ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ ಮಕ್ಕಳ ಮೇಲಿನ ದೈಹಿಕ ಹಿಂಸೆ ಪ್ರಕರಣ – ಆರೋಪಿಗಳ ಬಂಧನ

ಬೆಂಗಳೂರಿನ ಡೇ-ಕೇರ್ ಸೆಂಟರ್‍ನಲ್ಲಿ(Day care Centre) ಮಕ್ಕಳ ಮೇಲಿನ ದೈಹಿಕ ಹಿಂಸೆ ಪ್ರಕರಣ – ಆರೋಪಿಗಳ ಬಂಧನ

ಕಾನೂನಿನ ರೀತಿ ಎಲ್ಲಾ ಅಗತ್ಯ ಕ್ರಮಗಳನ್ನು ಜರುಗಿಸಲಾಗಿದೆ – ಅಧ್ಯಕ್ಷ ಸಂತೋಷ್  ಕುಮಾರ್

ಬೆಂಗಳೂರು, ಜುಲೈ04: ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರ(Private Institution) ಆವರಣದಲ್ಲಿ ನಡೆಯುತ್ತಿರುವ ಮಕ್ಕಳ ಪಾಲನಾ ಕೇಂದ್ರದಲ್ಲಿ ನಡೆದಿರುವ ಅಮಾನವೀಯ ಘಟನೆಗೆ(Inhumane incident) ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮಗಳು ಕೈಗೊಂಡು ಆರೋಪಗಳನ್ನು ಬಂಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಸಂತೋಷ್ ಕುಮಾರ್ ತಿಳಿಸಿದರು.

ಇಂದು ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ(Press Conference) ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, “ಕ್ಯಾಪ್ ಜಿಮಿನಿ”(Cap Gemini) ಎಂಬ ಖಾಸಗಿ ಸಂಸ್ಥೆಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಲಿಟಲ್ ಸ್ಕಾಲರ್ ಬೇಬಿ ಕೇರ್ ಸೆಂಟರ್’ನಲ್ಲಿ(Little Scaler Baby Care Center) ಮಕ್ಕಳಿಗೆ ದೈಹಿಕ ಹಿಂಸೆ ನೀಡಲಾಗುತ್ತಿದೆ ಎಂಬ ಕುರಿತು 2026 ನೇ ಜೂನ್.25 ರ ರಾತ್ರಿ ಮಕ್ಕಳ ಸಹಾಯವಾಣಿಗೆ (Child Helpline) ಕರೆ ಬಂದಿದೆ. ಈ ದೂರಿನ ಆಧಾರದ ಮೇಲೆ ಬೆಂಗಳೂರಿನ ಹೆಚ್.ಎ.ಎಲ್(HAL)  ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಗಮನಿಸಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತ (Suo Motu) ದೂರನ್ನು ದಾಖಲಿಸಿಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣ ಸೂಕ್ತ ಕ್ರಮ ಜರುಗಿಸಿ, ವಿಸ್ತø್ತತ ವರದಿಯನ್ನು ಸಲ್ಲಿಸುವಂತೆ ಹೆಚ್.ಎ.ಎಲ್ ಪೊಲೀಸ್ ಠಾಣೆ ಹಾಗೂ ಬೆಂಗಳೂರು ಪೂರ್ವ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಘಟನೆಯ ಕುರಿತು ವಸ್ತುಸ್ಥಿತಿಯನ್ನು ಅರಿಯಲು ಆಯೋಗದ ತಂಡವು 2026 ನೇ ಜುಲೈ 02 ರಂದು ‘ಲಿಟಲ್ ಸ್ಕಾಲರ್ ಬೇಬಿ ಕೇರ್ ಸೆಂಟರ್’ ಮತ್ತು ಹೆಚ್.ಎ.ಎ.ಲ್ ಪೊಲೀಸ್ ಠಾಣೆಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಹಾಗೂ ಅಗತ್ಯ ಮಾಹಿತಿಗಳನ್ನು ಕಲೆಹಾಕಿದೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (NCPCR) ಸಹ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದು, ಆಯೋಗದ ಪ್ರತಿನಿಧಿಗಳ ತಂಡವು ದಿನಾಂಕ: 03-07-2026 ಮತ್ತು 04-07-2026 ರಂದು ಸದರಿ ಡೇ-ಕೇರ್ ಸೆಂಟರ್ ಹಾಗೂ ಪೊಲೀಸ್ ಠಾಣೆಗೆ ಭೇಟಿ ನೀಡಿ ತನಿಖೆಯ ಪ್ರಗತಿಯನ್ನು ಪರಿಶೀಲಿಸಿದೆ.

ಪೊಲೀಸ್ ಇಲಾಖೆಯು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿಕೊಂಡಿದೆ. ತೀವ್ರ ವಿಚಾರಣೆಯ ನಂತರ, ಸದರಿ ಡೇ-ಕೇರ್ ಸೆಂಟರ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಮಾನ್ಯ ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗಿದೆ. ಸದ್ಯ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷರು ತಿಳಿಸಿದರು.

Hot this week

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ(Central Election) ಆಯೋಗಕ್ಕೆ ಮನವಿ ಎಸ್‍ಐಆರ್(SIR) ದುರ್ಬಳಕೆಗೆ...

ಅಕ್ರಮ ಗಣಿಗಾರಿಕೆಗೆ ಕಡಿವಾಣ- ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಫ್ರೀಡಂ ಪಾರ್ಕ್‌ನಲ್ಲಿ...

*ಶಾಸಕ ಬಿ.ಝಡ್ . ಜಮೀರ್ ಅಹಮದ್ ಖಾನ್ ಅವರಿಗೆ ಅಹಿಂದ ಕೋಟಾದಲ್ಲಿ ಸಚಿವ ಸ್ಥಾನ – ವಿನೂತನ ಪ್ರತಿಭಟನೆ*

*ಶಾಸಕ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರಿಗೆ ಅಹಿಂದ ಕೋಟಾದಲ್ಲಿ ಸಚಿವ...

ಶ್ರೀ ಬಿ. ಗಜೇಂದ್ರ ಅವರ ನೇತೃತ್ವದ ಪ್ರತಿನಿಧಿ ಮಂಡಳಿಯು ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರನ್ನು ಲೋಕಭವನದಲ್ಲಿ ಭೇಟಿ.

ಕರ್ನಾಟಕ ರಾಜ್ಯ ಜ್ಯೋತಿಷ್ಯರು ಹಾಗೂ ಜ್ಯೋತಿಷ್ಯ ಸಂಸ್ಥೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ...

ವೆಲ್ಲೂರು ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿ, ವಿಷೇಶ ಪೂಜೆ ಸಲ್ಲಿಸಿದ ರಾಜ್ಯಪಾಲರು

ಶ್ರೀಪುರಂ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ ಗೌರವಾನ್ವಿತ , ರಾಜ್ಯಪಾಲರಾದ ಶ್ರೀ...

Topics

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ಅವ್ಯವಸ್ಥೆ ಸರಿಪಡಿಸಲು ಕೇಂದ್ರ ಚುನಾವಣಾ(Central Election) ಆಯೋಗಕ್ಕೆ ಮನವಿ ಎಸ್‍ಐಆರ್(SIR) ದುರ್ಬಳಕೆಗೆ...

ಅಕ್ರಮ ಗಣಿಗಾರಿಕೆಗೆ ಕಡಿವಾಣ- ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದಿಂದ ಫ್ರೀಡಂ ಪಾರ್ಕ್‌ನಲ್ಲಿ...

ವೆಲ್ಲೂರು ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿ, ವಿಷೇಶ ಪೂಜೆ ಸಲ್ಲಿಸಿದ ರಾಜ್ಯಪಾಲರು

ಶ್ರೀಪುರಂ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ ಗೌರವಾನ್ವಿತ , ರಾಜ್ಯಪಾಲರಾದ ಶ್ರೀ...

ನಾಡಪ್ರಭು ಕೆಂಪೇಗೌಡರ ದಿನಾಚರಣೆ : ರಾಜಾಜಿನಗರ ವಿಧಾನಸಭಾ ಕ್ಷೇತ್ರ

ರಾಜಾಜಿನಗರ ವಿಧಾನಸಭಾ ಕ್ಷೇತ್ರ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ 517ನೇ ನಾಡಪ್ರಭು...

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ – ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಸ್‌ಐಆರ್‌ ಅರ್ಜಿಗಳು ಬೀದಿಯಲ್ಲಿ ವಿತರಣೆ, ಬಾಂಗ್ಲಾ ನಿವಾಸಿಗಳನ್ನು ಮತದಾರರ ಪಟ್ಟಿಗೆ ಸೇರಿಸುವ...

ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಕ್ರಮ ಕೈಗೊಳ್ಳಬೇಕು

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹಬೆಂಗಳೂರು: ಜಿಬಿಎ(GBA)...

Related Articles