ಎಲೆಕ್ಟ್ರಾನಿಕ್ ಸಿಟಿ(Electronic City) ಪೊಲೀಸರ ಕಾರ್ಯಾಚರಣೆ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನೂ ಸೇರಿದಂತೆ 05 ವ್ಯಕ್ತಿಗಳ ಬಂಧನ, 09 ಮೊಬೈಲ್ ಪೋನ್ಗಳು ಹಾಗೂ ಕೃತ್ಯಕ್ಕೆ ಬಳಸಿದ ಆಟೋರಿಕ್ಷಾ ವಶ, ಮೌಲ್ಯ ₹1.25 ಲಕ್ಷ.
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ವಿವಿಧ ದಿನಾಂಕಗಳoದು ಎರಡು ಪ್ರತ್ಯೇಕ ಮೊಬೈಲ್ ಸುಲಿಗೆ ಪ್ರಕರಣಗಳು(Extortion cases) ದಾಖಲಾಗಿರುತ್ತವೆ. ಎರಡೂ ಪ್ರಕರಣಗಳ ತನಿಖೆಯನ್ನು ಮುಂದುವರೆಸಿದ ಪೊಲೀಸರು, ಭಾತ್ಮೀದಾರರಿಂದ(From the correspondents) ಖಚಿತ ಮಾಹಿತಿಯನ್ನು ಕಲೆಹಾಕಿ, ಮೊಬೈಲ್ ಸುಲಿಗೆ ಮಾಡಿದ್ದ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನೂ ಸೇರಿದಂತೆ 05 ವ್ಯಕ್ತಿಗಳನ್ನು ವಿವಿಧ ದಿನಾಂಕಗಳoದು ಪೊಲೀಸ್ ಠಾಣಾ ಸರಹದ್ದಿನಲ್ಲಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿ, ಈ ಎರಡೂ ಪ್ರಕರಣಗಳಲ್ಲಿ ಮೊಬೈಲ್ ಸುಲಿಗೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾರೆ. ಎರಡು ಪ್ರತ್ಯೇಕ ಪ್ರಕರಣಗಳ ಐವರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿ, ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಪ್ರಕರಣಗಳಲ್ಲಿ ಸುಲಿಗೆ ಮಾಡಿದ್ದ ಒಟ್ಟು 09 ಮೊಬೈಲ್ ಪೋನ್ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಆಟೋರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ ₹1,25,000/- (ಒಂದು ಲಕ್ಷದ ಇಪ್ಪತ್ತೈದು ಸಾವಿರ ರೂಪಾಯಿ.) ಈ ಪ್ರಕರಣದ ಐವರು ಆರೋಪಿಗಳ ಬಂಧನದಿoದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ 02 ಮೊಬೈಲ್ ಸುಲಿಗೆ ಪ್ರಕರಣಗಳು ಪತ್ತೆಯಾಗಿದ್ದು 05 ಮೊಬೈಲ್ ಪೋನ್ಗಳ ವಾರಸುದಾರರು ಪತ್ತೆಯಾಗಿದ್ದು, ಉಳಿದ 04 ಮೊಬೈಲ್ ಪೋನ್ಗಳ ಮಾಲೀಕರ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ. ವಿವಿಧ ದಿನಾಂಕಗಳoದು ನಾಲ್ವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಿ ಬಾಲಮಂದಿರಕ್ಕೆ ಬಿಡಲಾಗಿರುತ್ತದೆ. ಈ ಎರಡೂ ಕಾರ್ಯಾಚರಣೆಗಳನ್ನು ಎಲೆಕ್ಟ್ರಾನಿಕ್ ಸಿಟಿ ಉಪ ಪೊಲೀಸ್ ಆಯುಕ್ತರಾದ ಶ್ರೀ.ನಾರಾಯಣ.ಎಂ, ಐಪಿಎಸ್(Sree.M.Narayana, IPS) ರವರ ಮಾರ್ಗದರ್ಶನದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತರವರಾದ ಶ್ರೀ.ಕೆ.ಎಂ.ಸತೀಶ ರವರ ನೇತೃತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಅಜರುದ್ದಿನ್, ಮತ್ತು ಇತರೆ ಅಧಿಕಾರಿ/ಸಿಬ್ಬಂದಿಗಳ ತoಡವು ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

