ಶಿಬಿರಕ್ಕೆ ಚಾಲನೆ ನೀಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ (ನಗರ)ಅಧ್ಯಕ್ಷ ಜಿ. ಕೃಷ್ಣಪ್ಪ ಸಮಾಜದ ಸಮಸ್ಯೆಗಳನ್ನು ಜನರ ಮುಂದಿಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಕಾರ್ಯನಿರ್ವಹಿಸುವ ಪತ್ರಕರ್ತರ ಆರೋಗ್ಯದ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಈ ಶಿಬಿರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸ್ವತಃ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಇತರ ಪತ್ರಕರ್ತರಿಗೂ ಮಾದರಿಯಾದರು. ಶಿಬಿರದಲ್ಲಿ ಭಾಗವಹಿಸಿದ್ದ ವೈದ್ಯರುಗಳನ್ನು ಸನ್ಮಾನಿಸಲಾಯಿತು.

ಶಿಬಿರದಲ್ಲಿ ಪತ್ರಕರ್ತರಿಗೆ ಇಸಿಜಿ (ಉಇಎ), ರಕ್ತದೊತ್ತಡ (ಆ), ರಕ್ತದಲ್ಲಿನ ಸಕ್ಕರೆ ಪ್ರಮಾಣ (ಶುಗರ್), ದಂತ ತಪಾಸಣೆ, ನೇತ್ರ ತಪಾಸಣೆ ಹಾಗೂ ಪ್ರಮುಖವಾಗಿ ಮೂಳೆ ಸಾಂದ್ರತೆ ಮಾಪನ ಸೇರಿದಂತೆ ವಿವಿಧ ರೀತಿಯ ಆರೋಗ್ಯ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಯಿತು. ಮಣಿಪಾಲ್, ಫೋರ್ಟಿಸ್ ಮತ್ತು ನೇತ್ರಧಾಮ ಆಸ್ಪತ್ರೆಗಳ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ತಂಡಗಳು ತಪಾಸಣೆ ನಡೆಸಿ ಅಗತ್ಯ ಸಲಹೆಗಳನ್ನು ನೀಡಿದರು.
ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯದರ್ಶಿ ಜೆ.ಸಿ. ಲೋಕೇಶ್, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ ಗಾಂಧಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಗೌಡ, ಕಾರ್ಯದರ್ಶಿಗಳಾದ ಕೆ. ಹರೀಶ್, ಕೆ.ಎಲ್. ಲೋಕೇಶ್, ಜಿಲ್ಲಾ ಉಪಾಧ್ಯಕ್ಷರಾದ ಪರಿಮಳ ಹೊಸಮನೆ, ಎಚ್.ಕೆ. ಬಸವರಾಜ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ರಾಜಗಿರಿ ಪ್ರದೀಪ್, ನಟರಾಜ್ ಬಿ.ಪಿ., ಹನುಮಂತರಾಜು ಬಿ.ಕೆ., ರಮಾಕಾಂತ್ ಗುಗ್ರಿ ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು.

