ಪಾಲಿಕೆ ಚುನಾವಣೆ ಸಿದ್ಧತೆಗೂ ಗ್ರೀನ್ ಸಿಗ್ನಲ್ – ಆಗಸ್ಟ್ 3ರಿಂದ ಜಿಬಿಎ ವಾರ್ಡ್ ಮರುರಚನೆ ಪ್ರಕ್ರಿಯೆ ಆರಂಭ

ಬೆಂಗಳೂರು, ಜುಲೈ 31: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ಐದು ನಗರ ಪಾಲಿಕೆಗಳಾಗಿ ವಿಂಗಡಿಸಿ ಅಧಿಸೂಚನೆ ಹೊರಡಿಸಿದ್ದ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ಪಾಲಿಕೆ ಚುನಾವಣೆಗೆ ಸಿದ್ಧರಾಗಿ” ಎಂದು ಕರೆ ನೀಡಿದ್ದಾರೆ.

ಡಿಸಿಎಂ ಡಿಕೆಶಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಗಸ್ಟ್ 3ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವಾರ್ಡ್‌ಗಳ ಮರುವಿಂಗಡಣಾ ಆಯೋಗ ಕಾರ್ಯಾರಂಭ ಮಾಡಲಿದೆ. ಶೀಘ್ರದಲ್ಲೇ ಚುನಾವಣೆ ದಿನಾಂಕ ನಿಗದಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಾಧಿಕಾರದಡಿ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದೆ. ಮರುರಚನೆ, ಗಡಿ ಗುರುತಿಸುವಿಕೆ ಹಾಗೂ ತಕರಾರು ಅರ್ಜಿಗಳ ಅಂತಿಮ ನಿರ್ಣಯಕ್ಕೆ ವೇಗ ನೀಡಲಾಗಿದೆ. ಈ ಪ್ರಕ್ರಿಯೆ ಸೆಪ್ಟೆಂಬರ್ 1ರೊಳಗೆ ಪೂರ್ಣಗೊಳ್ಳಲಿದೆ. ನಂತರ ಮೀಸಲಾತಿ ಪ್ರಕ್ರಿಯೆ ಪೂರೈಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ. ಅದರ ಬಳಿಕ ಮಾತ್ರ ಚುನಾವಣೆ ದಿನಾಂಕ ನಿಗದಿಯಾಗಲಿದೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಸಿಎಂ, “ನವೆಂಬರ್ 1 ಅಥವಾ 2ರಂದು ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸುತ್ತೇವೆ” ಎಂದು ತಿಳಿಸಿದ್ದಾರೆ. ಒಳಮೀಸಲಾತಿ ಸಮೀಕ್ಷೆ ನಡೆಯುತ್ತಿದ್ದು, ಬೆಂಗಳೂರು ಹೊರಗಿನ ಪ್ರದೇಶಗಳಲ್ಲಿ ಹೆಚ್ಚು ಮಾಹಿತಿ ಬಂದಿದೆ. ಈಗ ಜಾತಿ ಜನಗಣತಿ ಮರುಸಮೀಕ್ಷೆ ನಡೆಯುತ್ತಿದೆ.

ಕಾರ್ಯಕರ್ತರು ಪ್ರಚಾರ ಹೆಚ್ಚಿಸಬೇಕು, ಮನೆಮಂದಿಯ ಹೆಸರು ನೋಂದಣಿ ಮಾಡಿಸಿ, ಮತದಾರರನ್ನು ಗಟ್ಟಿಮಾಡಿ, ಯಾವುದೇ ಊರಿಗೆ ಕೆಲಸಕ್ಕೆ ಹೋಗಿರುವವರನ್ನೂ ಜಾತಿ ನೊಂದಣಿಗೆ ಸೇರಿಸಬೇಕು ಎಂದು ಡಿಸಿಎಂ ಮನವಿ ಮಾಡಿದ್ದಾರೆ.

ಬಿ ಖಾತೆಗಳಿಂದ ಎ ಖಾತೆ ಪಡೆಯಲು ಅಗತ್ಯವಾದ ಮಾನದಂಡಗಳು ಆಗಸ್ಟ್ 15ರಂದು ಪ್ರಕಟಗೊಳ್ಳಲಿವೆ. ನಗರದ ಲಕ್ಷಾಂತರ ಬಿ ಖಾತೆಗಳ ಪೈಕಿ ಯಾರು ಎ ಖಾತೆಗೆ ಅರ್ಹ ಎಂಬುದರ ವಿವರವಿರುವ ಮಾನದಂಡ ಬಿಡುಗಡೆ ಮಾಡಲಾಗುತ್ತದೆ. ಅರ್ಜಿ ಸಲ್ಲನೆ, ಅರ್ಹತೆ, ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಕೂಡಾ ಹೊರಬೀಳಲಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles