ಗೌರಿ-ಗಣೇಶ ಹಬ್ಬ: ಕೆ.ಎಸ್.ಆರ್.ಟಿ.ಸಿ ಯಿಂದ 2,400 ಹೆಚ್ಚುವರಿ ಬಸ್‌

ಬೆಂಗಳೂರು: ಗೌರಿ-ಗಣೇಶ ಹಬ್ಬದ(Gowri- Ganesha Festival) ಪ್ರಯುಕ್ತ ಸ್ವಊರುಗಳಿಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೃಹತ್ ಸಾರಿಗೆ (KSRTC) ವ್ಯವಸ್ಥೆಯನ್ನು ಮಾಡಿದೆ.

ಸೆಪ್ಟೆಂಬರ್ 14, 2026 ರಂದು ಗೌರಿ-ಗಣೇಶ ಹಬ್ಬ ಹಾಗೂ ಸೆಪ್ಟೆಂಬರ್ 12 ಮತ್ತು 13 ರಂದು ವಾರಾಂತ್ಯ (ವೀಕೆಂಡ್) ದಿನಗಳಿರುವುದರಿಂದ, ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಒಟ್ಟು 2,400 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ನಿರ್ಧರಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವುದು.

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ಕರ್ನಾಟಕ ಹಾಗೂ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆ‌ಎಸ್.ಆರ್.ಟಿ.ಸಿ‌ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್.  ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ವಂದೇ ಮಾತರಂ ಗೀತೆ ಮೊಟಕು ವಿರುದ್ಧ ಪಾದಯಾತ್ರೆ, ಅಧಿಕಾರಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ಮತ್ತು ಸಾರ್ವಜನಿಕರು ಇದೇ 15ರಿಂದ 5 ದಿನಗಳ ಕಾಲ...

ಸರ್. ಎಂ. ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭ

ಇಂದು ಚಂದ್ರಶೇಖರ ಭಾರತಿ(ChandraShekar Bharathi) ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ...

ಗೌರಿ ಬಾಗಿನ ಕೊಡುವ ಸರಿಯಾದ ವಿಧಾನ

1. ಗೌರಿ ಬಾಗಿನ ಎಂದರೇನು? ಗೌರಿದೇವಿಯು ತವರಿಗೆ ಬಂದ ಮಗಳಂತೆ ಭಾವಿಸಿ, ಮುತ್ತೈದೆ...

ಬೀದರ್, ಸೆ. 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ

ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು...

ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ

ಬೆಂಗಳೂರು: ದೇಶ(Country) ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ 4.0 ಕೈಗಾರಿಕಾ ಕ್ರಾಂತಿಯತ್ತ(Industrial...

Topics

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ಗೆ Rs.1.10 ಕೋಟಿ ನಿವ್ವಳ ಲಾಭ – ಡಿ.ಆರ್. ವಿಜಯ ಸಾರಥಿ  

ಬೆಂಗಳೂರು: ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 2025-26ನೇ ಸಾಲಿನಲ್ಲಿ Rs.1.10...

14-09-2026 – ಒಂದೇ ದಿನ ಶ್ರೀಸ್ವರ್ಣಗೌರಿ ವ್ರತ ಹಾಗೂ ಶ್ರೀವರಸಿದ್ಧಿ ವಿನಾಯಕ ವ್ರತ

ಸಾಮಾನ್ಯವಾಗಿ ಭಾದ್ರಪದ ಮಾಸದ ತದಿಗೆಯಂದು ಹಸ್ತಾ ನಕ್ಷತ್ರ(Hastha Nakshatra) ವಿರುವ ದಿನ,...

ನಾಳೆ ಸಂಜೆ ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಕಾರ್ಯಕ್ರಮ

ಬೆಂಗಳೂರು: ವೇದಾಂತ ಮಾಲಾ ಕಲಾ ಕುಟೀರವು ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಸಂಜೆಯನ್ನು...

Related Articles