದೂಗಿಸಲಾಗುತ್ತಿಲ್ಲ ಹೀಗಾಗಿ ಸರ್ವೇ ಗೆ ಸರ್ಕಾರ ಮುಂದಾಗಿದೆ,
ವ್ಯಕ್ತಿಯ ವಾರ್ಷಿಕ ಆದಾಯ 1.20 ಲಕ್ಷಗಿಂತ ಹೆಚ್ಚಿರುವ ಕುಟುಂಬ, 3 ಹೆಕ್ಟೇರ್ಗಿಂತ ಹೆಚ್ಚಿನ ಭೂಮಿ ಹೊಂದಿದವರು ಸರ್ಕಾರಿ, ಅನುದಾನಿತ, ಸರ್ಕಾರಿ ಸಂಯೋಜಿತ ಸಂಸ್ಧೆಗಳಲ್ಲಿ ನೌಕರರು ಬಿಪಿಎಲ್ ರೇಷನ್ ಕಾರ್ಡ್ ಹೊಂದಲು ಅನರ್ಹವಾಗುತ್ತಾರೆ, ಇದಲ್ಲದೆ 1 ಸಾವಿರ ಚದರಡಿ ಪಕ್ಕಾ ಮನೆ ಹೊಂದಿದ್ದರೆ ಆದಾಯ, ವೃತ್ತಿ ತೆರಿಗೆ, ಜಿಎಸ್ ಟಿ ಪಾವತಿದಾರರು ವಾಣಿಜ್ಯ ವಾಹನ ಹೊಂದಿದವರು ಕಾರ್ಡ್ ಹೊಂದಿದ್ದರೆ, ಅಂಥವರನ್ನು ಪತ್ತೆ ಹಚ್ಚಿ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ,