ಅರ್ಜುಣಗಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಸರಕಾರಿ ಪಬ್ಲಿಕ್ ಸ್ಕೂಲ್ ಶಾಲಾ ಕಟ್ಟಡ ಉದ್ಘಾಟನೆ
ಬೆಂಗಳೂರು: ಜಗತ್ತಿನಲ್ಲಿ ಅಟೋಮೊಬೈಲ್ ಸೆಕ್ಟರ್ನಲ್ಲಿ ಟೋಯೋಟಾ ಕಿರ್ಲೊಸ್ಕರ್ ಕಂಪನಿ(Toyota Kirloskar Company) ಸುಪ್ರಸಿದ್ದ. ಈ ಕಂಪನಿಯು ತನ್ನ ಸಿ.ಎಸ್.ಆರ್(CSR) ಅನುದಾನದಡಿ 2.14ಕೋಟಿ ರೂ.ವೆಚ್ಚದಲ್ಲಿ ಅತ್ಯಾಧುನಿಕ ಹಾಗೂ ಭವ್ಯ ಶಾಲಾ ಕಟ್ಟಡವನ್ನು ನಿರ್ಮಿಸಿದೆ. ಈ ಭಾಗದ ವಿದ್ಯಾರ್ಥಿಗಳು ಇಲ್ಲಿ ಚೆನ್ನಾಗಿ ಓದುವ ಮೂಲಕ ಉನ್ನತ ಹುದ್ದೆ ಅಲಂಕರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ(M.B.Patil) ಅವರು ಹೇಳಿದರು.
ಟೋಯೋಟಾ ಕಿರ್ಲೋಸ್ಕರ್ ಕಂಪನಿ ಅವರ ಸಿ.ಎಸ್.ಆರ್ ಅನುದಾನದಲ್ಲಿ ಅರ್ಜುಣಗಿಯಲ್ಲಿ(Arjunagi) ನಿರ್ಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜ್ ಹಾಗೂ ಸರಕಾರಿ ಪಬ್ಲಿಕ್ ಸ್ಕೂಲ್ ಶಾಲಾ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಇಂದಿನ ಕಾಲದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಬಹುಮುಖ್ಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಪ್ರತಿಭೆಗೆ ಪೂರಕವಾಗಿ ವಾತಾವರಣ ಕಲ್ಪಿಸಿಕೊಟ್ಟರೆ ಮಾತ್ರ ಪ್ರತಿಭೆ ಹೊರಹೊಮ್ಮಲು ಸಾಧ್ಯ ಎಂದರು. ಸುಂದರ ವಾತಾವರಣದಲ್ಲಿ ತಲೆಎತ್ತಿದ ಈ ಶಾಲೆಯಲ್ಲಿ ಮಕ್ಕಳು ಕ್ರೀಡೆ, ಸಾಂಸ್ಕøತಿಕ ಮುಂತಾದ ಕ್ಷೇತ್ರದಲ್ಲಿ ತೊಡಗಿಕೊಳ್ಳಲು ಪ್ರೇರೇಪಣೆ ನೀಡಲಿದೆ ಎಂದರು.
ಪ್ರತಿಯೊಬ್ಬರೂ ಕಾಯಕ ಮತ್ತು ದಾಸೋಹದ ಮಹತ್ವ ಅರಿಯಬೇಕು. ಜೊತೆಗೆ ಶಿಕ್ಷಣಕ್ಕೆ ಮಹತ್ವ ನೀಡಬೇಕು. ಕಿರ್ಲೋಸ್ಕರ್ ಕಂಪನಿ ನಮ್ಮ ಬೇಡಿಕೆಗೆ ಸ್ಪಂದಿಸಿದೆ. ಜಿಲ್ಲಾದ್ಯಂತ ಮತಕ್ಷೇತ್ರವಾರು ಒಂದು ಕೋಟಿ ರೂ. ವೆಚ್ಚದಲ್ಲಿ ಸಿ.ಎಸ್.ಆರ್ ಅನುದಾನದಲ್ಲಿ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ಒದಗಿಸುತ್ತಿದೆ. ಎಲ್ಲ ಮತಕ್ಷೇತ್ರಗಳಲ್ಲೂ ಸರ್ಕಾರಿ ಶಾಲೆ ಅಭಿವೃದ್ಧಿಗೆ ಒತ್ತು ನೀಡಿದೆ. ಇನ್ನು ಮುಂದೆ ಐದನೇ ತರಗತಿಯಿಂದ ಸ್ಮಾರ್ಟ ಕ್ಲಾಸ್ಒ(Smart Class) ದಗಿಸಲು ಕ್ರಮ ವಹಿಸಲಾಗುವುದು. ಪ್ರಾಥಮಿಕ ಶಾಲಾ ಮಕ್ಕಳಿಗೆ ಆಟದ ಸಾಮಗ್ರಿ ಒದಗಿಸಲು ಕ್ರಮವಹಿಸಿದೆ. ಮಕ್ಕಳು ಶಿಕ್ಷಣ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಅವರು ಮಾತನಾಡಿ, ಈ ಕಟ್ಟಡ ಆಧುನಿಕತೆಯನ್ನು ಮೈಗೂಡಿಸಿಕೊಂಡಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ನೀರಾವರಿ ಸಚಿವರಾಗಿ ಎಂ.ಬಿ. ಪಾಟೀಲರು, ಜಿಲ್ಲೆಯ ರೈತರಿಗೆ ನೀರನ್ನು ತಂದು ಕೊಟ್ಟು, ಜಿಲ್ಲೆಯ ಬರ ನೀಗಿಸಿದ್ದಾರೆ. ಕೈಗಾರಿಕೆಗಳನ್ನು ಈ ಭಾಗಕ್ಕೆ ತರುತ್ತಿದ್ದಾರೆ. ಒಂದು ಸಾವಿರ ಮೇನ್ ಕ್ಯಾನೆಲ್ ಮೂಲಕ ನೀರು ಹರಿಸಿದ್ದಾರೆ. ಕೆರೆ ತುಂಬುವ ಯೋಜನೆಗಳಿಂದಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿಲ್ಲ. ಇದೆಲ್ಲವೂ ಎಂ.ಬಿ. ಪಾಟೀಲರ ಕೈಗೊಂಡ ನೀರಾವರಿ ಯೋಜನೆಗಳಿಂದ ಸಾಧ್ಯವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಆಧುನಿಕ ಸೌಲಭ್ಯಯುಳ್ಳ ಶಾಲೆ ತಮಗೆ ದೊರೆಯುತ್ತಿದ್ದು, ಜೀವನದಲ್ಲಿ ಶಿಕ್ಷಣ ಮಹತ್ವದ್ದು. ಜ್ಞಾನ, ಬುದ್ಧಿ, ವಿವೇಕವನ್ನು ನಿಮಗೆ ಈ ಶಾಲೆ ನೀಡಲಿದ್ದು, ಇಲ್ಲಿ ಸಿಗುವ ಶಿಕ್ಷಣವನ್ನು ತಾವು ಪಡೆದು ಜೀವನದಲ್ಲಿ ಯಶಸ್ವಿಯಾಗಬೇಕು. ಶಿಕ್ಷಣ ಪ್ರತಿಯೊಬ್ಬರನ್ನೂ ಒಳ್ಳೆಯ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಮಾತ್ರವಲ್ಲ, ಉತ್ತಮ ನಾಗರಿಕರನ್ನಾಗಿ ರೂಪಿಸುತ್ತಿದೆ. ಈ ಕಟ್ಟಡ ಮಕ್ಕಳ ಭವಿಷ್ಯದ ವಿಶ್ವಾಸದ ಕಟ್ಟಡವಾಗಿದೆ. ಮಕ್ಕಳ ಭವಿಷ್ಯ ಬೆಳಗುತ್ತದೆ. ಮಕ್ಕಳು ಶಾಲೆಗೆ ನಿರಂತರವಾಗಿ ಹೋಗಬೇಕು. ಈ ನಿಟ್ಟಿನಲ್ಲಿ ಪಾಲಕರ ಜವಾಬ್ದಾರಿ ಹೆಚ್ಚಿನದಾಗಿದೆ ಎಂದು ಹೇಳಿದರು.
ಮನೆಯಲ್ಲಿ ಮಕ್ಕಳ ಜವಾಬ್ದಾರಿ ಮಕ್ಕಳ ಭವಿಷ್ಯ ರೂಪಿಸುವುದರಲ್ಲಿ ಪಾಲಕರ ಜವಾಬ್ದಾರಿ ಮಹತ್ವದ್ದಾಗಿದೆ. ಸರ್ಕಾರ ಗುಣಮಟ್ಟದ ಶಿಕ್ಷಣಕ್ಕಾಗಿ ಹಲವು ಸೌಲಭ್ಯ ಅನುμÁ್ಠನಗೊಳಿಸುತ್ತಿದೆ. ಇದರ ಲಾಭ ಪಡೆದುಕೊಂಡು ಉನ್ನತ ಹುದ್ದೆಗೇರಬೇಕು. ಜಿಲ್ಲಾ ಉಸ್ತುವಾರಿ ಸಚಿವರ ಆಶಯವೂ ಇದೆ ಆಗಿದೆ. ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ ಅವರ ಅವಿರತ ಪ್ರಯತ್ನ ಸ್ಮರಣೀಯವಾದುದು. ಇಡೀ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಒತ್ತು ನೀಡಿ, ಮಕ್ಕಳ ಶಿಕ್ಷಣಕ್ಕೆ ಬಹಳ ಕಾಳಜಿ ವಹಿಸಿ ಅನೇಕ ಸ್ಮಾರ್ಟಕ್ಲಾಸ್, ಶಾಲಾ ಕಟ್ಟಡ, ಆಟದ ಮೈದಾನದಂತಹ ಪಾಠೋಪಕರಣ ಹಾಗೂ ಪೀಠೋಪಕರಣ ಒದಗಿಸಿಕೊಟ್ಟು ಅನುಕೂಲ ಮಾಡಿಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಪ್ರತಿದಿನ ಶಾಲೆಗೆ ಬರಬೇಕು. ಉತ್ತಮ ಫಲಿತಾಂಶ ತರಬೇಕೆಂದು ಹೇಳಿದರು.
ಕಿರ್ಲೊಸ್ಕರ್ ಕಂಪನಿಯ ರಮೇಶ ರಾವ್ ಅವರು ಮಾತನಾಡಿ, ಈ ವರ್ಷ ಆರು ಕಡೆಗಳಲ್ಲಿ ಇಂತಹ ಕೆಲಸ ಮಾಡಿದ್ದೇವೆ. ಸರ್ಕಾರಿ ಶಾಲೆಗಳ ಕೊಠಡಿ ನಿರ್ಮಾಣ ಮಾಡುತ್ತಿದ್ದೇವೆ. ಸಚಿವರಾದ ಎಂ. ಬಿ. ಪಾಟೀಲರು ಕೋಟಿ ವೃಕ್ಷ ಅಭಿಯಾನದಂತಹ ಅನೇಕ ಯೋಜನೆ ರೂಪಿಸಿ ಈ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.
ಕಿರ್ಲೊಸ್ಕರ್ ಕಂಪನಿಯ ಉಪಾಧ್ಯಕ್ಷರಾದ ರಮೇಶರಾವ್ ಆರ್.ಎ., ಜನರಲ್ ಮ್ಯಾನೆಜರ್ ಕಿರಣ್ ಜೆ. ಎಚ್. ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಹೆಬ್ಬಾಳಟ್ಟಿ ಸುಸಜ್ಜಿತ ಸರ್ಕಾರಿ ಶಾಲೆ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಮರ್ಪಣೆ:
ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ಮಹತ್ವದ ಹೆಜ್ಜೆಯಾಗಿ, ಬಬಲೇಶ್ವರ ಮತ ಕ್ಷೇತ್ರದ ಹೆಬ್ಬಾಳಟ್ಟಿ ಗ್ರಾಮದಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿಯ ಸಿಎಸ್‍ಆರ್ ಅನುದಾನದಡಿ ನಿರ್ಮಿಸಲಾದ ಸರಕಾರಿ ಪ್ರೌಢ ಶಾಲೆಯ 4 ನೂತನ ಕೊಠಡಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ. ಬಿ. ಪಾಟೀಲ ಅವರು ಉದ್ಘಾಟಿಸಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಸಮರ್ಪಿಸಿದರು.
ಬಳಿಕ ಮಾತನಾಡಿದ ಅವರು, ಕೈಗಾರಿಕೋದ್ಯಮಗಳ ಲಾಭಾಂಶದ ಶೇ.2ರಷ್ಟು ಸಿಎಸ್‍ಆರ್ ಅನುದಾನವನ್ನು ನಮ್ಮ ಭಾಗದ ಸರಕಾರಿ ಶಾಲೆಗಳ ಸಮಗ್ರ ಸುಧಾರಣೆಗೆ ಬಳಸಿಕೊಳ್ಳಲಾಗುತ್ತಿದ್ದು, ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಿಕೊಡುತ್ತಿರುವ ಟೊಯೋಟಾ ಕಂಪನಿಯ ಕಾರ್ಯ ನಿಜಕ್ಕೂ ಮಾದರಿಯಾಗಿದೆ ಎಂದರು.
ಗ್ರಾಮೀಣ ಭಾಗದ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಸಿಗಬೇಕು ಹಾಗೂ ಅವರು ಜಾಗತಿಕ ಸ್ಪರ್ಧಾತ್ಮಕ ಪ್ರಪಂಚಕ್ಕೆ ತೆರೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಇದಕ್ಕಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೂ ‘ಎಐ ತಂತ್ರಜ್ಞಾನ’ದ ಅಭ್ಯಾಸ ದೊರೆಯುವಂತೆ ಕ್ರಮ ವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಸಿದ್ದಲಿಂಗಯ್ಯ ಸ್ವಾಮೀಜಿ, ಪರಮಪೂಜ್ಯ ಶ್ರೀ ಚಿಕ್ಕಯ್ಯ ಸ್ವಾಮೀಜಿ ಹಾಗೂ ಟೊಯೋಟಾ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.




