ಬೆಂಗಳೂರು: 157 ನೇ ಗಾಂಧಿ ಜಯಂತಿ(Gandhi Jayanthi) ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್(M.N.Anuchit) ಅವರು ಇಂದು ಇಲಾಖೆಯ ಆವರಣದಲ್ಲಿ ಮಹಾತ್ಮ ಗಾಂಧಿಜಿಯವರ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಇಲಾಖೆಯ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಸಿ.ಆರ್. ನವೀನ್, ಮಂಜುನಾಥ್ ಡೊಳ್ಳಿನ್, ಸಿದ್ದೇಶ್ವರಪ್ಪ ಜೆ.ಬಿ. ಉಪ ನಿರ್ದೇಶಕರಾದ ರಾಮಲಿಂಗಪ್ಪ,ಶಫಿ ಸಾದುದ್ದೀನ್ ಆಡಳಿತಾಧಿಕಾರಿಳಾದ ಎಂ.ಕೆ. ಕಿರಣ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

