ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಏಕ್ ಪೇಡ್ ಮಾ ಕೆ ನಾಮ್-2.0” ಅಭಿಯಾನ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಿಷನ್ ಲೈಫ್ (ಪರಿಸರಕ್ಕಾಗಿ ಜೀವಶೈಲಿ) ದೃಷ್ಠಿಕೋನದ ಅನುಗುಣವಾಗಿ “ಏಕ್ ಪೇಡ್ ಮಾ ಕೆ ನಾಮ್-2.0” ಅಭಿಯಾನವನ್ನು ಕೇಂದ್ರ ಸರ್ಕಾರ ಇದೇ ಜೂನ್ 5 ವಿಶ್ವ ಪರಿಸರ ದಿನಾಚರಣೆಯಂದು ದೇಶಾದ್ಯಂತ ಪ್ರಾರಂಭಿಸಿದೆ.

ಇಡೀ ಸರ್ಕಾರ ಹಾಗೂ ಸಮಾಜದ ಸಹಭಾಗಿತ್ವದಲ್ಲಿ, ವಿವಿಧ ಇಲಾಖೆಗಳು, ಶಾಲಾ ಕಾಲೇಜುಗಳು, ಸಂಸ್ಥೆಗಳು ಒಳಗೊಂಡಂತೆ ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಕೈ ಜೋಡಿಸಿವೆ. ಕರ್ನಾಟಕದಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ವಿವಿಧ ಇಲಾಖಾ ಮುಖ್ಯಸ್ಥರು, ಸಂಘ ಸಂಸ್ಥೆಗಳಿಗೆ ಕ್ರಮಕೈಗೊಳ್ಳುವ ಕುರಿತಂತೆ ಸೂಕ್ತ ನಿರ್ದೇಶನ ನೀಡಲಾಗಿದೆ.

ಈ ಕಾರ್ಯಕ್ರಮವನ್ನು 2025ನೇ ಜೂನ್ 05 ರಿಂದ ಸೆಪ್ಟೆಂಬರ್ 30 ರ ವರೆಗೆ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಸುಮಾರು 10 ಕೋಟಿ ಮರಗಳನ್ನು ನೆಡುವ ಗುರಿ ಹೊಂದಲಾಗಿದೆ. ಇದರಿಂದ ನಾವು ಪ್ರಕೃತಿ ಮಾತೆಯಾದ ಭೂಮಿತಾಯಿ ಹಾಗೂ ನಮ್ಮ ಹೆತ್ತ ತಾಯಿ ಇಬ್ಬರಿಗೂ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಪ್ರಧಾನ ಮಂತ್ರಿಗಳು ತಮ್ಮ ಸಂದೇಶದಲ್ಲಿ ತಿಳಿಸಿರುತ್ತಾರೆ.

“ಏಕ್ ಪೇಡ್ ಮಾ ಕೆ ನಾಮ್” ಅಭಿಯಾನ ನಮ್ಮ ಪರಿಸರದ ಜೊತೆಗಿನ ಭಾವನಾತ್ಮಕ ಜವಬ್ದಾರಿಯನ್ನು ಅನಾವರಣಗೊಳಿಸಲಿದೆ. ಮರದಿಂದ ದೇಶದಲ್ಲಿ ಸಮೃದ್ಧಿ ನೆಲೆಸುತ್ತದೆ. ಕಾರ್ಯಕ್ರಮ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಓರ್ವ ನೋಡಲ್ ಅಧಿಕಾರಿಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನೇಮಿಸಲು ತಿಳಿಸಲಾಗಿದೆ. ಇದಕ್ಕೆ ಸಂಕ್ಷಿಪ್ತ  ಕ್ರಿಯಾ ಯೋಜನೆಯನ್ನು ಆಯಾ ಜಿಲ್ಲೆಯವರು ರೂಪಿಸಿ ತಮ್ಮಲ್ಲಿ ಲಭ್ಯವಿರುವ ಕಿರು ಅರಣ್ಯ ಪ್ರದೇಶಗಳ ಕುರಿತು ಸಹ ಮಾಹಿತಿ ನೀಡಬೇಕಿದೆ. ಈ ಕಾರ್ಯಕ್ರಮದಲ್ಲಿ ನಾಗರಿಕರು ಅದರಲ್ಲೂ ಯುವಜನತೆಯನ್ನು ಪಾಲ್ಗೊಳ್ಳುವಂತೆ ಮಾಡುವುದರಿಂದ ನಮ್ಮ ದೇಶ, ರಾಜ್ಯ ಹಸಿರಿನಿಂದ ಕಂಗೊಳಿಸುವುದರಲ್ಲಿ ಅನುಮಾನವಿಲ್ಲ.

ಹೆಚ್ಚಿನ ವಿವರಗಳಿಗೆ ಮೆರಿ ಲೈಪ್ ಪೋರ್ಟಲ್ https://merilife.nic.in ನ್ನು ವೀಕ್ಷಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles