ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ ಸರ್ಕಾರವು ಹೊಸ ಆಲೋಚನೆಗಳು ಹಾಗೂ ಜನಪರವಾದ ಕಾರ್ಯಕ್ರಮಗಳನ್ನು ಕೇವಲ ನೂರು ದಿನಗಳಲ್ಲಿ ರಾಜ್ಯದ ಜನತೆಗೆ ತಲುಪಿಸುವ ಕಾರ್ಯ ಮಾಡಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ(Dr.G.Parameshwar) ಅವರು ಹೇಳಿದರು.

ರಾಜ್ಯ ಸರ್ಕಾರದ “ದೃಢ ಕರ್ನಾಟಕದ ಸಂಕಲ್ಪ – 100 ದಿನಗಳ ಯಶಸ್ವಿ ಪೂರೈಕೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲದ ವಾತಾವರಣವಿರುವುದರಿಂದ ಆಡಂಬರದ ಸಂಭ್ರಮಾಚರಣೆ ಮಾಡದೆ, ಸರಳವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು.

ಬರ ಪರಿಹಾರ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯ :
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇನ್ನು 100ಕ್ಕೂ ಹೆಚ್ಚು ತಾಲ್ಲೂಕುಗಳ ಅಧ್ಯಯನ ನಡೆಯುತ್ತಿದೆ. ಹಿಂದೆ ಬಂದಿದ್ದ ಭೀಕರ ಬರಗಾಲದ ಸಂದರ್ಭದಲ್ಲಿ ರಾಜ್ಯಕ್ಕೆ ಸಂಭವಿಸಿದ್ದ ರೂ.39,000 ಕೋಟಿ ನಷ್ಟಕ್ಕೆ ಕೇಂದ್ರದಿಂದ ರೂ.18,000 ಕೋಟಿ ಪರಿಹಾರ ಕೋರಿದ್ದರೂ ಸ್ಪಂದನೆ ಸಿಗದೆ, ಕೊನೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ರೂ.3,454 ಕೋಟಿ ಪಡೆಯಬೇಕಾಯಿತು. ಜಿಎಸ್‍ಟಿ ಪರಿಹಾರ ಸ್ಥಗಿತ, 15ನೇ ಹಣಕಾಸು ಆಯೋಗದ ತೆರಿಗೆ ಪಾಲು ಕಡಿತ ಹಾಗೂ ಜೆಜೆಎಂ ಅನುದಾನ ಬಾಕಿಯಿಂದ ರಾಜ್ಯಕ್ಕೆ ಭಾರಿ ನಷ್ಟವುಂಟಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರ ಆರ್ಥಿಕ ದೃಷ್ಟಿಕೋನ ಮತ್ತು 11ಜಿ ಮಾದರಿ :
ಇಷ್ಟೇಲ್ಲಾ ಸಂಕಷ್ಟಗಳ ನಡುವೆಯೂ 16 ಬಜೆಟ್‍ಗಳನ್ನು ನೀಡಿದ ನಾಯಕರಾದ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಅತ್ಯಂತ ಆರೋಗ್ಯಕರವಾಗಿ ಇಟ್ಟಿದ್ದಾರೆ. ರೂ. 1,50,126 ಕೋಟಿ ವೆಚ್ಚದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದ್ದು, ಇವು ಜಾಗತಿಕ ಮಟ್ಟದಲ್ಲೂ ಮೆಚ್ಚುಗೆ ಪಡೆದಿವೆ. ನ್ಯೂಯಾರ್ಕ್ ಮೇಯರ್ ಮಮ್ದಾನಿ ಅವರು ಶಕ್ತಿ ಯೋಜನೆಯನ್ನು ಉದಾಹರಣೆಯಾಗಿ ತೆಗೆದುಕೊಂಡು ಅಲ್ಲಿ 50% ರಿಯಾಯಿತಿ ದರದಲ್ಲಿ ಜಾರಿ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿದ್ದ 590 ಭರವಸೆಗಳಲ್ಲಿ ಈಗಾಗಲೇ 245ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಲಾಗಿದೆ. ಸಿದ್ದರಾಮಯ್ಯನವರು ಪ್ರತಿಪಾದಿಸಿದ ಗ್ಯಾರಂಟಿ, ಗ್ರಾಸ್ ರೂಟ್, ಗಿಗ್, ಹಸಿರು ಹಾಗೂ ನಗರಾಭಿವೃದ್ಧಿ ಒಳಗೊಂಡ 11ಜಿ ಆರ್ಥಿಕ ಮಾದರಿಯ ಹಾದಿಯಲ್ಲೇ ಪ್ರಸ್ತುತ ಸರ್ಕಾರ ಸಾಗುತ್ತಿದೆ ಎಂದು ತಿಳಿಸಿದರು.

ಯುವಜನತೆ ಮತ್ತು ಉದ್ಯೋಗ :
ದೇಶದಲ್ಲಿ 40 ಕೋಟಿ ಇರುವ ‘ಜೆನ್‍ಜಿ’ ಯುವಸಮೂಹದ ಭವಿಷ್ಯ ರೂಪಿಸಲು ಸರ್ಕಾರ ಬದ್ಧವಾಗಿದೆ. ಈ ಹಿಂದೆ ಸಿದ್ದರಾಮಯ್ಯನವರ ಅವಧಿಯಲ್ಲಿ ಆರಂಭವಾಗಿದ್ದ 72,000 ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಹಾಗೂ ‘ಯುವ ಉದ್ಯೋಗ ಸೇತು’ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ಪುನಾರಂಭಿಸಲು ತೀರ್ಮಾನಿಸಲಾಗಿದೆ.

ರಾಹುಲ್ ಗಾಂಧಿ ಪಾದಯಾತ್ರೆಯ ಸ್ಮರಣೆ – ಭಾರತ್ ಜೋಡೊ ಸಂಘಗಳು :
ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಪಾದಯಾತ್ರೆ ಪೂರ್ಣಗೊಂಡು 5 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ, ಗ್ರಾಮೀಣ ಯುವಕರಲ್ಲಿ ಸಹೋದರತ್ವ ಬೆಳೆಸಲು ರಾಜ್ಯದಾದ್ಯಂತ 1,000 ಕೋಟಿ ರೂ. ವೆಚ್ಚದಲ್ಲಿ 10 ಸಾವಿರ ‘ಭಾರತ್ ಜೋಡೊ ಸಂಘ’ಗಳನ್ನು ಸ್ಥಾಪಿಸಲಾಗುತ್ತಿದೆ. ಸದಸ್ಯತ್ವ ಆರಂಭಗೊಂಡ ಕೇವಲ ಒಂದು ವಾರದಲ್ಲೇ 7.3 ಲಕ್ಷ ಯುವಕರು ನೊಂದಾಯಿಸಿಕೊಂಡಿದ್ದಾರೆ.

ನೂರು ದಿನಗಳ ಸಾಧನೆಯ ಹೊಸ ಯೋಜನೆಗಳು:
ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆ: ಗ್ರಾಮೀಣ ಭಾಗದಲ್ಲಿ ಉಳುಮೆಯಿಲ್ಲದೆ ಉಳಿದಿರುವ ಕೃಷಿ ಭೂಮಿಯನ್ನು ಸರ್ಕಾರವೇ ಉಳುಮೆ ಮಾಡಿಕೊಡಲು ನಿರ್ಧಾರ.

ಪ್ರಜಾಸೇವೆ ಕಾರ್ಯಕ್ರಮ: ಸಚಿವರು ಮತ್ತು ಶಾಸಕರು ತಿಂಗಳಿಗೆ ಎರಡು ಬಾರಿ ಜನರ ಮನೆ ಬಾಗಿಲಿಗೆ ತೆರಳಿ ಕುಂದುಕೊರತೆ ಪರಿಹರಿಸುವ ಯೋಜನೆ.

ಎಐ ವಿಶ್ವವಿದ್ಯಾಲಯ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಯುವಕರನ್ನು ಸಜ್ಜುಗೊಳಿಸಲು ಎಐ ವಿಶ್ವವಿದ್ಯಾಲಯ ಸ್ಥಾಪನೆ ಹಾಗೂ ಐಐಐಟಿ ಬೆಂಗಳೂರಿನಲ್ಲಿ ಸೂಕ್ತ ಕಾರ್ಯಕ್ರಮಗಳ ಆಯೋಜನೆ.

5 ಲಕ್ಷ ನಿವೇಶನಗಳ ಹಂಚಿಕೆ: ರಾಜ್ಯಾದ್ಯಂತ ವಸತಿ ರಹಿತರಿಗೆ ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳನ್ನು ಮುಂದಿನ ಎರಡು ತಿಂಗಳಲ್ಲಿ ವಿತರಿಸುವ ಗುರಿ (ಒಂದು ಜಿಲ್ಲೆಗೆ 50 ಸಾವಿರ ನಿವೇಶನ).

ಕರ್ನಾಟಕ ಏರೋಸ್ಪೇಸ್ ಪಾಲಿಸಿ 2026-2031: ಏರೋಸ್ಪೇಸ್ ತಂತ್ರಜ್ಞಾನ ಹಾಗೂ ಎಚ್‍ಎಎಲ್ ಸಹಯೋಗದ ಉತ್ಪಾದನೆಗೆ ಉತ್ತೇಜನ ನೀಡಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿ.

ಶ್ರಮಿಕ ನಿವಾಸ ಯೋಜನೆ: ದೊಡ್ಡ ಕೈಗಾರಿಕೆಗಳ ಕಾರ್ಮಿಕರಿಗೆ ಕೆಲಸದ ಸ್ಥಳದ ಸಮೀಪದಲ್ಲೇ ಮನೆ ನಿರ್ಮಿಸಿಕೊಳ್ಳಲು ಸಹಾಯಧನ.

ತೇಗ ಸಿರಿ ಯೋಜನೆ: ತೋಟದ ಬೇಲಿಗಳಲ್ಲಿ ತೇಗದ ಗಿಡ ಬೆಳೆಸುವ ರೈತರಿಗೆ ಲಾಭದಲ್ಲಿ ಶೇ 70ರಷ್ಟು ಹಂಚಿಕೆ ನೀಡುವ ಯೋಜನೆ.

ನೂತನ ಜವಳಿ ಮತ್ತು ಸಿದ್ಧ ಉಡುಪು ನೀತಿ 2026-31: ಬೆಂಗಳೂರಿನ ಹೊರತಾಗಿ ಇತರ ಜಿಲ್ಲೆಗಳಿಗೂ ಉಡುಪು ತಯಾರಿಕಾ ಕೈಗಾರಿಕೆಗಳನ್ನು ವಿಸ್ತರಿಸಲು ಪೆÇ್ರೀತ್ಸಾಹ.

ಶಕ್ತಿ ಸ್ಮಾರ್ಟ್ ಕಾರ್ಡ್: ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಗುರುತಿಗಾಗಿ ಸ್ಮಾರ್ಟ್ ಕಾರ್ಡ್ ವಿತರಣೆ.

ಇದೇ ಸಂದರ್ಭದಲ್ಲಿ ‘ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ’ಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಚಾಲನೆ ನೀಡಿದರು

ಸಮಾರಂಭಕ್ಕೆ ಆಗಮಿಸಿದ್ದ ಎಲ್ಲಾ ಗಣ್ಯಮಾನ್ಯರಿಗೆ ಸ್ವಾಗತ ಕೋರಿ ಮಾತನಾಡಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಕೃಷ್ಣಬೈರೇಗೌಡ ಅವರು, ಸರ್ಕಾರ ಕೈಗೊಂಡಿರುವ ಪ್ರತಿಯೊಂದು ಹೆಜ್ಜೆಯು ಮುಂದಿನ ಎರಡು ವರ್ಷಗಳು ಮಾತ್ರವಲ್ಲದೆ, ಕರ್ನಾಟಕದ ಭವಿಷ್ಯದ ಪ್ರಗತಿಗೆ ಮೂಲಾಧಾರವಾಗಿದೆ ಎಂದು ತಿಳಿಸಿದರು.

ಈ 100 ದಿನಗಳ ಸಾಧನೆಯು ದೃಢ ಕರ್ನಾಟಕದ ನಿರ್ಮಾಣದ ಸಂಕಲ್ಪವನ್ನು ತೋರಿಸುತ್ತದೆ ಹಾಗೂ ಭವಿಷ್ಯದ ಸುವರ್ಣ ಅಭಿವೃದ್ಧಿಗೆ ನಾಂದಿಯಾಗಿದೆ.

ಸಾರ್ವಜನಿಕರು ಆಶೀರ್ವಾದ ನೀಡಿ ವಿಧಾನಸೌಧದಲ್ಲಿ ಜನಸೇವೆ ಮಾಡಲು ಅವಕಾಶ ನೀಡಿದ್ದು, ಅದೇ ವಿಧಾನಸೌಧದಲ್ಲಿ ಈ ಕಾರ್ಯಕ್ರಮದ ಮೂಲಕ ಸಾಧನೆಗಳನ್ನು ಜನರಿಗೆ ಸಮರ್ಪಿಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ದೃಢ ಕರ್ನಾಟಕದ ಸಂಕಲ್ಪ ಶತಕದ ಪಥ ಪ್ರತಿಯ ರಥ ಕಾರ್ಯಕ್ರಮದಲ್ಲಿ ಜಾರಿಗೆ ತರಲಾದ ಈ ಕೆಳಕಂಡ ಹೊಸ ಯೋಜನೆಗಳಿಗೆ ಚಾಲನೆ ನೀಡಲಾಯಿತು.

ವಿವಿಧ ಇಲಾಖೆಗಳ ಹಲವು ಸೇವೆಗಳಿಗೆ ಒಂದೇ ವೇದಿಕೆಯಲ್ಲಿ ಸೇವೆಗಳನ್ನು ಒದಗಿಸುವ ಸಲುವಾಗಿ ನಮ್ಮ ಸೇವಾ ಒನ್ ಅಪ್ಲಿಕೇಷನ್ ಬಿಡುಗಡೆ ಮಾಡಲಾಯಿತು.

ರೈತರಿಗೆ ಕೃಷಿಯನ್ನು ಲಾಭದಾಯಕವಾಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆಗೆ ಚಾಲನೆ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಆಧುನಿಕ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ನಮ್ಮ ಶಾಲೆ-ನಮ್ಮ ಜವಾಬ್ದಾರಿ ಎಂಬ ಸಿ.ಎಸ್.ಆರ್ ಪೆÇೀರ್ಟಲ್‍ಗೆ ಚಾಲನೆ ನೀಡಲಾಯಿತು.

ಪ್ರಯಾಣಿಕರ ವಿವಿಧ ಸೇವೆಗಳನ್ನು ಪಡೆದುಕೊಳ್ಳುವ ಸಲುವಾಗಿ ಅನುಕೂಲವಾಗುವಂತೆ ಬಿ.ಎಂ.ಟಿ.ಸಿ 2.0 ಮತ್ತು ಕೆ.ಎಸ್.ಆರ್.ಟಿ.ಸಿ 2.0 ಆಪ್ ಬಿಡುಗಡೆ ಮಾಡಲಾಯಿತು.

ನಿವೇಶನವಿಲ್ಲದ ಐದು ಲಕ್ಷ ಗ್ರಾಮೀಣ ಜನರಿಗೆ ನಿವೇಶನ ಒದಗಿಸುವ ಸಲುವಾಗಿ ನಿವೇಶನ ನೀಡುವ ಯೋಜನೆಯ ಒಡಂಬಂಡಿಕೆ ಪತ್ರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಪತ್ರಕ್ಕೆ ಸಹಿ ಮಾಡಲಾಯಿತು.

ವಿದ್ಯಾದ್ಯಾರ್ಥಿಗಳು ಸಾರ್ವಜನಿಕ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಸೇವೆಯನ್ನು ಪ್ರಾರಂಭಿಸಲಾಗಿದ್ದು, ಸಾಂಕೇತಿಕವಾಗಿ 5 ಜನ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಯಿತು.

ಸಮಾರಂಭದಲ್ಲಿ ಸಂಪುಟದ ಎಲ್ಲಾ ಸಚಿವರು, ಶಾಸಕರು, ವಿಧಾನ ಪರಿಷತ್ತಿನ ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು, ಗ್ಯಾರೆಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಫಲಾನುಭವಿಗಳು ಹಾಗೂ ವಿವಿಧ ಕ್ಷೇತ್ರದ ಕಾರ್ಮಿಕರನ್ನು ಒಳಗೊಂಡಂತೆ, ಸಮಾಜದ ವಿವಿಧ ವರ್ಗಗಳ ಫಲಾನುಭವಿಗಳು ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆಯು ಆಯೋಜಿಸಿರುವ “ಕಲಾ ಸಂಗಮ”(Kala Sangama)...

Related Articles