ಮಾದಕ ದ್ರವ್ಯ ಮುಕ್ತ ಯುವಕರೇ ವಿಕಸಿತ ಭಾರತದ ಶಕ್ತಿ: ರಾಜ್ಯಪಾಲ ಗೆಹ್ಲೋಟ್

ಪ್ರಧಾನ ಮಂತ್ರಿನರೇಂದ್ರಮೋದಿ (PM Modi) ಅವರು ರಾಷ್ಟ್ರವ್ಯಾಪಿ ‘ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾದಕ ದ್ರವ್ಯ ಮುಕ್ತ ಯುವಕರು–ಸಂಕಲ್ಪ ಅಭಿಯಾನ’ಕ್ಕೆ (Drug-Free Youth Are the Strength of Viksit Bharat) ವರ್ಚುವಲ್ ಮೂಲಕ ಚಾಲನೆ ನೀಡಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ Governor Thaawarchand Gehlot ಅವರು ಬೆಂಗಳೂರಿನಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾದಕದ್ರವ್ಯ ಮುಕ್ತ ಹಾಗೂ ಅಭಿವೃದ್ಧಿ ಹೊಂದಿದ ಭಾರತನಿರ್ಮಾಣಕ್ಕೆ ಕರೆ ನೀಡಿದರು.
ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಮಾಯಿ ಭಾರತ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ದಿಶಾಬೋಧ್ ಫೌಂಡೇಶನ್, ಮೋಹನ್‌ಜಿ ಫೌಂಡೇಶನ್ ಹಾಗೂ ವಿವಿಧ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾದ ಈ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, “ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾದಕ ದ್ರವ್ಯ ಮುಕ್ತ ಯುವಕರು” ಎಂಬ ಸಂಕಲ್ಪವು ಕೇವಲ ಜಾಗೃತಿ ಅಭಿಯಾನವಲ್ಲ, ಆರೋಗ್ಯವಂತ, ಸದೃಢ ಮತ್ತು ಜವಾಬ್ದಾರಿಯುತ ಭಾರತದ ನಿರ್ಮಾಣಕ್ಕಾಗಿ ಕೈಗೊಂಡಿರುವ ರಾಷ್ಟ್ರೀಯ ಚಳವಳಿಯಾಗಿದೆ.ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಾರಂಭಿಸಿರುವ ಈ ರಾಷ್ಟ್ರೀಯ ಅಭಿಯಾನವು ದೇಶದ ಯುವಜನರಲ್ಲಿ ಹೊಸ ಜಾಗೃತಿ ಮೂಡಿಸಿ, ಮಾದಕ ದ್ರವ್ಯ ಮುಕ್ತ ಭಾರತದ ನಿರ್ಮಾಣಕ್ಕೆ ಬಲವಾದ ಅಡಿಪಾಯ ಹಾಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ವಿಕಸಿತ ಭಾರತ–2047′ ಸಂಕಲ್ಪದ ಸಾಕಾರಕ್ಕೆ ದೇಶದ ಯುವಶಕ್ತಿಯೇ ಪ್ರಮುಖ ಆಧಾರವಾಗಿದ್ದು, ಯುವಜನರ ಶಕ್ತಿಯನ್ನು ಶಿಕ್ಷಣ, ಸಂಶೋಧನೆ, ನಾವೀನ್ಯತೆ, ಕೌಶಲ್ಯಾಭಿವೃದ್ಧಿ, ಕ್ರೀಡೆ ಹಾಗೂ ರಾಷ್ಟ್ರಸೇವೆಯತ್ತ ಕೊಂಡೊಯ್ಯುವುದು ಅತ್ಯಗತ್ಯ. ಮಾದಕ ವ್ಯಸನವು ವ್ಯಕ್ತಿಯ ಆರೋಗ್ಯ, ಕುಟುಂಬ, ಭವಿಷ್ಯ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಮಾದಕ ದ್ರವ್ಯಗಳ ವಿರುದ್ಧದ ಹೋರಾಟವು ಕೇವಲ ಆರೋಗ್ಯದ ವಿಷಯವಲ್ಲ; ಅದು ರಾಷ್ಟ್ರ ನಿರ್ಮಾಣದ ಸಾಮಾಜಿಕ ಹೊಣೆಗಾರಿಕೆಯೂ ಆಗಿದೆ” ಎಂದು ಅಭಿಪ್ರಾಯಪಟ್ಟರು.

“ಕುಟುಂಬ, ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳು, ಸರ್ಕಾರ, ಮಾಧ್ಯಮ ಮತ್ತು ನಾಗರಿಕ ಸಮಾಜ ಎಲ್ಲರೂ ಒಗ್ಗೂಡಿ ಈ ಅಭಿಯಾನವನ್ನು ಜನಾಂದೋಲನವಾಗಿ ರೂಪಿಸಬೇಕು. ರಾಜ್ಯದ ಎಲ್ಲ ಶಾಲೆಗಳು, ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳು “ಮಾದಕ ದ್ರವ್ಯ ಮುಕ್ತ ಕ್ಯಾಂಪಸ್” ನಿರ್ಮಿಸುವ ಸಂಕಲ್ಪ ಕೈಗೊಳ್ಳುವಂತೆ ಹಾಗೂ ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾದಕ ದ್ರವ್ಯಗಳಿಂದ ದೂರವಿರುವ ಪ್ರತಿಜ್ಞೆ ಸ್ವೀಕರಿಸುವಂತೆ ಅವರು ಮನವಿ ಮಾಡಿದರು.

ದಿಶಾಬೋಧ್ ಫೌಂಡೇಶನ್, ಮೋಹನ್‌ಜಿ ಫೌಂಡೇಶನ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಈ ಮಹತ್ವದ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಿರುವುದಕ್ಕೆ ರಾಜ್ಯಪಾಲರು ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಸಿ. ಭಗವಾನ್, ಮೋಹನ್‌ಜಿ ಫೌಂಡೇಶನ್‌ನ ಸಂಸ್ಥಾಪಕ ಶ್ರೀ ಮೋಹನ್‌ಜಿ, ದಿಶಾಬೋಧ್ ಫೌಂಡೇಶನ್‌ನ ನಿರ್ದೇಶಕ ಶ್ರೀ ಕೆ. ಶಿವನಾಗಿ ರೆಡ್ಡಿ, ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ, ವೈದ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles