ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ 2025 – ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಕುರಿತಾಗಿ ವರದಿ ಸಲ್ಲಿಸಲು ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ.
ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದ್ದು,  ಸದರಿ ಆಯೋಗವು,  2025ನೇ ಮಾರ್ಚ್ ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು (Empirical Data) ಸಂಗ್ರಹಿಸಲು ಪರಿಶಿಷ್ಟ ಜಾತಿ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು ಏಪ್ರಿಲ್  05 ರಿಂದ ಕೈಗೊಳ್ಳಲಾಗುತ್ತಿದೆ.
ಪ್ರಸ್ತುತ ಕರ್ನಾಟಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ – 2025 ರನ್ನು  2025 ನೇ ಜೂನ್ 08 ರವರೆಗೆ ವಿಶೇಷ ಶಿಬಿರಗಳು ಹಾಗೂ online ನಲ್ಲಿ ಸ್ವಯಂ ಘೋಷಣೆಗಳನ್ನು ಒಳಗೊಂಡಂತೆ ಒಟ್ಟು 2 ವಿಧಾನಗಳಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.
ಈಗಾಗಲೇ 2025ನೇ ಜೂನ್ 06 ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90.00 ರಷ್ಟು ಪ್ರಗತಿಯನ್ನು ಸಾಧಿಸಲಾಗಿರುತ್ತದೆ.  ಉಳಿದಂತೆ ಸುಮಾರು ಶೇ. 10 ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿರುತ್ತದೆ.
ಕೆಲವು ಪರಿಶಿಷ್ಟ ಜಾತಿಗೆ ಸೇರಿದ ಸಂಘ ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಪುನಃ ವಿಸ್ತರಿಸಬೇಕೆಂದು ಮನವಿಯನ್ನು ಸಲ್ಲಿಸಿರುತ್ತಾರೆ. ಆದರೆ, ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ.
ಹೀಗಾಗಿ, ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು 2025 ಜೂನ್ ರಿಂದ ರಾಜ್ಯದಲ್ಲಿನ ಒಟ್ಟು 9400 ನಾಗರೀಕ ಸೇವಾ ಕೇಂದ್ರಗಳಾದ, “ಕರ್ನಾಟಕ ಒನ್” (Karnataka one) ‘ಬೆಂಗಳೂರು ಒನ್” (Bengaluru one) ” ” (Grama one)  ಹಾಗೂ 198  ಬಿ.ಬಿ.ಎಂ. ಪಿ ವಾರ್ಡ್ ಕಚೇರಿ” (BBMP ward offices) ಗಳಿಗೆ ಭೇಟಿ ನೀಡಿ 2025ನೇ ಜೂನ್ 22 ರವರೆಗೂ ತಮ್ಮ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಇದಲ್ಲದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸದರಿ ಅವಕಾಶವನ್ನು ಕಲ್ಪಿಸಲಾಗುವುದು. ಸದರಿ ಮಾಹಿತಿಯನ್ನು ನಮೂದಿಸಲು ಸಾರ್ವಜನಿಕರಿಗೆ, ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆಯ ಅವಶ್ಯಕತೆಯಿರುತ್ತದೆ.
ಮುಂದುವರೆದು, online ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು https://schedulecastesurvey.karnataka.gov.in/selfdeclaration  ಲಿಂಕ್ ಮೂಲಕ  2025ನೇ ಜೂನ್ 22 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles