ಯುರೋಪ್: ಯುರೋಪಿನ ಪೋಲೆಂಡ್, ಸ್ಪೇನ್, ಬಲ್ಗೇರಿಯಾ ಮತ್ತು ಇಟಲಿ ದೇಶಗಳಲ್ಲಿ ಸಂಚರಿಸುತ್ತಿದ್ದ ಏಳು ಪ್ರಯಾಣಿಕ ವಿಮಾನಗಳಿಗೆ ನವೆಂಬರ್ 3ರಂದು ಪ್ರತ್ಯೇಕ ಬಾಂಬ್ ಬೆದರಿಕೆಗಳು(Separate bomb threats) ಬಂದಿದ್ದು, ವಿಮಾನಯಾನ ವಲಯದಲ್ಲಿ ಆತಂಕ ಸೃಷ್ಟಿಸಿವೆ. ಬೆದರಿಕೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳಲ್ಲಿ ತುರ್ತು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು. ಕೆಲವು ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಯಿತು. ಇಟಲಿಯಲ್ಲಿ ಒಂದು ವಿಮಾನಕ್ಕೆ ವಾಯುಪಡೆಯ ಯುದ್ಧವಿಮಾನಗಳು ಭದ್ರತಾ ಬೆಂಗಾವಲು ನೀಡಿದವು. ಆದರೆ ಎಲ್ಲಾ ಏಳು ವಿಮಾನಗಳು ಸುರಕ್ಷಿತವಾಗಿ ಇಳಿದಿದ್ದು, ತಪಾಸಣೆ ವೇಳೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಲೆಂಡ್‌ನಲ್ಲಿ ವಿಮಾನ ನಿಲ್ದಾಣ ತಾತ್ಕಾಲಿಕ ಬಂದ್

ಪೋಲೆಂಡ್‌ನಲ್ಲಿ ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಿಂದ ವಾರ್ಸಾಗೆ ತೆರಳುತ್ತಿದ್ದ LOT ಪೋಲಿಷ್ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅದನ್ನು ವಾರ್ಸಾ-ಮೋಡ್ಲಿನ್ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ವಿಮಾನ ಸುರಕ್ಷಿತವಾಗಿ ಇಳಿದ ಬಳಿಕ ಪ್ರಯಾಣಿಕರನ್ನು ಕೆಳಗಿಳಿಸಿ, ವಿಮಾನ ಹಾಗೂ ಅವರ ಸಾಮಾನುಗಳನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮೋಡ್ಲಿನ್ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಯಾವುದೇ ಸ್ಫೋಟಕ ಪತ್ತೆಯಾಗದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಮತ್ತೆ ಕಾರ್ಯಾರಂಭಿಸಿತು.

ಇದೇ ವೇಳೆ, ಕೋಪನ್‌ಹೇಗನ್‌ನಿಂದ ವಾರ್ಸಾಗೆ ಬರುತ್ತಿದ್ದ ಸ್ಕ್ಯಾಂಡಿನೇವಿಯನ್ ಏರ್‌ಲೈನ್ಸ್ (SAS) ವಿಮಾನಕ್ಕೂ ಬೆದರಿಕೆ ಬಂದಿತ್ತು. ವಿಮಾನ ನಿಗದಿತವಾಗಿ ಇಳಿದರೂ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದರು.

ಸ್ಪೇನ್‌ನಲ್ಲಿ ಬಾಂಬ್ ಬೆದರಿಕೆ ಸುಳ್ಳು ಎಂದು ದೃಢ

ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಿಂದ ಸ್ಪೇನ್‌ನ ಮುರ್ಸಿಯಾ ನಗರಕ್ಕೆ ತೆರಳುತ್ತಿದ್ದ ರೈನ್ಏರ್ (Ryanair) ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಕೆಲವು ಭಾಗಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಯಿತು. ವಿಮಾನದಲ್ಲಿದ್ದ 121 ಮಂದಿಯನ್ನು ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ವಿಮಾನವನ್ನು ಪರಿಶೀಲಿಸಿದರು. ಬಳಿಕ ಯಾವುದೇ ಸ್ಫೋಟಕ ವಸ್ತು ಇಲ್ಲ ಎಂಬುದು ದೃಢಪಟ್ಟಿದ್ದು, ಬೆದರಿಕೆಯನ್ನು ಸುಳ್ಳು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

ಇಟಲಿಯಲ್ಲಿ ಯುದ್ಧವಿಮಾನಗಳ ಬೆಂಗಾವಲು

ಇಟಲಿಯ ರೋಮ್‌ನ ಫಿಯುಮಿಚಿನೊ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಎರಡು ರೈನ್ಏರ್ ವಿಮಾನಗಳಿಗೆ ಪ್ರತ್ಯೇಕವಾಗಿ ಬಾಂಬ್ ಬೆದರಿಕೆ ಬಂದಿತ್ತು. ಒಂದು ವಿಮಾನ ಪೋರ್ಚುಗಲ್‌ನ ಲಿಸ್ಬನ್‌ನಿಂದ ಬಂದಿದ್ದರೆ, ಮತ್ತೊಂದು ಐರ್ಲೆಂಡ್‌ನ ಡಬ್ಲಿನ್‌ನಿಂದ ಆಗಮಿಸಿತ್ತು.

ಡಬ್ಲಿನ್‌ನಿಂದ ಬರುತ್ತಿದ್ದ ವಿಮಾನಕ್ಕೆ ಇಟಲಿ ವಾಯುಪಡೆಯ ಎರಡು ಯೂರೋಫೈಟರ್ ಯುದ್ಧವಿಮಾನಗಳು ಬೆಂಗಾವಲು ನೀಡಿದವು. ವಿಮಾನ ಸುರಕ್ಷಿತವಾಗಿ ಇಳಿದ ಬಳಿಕ ಪ್ರಯಾಣಿಕರು, ಸಿಬ್ಬಂದಿ ಹಾಗೂ ಲಗೇಜ್‌ಗಳನ್ನು ಪರಿಶೀಲಿಸಲಾಯಿತು. ಎರಡೂ ವಿಮಾನಗಳಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಲಿಲ್ಲ.

ಬಲ್ಗೇರಿಯಾದಲ್ಲೂ ಎರಡು ವಿಮಾನಗಳಿಗೆ ಬೆದರಿಕೆ

ಬಲ್ಗೇರಿಯಾದ ಸೋಫಿಯಾ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಎರಡು ವಿಮಾನಗಳಿಗೂ ಬಾಂಬ್ ಬೆದರಿಕೆ ಬಂದಿತ್ತು. ಇಟಲಿಯ ಬೆರ್ಗಾಮೊದಿಂದ ಬರುತ್ತಿದ್ದ ವಿಸ್ ಏರ್ (Wizz Air) ವಿಮಾನದಲ್ಲಿ 176 ಪ್ರಯಾಣಿಕರಿದ್ದರು. ಡಬ್ಲಿನ್‌ನಿಂದ ಆಗಮಿಸುತ್ತಿದ್ದ ರೈನ್ಏರ್ ವಿಮಾನದಲ್ಲಿ 186 ಮಂದಿ ಪ್ರಯಾಣಿಸುತ್ತಿದ್ದರು. ಎರಡೂ ವಿಮಾನಗಳು ಸುರಕ್ಷಿತವಾಗಿ ಇಳಿದಿದ್ದು, ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದಾಗ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂದು ಬಲ್ಗೇರಿಯಾದ ಸಾರಿಗೆ ಸಚಿವಾಲಯ ತಿಳಿಸಿದೆ.

ಬೆದರಿಕೆಗಳ ಹಿಂದೆ ಯಾರಿದ್ದಾರೆ?

ಈ ಘಟನೆಗಳು ಒಂದೇ ದಿನದಲ್ಲಿ ನಡೆದಿರುವುದು ಯುರೋಪಿನ ವಿಮಾನಯಾನ ಭದ್ರತೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆದರಿಕೆಗಳ ಹಿಂದೆ ಒಂದೇ ವ್ಯಕ್ತಿ ಅಥವಾ ಸಂಘಟನೆ ಇದೆಯೇ, ಅಥವಾ ಪ್ರತ್ಯೇಕ ಘಟನೆಗಳೇ ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಇದುವರೆಗೆ ಯಾವುದೇ ವ್ಯಕ್ತಿ ಅಥವಾ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ. ಯಾವುದೇ ದೇಶವೂ ನಿರ್ದಿಷ್ಟವಾಗಿ ಯಾರ ಮೇಲೂ ಆರೋಪ ಮಾಡಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇದಕ್ಕೂ ಒಂದು ದಿನ ಮೊದಲು, ಅಂದರೆ ನವೆಂಬರ್ 2ರಂದು, ಲಂಡನ್‌ನಿಂದ ಬಲ್ಗೇರಿಯಾದ ಸೋಫಿಯಾಗೆ ತೆರಳುತ್ತಿದ್ದ ವಿಸ್ ಏರ್ ವಿಮಾನಕ್ಕೂ ಬಾಂಬ್ ಬೆದರಿಕೆ ಬಂದಿತ್ತು. ಪರಿಣಾಮವಾಗಿ ವಿಮಾನವನ್ನು ಹಂಗೇರಿಯ ಬುಡಾಪೆಸ್ಟ್‌ಗೆ ತಿರುಗಿಸಲಾಗಿತ್ತು. ಅಲ್ಲಿ ಪರಿಶೀಲನೆ ನಡೆಸಿದಾಗಲೂ ಯಾವುದೇ ಸ್ಫೋಟಕ ಪತ್ತೆಯಾಗಿರಲಿಲ್ಲ.

ಒಟ್ಟಾರೆ, ಏಳು ವಿಮಾನಗಳಿಗೆ ಬಂದ ಬೆದರಿಕೆಗಳು ಯುರೋಪಿನ ಹಲವು ವಿಮಾನ ನಿಲ್ದಾಣಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟುಮಾಡಿದರೂ, ಎಲ್ಲ ವಿಮಾನಗಳೂ ಸುರಕ್ಷಿತವಾಗಿ ಇಳಿದಿವೆ. ಘಟನೆಗಳ ಮೂಲ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ

Hot this week

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

Topics

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

Related Articles