ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಡ್ಯೂಟಿ ಡಾಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ (Victoria Hospital) ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ.

ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ ಸುಟ್ಟು ಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್ ಪೂರ್ತಿ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಟ್ಟಡದ ಎಲ್ಲಾ ರೋಗಿಗಳನ್ನ ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. 14 ಪುರುಷರು, 5 ಮಹಿಳೆಯರು ಹಾಗೂ 7 ಮಂದಿ ಮಕ್ಕಳು ಸೇರಿ ಒಟ್ಟು 26 ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ.

ಡ್ಯೂಟಿ ಡಾಕ್ಟರ್ ದಿವ್ಯಾ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ವೈದ್ಯೆ ದಿವ್ಯಾ ನೇತೃತ್ವದ ತಂಡ ರಾತ್ರಿಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಮುಂಜಾನೆ 3:30ರ ಸುಮಾರಿಗೆ ಡಾ. ದಿವ್ಯಾ ಮೊದಲ ಮಹಡಿಗೆ ಹೋಗಿದ್ದರು. ಈ ವೇಳೆ ಸೆಮಿನರ್ ರೂಂನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತ್ತು. ಶಬ್ದ ಕೇಳಿ ಕೂಡಲೇ ಅಲರ್ಟ್ ಆದ ದಿವ್ಯಾ ಮತ್ತು ಸಿಬ್ಬಂದಿ ಕೋಡ್ ರೆಡ್ ಅಲರ್ಟ್ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೇ ಸೂಪರಿಂಟೆಂಡೆಂಟ್‌ಗಳಿಗೆ ಮಾಹಿತಿ ನೀಡಿದ್ದಾರೆ. ಬೆಂಕಿ ನಂದಿಸೋ ಪ್ರಯತ್ನದ ಜೊತೆಗೆ ಹಿರಿಯ ಅಧಿಕಾರಿಗಳಿಗೂ ದಿವ್ಯಾ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಗ್ನಿ ಶಾಮಕ ಸಿಬ್ಬಂದಿಗೆ ಹಾಗೂ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸುಮಾರು 30 ನಿಮಿಷದಲ್ಲಿ ಎಲ್ಲಾ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಐಸಿಯುನಲ್ಲಿದ್ದವರು ಸೇರಿ ಎಲ್ಲರನ್ನೂ ಶಿಫ್ಟ್ ಮಾಡಲಾಗಿದೆ

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles