ಬೆಂಗಳೂರು 08.09.2026: ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಭವನದಲ್ಲಿ ಭಾನುವರ ಕರ್ನಾಟಕ ಉಚ್ಛ ನ್ಯಾಯಾಲಯದ ಆರು ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಕರ್ನಾಟಕ ಉಚ್ಛ ನ್ಯಾಯಾಲಯದ ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಘವೇಂದ್ರ ಸೀತಾರಾಂ ಶ್ರೀವತ್ಸ, ಶ್ರೀಮತಿ ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿ ಭೂಷಣ್ ಅವರು ಗೌರವಾನ್ವಿತ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಬು ಭಖ್ರು, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ, ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

